Connect with us

    ಕೊಂಚಾಡಿಯಲ್ಲಿ ಕಾಶೀಮಠಾಧೀಶರ ಚಾತುರ್ಮಾಸ್ಯ ವ್ರತ ಸ್ವೀಕಾರ

    Published

    on

    ಕೊಂಚಾಡಿಯಲ್ಲಿ ಕಾಶೀಮಠಾಧೀಶರ ಚಾತುರ್ಮಾಸ್ಯ ವ್ರತ ಸ್ವೀಕಾರ

    ಮಂಗಳೂರು : ಕಾಶೀಮಠಾಧೀಶ ಸಂಯಮೀಂದ್ರ ತೀರ್ಥರ ಚಾತುರ್ಮಾಸ್ಯ ವ್ರತ ಮಂಗಳೂರಿನ ಕೊಂಚಾಡಿ ಕ್ಷೇತ್ರದ   ಶ್ರೀ ಕಾಶೀಮಠದ ಶಾಖಾಮಠದಲ್ಲಿ ಇಂದು ಪ್ರಾರಂಭ .ಗೌಡ ಸಾರಸ್ವತ ಸಮಾಜದ ಶ್ರೀ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಚಾತುರ್ಮಾಸ ವ್ರತವು ಮಂಗಳೂರಿನ ಕೊಂಚಾಡಿ ಕ್ಷೇತ್ರದ   ಶ್ರೀ ಕಾಶೀಮಠದ ಶಾಖಾಮಠದಲ್ಲಿ ಶುಕ್ರ ವಾರದಂದು (ಜೂ  ೧೦) ಮೃತಿಕಾ ಪೂಜನೆಯೊಂದಿಗೆ ಪ್ರಾರಂಭವಾ ವಾಯಿತು .

    (ಚಿತ್ರ : ಮಂಜು ನೀರೇಶ್ವಾಲ್ಯ)

    ಪ್ರಾತಃ ಕಾಲ ಶ್ರೀ ಸಂಸ್ಥಾನದ ಶ್ರೀದೇವರುಗಳಿಗೆ ಪಂಚಾಮೃತ, ಗಂಗಾಭಿಷೇಕ , ಲಘು ವಿಷ್ಣು ಅಭಿಷೇಕ , ಶತಕಲಶಾಭಿಷೇಕ ಬಳಿಕ ಪವಮಾನ ಅಭಿಷೇಕಗಳು ಶ್ರೀಗಳವರ ದಿವ್ಯ ಹಸ್ತಗಳಿಂದ ನೆರವೇರಿತು , ಸಾಯಂಕಾಲ ಮೃತಿಕಾ ಪೂಜನೆ ಬಳಿಕ ಸಭಾ ಕಾರ್ಯಕ್ರಮ ಜರ ಗಿತ . ಸಮಾಜ ಭಾಂದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶ ವಿರುವುದಿಲ್ಲ . ಚಾತುರ್ಮಾಸ್ಯ ವೃತದ ಪ್ರಯುಕ್ತ ಸಂಯಮೀಂದ್ರ ತೀರ್ಥರು ಜೂನ್  ೩೦ ರಂದು ಕೊಂಚಾಡಿ ಶಾಖಾಮಠ   ತಲಪಿದ್ದರು. ಆ ಸಂದರ್ಭದಲ್ಲಿ ಶಾಖಾಮಠದ ವ್ಯವಸ್ಥಾಪಕ ಸಮಿತಿ , ವೈದಿಕರಿಂದ ಪೂರ್ಣ ಕುಂಭ ಸ್ವಾಗತ ನೀಡಲಾಗಿತ್ತು. ಸೆಪ್ಟಂಬರ್ ೨ ರ ಬುಧವಾರ  ಮೃತಿಕಾ ವಿಸರ್ಜನೆ, ಸೀಮೋಲ್ಲಂಘನೆ ಮೂಲಕ ಕಾಶೀಮಠಾಧೀಶರ ಚಾತುರ್ಮಾಸ ಕೊನೆಗೊಳ್ಲಲಿದೆ. ಈ ಅವಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ,  ಪಾರಾಯಣಗಳು ನಡೆಯಲಿವೆ. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಗಳು ನಡೆಯುವ ಸಂದರ್ಭದಲ್ಲಿ ಸಮಾಜ ಭಾಂದವರಿಗೆ ಪಾಲ್ಗೊಳ್ಳುವ ಅಥವಾ ಭಾಗವಹಿಸುವ ಅವಕಾಶ ವಿರುವುದಿಲ್ಲ . ಅತೀ ಸರಳ ರೀತಿಯಲ್ಲಿ ಈ ಬಾರಿ ಚಾತುರ್ಮಾಸದ ಕಾರ್ಯಕ್ರಮಗಳು ನಡೆಯಲಿರುವುದು . ಜುಲೈ  ೨೫ ರಂದು ನಾಗಪಂಚಮಿ, ಮಾಧವೇಂದ್ರ ಸ್ವಾಮಿ ಪುಣ್ಯತಿಥಿ, ಆಗಸ್ಟ್ 4 ಖುಗೋಪಕರ್ಮ,ಆಗಸ್ಟ್ ೧೧ ರಂದು ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳನ್ನು ಚಾತುರ್ಮಾಸ ಸಮಿತಿ, ಕಾಶಿಮಠದ ಶಾಖಾಮಠದಲ್ಲಿ ಆಯೋಜಿಸಿದೆ.ಇದಲ್ಲದೇ ಆಗಸ್ಟ್ ೨೨ -೨೬ರ ವರೆಗೆ ಗಣೇಶ ಚತುರ್ಥಿಯ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು, ಸೆಪ್ಟಂಬರ್ ೧ರಂದು ಅನಂತ ಚತುರ್ದಶಿ ವ್ರತಾಚಾರಣೆ ನಡೆಯಲಿದೆ. ಸೆಪ್ಟಂಬರ್ ೧೮ ರಿಂದ ಅಧಿಕಮಾಸ ಪ್ರಾರಂಭ , ಅಕ್ಟೋಬರ್ ೧೭ ರಿಂದ ನವರಾತ್ರಿ ಆಚರಣೆ ಪ್ರಾರಂಭವಾಗಲಿದ್ದು ಅಕ್ಟೋಬರ್ ೨೮ ರ ವರೆಗೆ ವಿವಿಧ ವಾಹನ ಪೂಜಾ ಸೇವೆಗಳು ನಡೆಯಲಿರುವುದು . ಈ ಬಾರಿ ಕೊರೊನ ಸೋಂಕು ದಿನೇ ದಿನೇ ಹೆಚ್ಚು ಹರಡುತಿದ್ದು ಕೋವಿಡ್-19 (ಕೊರೋನ ವೈರಾಣು) ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತಾದಿಗಳಿಂದ ಸಾಮಾಜಿಕ ಅಂತರವನ್ನು ಕಾಪಾಡುವುದು ಕಷ್ಟವಾಗುವುದರಿಂದ ಭಕ್ತಾದಿಗಳಿಗೆ ಶ್ರೀ ಕ್ಷೇತ್ರಕ್ಕೆ ಭೇಟಿಯನ್ನು ನಿರ್ಭಂದಿಸಲಾಗಿದೆ.  ಸರ್ಕಾರದ ಅನ್ವಯದಂತೆ ಶ್ರೀ ದೇವಳದಲ್ಲಿ ಸುರಕ್ಷತಾ ದೃಷ್ಠಿಯನುಸಾರ ಕೈಗೊಳ್ಳ ಬೇಕಾದ ಅಗತ್ಯ ಸುರಕ್ಷತಾ ಕ್ರಮಗಳು ಈ ಕೆಳಗಿನಂತಿದ್ದು ಕಡ್ಡಾಯವಾಗಿ ಪಾಲಿಸ ಬೇಕಾಗಿ ವಿನಂತಿ. ಮುಂದಿನ ದಿನಗಳಲ್ಲಿ ಅನುಕೂಲಕರ ಪರಿಸ್ಥಿತಿ ಉಂಟಾದಾಗ ಭಕ್ತಾದಿಗಳಿಗೆ ಸೇವೆಗಳನ್ನು ನಡೆಸಲು ಅವಕಾಶ ಕಲ್ಪಿಸಲಾಗುವುದು. ನಮ್ಮೆಲ್ಲರ ಹಿತದೃಷ್ಟಿಯಿಂದ ಈ ಎಲ್ಲಾ ಬದಲಾವಣೆಯ ವ್ಯವಸ್ಥೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿ ಸಹೃದಯಿ ಭಕ್ತಾದಿ ಬಂಧುಗಳು ಸಹಕರಿಸ ಬೇಕಾಗಿ ಈ ಮೂಲಕ ಚಾತುರ್ಮಾಸ ಸಮಿತಿಯ ಡಿ ವಾಸುದೇವ್ ಕಾಮತ್ ಮತ್ತು ಕಸ್ತುರಿ ಸದಾಶಿವ ಪೈ  ವಿನಂತಿಸಿಕೊಂಡಿದ್ದಾರೆ .

    Click to comment

    Leave a Reply

    Your email address will not be published. Required fields are marked *

    LATEST NEWS

    ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ಪ್ರಾ*ಣ ಕಳೆದುಕೊಂಡ ಪಾಗಲ್ ಪ್ರೇಮಿ

    Published

    on

    ಮಂಗಳೂರು/ಮೈಸೂರು : ಗೆಳತಿ ದೂರವಾದಳೆಂದು ಗೆಳೆಯನು ಸೆಲ್ಫಿ ವಿಡಿಯೋ ಮಾಡಿ ತನ್ನ ದುಃಖವನ್ನು ಹಂಚಿಕೊಂಡು ಬಳಿಕ ಆ*ತ್ಮಹ*ತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಮೇಗಳಾಪುರದಲ್ಲಿ ನಡೆದಿದೆ.

    ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿ ವಿನಯ್ ಆ*ತ್ಮಹ*ತ್ಯೆಗೆ ಶರಣಾಗಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ.

    ವಿನಯ್ ಹಾಗೂ ಯುವತಿಯು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರ ಸುತ್ತಾಟ ಓಡಾಟ ಜೋರಾಗಿತ್ತು. ಆದರೆ, ಹುಡುಗಿ ಕುಟುಂಬದವರು ಬೇರೆ ಹುಡುಗನ ಜೊತೆ ಮದುವೆ ಮಾಡಿಕೊಟ್ಟಿದ್ದರು. ಆದರೂ ಸಹ ಇಬ್ಬರ ಪ್ರೀತಿ, ಪ್ರಣಯ ಮುಂದುವರಿದಿತ್ತು. ಯುವತಿಯ ಮನೆಯವರು ಇವರ ಪ್ರೀತಿಯನ್ನು ಒಪ್ಪಿರಲಿಲ್ಲ. ಅಷ್ಟೇ ಅಲ್ಲದೇ, ಅವಳ ಇಚ್ಛೆಗೆ ವಿರುದ್ದವಾಗಿ ಬೇರೆ ಮದುವೆ ಮಾಡಿಸಿದ್ದರು. ಆದರೂ ಅವರಿಬ್ಬರ ಪ್ರೀತಿ ಮುಂದುವರೆದಿತ್ತು. ಯುವತಿ ಪೋಷಕರು ಈ ಪ್ರೀತಿಗೆ ಅಡ್ಡಿಯಾದರೂ. ಮಗಳು ಬೇರೆ‌ ಹುಡುಗನ ಜೊತೆ ಮದುವೆಯಾದರೆ ಎಲ್ಲಾ ಸರಿಯಾಗುತ್ತೆ ಎಂಬುವುದು ಯುವತಿಯ ಮನೆಯವರ ಅಭಿಪ್ರಾಯವಾಗಿತ್ತು. ಆದರೆ ಆಗಿದ್ದೇ ಬೇರೆ. ಬೇರೆಯವನನ್ನು ಮದುವೆಯಾದರೂ ವಿನಯ್, ಆಕೆಯನ್ನು ಪ್ರೀತಿಸುವುದನ್ನು ಮಾತ್ರ ನಿಲ್ಲಿಸಿಲ್ಲ. ಯುವತಿ ಸಹ ತಾನು ಬೇರೆಯವನನ್ನು ಮದುವೆಯಾದರೂ ವಿನಯ್ ಜೊತೆ ಸಂಪರ್ಕ ಹೊಂದಿದ್ದಳು. ವಿನಯ್‌ನೊಂದಿಗೆ ಯುವತಿಯ ಸುತ್ತಾಟ ಮುಂದುವರೆದಿದ್ದು, ಕೆಲವು ಬಾರಿ ಮನೆ ಬಿಟ್ಟು ವಿನಯ್ ಜೊತೆ ಹೋಗಿದ್ದ ವೇಳೆ ಮನೆಯವರು ಹುಡುಕಿಕೊಂಡು ಬಂದಿದ್ದರು. ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.

    ಜನವರಿ 16 ರಂದು ಈ ವಿಚಾರವಾಗಿ ರಾಜಿ ಪಂಚಾಯತಿಯಾಗಿದ್ದು, ಅದರಿಂದ ವಿನಯ್ ಅವಮಾನಕ್ಕೊಳಗಾಗಿದ್ದ.‌ ಕೊನೆಗೆ ಮಹಿಳೆಯೂ’ನಾನು ನನ್ನ ಪತಿ ಜೊತೆ ಹೋಗುವೆ’ ಎಂದು ಹೇಳಿದ್ದಳು. ಇದರಿಂದ ಅಸಮಧಾನಗೊಂಡ ವಿನಯ್ ಆಕೆಯನ್ನು ಸಂಪರ್ಕಿಸಲು ಸಾಕಷ್ಟು ಪ್ರಯತ್ನಿಸಿದ್ದಾನೆ. ಆದ್ರೆ ಪ್ರಯೋಜನವಾಗಿಲ್ಲ. ಇದರಿಂದ ಮನನೊಂದು ತನ್ನ ಸಹೋದರಿಯ ಮನೆಗೆ ಹೋಗಿ ನೇ*ಣಿಗೆ ಶರಣಾಗಿದ್ದಾನೆ‌. ಈ ಸಾ*ವಿಗೆ ಯುವತಿಯ‌ ಮನೆಯವರೇ ಕಾರಣ ಎಂದು ವಿನಯ್ ಮನೆಯವರ ಆರೋಪ ಮಾಡಿದ್ದಾರೆ. ‘ಅವರಿಬ್ಬರು ಚೆನ್ನಾಗಿಯೇ ಇದ್ದರು, ಅವರ ಮನೆಯವರು ಅವಮಾನ ಮಾಡಿದ್ದಕ್ಕೆ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾನೆ. ಅವರಿಗೆ ತಕ್ಕ ಶಿಕ್ಷೆ ಆಗಬೇಕು’ ಅನ್ನೋದು ವಿನಯ್ ಮನೆಯವರ ಒತ್ತಾಯ. ಈ ಸಂಬಂಧ ಇಲವಾಲ ಪೊಲೀಸ್ ಠಾಣೆಗೆ ವಿನಯ್ ಸಂಬಂಧಿಕರು ದೂರು ನೀಡಿದ್ದಾರೆ.

    ಪ್ರೀತಿ ಪರಿಶುದ್ಧವಾಗಿತ್ತು , ಆದರೆ ಕುಟುಂಬಕ್ಕೆ ಅದೇ ಪ್ರೀತಿ ಕಳಂಕವಾಗಿ ಕಂಡಿತ್ತು. ಮನೆಯವರ ಸ್ವಾರ್ಥಕ್ಕೆ ಇಲ್ಲಿ ಒಂದು ಜೀವ ಬ*ಲಿಯಾಗಿದೆ. ಮಗಳು ಮನೆ ಮರ್ಯಾದೆ ಹೌದು ಆದರೆ ಅವಳ ಭಾವನೆಗೂ ಸ್ಪಂದಿಸುವ ಗುಣ ಮನೆಯವರಲ್ಲಿರಬೇಕು. ಅವಳ ಜೀವನ, ಅವಳ ಇಷ್ಟ, ಅವಳ ಆಯ್ಕೆಯಾಗಿರುತ್ತದೆ. ಒಂದು ವೇಳೆ ವಿನಯ್‌ನನ್ನು ಯುವತಿಯ ಮನೆಯವರು ಒಪ್ಪಿದ್ದಲ್ಲಿ ಒಂದು ಜೀವ ಬದುಕುಳಿಯುತ್ತಿತ್ತು. ಇಬ್ಬರೂ ಸುಖವಾಗಿ ಸಂಸಾರ ನಡೆಸುತ್ತಾ ಜೊತೆಯಾಗಿ ಬಾಳಬಹುದಿತ್ತು. ಆದರೆ, ಎಲ್ಲವೂ ಕೈ ಮೀರಿಯಾಗಿತ್ತು. ಏನೇ ಇರಲಿ, ಮದುವೆಯ ನಂತರವೂ ಪ್ರೀತಿಯ ಹುಚ್ಚಾಟಕ್ಕೆ ಬಿದ್ದು ವಿನಯ್ ಪ್ರಾ*ಣ ಕಳೆದುಕೊಂಡದ್ದು ಮಾತ್ರ ದುರಂತವೇ ಸರಿ.

    Continue Reading

    FILM

    ಮಂಥರೆಯಾಗಿ ಮೊದಲ ಬಾರಿ ಯಕ್ಷಗಾನದಲ್ಲಿ ಮಿಂಚಿದ ನಟಿ ಉಮಾಶ್ರೀ

    Published

    on

    ಮಂಗಳೂರು/ಹೊನ್ನಾವರ : ಉತ್ತರಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಶುಕ್ರವಾರ (ಜ.17) ರಾತ್ರಿ ಕನ್ನಡ ಚಿತ್ರರಂಗದ ಖ್ಯಾತ ನಟಿ, ಮಾಜಿ ಸಚಿವೆ ಉಮಾಶ್ರೀಯವರು ಶ್ರೀರಾಮ ಪಟ್ಟಾಭಿಷೇಕ ಯಕ್ಷಗಾನದಲ್ಲಿ ಮಂಥರೆ ಪಾತ್ರದಲ್ಲಿ ಅಭಿನಯಿಸಿದರು.

    ಯಕ್ಷಗಾನ ರಂಗದಲ್ಲಿ ಹಾಸ್ಯಗಾರರು ನಿರ್ವಹಿಸುವ ಪಾತ್ರಗಳಲ್ಲಿ ಒಂದು ಎಂದೇ ಪರಿಗಣಿಸಲ್ಪಟ್ಟ ಮಂಥರೆಯ ವೇಷದೊಂದಿಗೆ ಮೊದಲ ಬಾರಿಗೆ ಯಕ್ಷರಂಗದಲ್ಲಿ ಉಮಾಶ್ರೀಯವರು ಪಾತ್ರ ನಿರ್ವಹಿಸಿದರು.
    ಹೊನ್ನಾವರದ ಸೇಂಟ್ ಅಂಥೋನಿ ಮೈದಾನದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ಯಕ್ಷಗಾನ ಮಂಡಳಿ ಆಯೋಜಿಸಿರುವ ಶ್ರೀರಾಮ ಪಟ್ಟಾಭಿಷೇಕ ಪ್ರಸಂಗ ನಡೆಯಿತು.

    ಪೆರ್ಡೂರು ಮೇಳದ ಪ್ರಧಾನ ಭಾಗವತ ಜನ್ಸಾಲೆ ರಾಘವೇಂದ್ರ ಆಚಾರ್ಯ ಜನ್ಸಾಲೆ ಅವರ ಪದ್ಯಕ್ಕೆ ಹೆಜ್ಜೆ ಹಾಕುತ್ತಾ ತನ್ನ ಅಭಿನಯದ ಚಾಕಚಕ್ಯತೆಯನ್ನು ತೋರುತ್ತಾ ರಂಗಸ್ಥಳವೇರಿದ ನಟಿಗೆ ಕೂತುಹಲಕಾರಿಯಾಗಿ ಕಾಯುತ್ತಿದ್ದ ಪ್ರೇಕ್ಷಕರು ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಕೈಕೇಯಿ ಪಾತ್ರದಲ್ಲಿ ಖ್ಯಾತ ಸ್ತ್ರೀ ಪಾತ್ರಧಾರಿ ಯಲಗುಪ್ಪ ಸುಬ್ರಮಣ್ಯ ಹೆಗಡೆ ಉಮಾಶ್ರೀಯವರೊಂದಿಗೆ ಸಂಭಾಷಣೆಯಲ್ಲಿ ಗಮನ ಸೆಳೆದರು.

    ಇದನ್ನೂ ಓದಿ: ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    ಮಂಥರೆ ಪಾತ್ರವನ್ನು ಉಮಾಶ್ರೀ ಅವರು ತುಂಬಾನೇ ಚೆನ್ನಾಗಿ ಮಾಡಿದ್ದಾರೆ. ರಂಗಭೂಮಿಯಲ್ಲಿ ತಮ್ಮದೇ ಛಾಪು ಮೂಡಿಸಿರೋ ಉಮಾಶ್ರೀ ಅವರು, ಈ ಒಂದು ಮಂಥರೆ ಪಾತ್ರದ ಮೂಲಕವೇ ಹೊನ್ನಾವರದ ಜನರ ಹೃದಯ ಗೆದ್ದಿದ್ದಾರೆ ಅಂತಲೂ ಹೇಳಬಹುದು.

    ಉಮಾಶ್ರೀ ಮಂಥರೆ ಪಾತ್ರ ಮಾಡಲು ಕಾರಣ ಏನು?
    ಉಮಾಶ್ರೀ ಅವರಿಗೆ ಮಂಥರೆ ಪಾತ್ರ ಹೊಸದೇ ಆಗಿದೆ. ಇಲ್ಲಿವರೆಗೂ ಈ ರೀತಿಯ ಪಾತ್ರ ಮಾಡಿದ್ದೇ ಇಲ್ಲ. ಆದರೆ, ಈ ಒಂದು ಪಾತ್ರ ಮಾಡೋಕೆ ಕಾರಣವೂ ಇದೆ. ಆ ಕಾರಣದ ಹೆಸರು ರಾಮಚಂದ್ರ ಚಿಟ್ಟಾಣಿ ಅಂತಲೇ ಹೇಳಬೇಕಾಗುತ್ತದೆ.

    ಯಕ್ಷಗಾನದಲ್ಲಿ ದಿಗ್ಗಜ ಕಲಾವಿದರ ಸಾಲಿನಲ್ಲಿ ರಾಮಚಂದ್ರ ಚಿಟ್ಟಾಣಿಯವರೂ ಒಬ್ಬರು. ದಿವಂಗತ ರಾಮಚಂದ್ರ ಚಿಟ್ಟಾಣಿಯವರಿಗೆ ಉಮಾಶ್ರೀ ಯಕ್ಷಗಾನದಲ್ಲಿ ಪಾತ್ರ ಮಾಡಬೇಕೆಂದಿತ್ತಂತೆ. ಮಂಥರೆ ಪಾತ್ರ ಮಾಡುವಂತೆ ಕೇಳಿದಾಗ ಉಮಾಶ್ರೀ ನನಗೆ ಯಕ್ಷಗಾನದಲ್ಲಿ ಅನುಭವವಿಲ್ಲ. ಹೀಗಾಗಿ ಹೇಗೆ ಮಾಡಲಿ ಎಂದು ಹಿಂದೇಟು ಹಾಕಿದ್ದರಂತೆ.

    ಇತ್ತೀಚೆಗೆ ಅವರ ಮಗ ಸುಬ್ರಹ್ಮಣ್ಯ ಚಿಟ್ಟಾಣಿಯವರು ಮಂಥರೆಯ ಪಾತ್ರ ಮಾಡಲು ಕೋರಿಕೊಂಡಾಗ ರಾಮಚಂದ್ರ ಚಿಟ್ಟಾಣಿಯವರ ಮೇಲಿನ ಗೌರವದಿಂದ ಪಾತ್ರ ಮಾಡಲು ಒಪ್ಪಿಕೊಂಡರಂತೆ. ಈ ಮೂಲಕ ಅವರ ಆತ್ಮಕ್ಕೆ ತೃಪ್ತಿ ಸಿಗಲಿ ಎಂದು ಪಾತ್ರ ಮಾಡಲು ಒಪ್ಪಿಕೊಂಡೆ ಎಂದಿದ್ದಾರೆ.

    ನಿನ್ನೆ ರಾತ್ರಿ ನಡೆದ ಯಕ್ಷಗಾನ ಪ್ರಸಂಗದಲ್ಲಿ ಮಂಥರೆಯ ಪಾತ್ರದಲ್ಲಿ ಮಿಂಚಿದ ಉಮಾಶ್ರೀ ತಮ್ಮೊಳಗಿನ ಮತ್ತೊಂದು ಪ್ರತಿಭೆಯ ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಧರ್ಮಸ್ಥಳ : ಉಚಿತ ಸಾಮೂಹಿಕ ವಿವಾಹಕ್ಕೆ ಅರ್ಜಿ ಆಹ್ವಾನ

    Published

    on

    ಧರ್ಮಸ್ಥಳ :  53 ನೇ ವರ್ಷದ ಉಚಿತ ಸಾಮೂಹಿಕ ವಿವಾಹವು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ.3 ರ ಶನಿವಾರ ಸಂಜೆ 6.48ರ ಗೋಧೂಳಿ ಲಗ್ನದಲ್ಲಿ ನಡೆಯಲಿದೆ.

    ‘ಮದುವೆ’ ಎನ್ನುವುದು ಅದೆಷ್ಟೋ ಜನರ ಸುಂದರ ಕನಸು. ಆದರೆ ಆರ್ಥಿಕ ಪರಿಸ್ಥಿತಿಯು ಆ ಖುಷಿಗೆ ಸಾಥ್ ನೀಡದೆ ಇರಬಹುದು. ಕೆಲವೊಮ್ಮೆ ಜೋಡಿಯ ಪವಿತ್ರ ಪ್ರೇಮಕ್ಕೆ ಕುಟುಂಬವೂ ಅಡ್ಡಿಯಾಗಬಹುದು. ಅಂತಹ ಯುವ ಜೋಡಿಗೆ ಸಿಹಿ ಸುದ್ದಿಯೊಂದು ಬಂದಿದ್ದು, ಶ್ರೀ ಕ್ಷೇತ್ರ ದರ್ಮಸ್ಥಳದಲ್ಲುಇ ನಡೆಯುವ ಸಾಮೂಹಿಕ ವಿವಾಹದ ಸದುಪಯೊಗವನ್ನು ಪಡೆದುಕೊಳ್ಳಬಹುದು.

    ಎರಡನೇ ವಿವಾಹಕ್ಕೆ ನಿರ್ಬಂಧ ಹೇರಿದ್ದು, ಮೊದಲ ಮದುವೆಗೆ ಮಾತ್ರ ಆದ್ಯತೆ ನೀಡಲಾಗುವುದು. ಮಧುಮಗನಿಗೆ ಧೋತಿ, ಶಾಲು ನೀಡಲಾಗುವುದು. ಮಧುಮಗಳಿಗೆ ಸೀರೆ, ರವಿಕೆ ಕಣ, ಮಂಗಳಸೂತ್ರ ಹೂವಿನ ಹಾರ ಕೊಡಲಾಗುವುದು.

    ಇದನ್ನೂ ಓದಿ : ಕಣ್ಣೀರು ಹಾಕುತ್ತಾ ಮಹಾಕುಂಭಮೇಳದಿಂದ ಹೊರ ನಡೆದ ಸುಂದರಿ ಸಾಧ್ವಿ

    ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯ ಮೂಲಕವೇ ಮದುವೆಯ ಎಲ್ಲಾ ವೆಚ್ಚವನ್ನು  ಮಾಡಲಾಗುವುದು. ಆಸಕ್ತರು 2025 ಫೆ.25 ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 08256-266644 ಸಂಖ್ಯೆಯನ್ನು ಸಂಪರ್ಕಿಸಬಹುದು.

    Continue Reading

    LATEST NEWS

    Trending