ಮಂಗಳೂರು, ಜನವರಿ 20 : ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್ಗೊಂದು ಪತ್ತೆಯಾಗಿದ್ದು, ಈ ಬ್ಯಾಗಿನಲ್ಲಿ ಸ್ಪೋಟಕಗಳಿರುವುದು ಬಹುತೇಕ ಖಚಿತವಾಗಿದೆ.
ನಿಲ್ದಾಣದ ಹೊರಗಡೆ ಇರುವ ಪೊಲಿಸ್ ಚೌಕಿ ಬಳಿ ಈ ಬ್ಆಗ್ ಪತ್ತೆಯಾಗಿದೆ. ವಿಮಾನ ನಿಲ್ದಾಣದ ಭದ್ರತಾ ದಳದ ಶ್ವಾನ ಈ ಬ್ಯಾಗನ್ನು ಪತ್ತೆ ಹಚ್ಚಿರುವುದಾಗಿ ತಿಳಿದು ಬಂದಿದ್ದು, ಇದರಲ್ಲಿ ಸುಮಾರು 8 ಕೇಕಜಿಯಷ್ಟು ಸ್ಪೋಟಕಗಳಿರುವುದನ್ನು ಅಧಿಕಾರಿಗಳು ಧೃಡ ಪಡಿಸಿದ್ದಾರೆ.
ವಿಮಾನ ನಿಲ್ದಾಣದ ಭದ್ರತಾ ಅಧಿಕಾರಿಗಳು ಬ್ಯಾಗ್ನ್ನು ವಶಕ್ಕೆ ಪಡೆದಿದ್ದು ಪ್ರದೇಶವನ್ನು ಭದ್ರತಾ ಪಡೆಗಳು ಸುತ್ತುವೆರೆದಿದ್ದು, ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲಿಸ್ ಅಧಿಕಾರಿಗಳೂ ಧಾವಿಸಿದ್ದು ಸುರಕ್ಷಾ ಕ್ರಮಗಳನ್ನು ಕೈಗೊಳ್ಳಲಾಗಿದೆ.
ದೀಕ್ಷಿತಾ ಜ 9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇ*ಣು ಬಿ*ಗಿದು ಅ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆ*ತ್ಮಹ*ತ್ಯೆಯ ಹಿಂದಿನ ಕಾರಣ ನಿಗೂಢವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.
ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.
ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.
ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.