Connect with us

STATE

ಪ್ರವಾಸಿಗರನ್ನು ಕೈಬೀಸಿ ಕರೆಯೋ ಕುರುಂಜಿ ಹೂ-12ವರ್ಷಗಳಿಗೊಮ್ಮೆ ಅರಳುವ ಈ ‘ಸುಮ’ದ ಸೊಬಗಿಗೆ ಸಾಟಿಯೇನಿದೆ..?

Published

on

ಚಿಕ್ಕಮಗಳೂರು: ಇಂದು ಪ್ರಕೃತಿಯಲ್ಲಿ ನೂರಾರು ವಿಸ್ಮಯಗಳಿವೆ. ಮನುಷ್ಯನ ಊಹೆಗೂ ನಿಲುಕದ ಅಚ್ಚರಿಗಳಿವೆ. ಮಾನವ ತಾನು ಎಲ್ಲವನ್ನೂ ಸಾಧಿಸುತ್ತೇನೆಂದು ಹೊರಟರೆ ಮಾನವನ ಕೈಗೂ ನಿಲುಕದ ವೈಚಿತ್ರ್ಯಗಳನ್ನು ಈ ಪ್ರಕೃತಿ ಪ್ರದರ್ಶಿಸುತ್ತಿದೆ. ಅದಕ್ಕೆ ಒಂದು ಉದಾಹರಣೆಯೇ ಕುರುಂಜಿ ಹೂ.


ಬರೋಬ್ಬರಿ 12 ವರ್ಷಗಳಿಗೊಮ್ಮೆ ಈ ನೀಲ ಕುರುಂಜಿ ಹೂ ಅರಳುತ್ತದೆ. ಆದರೆ ಇದನ್ನು ನೋಡಬೇಕೆಂದರೆ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ದತ್ತಪೀಠ ಮಾಣಿಕ್ಯಧಾರ ಜಲಪಾತದತ್ತ ಸಾಗಬೇಕು.

ಸರಿಸುಮಾರು 2000ಕ್ಕೂ ಅಧಿಕ ಎಕ್ಕರೆ ಪಶ್ಚಿಮಘಟ್ಟದಲ್ಲಿ ಈ ಅತ್ಯಪರೂಪದ ನೀಲ ಕುರುಂಜಿ ಹೂ ಕಾಣಲು ಸಾಧ್ಯ. ಹೂವುಗಳ ಬೆಟ್ಟವನ್ನು ನೋಡಲೆಂದೇ ದೂರದೂರಿನಿಂದ ಜನತೆ ಪ್ರವಾಸಿಗರಾಗಿ ಆಗಮಿಸುತ್ತಿದ್ದಾರೆ.


ಬೆಟ್ಟಗಳೆಲ್ಲಾ ನೀಲಿ ಹೊದ್ದಂತೆ ಭಾಸವಾಗುತ್ತಿದ್ದು, ಇಡೀ ಪಶ್ಚಿಮಘಟ್ಟದ ವನ ಸಿರಿಯೇ ನೀಲಿಯ ಚಿತ್ತಾರ ಬಿಡಿಸಿದ ಸೀರೆ ಉಟ್ಟಂತೆ ಕಂಡು ಬರುತ್ತಿದೆ.

ದಕ್ಷಿಣ ಭಾರತದ ಇತರ ಕಡೆಗಳಲ್ಲಿ ಬಿಡುವ ಈ ಹೂವಿಗೆ ಇಷ್ಟೊಂದು ಗಾಢವಾದ ಬಣ್ಣವಿರುವುದಿಲ್ಲ ಎನ್ನುವುದು ಕೂಡಾ ವಿಶೇಷವಾಗಿದೆ. ಇದರ ವೈಜ್ಞಾನಿಕ ಹೆಸರು ಸ್ಟ್ರೊಬಿಯಾಂತಸ್ ಕುಂತಿಯಾನ.

ನೀಲಗಿರಿ ಬೆಟ್ಟವನ್ನು ಈ ಹೆಸರಿನಲ್ಲಿ ಗುರುತಿಸಲ್ಪಡಲು ಈ ಹೂವೇ ಕಾರಣ ಎಂದೂ ಜನ ಹೇಳುತ್ತಾರೆ.
2006ರಲ್ಲಿ ಚಿಕ್ಕಮಗಳೂರಿನ ಬಾಬಾಬುಡನ್ ಗಿರಿ, ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ ಭಾಗಗಳಲ್ಲಿ ನೀಲಿಕುರುಂಜಿ ಅರಳಿ ನಿಂತಿತ್ತು. ಕರ್ನಾಟಕದಲ್ಲಿ ಚಿಕ್ಕಮಗಳೂರು ಜಿಲ್ಲೆಯ ಚಂದ್ರದ್ರೋಣ ಪರ್ವತ ಬಳ್ಳಾರಿ ಜಿಲ್ಲೆಯ ಸಂಡೂರು, ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮೂನ್ನಾರ್ ಗಳಲ್ಲಿ ನೀಲಿಕುರುಂಜಿ ಅರಳುತ್ತದೆ.


ಹೂವಾಗಿ ಒಣಗಿ ಬೀಜ ಉದುರಿ ಮತ್ತೆ ಗಿಡವಾಗಿ ಮತ್ತೆ ಹೂವಾಗುವುದಕ್ಕೆ ತೆಗೆದುಕೊಳ್ಳುವ ಅವಧಿ 12 ವರ್ಷ. ಒಮ್ಮೆ ಅರಳಿದರೆ ಸುಮಾರು 30ರಿಂದ 40 ದಿನಗಳ ಕಾಲ ಅರಳಿರುತ್ತದೆ.

LATEST NEWS

ಕೊನೆಗೂ ಮೌನ ಮುರಿದ ಎಚ್‌ಡಿ ದೇವೇಗೌಡ..! ಪ್ರಜ್ವಲ್ ಬಗ್ಗೆ ಹೇಳಿದ್ದೇನು?

Published

on

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನ ಮಂತ್ರಿ ದೇವೇಗೌಡರವರು ಮೌನ ಮುರಿದಿದ್ದಾರೆ. ಇದೇ ಮೊದಲ ಬಾರಿಗೆ ಪ್ರಜ್ವಲ್ ಪೆಂಡ್ರೈವ್ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ.  ಬೆಂಗಳೂರಿನಲ್ಲಿ ಮಾತನಾಡಿದ ದೇವೇಗೌಡರು, ಪ್ರಜ್ವಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿ. ನಮ್ಮದೇನು ತಕರಾರಿಲ್ಲ. ಆದರೆ ರೇವಣ್ಣ ವಿಚಾರದಲ್ಲಿ ಜನರಿಗೆ ಸತ್ಯ ಗೊತ್ತಿದೆ.  ರೇವಣ್ಣ ಪ್ರಕರಣ ಕೋರ್ಟ್‌ನಲ್ಲಿ ನಡೆಯುತ್ತಿದೆ. ಈ ಪ್ರಕರಣದಲ್ಲಿ ರೇವಣ್ಣರನ್ನು ಯಾವ ರೀತಿ ಸಿಲುಕಿಸಿದ್ದಾರೆ. ಕೇಸ್ ಹೇಗೆ ದಾಖಲು ಮಾಡಿದ್ದಾರೆ ಎಂದು ನಮಗೆ ತಿಳಿದಿದೆ. ಕೋರ್ಟ್‌ನಲ್ಲಿ ಜಡ್ಜ್‌ಮೆಂಟ್ ನಡೀತಿದೆ. ಈ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

devegowda

ಇದನ್ನೂ ಓದಿ..; ಪ್ರಜ್ವಲ್ ರೇವಣ್ಣ ಪ್ರಕರಣ; ವೀಡಿಯೋ, ಫೋಟೋ ಅಪ್ಲೋಡ್ ಮಾಡಿದ್ದಾತ ಅರೆಸ್ಟ್

ಇಂದು 92ನೇ ಹುಟ್ಟು ಹಬ್ಬ ಹಿನ್ನೆಲೆ ಜೆಪಿ ನಗರದ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.  ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ದೇವೇಗೌಡರು ಈಗಾಗಲೇ ಈ ಘಟನೆ ಬಗ್ಗೆ ಕುಮಾರಾಸ್ವಾಮಿ ಅವರು ನಮ್ಮ ಕುಟುಂಬದ ಪರವಾಗಿ ಮಾತನಾಡಿದ್ದಾರೆ.  ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ. ಇದರಲ್ಲಿ ಅನೇಕರ ಹೆಸರು ಇದೆ, ಆದರೆ ನಾನು ಅವರ ಹೆಸರನ್ನು ಹೇಳಲು ಬಯಸುವುದಿಲ್ಲ. ಇನ್ನು ಸಂತ್ರಸ್ಥ ಮಹಿಳೆಯರಿಗೆ ಪರಿಹಾರ ನೀಡಬೇಕು. ಈ ಪ್ರಕರಣದಲ್ಲಿ ಯಾರೆಲ್ಲಾ ಭಾಗಿಯಾಗಿದ್ದಾರೆ ಅವರೆಲ್ಲರಿಗೂ ಶಿಕ್ಷೆ ಆಗಬೇಕು. ಈ ಕುರಿತಾಗಿ ಕುಮಾರಸ್ವಾಮಿಯವರು ಬಿಡಿ ಬಿಡಿಯಾಗಿ ತಿಳಿಸಿದ್ದಾರೆಎಂದು ಹೇಳಿದರು. .

Continue Reading

LATEST NEWS

ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

Published

on

ಮಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌ ಆದ ನಂದಿನಿ ಜಾಗತಿಕ ಬ್ರಾಂಡ್ ಆಗಿ ಲಗ್ಗೆ ಇಟ್ಟಿದೆ. ವಿಶ್ವಕಪ್ ಟಿ-ಟ್ವೆಂಟಿ ಪಂದ್ಯಕೂಟದಲ್ಲಿ ನಂದಿನಿ ಹೆಸರು ರಾರಾಜಿಸಲಿದೆ. ಹೌದು, ನಂದಿನಿ ಸ್ಕಾಟ್ಲೆಂಡ್ ಹಾಗೂ ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ. ರಾಜ್ಯದ ಕೃಷಿಕರ ಶ್ರಮವನ್ನು ಹಾಗೂ ಉತ್ಕೃಷ್ಟ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ವಿಶ್ವಕ್ಕೆ ಸಾರುವ ಯತ್ನದಲ್ಲಿದೆ.


ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿಯಲ್ಲಿ ನಂದಿನಿ :

ಜೂನ್ ೧ ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟೂರ್ನಿ ಅಮೆರಿಕದಲ್ಲಿ ಆರಂಭವಾಗಲಿದೆ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟಿಗರ ಜರ್ಸಿಯಲ್ಲಿ ಭಾರತೀಯ ಭಾಷೆಯೊಂದು ಪ್ರದರ್ಶಿಸಲಾಗುತ್ತಿದೆ. ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.


ಸಿಎಂ ಟ್ವೀಟ್ :

ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಈ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಮಲೇಷಿಯಾ, ವಿಯೆಟ್ನಾಂ, ಸಿಂಗಾಪುರ, ಅಮೇರಿಕಾ, ದುಬೈ, ಯುಎಇ ಮುಂತಾದ ರಾಷ್ಟ್ರಗಳಲ್ಲಿ ಹೆಸರುವಾಸಿಯಾಗಿರುವ ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಈಗ ಟಿ೨೦ ವಿಶ್ವಕಪ್ ಪಂದ್ಯಕೂಟದಲ್ಲಿ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳ ಪ್ರಾಯೋಜಕತ್ವ ಪಡೆದಿದೆ.

ಇದನ್ನೂ ಓದಿ : ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?!

ರಾಜ್ಯದ ಜನರ ಮನೆ-ಮನ ಗೆದ್ದಿರುವ ನಂದಿನಿ ಇದೀಗ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನಂದಿನಿ ಉತ್ಪನ್ನಗಳು ಕ್ರಿಕೆಟ್ ಆಟಗಾರರ ಹಾಗೂ ಕ್ರಿಕೆಟ್ ಪ್ರೇಮಿಗಳ ಮನ ಗೆಲ್ಲುವುದಂತು ನಿಜ ಸಂಗತಿ ಎಂದು ಬರೆದುಕೊಂಡಿದ್ದಾರೆ.

Continue Reading

LATEST NEWS

ಅಂಜಲಿ ಹಂ*ತಕನ ಬಂಧನ; ರೈಲಿನಲ್ಲಿ ಪ್ರಯಾಣಿಸುತ್ತಿದ್ದವನ ಪೊಲೀಸರು ಬಂಧಿಸಿದ್ದು ಹೇಗೆ?

Published

on

ಹುಬ್ಬಳ್ಳಿ : ಅಂಜಲಿ ಅಂಬಿಗೇರ್ ಹ*ತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ನನ್ನು ಬಂಧಿಸಲಾಗಿದೆ. ಆರೋಪಿಯನ್ನು ಹುಬ್ಬಳ್ಳಿ – ಧಾರವಾಡ ನಗರ ಪೊಲೀಸರು ದಾವಣಗೆರೆಯಲ್ಲಿ ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಎರಡು ದಿನಗಳ ಹಿಂದೆ ಅಂಜಲಿ ಅಂಬಿಗೇರ್ ಎಂಬ ಯುವತಿಯನ್ನು ಗಿರೀಶ್ ಯಾನೆ ವಿಶ್ವನಾಥ್ ಸಾವಂತ್ ಹ*ತ್ಯೆ ಮಾಡಿದ್ದ.

ತನ್ನ ಪ್ರೀತಿ ನಿರಾಕರಿಸಿದಳು ಎಂಬ ಕಾರಣಕ್ಕೆ ಬೆಳ್ಳಂಬೆಳಗ್ಗೆ ಆಕೆಯ ಮನೆಯೊಳಗೆ ನುಗ್ಗಿ ಚಾಕುವಿನಿಂದ ಇರಿದು ಹ*ತ್ಯೆ ಮಾಡಿದ್ದ. ಆ ಬಳಿಕ ಪರಾರಿಯಾಗಿದ್ದ. ಹುಬ್ಬಳ್ಳಿ ಪೊಲೀಸರು ಆರೋಪಿ ವಿಶ್ವನಾಥ್ ಸಾವಂತ್ ಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದರು. ಇದೀಗ ದಾವಣಗೆರೆಯಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ.

ಸಿಕ್ಕಿ ಬಿದ್ದಿದ್ದು ಹೇಗೆ?

ಭೀಕರವಾಗಿ ಯುವತಿಯ ಹ*ತ್ಯೆ ಮಾಡಿದ ಪೊಲೀಸರು ವಿಶ್ವನಾಥ್ ಸಾವಂತ್ ಕೊಲೆ ಮಾಡುವುದಕ್ಕೆ ಮುನ್ನ ಮೊಬೈಲ್ ನಲ್ಲಿ ಸಂವಾದ ನಡೆಸುತ್ತಿದ್ದ ಮೂವರನ್ನು ಕರೆದು ತೀವ್ರ ವಿಚಾರಣೆ ನಡೆಸಿದ್ದರು. ಅದರ ಸುಳಿವಿನ ಆಧಾರದಲ್ಲಿ ಇದೀಗ ವಿಶ್ವನಾಥ್ ನನ್ನು ದಾವಣಗೆರೆಯಲ್ಲಿ ಬಂಧಿಸಿದ್ದಾರೆ.

ಇದನ್ನೂ ಓದಿ : ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

ಅಂಜಲಿಯನ್ನು ಹ*ತ್ಯೆಗೈದ ಬಳಿಕ ವಿಶ್ವ ಬೆಂಗಳೂರು ಮೂಲಕ ರೈಲಿನಲ್ಲಿ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಅಂದುಕೊಂಡಿದ್ದ. ರೈಲಿನಲ್ಲಿ ಪ್ರಯಾಣಿಸುತ್ತಿರುವ ಮಾಹಿತಿ ಸಿಕ್ಕ ಹುಬ್ಬಳ್ಳಿ ಪೊಲೀಸರು ದಾವಣಗೆರೆಯಲ್ಲಿ ಅವನನ್ನು ಬಂಧಿಸಲು ಸಕಲ ಸಿದ್ಧತೆ ನಡೆಸಿದ್ದರು. ಆತನ ಬಂಧನಕ್ಕೆ ಯತ್ನಿಸುವ ವೇಳೆ ರೈಲಿನಿಂದ ಜಿಗಿದು ಆತ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ರೈಲಿನಿಂದ ಬಿದ್ದ ರಭಸಕ್ಕೆ ಆತನ ಮುಖ ಮತ್ತು ತಲೆಗೆ ಗಂಭೀ*ರ ಗಾ*ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Continue Reading

LATEST NEWS

Trending