Home ಪ್ರಮುಖ ಸುದ್ದಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದ್ವಾಂಸಕ ಕೃತ್ಯಕ್ಕೆ ಬ್ರೇಕ್‌ ಹಾಕಿದ " ಜ್ಯಾಕ್‌ "

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದ್ವಾಂಸಕ ಕೃತ್ಯಕ್ಕೆ ಬ್ರೇಕ್‌ ಹಾಕಿದ ” ಜ್ಯಾಕ್‌ “

ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿದ್ವಾಂಸಕ ಕೃತ್ಯಕ್ಕೆ ಬ್ರೇಕ್‌ ಹಾಕಿದ ” ಜ್ಯಾಕ್‌ “

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಜೀವಂತ ಬಾಂಬ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು ಬಾಂಬ್ ನಿಷ್ಕ್ರೀಯ ದಳದವರು ವಿಮಾನ ನಿಲ್ದಾಣದ ಆವರಣದಲ್ಲಿದ್ದ ಸಜೀವ ಸ್ಪೋಟಕಗಳನ್ನು ನಿಷ್ಕ್ರೀಯಗೊಳಿಸಿದ್ದಾರೆ. ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಬಾಂಬ್ ಎಂಬ ಅಧಿಕೃತ ಸ್ಪೊಟಕ ಪತ್ತೆಯಾಗಿದೆ, ಆದರೆ ಈ ಸ್ಪೋಟಕ ಪತ್ತೆ ಹಚ್ಚುವ ಮೂಲಕ ಭಾರೀ ಅನಾಹುತ ತಪ್ಪಿಸಿ, ಜನರ ರಕ್ಷಣೆ ಮಾಡಿದ್ದ ಕೀರ್ತಿ ಜ್ಯಾಕ್ ಎಂಬ ಶ್ವಾನಕ್ಕೆ ಸಲ್ಲುತ್ತಿದೆ.

ಮಂಗಳೂರು ವಿಮಾನ ನಿಲ್ದಾಣದ ಭದ್ರತೆಯ ಹೊಣೆ ಹೊತ್ತಿರುವ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ( CISF) ನ ಶ್ವಾನ ದಳಕ್ಕೆ ಸಲ್ಲುತ್ತಿದೆ.

ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯನ್ನು ಸಿಐಎಸ್‌ಎಫ್‌ನ ಶ್ವಾನ ದಳದ ಮೂರು ತಂಡಗಳು ದಿನಾ ಮಾಡುತ್ತಿರುವುದು ಸಹಜ ಪ್ರಕ್ರೀಯೆಯ ಭಾಗ.

ಆದರೆ ಈ ದಿನ ಮಾಮೂಲಾಗಿರಲಿಲ್ಲ. ಸಿಐಎಸ್‌ಎಫ್‌ ಡಾಗ್‌ ಸ್ವಾಡ್‌ ಇಂದು ಬೆಳಿಗ್ಗೆ ಸುಮಾರು 9 ಗಂಟೆ ಸುಮಾರಿಗೆ ದೈನಂದಿನ ತಪಾಸಣೆ ಮಾಡುತ್ತಿದ್ದಾಗ ಶ್ವಾನ ಜ್ಯಾಕ್‌ ಈ ಸ್ಪೋಟಕವಿರುವ ಬ್ಯಾಗನ್ನು ಪತ್ತೆ ಹಚ್ಚಿದೆ. ಬ್ಯಾಗಿನಲ್ಲಿ ಸಂಶಯಾಸ್ಪದ ವಸ್ತು ಇರುವುದನ್ನು ಗ್ರಹಿಸಿದ ಜ್ಯಾಕ್‌ ಬೊಗಳುವ ಮೂಲಕ ಎಚ್ಚರಿಕೆಯ ಸಂದೇಶವನ್ನು ರವಾನಿಸಿದೆ.

ಶ್ವಾನದ ಎಚ್ಚರಿಕೆಯ ಸಂದೇಶದಿಂದ ಅಲರ್ಟ್ ಆದ ಭದ್ರತಾ ಪಡೆ ಬ್ಯಾಗ್‌ ನಲ್ಲಿ ಸಂಶಯಾಸ್ಪದ ಸ್ಪೋಟಕಗಳಿರುವುದು ಧೃಡಪಡಿಸಿ ಕೂಡಲೇ ಹಿರಿಯ ಅಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ರವಾನಿಸಿದ್ದಾರೆ.

ಜ್ಯಾಕ್‌ ನ ಸಮಯ ಪ್ರಜ್ಞೆಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತ ಒಂದು ತಪ್ಪಿದಂತಾಗಿದ್ದು, CISF ನ ಶ್ವಾನ ಜ್ಯಾಕ್‌ ಗೆ ಪ್ರಶಂಸೆಗೆ ಪಾತ್ರವಾಗಿದೆ.

- Advertisment -

RECENT NEWS

ಉಡುಪಿ ಕೊರೊನಾಘಾತ ಒಂದೇ ದಿನ 83 ಪ್ರದೇಶ ಸೀಲ್ ಡೌನ್

ಜಿಲ್ಲೆಯಲ್ಲಿ ಈವರೆಗೆ 201 ಪ್ರದೇಶಗಳು ಸೀಲ್ ಡೌನ್ ಉಡುಪಿ ಜೂ.5: ಉಡುಪಿಯಲ್ಲಿ ಇಂದು ದಾಖಲಾದ 204 ಕೊರೊನಾ ಪ್ರಕರಣಗಳಿಂದಾಗಿ ಉಡುಪಿ ಜಿಲ್ಲೆಯಲ್ಲಿ ಇಂದು ಒಂದೇ ದಿನ 83 ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ. ರಾಜ್ಯದಲ್ಲೇ...

ಪ್ರಧಾನಿ ದೇಶದ ಜನರಿಗೆ ಬರೆದಿರೋ “ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಸಾಧನೆ ಹಂಚಿದ ಕಟೀಲ್

“ನೀವು ಪ್ರೇರಕರು ನಾನು ಸೇವಕ” ಪತ್ರದ ಸಾರಾಂಶ ಹಾಗು ಪ್ರಧಾನಿಗಳ ಸಾಧನೆಯ ಸಾರಾಂಶ ಮನೆಮನೆಗೆ ಹಂಚಿದ ಸಂಸದ ಕಟೀಲ್ ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿಯಾಗಿ ಒಂದು ವರ್ಷ ಪೂರೈಸಿದ...

ಕಡಬಕ್ಕೂ ವಕ್ಕರಿಸಿದ ಮಹಾಮಾರಿ ಕೊರೊನಾ ವೈರಸ್.. ಶಿಕ್ಷಕನಿಗೆ ಪಾಸಿಟಿವ್

45 ವರ್ಷದ ಶಿಕ್ಷಕನಿಗೆ ಕೊರೊನಾ ಪಾಸಿಟಿವ್: ಆತಂಕದಲ್ಲಿ ಕಡಬ ಜನತೆ ಕಡಬ: ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಮಹಾಮಾರಿ ಇದೀಗ ಕಡಬಕ್ಕೂ ಕಾಲಿಟ್ಟಿದೆ. ಕಡಬದ 42 ವರ್ಷದ ಶಿಕ್ಷಕರೋರ್ವರಿಗೆ ಕೊರೋನಾ ಪಾಸಿಟಿವ್ ಬಂದಿದ್ದು ಈಗಾಗಲೇ...

ದೇಶದಲ್ಲಿ ಕೊರೊನಾ ಹಂಚಲು ತಬ್ಲಿಘಿಗಳಿಂದ ವ್ಯವಸ್ಥಿತ ಷಡ್ಯಂತ್ರ ನಡೆದಂತಿದೆ: ಸಂಸದೆ ಶೋಭಾ ಗಂಭೀರ ಆರೋಪ..!

ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು: ಸಂಸದೆ ಶೋಭಾ ಕರಂದ್ಲಾಜೆ ಕಿಡಿ ಉಡುಪಿ: ಶಾಂತವಾಗಿದ್ದ ಉಡುಪಿ ಜಿಲ್ಲೆಯಲ್ಲಿ ದೆಹಲಿ ಮತ್ತು ಮಹಾರಾಷ್ಟ್ರದಿಂದ ಕೊರೊನಾ ಹಬ್ಬಿದೆ. ಬೆಂಗಳೂರು ಸ್ಲಂಗಳಿಗೆ ತಬ್ಲಿಘಿಗಳು ಸೋಂಕು ಪಸರಿಸಿದರು ಎಂದು ಉಡುಪಿ-ಚಿಕ್ಕಮಗಳೂರು...