Home ಕರ್ನಾಟಕ ವಾರ್ತೆ ನಾಳೆ ಕರ್ನಾಟಕ‌ ಬಂದ್ ಗೆ ಕರೆ ಮಂಗಳೂರಿನಲ್ಲಿ ಬಂದ್ ಬೆಂಬಲ ಇಲ್ಲ

ನಾಳೆ ಕರ್ನಾಟಕ‌ ಬಂದ್ ಗೆ ಕರೆ ಮಂಗಳೂರಿನಲ್ಲಿ ಬಂದ್ ಬೆಂಬಲ ಇಲ್ಲ

ನಾಳೆ ಕರ್ನಾಟಕ‌ ಬಂದ್ ಗೆ ಕರೆ ಮಂಗಳೂರಿನಲ್ಲಿ ಬಂದ್ ಬೆಂಬಲ ಇಲ್ಲ

ಮಂಗಳೂರು : ಡಾ।ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಪರ ಸಂಘಟನೆಗಳು ನಾಳೆ ಕರೆದ ಕರ್ನಾಟಕ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಂಬಲ ನೀಡದಿರಲು ಇಲ್ಲಿನ ಸಂಘಟನೆಗಳು ನಿರ್ಧರಿಸಿವೆ.ಆದ್ದರಿಂದ ಜಿಲ್ಲೆಯ ಕೇಂದ್ರ ಸ್ಥಾನ ಮಂಗಳೂರು ಸೇರಿದಂತೆ ಜಿಲ್ಲೆಯಲ್ಲಿ ಜನಜೀವನ ಯಥಾಸ್ಥಿತಿಯಲ್ಲಿರಲಿದೆ.ವಾಹನ ಸಂಚಾರ,ಹೊಟೇಲ್ ಉದ್ಯಮ,ಶಾಲಾ-ಕಾಲೇಜುಗಳೂ ಯಥಾಸ್ಥಿತಿಯಲ್ಲಿರಲಿವೆ.

ಇನ್ನು ಕರ್ನಾಟಕ ರಕ್ಷಣಾ ವೇದಿಕೆ ಕೇಂದ್ರ ಸಮಿತಿಯ ನಿರ್ಧಾರದಂತೆ ನಾಳೆ ನಡೆಯುವ ಬಂದ್ ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲಿಸುವುದಿಲ್ಲ. ಆದರೆ ಕನ್ನಡಿಗರಿಗೆ ಉದ್ಯೋಗ ಹಾಗೂ ಮಹದಾಯಿ ವಿಚಾರದಲ್ಲಿ ಅನ್ಯಾಯವಾಗುತ್ತಿರುವುದನ್ನು ಖಂಡಿಸಿ ಫೆಬ್ರವರಿ ಕೊನೆಯ ವಾರದಲ್ಲಿ ದೆಹಲಿಯ ಜಂತರ್ ಮಂತರ್ ನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು. ಕರವೇ ಕಳೆದ 10ವರ್ಷಗಳಿಂದ ಸರೋಜಿನಿ ಮಹಿಷಿ ವರದಿ ಜಾರಿಗಾಗಿ ರಾಜ್ಯಾದ್ಯಂತ ಅನೇಕ ಹೋರಾಟ ಮಾಡುತ್ತ ಬಂದಿದೆ. ಬಂದ್ ಆಚರಣೆಯಿಂದ ರಾಜ್ಯದ ಜನತೆಗೆ ತೊಂದರೆ ಇಷ್ಟವಿಲ್ಲದ ಕಾರಣ ನಾಳೆಯ ಬಂದ್ ಗೆ ಕರವೇ ಮಂಗಳೂರು ತಾಲೂಕು ಘಟಕ ಯಾವುದೇ ಬೆಂಬಲ ನೀಡುವುದಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಟಿಎ ನಾರಾಯಣ ಗೌಡ ಬಣದ ಮಂಗಳೂರು ತಾಲ್ಲೂಕು ಅಧ್ಯಕ್ಷ ಮಧುಸೂದನ್ ಗೌಡ ತಿಳಿಸಿದ್ದಾರೆ.

ವೀಡಿಯೋಗಾಗಿ

RECENT NEWS

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..!

ಎಂ ಆರ್‌ ಪಿ ಎಲ್ ಸಿಐಎಸ್‌ಎಫ್ ಅಧಿಕಾರಿ ಕೊರೊನಾಕ್ಕೆ ಬಲಿ..! ಮಂಗಳೂರು : ಇದೇ ಮೊದಲ ಬಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಭದ್ರತಾ ಅಧಿಕಾರಿ ಸಾವನ್ನಪ್ಪಿದ್ದಾರೆ. ಮಂಗಳೂರಿನ ಎಂ ಆರ್‌ ಪಿ ಎಲ್‌...

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..!

ದಕ್ಷಿಣ ಕನ್ನಡದಲ್ಲಿ ಕೊರೊನಾ ಮರಣಮೃದಂಗ : ಇಂದು ಮತ್ತೆ ಎಂಟು ಬಲಿ ಪಡೆದ ಕೊರೊನಾ..! ಮಂಗಳೂರು :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಮರಣ ಮೃದಂಗ ಬಾರಿಸುತ್ತಲೇ ಇದೆ. ಬೆಂಗ್ಳೂರು ಬಳಿಕ ಕರಾವಳಿ ನಗರಿ, ಮಂಗಳೂರು...

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..!

ಕೊರೊನಾ ಸಮುದಾಯಕ್ಕೆ ಹರಡಿರುವುದು ಸತ್ಯ : ಶಾಸಕ ಯು.ಟಿ. ಖಾದರ್..! ಮಂಗಳೂರು : ರಾಜ್ಯದಲ್ಲಿ ಕೊರೊನಾ ಸಮುದಾಯಕ್ಕೆ ಹರಡಿದೆ. ಆದ್ದರಿಂದ ಶೀಘ್ರದಲ್ಲೇ ರಾಂಡಮ್ ಟೆಸ್ಟ್‌ ಗೆ ಸರ್ಕಾರ ಮುಂದಾಗಬೇಕು. ಒಂದು ವೇಳೆ ರಾಂಡಂ ಟೆಸ್ಟ್‌...

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..!

ಕೊರೊನಾ ಸೊಂಕಿನ ಭೀತಿ- ಸ್ವಯಂ ಲಾಕ್‌ ಡೌನ್ ಘೋಷಿಸಿದ ಪುದು ಗ್ರಾಮ ಪಂಚಾಯತ್..! ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಜನ ಸಾಮಾನ್ಯರಲ್ಲಿ ಚಳಿ ಕೂರಿಸಿದೆ. ಕಳೆದ...
error: Content is protected !!