Home ಪ್ರಮುಖ ಸುದ್ದಿ ಕೆಂಜಾರ್‌ ಬಯಲು ಪ್ರದೇಶದಲ್ಲಿ ಸ್ಪೋಟಕ ನಿಷ್ಕ್ರಿಯಗೊಳಿಸಿದ ಬಾಂಬ್‌ ನಿಷ್ಕ್ರೀಯ ದಳ

ಕೆಂಜಾರ್‌ ಬಯಲು ಪ್ರದೇಶದಲ್ಲಿ ಸ್ಪೋಟಕ ನಿಷ್ಕ್ರಿಯಗೊಳಿಸಿದ ಬಾಂಬ್‌ ನಿಷ್ಕ್ರೀಯ ದಳ

ಕೆಂಜಾರ್‌ ಬಯಲು ಪ್ರದೇಶದಲ್ಲಿ “ಸ್ಪೋಟಕ” ನಿಷ್ಕ್ರಿಯಗೊಳಿಸಿದ ಬಾಂಬ್‌ ನಿಷ್ಕ್ರೀಯ ದಳ

ಮಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ಅನುಮಾನಸ್ಪದವಾಗಿ ಪತ್ತೆಯಾಗಿದ್ದ ಬ್ಯಾಗ್ ನಲ್ಲಿದ್ದ ಸ್ಪೋಟಕ ವಸ್ತವನ್ನು ವಿಮಾನ ನಿಲ್ದಾಣದ ಹೊರಗಡೆ ಇರುವ ಕೆಂಜಾರ್ ನ ವಿಶಾಲ ಗದ್ದೆಯಲ್ಲಿ ಬೆಂಗಳೂರಿನಿಂದ ಆಗಮಿಸಿದ್ದ ಬಾಂಬ್ ನಿಷ್ಕ್ರೀಯ ದಳದ ಸಿಬಂದಿಗಳು ಸ್ಪೋಟಿಸಿದ್ದಾರೆ.

ವಿಮಾನ ನಿಲ್ದಾಣದ ಆವರಣದಿಂದ ಕೆಂಜಾರ್‌ ಗದ್ದೆಗೆ ಬಿಗಿ ಭದ್ರತೆಯಲ್ಲಿ ತೆಗೆದುಕೊಂಡು ಹೋದ ಬಾಂಬ್ ಸ್ಕ್ವಾಡ್ ಅದನ್ನು ನಿಯಂತ್ರಿತ ಸ್ಫೋಟ ಮಾಡಿದ್ದಾರೆ.
ಇನ್ನು ಬಗ್ಗೆ ಸುದ್ದಿಗಾರರೊಂದಿಗೆ ಪ್ರತಿಕ್ರೀಯಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ. ಹರ್ಷ ಅವರು ಪತ್ತೆಯಾದ ಬ್ಯಾಗ್ ನಲ್ಲಿ ಇದ್ದ ವಸ್ತು ಬಗ್ಗೆ ಸ್ಪಷ್ಟತೆ ಇಲ್ಲದಿದ್ದರೂ ಅದು ಸ್ಪೋಟಕ ಎಂದು ಧೃಡಪಟ್ಟಿದೆ.

ಬೆಳಗ್ಗೆ ವ್ಯಕ್ತಿಯೊಬ್ಬ ಅನುಮಾನಾಸ್ಪದ ಬ್ಯಾಗೇಜ್ ಒಂದನ್ನು ನಿಲ್ದಾಣದ ಆವರಣದೊಳಗೆ ತಂದಿದ್ದು ಅದರೊಳಗೆ ಸ್ಪೋಟಕ ಇತ್ತು. ವಿಮಾನ ನಿಲ್ದಾಣದ ಸುರಕ್ಷತೆ ಜವಾಬ್ದಾರಿ ಹೊತ್ತ ಸಿಐಎಸ್ ಎಫ್ ಸಿಬ್ಬಂದಿ ಅದನ್ನು ಗುರುತಿಸಿ ಅದನ್ನು ನಿಯಮ ಪ್ರಕಾರ ಶೋಧನೆಗೆ ಒಳಪಡಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದರು.

ಬಳಿಕ ಪ್ರಯಾಣಿಕರ ಸುರಕ್ಷತೆಗಾಗಿ ಸಂಬಂಧಿತ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಿ ಬಾಂಬ್ ಪತ್ತೆ ದಳವನ್ನು ಕರೆಸಲಾಯಿತು. ಸಿ ಐಎಸ್ ಎಫ್ ದೂರಿನ ಪ್ರಕಾರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಸ್ಪೋಟಕ ಕಾಯ್ದೆ ಪ್ರಕಾರ ಪ್ರಕರಣ ದಾಖಲಾಗಿದೆ. ಪ್ರಾಥಮಿಕ ಮಾಹಿತಿ ಕಲೆ ಹಾಕಲಾಗಿದೆ.

ಈ ಪ್ರಕರಣದ ಬಗ್ಗೆ ತನಿಖೆಗೆ ತಜ್ಞರನ್ನೊಳಗೊಂಡ ಮೂರು ತಂಡಗಳನ್ನು ರಚಿಸಲಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಪೊಲಿಸ್ ಭದ್ರತೆ ಹೆಚ್ಚಿಸಲಾಗಿದೆ ಎಂದು ಹೇಳಿದರು.

- Advertisment -

RECENT NEWS

ಜುಲೈವರೆಗೆ ಉಡುಪಿ ಕೃಷ್ಣನ ದರ್ಶನ ಭಾಗ್ಯ ಇಲ್ಲ

20 ರಿಂದ 30 ದಿನಗಳ ನಂತರ ಪರಿಸ್ಥಿತಿ ನೋಡಿ ಅವಕಾಶ ಉಡುಪಿ: ರಾಜ್ಯ ಸರಕಾರ ಈಗಾಗಲೇ ಜೂನ್ 8ರ ನಂತರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಿದೆ. ಅದರಂತೆ ಈಗಾಗಲೇ ರಾಜ್ಯದ ಮುಜರಾಯಿ ಇಲಾಖೆ...

ಕೃಷ್ಣನಗರಿಯಲ್ಲಿ ನಿಲ್ಲದ ಕೊರೊನಾ ಪ್ರವಾಹ: ಇಂದು ಮತ್ತೆ 121 ಮಂದಿಗೆ ಪಾಸಿಟಿವ್..!

ಉಡುಪಿಗೆ ಕಂಟಕವಾದ ಮಹಾರಾಷ್ಟ್ರ: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 889ಕ್ಕೆ ಏರಿಕೆ..! ಉಡುಪಿ: ಕೃಷ್ಣನಗರಿ ಉಡುಪಿಯಲ್ಲಿ ಹೆಮ್ಮಾರಿ ಕೊರೊನಾ ಪ್ರವಾಹ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ದಿನೇ ದಿನೇ ಕೋವಿಡ್-19 ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಇಂದು ಮತ್ತೆ 121...

ಮತ್ತೆ ಜಿಲ್ಲೆಯಲ್ಲಿ ಕೊರೊನಾ ಸದ್ದು: ಇಂದು 24 ಮಂದಿಗೆ ಕೊರೊನಾ ಸೋಂಕು ದೃಢ…..!!

ದ.ಕ ಜಿಲ್ಲೆಯಲ್ಲಿಂದು 24 ಮಂದಿಗೆ ಕೊರೊನಾ ಪಾಸಿಟಿವ್… ಸೋಂಕಿತರ ಸಂಖ್ಯೆ 167ಕ್ಕೆ ಏರಿಕೆ… ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಕೂಡ 24 ಮಂದಿಗೆ ಮಹಾಮಾರಿ ಕೊರೊನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು ಕೊರೊನಾ...

ಅಧಿಕಾರಿಯೊಬ್ಬರಿಗೆ ಚಪ್ಪಲಿಯಿಂದ ಹೊಡೆದು ಹೆಮ್ಮಾರಿಯಂತೆ ವರ್ತಿಸಿದ ಬಿಜೆಪಿ ನಾಯಕಿ ಸೊನಾಲಿ ಪೋಗಟ್..

ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ದರ್ಪ: ವಿಡಿಯೋ ವೈರಲ್... ನವದೆಹಲಿ: ಟಿಕ್ ಟಾಕ್ ಸ್ಟಾರ್, ಬಿಜೆಪಿ ನಾಯಕಿ ಸೊನಾಲಿ ಫೋಗಟ್ ಅಧಿಕಾರಿಯೊಬ್ಬರಿಗೆ ಚಪ್ಪಲಿಯಲ್ಲಿ ಹೊಡೆಯುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...