ಮೊದಲ ಸುದ್ದಿವಾಚಕ ಗಜಾನನ ಹೆಗಡೆ ಇನ್ನಿಲ್ಲ.
Published
5 years agoon
By
Adminಮೊದಲ ಸುದ್ದಿವಾಚಕ ಗಜಾನನ ಹೆಗಡೆ ಇನ್ನಿಲ್ಲ.
ಬೆಂಗಳೂರು: ಮೊದಲ ಸುದ್ದಿವಾಚಕ ಎಂದೆ ಪ್ರಸಿದ್ದಿ ಪಡೆದ ಶ್ರೀ ಗಜಾನನ ಹೆಗಡೆ ನಿಧನರಾಗಿದ್ದಾರೆ.ಅವರಿಗೆ ಇತ್ತಿಚೆಗೆ ರಸ್ತೆ ಅಪಘಾತದಲ್ಲಿ ತಲೆಗೆ ತೀವ್ರವಾದ ಗಾಯವಾಗಿತ್ತು.ಕೆಲಕಾಲದ ಅಸ್ವಸ್ಥತೆಯಿಂದ ಅವರು ಬಳಲುತ್ತಿದ್ದರು.
ಪ್ರಸಕ್ತ ಕಿಮ್ಸ್ ಆಸ್ಪತ್ರೆಯಲ್ಲಿ ಅವರ ಪಾರ್ಥೀವ ಶರೀರವನ್ನು ಇರಿಸಲಾಗಿದೆ.ಈಟಿವಿ,ಜಿಟಿವಿ,ಕಸ್ತೂರಿ ಟಿವಿ ಹಾಗೂ ಪ್ರಜಾಟಿವಿಯ ಮೊದಲ ಸುದ್ದಿವಾಚಕ ಶ್ರೀ ಗಜಾನನ ಹೆಗಡೆ.ಹಿರಿಯ ಪರ್ತಕರ್ತ ಖ್ಯಾತ ನಿರೂಪಕರಾದ ಇವರು ಜನಮನ್ನಣೆ ಗಳಿಸಿದ್ದರು.
You may like
LATEST NEWS
ಪಪ್ಪಾಯ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಗೊತ್ತಾ ??
Published
28 seconds agoon
21/01/2025ಆರೋಗ್ಯವನ್ನು ಕಾಪಾಡುವಲ್ಲಿ ಪಪ್ಪಾಯ ಮಹತ್ವದ ಪಾತ್ರ ವಹಿಸುತ್ತದೆ. ಪಪ್ಪಾಯ ಹಣ್ಣನ್ನು ತಿನ್ನುವುದರಿಂದ ಯಾವರಲ್ಲಾ ಪ್ರಯೋಜನ ಇದೆ ? ಖಾಲಿ ಹೊಟ್ಟೆಗೆ ಪಪ್ಪಾಯ ತಿಂದ್ರೆ ಏನಾಗುತ್ತೆ ? ಎಂಬೆಲ್ಲಾ ಅಂಶಗಳನ್ನು ಇಲ್ಲಿ ತಿಳಿಯೋಣ .
ಸಾಮಾನ್ಯವಾಗಿ ತರಕಾರಿ ಮತ್ತು ಹಣ್ಣುಗಳು ನಮ್ಮ ದೇಹವನ್ನು ಸುಸ್ಥಿತಿಯಲ್ಲಿ ಇಡುವಲ್ಲಿ ಸಹಕಾರಿಯಾಗಿದೆ. ಅದರಲ್ಲಿಯೂ ಕೆಲವು ಹಣ್ಣುಗಳು ಆರೋಗ್ಯವನ್ನು ಹತೋಟಿಯಲ್ಲಿಡಲು ಸಹಾಯ ಮಾಡುತ್ತದೆ. ಅದರಲ್ಲಿ ಪಪ್ಪಾಯಿ ಹಣ್ಣು ಅಗ್ರ ಸ್ಥಾನದಲ್ಲಿರುತ್ತದೆ. ನಿಯಮಿತವಾಗಿ ಅದನ್ನು ಸೇವನೆ ಮಾಡಿದಲ್ಲಿ ಅನೇಕ ರೀತಿಯ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಇದು ರುಚಿಕರ ಮಾತ್ರವಲ್ಲ, ಪೌಷ್ಠಿಕಾಂಶದಿಂದ ಕೂಡಿರುತ್ತದೆ. ಜೊತೆಗೆ ಪಪ್ಪಾಯಿ ವರ್ಷದ 12 ತಿಂಗಳು ಲಭ್ಯವಿರುವ ಹಣ್ಣುಗಳಲ್ಲಿ ಒಂದಾಗಿದೆ. ಆರೋಗ್ಯಕ್ಕೆ ಹಲವಾರು ಪ್ರಯೋಜನಗಳನ್ನು ಒದಗಿಸುವ ಸಾಮಾನ್ಯ ಹಣ್ಣು ಇದಾಗಿದ್ದು, ಖಾಲಿ ಹೊಟ್ಟೆಯಲ್ಲಿ ಇದರ ಸೇವನೆಯಿಂದ ಅನೇಕ ರೀತಿಯ ರೋಗಗಳನ್ನು ಗುಣಪಡಿಸಲು ಸಾಧ್ಯವಿದೆ. ಪಪ್ಪಾಯ ಸೇವನೆಯಿಂದ ಉಂಟಾಗುವ ಪ್ರಮುಖ ಲಾಭಾಂಶಗಳು :
- ಪಪ್ಪಾಯ ರುಚಿಕರ ಮಾತ್ರವಲ್ಲ, ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿ. ಅದರಲ್ಲಿಯೂ ಹಸಿ ಪಪ್ಪಾಯಿ ಹಣ್ಣಿನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ, ಇದು ನಿಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಮತ್ತು ಬೇಯಿಸಿದ ಪಪ್ಪಾಯಿ ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ ಜೊತೆಗೆ ನಿಮ್ಮ ಚರ್ಮಕ್ಕೆ ಹೊಳಪನ್ನು ನೀಡುತ್ತದೆ.
- ಪಪ್ಪಾಯಿಯಲ್ಲಿ ಕಂಡು ಬರುವ ಜೀರ್ಣಕಾರಿ ಕಿಣ್ವಗಳು ಜೀರ್ಣಕ್ರಿಯೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ, ಇದು ಆಮ್ಲೀಯತೆ, ಗ್ಯಾಸ್ ಮತ್ತು ಮಲಬದ್ಧತೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
- ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಸೇವನೆ ಮಾಡುವುದರಿಂದ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ, ಜೊತೆಗೆ ಇದು ಮಧುಮೇಹದ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
- ಪಪ್ಪಾಯಿ ಹಣ್ಣಿನಲ್ಲಿ ಪೊಟ್ಯಾಸಿಯಮ್ ಮತ್ತು ಇತರ ಪೋಷಕಾಂಶಗಳಿವೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ, ಇದರಿಂದಾಗಿ ಹೃದ್ರೋಗದ ಅಪಾಯ ಕಡಿಮೆ ಆಗುತ್ತದ
- ಪಪ್ಪಾಯಿಯಲ್ಲಿ ಸಾಕಷ್ಟು ಉತ್ಕರ್ಷಣ ನಿರೋಧಕಗಳಿವೆ, ಇದು ಕ್ಯಾನ್ಸರ್ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ, ವಿಶೇಷವಾಗಿ ಕೊಲೊರೆಕ್ಟಲ್ ಕ್ಯಾನ್ಸರ್ ತಡೆಗಟ್ಟುವಲ್ಲಿ ಇದು ಬಹಳ ಮುಖ್ಯ ಪಾತ್ರ ವಹಿಸುತ್ತದೆ
- ಪಪ್ಪಾಯಿಯಲ್ಲಿ ಉತ್ತಮ ಪ್ರಮಾಣದ ವಿಟಮಿನ್ ಸಿ ಮತ್ತು ವಿಟಮಿನ್ ಎ ಇದ್ದು, ಇದು ಕರುಳಿನ ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಜೊತೆಗೆ ಮಾನಸಿಕ ಒತ್ತಡವನ್ನು ಕಡಿಮೆ ಮಾಡುತ್ತದೆ.
- ಅದರಲ್ಲಿಯೂ ಪಪ್ಪಾಯಿ ಹಣ್ಣಿನಲ್ಲಿರುವ ಫೈಬರ್ ಆರೋಗ್ಯಕರ ಕರುಳಿಗೆ ಪ್ರಯೋಜನಕಾರಿಯಾಗಿದೆ, ಇದು ಡೈವರ್ಟಿಕ್ಯುಲಿಟಿಸ್ ನಂತಹ ಕರುಳಿನ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಪಪ್ಪಾಯಿ ಹಣ್ಣು ತನ್ನ ಶಕ್ತಿ, ಪೋಷಣೆ ಮತ್ತು ನೈಸರ್ಗಿಕ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿದೆ.
- ಪಪ್ಪಾಯಿಯಲ್ಲಿ ವಿಟಮಿನ್ ಕೆ ಮತ್ತು ಮೆಗ್ನೀಸಿಯಮ್ ಇದ್ದು, ಮೂಳೆಯ ಆರೋಗ್ಯವನ್ನು ಸುಧಾರಿಸಿ ಅವುಗಳನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಜೊತೆಗೆ ಈ ಹಣ್ಣು, ಕಡಿಮೆ ಕ್ಯಾಲೊರಿ ಮತ್ತು ಹೆಚ್ಚಿನ ಫೈಬರ್ ಇರುವ ಆಹಾರವಾಗಿದ್ದು, ಇದು ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.
LATEST NEWS
ವಿಶ್ವ ಸಂಸ್ಥೆಗೆ ಗುಡ್ ಬೈ…ಅಧಿಕಾರಕ್ಕೇರುತ್ತಲೇ ಟ್ರಂಪ್ ಸಾಲು ಸಾಲು ಶಾ*ಕಿಂಗ್ ನಿರ್ಧಾರ!
Published
53 minutes agoon
21/01/2025By
NEWS DESK4ಮಂಗಳೂರು/ ವಾಷಿಂಗ್ಟನ್: ಯುಸ್‌ನ 47 ನೇ ಅಧ್ಯಕ್ಷನಾಗಿ ಡೊನಾಲ್ಡ್ ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಕೆಲವೊಂದು ನಿರ್ಧಾರಗಳನ್ನು ತಾಳಿದ್ದು, ಶಾ*ಕಿಂಗ್ ಆದೇಶಗಳಿಗೆ ಸಹಿ ಹಾಕಿದ್ದಾರೆ.
ವಿಶ್ವಸಂಸ್ಥೆಯಿಂದ ಹೊರಕ್ಕೆ :
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಅಮೆರಿಕವನ್ನು ಹಿಂತೆಗೆದುಕೊಳ್ಳುವ ಮೂಲಕ ಶಾ*ಕ್ ಕೊಟ್ಟಿದ್ದಾರೆ. ಕೋ*ವಿಡ್ ಸಮಯದಲ್ಲಿ ಹಾಗೂ ಇತರ ಅಂತಾರಾಷ್ಟ್ರೀಯ ಆರೋಗ್ಯ ಬಿಕ್ಕಟ್ಟುಗಳ ವೇಳೆ ಜಾಗತಿಕ ಆರೋಗ್ಯ ಸಂಸ್ಥೆ ಸರಿಯಾಗಿ ನಿರ್ವಹಿಸಿಲ್ಲ ಎಂಬುದು ಟ್ರಂಪ್ ಆರೋಪ. ಹೀಗಾಗಿ ಟ್ರಂಪ್ ವಿಶ್ವ ಆರೋಗ್ಯ ಸಂಸ್ಥೆಯಿಂದ ಹೊರಬರುವ ಆದೇಶಕ್ಕೆ ಸಹಿ ಹಾಕಿದ್ದಾರೆ.
ಪ್ಯಾರಿಸ್ ಒಪ್ಪಂದ ಮುರಿದ ಟ್ರಂಪ್ :
2015ರಲ್ಲಿ ವಿಶ್ವದ ದೇಶಗಳು ಪ್ಯಾರೀಸ್ ಒಪ್ಪಂದಕ್ಕೆ ಸಹಿ ಹಾಕಿದ್ದವು. ಇದರನ್ವಯ ಮಾಲಿನ್ಯ ನಿಯಂತ್ರಣಕ್ಕೆ ಜಗತ್ತಿನ ದೇಶಗಳು ತನ್ನದೇ ಆದ ನಿರ್ಧಾರಗಳನ್ನು ತೆಗೆದುಕೊಳ್ಳಬಹುದು. ಆದರೆ, ಟ್ರಂಪ್ 2017 ರಲ್ಲಿ ಈ ಒಪ್ಪಂದವನ್ನು ತಿರಸ್ಕರಿಸಿದ್ದರು. ಚೀನಾ, ಭಾರತದಂತಹ ದೇಶಗಳು ಹೆಚ್ಚು ಮಾಲಿನ್ಯ ಉಂಟು ಮಾಡುತ್ತಿದ್ದು, ಅಮೆರಿಕ ಹೆಚ್ಚು ಮಾಡಿಲ್ಲ ಎಂದರು. ಹೀಗಾಗಿ ನಿರ್ಬಂಧ ಹೇರುವ ಅಗತ್ಯವಿಲ್ಲ ಎಂದು ಹೇಳಿದ್ದರು. ಇದೀಗ ಒಪ್ಪಂದ ಮುರಿದುಕೊಂಡಿದ್ದಾರೆ.
ಬೈಡನ್ ನಿರ್ಧಾರ ರದ್ದು, ಬೆಂಬಲಿಗರಿಗೆ ಕ್ಷಮಾದಾನ :
ಭಯೋತ್ಪಾದನೆಯನ್ನು ಪ್ರಾಯೋಜಿಸುವ ರಾಷ್ಟ್ರಗಳ ಕಪ್ಪುಪಟ್ಟಿಯಿಂದ ಕ್ಯೂಬಾವನ್ನು ತೆಗೆದುಹಾಕುವ ಜೋ ಬೈಡನ್ ಅವರ ನಿರ್ಧಾರವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರದ್ದುಗೊಳಿಸಿದರು.
ಇದನ್ನೂ ಓದಿ : ಭಾರತದ ಅಳಿಯ ಈಗ ಅಮೆರಿಕದ ಉಪಾಧ್ಯಕ್ಷ; ಸೆಕೆಂಡ್ ಲೇಡಿ ಉಷಾ ಚಿಲುಕುರಿ ಬಗ್ಗೆ ಗೊತ್ತಾ!?
ಅಲ್ಲದೇ, 2020ರ ಚುನಾವಣಾ ಫಲಿತಾಂಶವನ್ನು ರದ್ದು ಮಾಡುವಂತೆ 2021ರ ಜನವರಿ 6 ರಂದು ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಮೇಲೆ ದಾ*ಳಿ ಮಾಡಿದ್ದರು. ಇದರಲ್ಲಿ ತಮ್ಮ 1500 ಬೆಂಬಲಿಗರಿಗೆ ಅವರು ಕ್ಷಮಾದಾನವನ್ನು ನೀಡುವ ಆದೇಶಕ್ಕೂ ಟ್ರಂಪ್ ಸಹಿ ಹಾಕಿದ್ದಾರೆ.
ಫೆಡರಲ್ ಕೆಲಸಗಾರರು ಪೂರ್ಣ ಸಮಯಕ್ಕೆ ಕಚೇರಿಗೆ ಮರಳುವ ಕಾರ್ಯನಿರ್ವಾಹಕ ಆದೇಶಕ್ಕೆ ಟ್ರಂಪ್ ಸಹಿ ಹಾಕಿದರು. ವೈರಸ್ ಹರಡುವುದನ್ನು ಕಡಿಮೆ ಮಾಡಲು ಕೋ*ವಿಡ್ ಸಮಯದಲ್ಲಿ ಮನೆಯಿಂದ ಕೆಲಸ ಮಾಡುವುದು ಪ್ರವರ್ಧಮಾನಕ್ಕೆ ಬಂದಿತ್ತು.
LATEST NEWS
ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಮಹಾಕುಂಭ ಮೇಳದಲ್ಲಿ ಭಾಗಿ
Published
2 hours agoon
21/01/2025ಮಂಗಳೂರು/ಪ್ರಯಾಗ್‌ರಾಜ್ : 144 ವರ್ಷಕೊಮ್ಮೆ ನಡೆಯುವ ಮಹಾಕುಂಭ ಮೇಳ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ನಡೆಯುತ್ತಿದೆ. ಇದೊಂದು ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮವಾಗಿದ್ದು, ದೇಶ, ವಿದೇಶಗಳಿಂದ ಭಕ್ತರು ಆಗಮಿಸುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ರಾಜಕೀಯ ಧುರೀಣರು ಸಹ ಮಹಾಕುಂಭದ ಪವಿತ್ರ ಸ್ನಾನಕ್ಕೆ ನಿರ್ಧರಿಸಿದ್ದಾರೆ.
ಪ್ರಧಾನಿ ನಮೋ ಫೆಬ್ರವರಿ 5 ರಂದು ಪ್ರಯಾಗರಾಜ್ ಗೆ ಭೇಟಿ ನೀಡಲಿದ್ದಾರೆ. ಪ್ರಮುಖ ಸರ್ಕಾರಿ ಯೋಜನೆಗಳನ್ನು ಪರಿಶೀಲಿಸುವ ಮತ್ತು ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆಯಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತೆಗಾಗಿ ವಿಶೇಷ ವ್ಯವಸ್ಥೆ ಮಾಡಲಾಗುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ.
ಇದನ್ನೂ ಓದಿ : ಏನಿದು ಸಿಂಹಸ್ಥ ಕುಂಭಮೇಳ? ಇದರ ವಿಶೇಷತೆ ಏನು?
ಜನವರಿ 22 ರಂದು ಉತ್ತರ ಪ್ರದೇಶದ ಯೋಗಿ ಸರ್ಕಾರ ಸಂಪುಟ ಸಭೆ ನಡೆಯಲಿದೆ. ಸಭೆಯಲ್ಲಿ ಮಹಾಕುಂಭ ವಿಚಾರ ಚರ್ಚೆಗೆ ಬರಲಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 27 ರಂದು ಮಹಾಕುಂಭದಲ್ಲಿ ಭಾಗವಹಿಸಲಿದ್ದಾರೆ. ಫೆಬ್ರವರಿ 1 ರಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ತ್ರಿವೇಣಿ ಸಂಗಮಕ್ಕೆ ಬರಲಿದ್ದಾರೆ. ಫೆಬ್ರವರಿ 10 ರಂದು ರಾಷ್ಟ್ರಪತಿಗಳು ಆಗಮಿಸುವ ನಿರೀಕ್ಷೆ ಇದೆ. ವಿಐಪಿಗಳ ಭೇಟಿ ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಪೊಲೀಸರು ಭದ್ರತೆಯನ್ನು ಬಿಗಿಗೊಳಿಸಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಭದ್ರತಾ ಪಡೆಗಳ ನಿಯೋಜನೆಯನ್ನು ಹೆಚ್ಚಿಸಲಾಗಿದೆ. ವಿಶೇಷ ಭದ್ರತಾ ತಂಡಗಳನ್ನು ಸಕ್ರಿಯಗೊಳಿಸಲಾಗಿದೆ. ಡ್ರೋನ್ ಮತ್ತು ಸಿಸಿಟಿವಿ ಕ್ಯಾಮೆರಾಗಳ ಮೂಲಕ ಕಣ್ಗಾವಲು ಇಡಲಾಗಿದೆ.