ಅಸ್ಸಾಂನಲ್ಲಿ ಮದುವೆಗೆ ಹೊರಟವರು ಮಸಣಕ್ಕೆ ಸೇರಿದರು..!
ಅಸ್ಸಾಂ: ನಿಂತಿದ್ದ ಲಾರಿಗೆ ಬೊಲೆರೋ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂ ದಿಬ್ರುಗಢ್ ನ ರಾಷ್ಟ್ರೀಯ ಹೆದ್ದಾರಿ 37ರಲ್ಲಿ ನಡೆದಿದೆ.ಮದುವೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ಕಾರು ಹೆದ್ದಾರಿಯಲ್ಲಿ ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ. ಭೀಕರ ರಸ್ತೆ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕೆಲವರಿಗೆ ಗಾಯಗಳಾಗಿವೆ.
ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸುದ್ದಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದು, ರಕ್ಷಣಾ ಕಾರ್ಯ ಕೈಗೊಂಡು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಬಳಿಕ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆ ಕುರಿತಂತೆ ಹೆದ್ದಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ..