Tuesday, July 5, 2022

ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀಮಧ್ವಶಂಕರ ಹೆಸರಿಡಲು ಪುತ್ತಿಗೆ ಶ್ರೀ ಆಗ್ರಹ..! 

ಮಂಗಳೂರು ವಿಮಾಣ ನಿಲ್ದಾಣಕ್ಕೆ ಶ್ರೀಮಧ್ವಶಂಕರ ಹೆಸರಿಡಲು ಪುತ್ತಿಗೆ ಶ್ರೀ ಆಗ್ರಹ..! 

ಉಡುಪಿ :  ಉಡುಪಿ, ಶೃಂಗೇರಿಯಲ್ಲಿ ತಮ್ಮ ಕೇಂದ್ರಗಳನ್ನು ಸ್ಥಾಪಿಸಿ ಶತಶತಮಾನಗಳಿಂದ ತಮ್ಮ ಆಧ್ಯಾತ್ಮಿಕ ಕಾರ್ಯಕ್ಷೇತ್ರಗೊಳಿಸಿರುವ ಜಗದ್ಗುರು ಶ್ರೀಮಧ್ವಾಚಾರ್ಯ, ಜಗದ್ಗುರು ಶ್ರೀಶಂಕರಾಚಾರ್ಯರ ಹೆಸರಲ್ಲಿ ಪರಶುರಾಮ ಕ್ಷೇತ್ರದಲ್ಲಿರುವ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರ ವಿಮಾನ ನಿಲ್ದಾಣವೆಂದು ನಾಮಕರಣ ಮಾಡುವುದು ಅತ್ಯಂತ ಅರ್ಥಪೂರ್ಣ, ಅಪೂರ್ವ ಮತ್ತು ಮೌಲಿಕವೆನಿಸುತ್ತದೆ”ಎಂದು ಉಡುಪಿ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಗಳು ಹೇಳಿದ್ದಾರೆ.

ಈ ಬಗ್ಗೆ ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ಅಯೋಧ್ಯೆಯಲ್ಲಿ ಶ್ರೀರಾಮನ ಹೆಸರಿನಲ್ಲಿ ವಿಮಾನನಿಲ್ದಾಣ ಮೂಡಿಬಂದಂತೆ, ದಾರ್ಶನಿಕ ಆಚಾರ್ಯರುಗಳ ನೆಲೆವೀಡಾದ ದಕ್ಷಿಣಭಾರತದ ಈ ವಿಮಾನ ನಿಲ್ದಾಣಕ್ಕೆ ಶ್ರೀಮಧ್ವಶಂಕರರ ನಾಮಕರಣ ಭಾರತದ ದಾರ್ಶನಿಕ ಪರಂಪರೆಗೆ ಗೌರವ ಸಲ್ಲಿಸಿದಂತಾಗುವುದು”ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಧ್ಯಾತ್ಮಿಕತೆಯೇ ಭಾರತದ ಮೂಲ ಮತ್ತು ಅಪೂರ್ವ ಸಂಪತ್ತಾದ್ದರಿಂದ ಧಾರ್ಮಿಕ ಆಧ್ಯಾತ್ಮಿಕ ಕ್ಷೇತ್ರದಲ್ಲೇ ಭಾರತಕ್ಕೆ ಮುಂದೆ ಜಗತ್ತಿನ ನೇತೃತ್ವ ಪಡೆಯಲು ಉಜ್ವಲ ಹಾಗೂ ವಿಪುಲ ಅವಕಾಶವಿರುವುದರಿಂದಲೂ, ಶ್ರೀರಾಮಾನುಜಾಚಾರ್ಯ, ಬಸವಣ್ಣ ಮೊದಲಾದ ಮಹಾ ಧಾರ್ಮಿಕ ನೇತಾರರ ಮೂಲಸ್ಥಳಗಳ ಸಮೀಪದಲ್ಲಿರುವ ದೇಶದ ಉಳಿದ ವಿಮಾನ ನಿಲ್ದಾಣಾದಿಗಳಿಗೂ ಆ ಧಾರ್ಮಿಕ ನೇತಾರರ ನಾಮಕರಣ ಮಾಡುವುದೇ ಉಳಿದೆಲ್ಲ ಆಯ್ಕೆಗಳಿಗಿಂತಲೂ ಅತ್ಯಂತ ಪ್ರಶಸ್ತ ಎಂದು ಶ್ರೀಗಳು ಹೇಳಿದ್ದಾರೆ.

“ಕೊರೊನಾದಿಗಳ ಹಿನ್ನೆಲೆಯಲ್ಲಿ ಚಿಂತಿಸಿದಾಗ ಜಗತ್ತಿಗೆ ಇದೀಗ ಆಧ್ಯಾತ್ಮಿಕ ಆಂದೋಲನದ ಆವಶ್ಯಕತೆ ಬಹುವಾಗಿ ಎದ್ದು ಕಾಣುತ್ತಿದ್ದು ಈ ಹಿನ್ನೆಲೆಯಲ್ಲಿ ಧಾರ್ಮಿಕ ಆಧ್ಯಾತ್ಮಿಕತೆಗೆ ಸರಕಾರಗಳು ಹೆಚ್ಚಿನ ಒತ್ತು ನೀಡುವ ದೃಷ್ಟಿಯಲ್ಲೂ ಶ್ರೀಮಧ್ವಶಂಕರ ವಿಮಾನ ನಿಲ್ದಾಣದ ನಾಮಕರಣ ಅತ್ಯಂತ ಸೂಕ್ತ ಹಾಗೂ ಸಂದರ್ಭೋಚಿತ” ಎಂದು ಶ್ರೀಗಳು ಹೇಳಿದ್ದಾರೆ.

LEAVE A REPLY

Please enter your comment!
Please enter your name here

Hot Topics

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ : ಶಾಲಾ- ಕಾಲೇಜುಗಳಿಗೆ ಇಂದು (ಜು5) ರಜೆ ಘೋಷಿಸಿದ ಜಿಲ್ಲಾಧಿಕಾರಿ..!

ಮಂಗಳೂರು " ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ, ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ದಿನಾಂಕ 05/07/ 2022ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕಶಾಲೆ ಪ್ರೌಢಶಾಲೆ, ಪದವಿ ಪೂರ್ವ...