Connect with us

ರಾಜ್ಯದಲ್ಲೂ ಕೊರೋನಾ ಆರ್ಭಟ.. ಒಂದು ವಾರ ಕರ್ನಾಟಕ ಬಂದ್..!

Published

on

ರಾಜ್ಯದಲ್ಲೂ ಕೊರೋನಾ ಆರ್ಭಟ ಒಂದು ವಾರ ಕರ್ನಾಟಕ ಬಂದ್..!

ಕರ್ನಾಟಕ:  ರಾಜ್ಯದಲ್ಲೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಸೋಂಕು ತಡೆಗೆ ಮುಂಜಾಗೃತಾ ಕ್ರಮವಾಗಿ ಕರ್ನಾಟಕ ರಾಜ್ಯ ಒಂದು ವಾರ ಸಂಪೂರ್ಣವಾಗಿ ಬಂದ್ ಆಗಲಿದೆ.

ಕಲಬುರ್ಗಿಯಲ್ಲಿ ಕೊರೋನಾ ಸೋಂಕು ಪೀಡಿತ ನಿಧನರಾದ ಹಿನ್ನಲೆ ತುರ್ತು ಸಭೆ ನಡೆಸಿದ ಸಿಎಂ ಬಿ.ಎಸ್ ಯಡಿಯೂರಪ್ಪ ಈ ನಿರ್ಧಾರವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಒಂದು ವಾರ ಯಾವುದೇ ಸಭೆ-ಸಮಾರಂಭ, ಮದುವೆ, ನಿಶ್ಚಿತಾರ್ಥ, ನಾಮಕರಣ, ಜಾತ್ರೆ ಅಥವಾ ಇನ್ಯಾವುದೇ ಚಟುವಟಿಕೆಗಳು ನಡೆಯಲ್ಲ.

 

ನಾಳೆಯಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮಾಲ್, ಸಿನಿಮಾ ಥಿಯೇಟರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕು. ಎಸ್ ಎಸ್ ಎಲ್ ಸಿ ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ.

ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.ಆರೋಗ್ಯ ಇಲಾಖೆಯ ಶಿಫಾರಸ್ಸಿನ ಮೇಲೆ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

 

 

 

Click to comment

Leave a Reply

Your email address will not be published. Required fields are marked *

FILM

ನಟಿ ಪವಿತ್ರಾ ಜಯರಾಂ ಸಾ*ವಿನ ಬೆನ್ನಲ್ಲೇ ಆತ್ಮಹ*ತ್ಯೆಗೆ ಶರಣಾದ ಸಹನಟ ಚಂದು!

Published

on

ಕಿರುತೆರೆಯ ಖ್ಯಾತ ನಟಿ ಪವಿತ್ರಾ ಜಯರಾಮ್ ಇತ್ತೀಚೆಗೆ ಹೈದರಾಬಾದ್ ಸಮೀಪ ಕಾರು ಅಪಘಾತದಲ್ಲಿ ಇಹಲೋಕ ತ್ಯಜಿಸಿದ್ದರು. ಈ ವೇಳೆ ಅವರ ಗೆಳೆಯ ಹಾಗೂ ತೆಲುಗು ನಟ ಚಂದು ಅವರಿಗೂ ಪೆಟ್ಟಾಗಿದೆ. ಗೆಳತಿಯನ್ನು ಕಳೆದುಕೊಂಡ ನೋವಿನಲ್ಲಿದ್ದ ಚಂದು ಆತ್ಮಹ*ತ್ಯೆ ಮಾಡಿಕೊಂಡಿರುವ ಬಗ್ಗೆ ವರದಿಯಾಗಿದೆ.
ಚಂದು ಹಾಗೂ ಪವಿತ್ರಾ ಜಯರಾಂ ತೆಲುಗಿನ ‘ತ್ರಿನಯನಿ’ ಧಾರಾವಾಹಿಯಲ್ಲಿ ನಟಿಸುತ್ತಿದ್ದರು.

ಪವಿತ್ರಾ ಹಾಗೂ ಚಂದು ಇಬ್ಬರೂ ಸೋಶಿಯಲ್ ಮೀಡಿಯಾಗಳಲ್ಲಿ ಆ್ಯಕ್ಟಿವ್ ಆಗಿದ್ದರು. ಇಬ್ಬರು ಜೊತೆಯಾಗಿ ಹಾಡುಗಳಿಗೆ ಹೆಜ್ಜೆ ಹಾಕುತ್ತಿದ್ದರು. ಯಾವಾಗಲೂ ಜೊತೆಯಾಗಿ ಕಾಣಿಸಿಕೊಳ್ಳುತ್ತಿದ್ದರು. ದರ್ಶನ್ ಸಿನಿಮಾಗೆ ಪವಿತ್ರಾ ಅವರಿಗೆ ಆಫರ್ ಬಂದಿತ್ತು. ಹೀಗಾಗಿ ಇವರಿಬ್ಬರು ಜೊತೆಯಾಗಿ ಬೆಂಗಳೂರಿಗೆ ಬಂದಿದ್ದರು. ಹಿಂತಿರುಗುವಾಗ ಪ್ರಯಾಣಿಸುತ್ತಿರುವ ಕಾರು ಅಪಘಾತವಾಗಿತ್ತು. ಈ ವೇಳೆ ನಟಿ ಪವಿತ್ರಾ ಜಯರಾಂ ಸಾ*ವನ್ನಪ್ಪಿದ್ದರು. ಚಂದು ಗಾಯಗೊಂಡಿದ್ದರು.

ಇದನ್ನೂ ಓದಿ : ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

ಪವಿತ್ರಾ ಸಾವಿಗೆ ತೀವ್ರ ನೊಂದಿದ್ದ ಚಂದು ಸೋಶಿಯಲ್ ಮೀಡಿಯಾದಲ್ಲಿ ಮಿಸ್ ಯೂ ಎಂದು ಪವಿತ್ರಾ ಜೊತೆಗಿನ ವೀಡಿಯೋ, ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದರು. ಇದೀಗ ಅವರು ಇಹಲೋಕ ತ್ಯಜಿಸಿದ್ದಾರೆ ಎಂದು ವರದಿಯಾಗಿದೆ.

 

Continue Reading

FILM

ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ

Published

on

ಐಶ್ವರ್ಯ ರೈ ಬಚ್ಚನ್ ಕೇನ್ಸ್ ಫಿಲ್ಮ್ ಫೆಸ್ಟಿವಲ್‌ನಲ್ಲಿ ಮತ್ತೆ ಮಿಂಚಿದ್ದಾರೆ. ಅವರು ಪ್ರತಿ ಬಾರಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯೂ ವಿಭಿನ್ನವಾಗಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಆದರೆ, ಈ ವೇಳೆ ಎಲ್ಲರ ನೋಟ ಐಶ್ವರ್ಯಾ ರೈ ಕೈ ಮೇಲೆ ಬಿದ್ದಿದೆ. ಹೌದು, ಐಶ್ವರ್ಯ ರೈ ಅವರ ಕೈಗೆ ಏಟಾಗಿದೆ ಅನ್ನೋ ವಿಚಾರ ವೈರಲ್ ಆಗಿತ್ತು. ಇದೀಗ ಅವರು ಕೈನಲ್ಲಿ ಬ್ಯಾಂಡೇಜ್ ಇರುವಂತೆಯೇ ಕೇನ್ಸ್ ಫಿಲ್ಮ್ಸ್ ಫೆಸ್ಟಿವಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.


ಕೇನ್ಸ್‌ ರೆಡ್ ಕಾರ್ಪೆಟ್ ಮೇಲೆ ಐಶ್ ಹೆಜ್ಜೆ ಹಾಕಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಗಾಯ ಲೆಕ್ಕಿಸದೆ ಹೆಜ್ಜೆ:


2002ರಲ್ಲಿ ಮೊದಲ ಬಾರಿ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಅಂದಿನಿಂದ ಪ್ರತಿ ವರ್ಷ ಅವರು ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ. ಪ್ರತಿ ಬಾರಿಯೂ ವಿಭಿನ್ನ ಲುಕ್‌ಗಳಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಕೆಲವೊಮ್ಮೆ ತಮ್ಮ ಲುಕ್ ಕಾರಣಕ್ಕೆ ಟ್ರೋಲ್ ಕೂಡ ಆಗಿದ್ದಿದೆ. ಟೀಕೆಗಳಿಗೆ ಅಂಜದೆ, ಐಶ್ವರ್ಯಾ ರೈ 21 ಬಾರಿ ಕೇನ್ಸ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಈ ಬಾರಿ ಗಾಯವನ್ನು ಲೆಕ್ಕಿಸದೇ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿರೋದು ವಿಶೇಷ. ನಗುನಗುತ್ತಲೇ ಪೋಸ್ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.

ಏರ್ ಪೋರ್ಟ್ ಫೋಟೋ ವೈರಲ್ :

ಬುಧವಾರ (ಮೇ 15) ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಈ ಸಂದರ್ಭ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದ ಅವರ ಕೈಗೆ ಏಟಾಗಿರುವುದು ಗಮನಕ್ಕೆ ಬಂದಿತ್ತು. ಮಗಳು ಆರಾಧ್ಯ ಜೊತೆ ಮುಂಬೈ ಏರ್‌ಪೋರ್ಟ್‌ನಲ್ಲಿ ಕಾಣಿಸಿಕೊಂಡಿದ್ದ ಐಶ್ವರ್ಯಾ ರೈ ಅವರು ಬಲ ತೋಳಿಗೆ ಚೀಲವನ್ನು ಧರಿಸಿದ್ದು ಕಂಡು ಬಂದಿತ್ತು.

ಇದನ್ನೂ ಓದಿ : ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

ವಿಮಾನ ನಿಲ್ದಾಣದಲ್ಲಿ ಫೋಟೋ ಚಿತ್ರಿಕರಿಸುತ್ತಿದ್ದವರ ಕಣ್ಣಿಗೆ ಐಶ್ವರ್ಯಾ ರೈ ಹಾಗೂ ಆರಾಧ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ತಕ್ಷಣ ಅವರ ಫೋಟೋ ವಿಡಿಯೋ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಸ್‌ ಕಣ್ಣಿಗೆ ಐಶ್ವರ್ಯಾ ರೈ ಧರಿಸಿದ್ದ ತೋಳಿನ ಚೀಲ ಕಾಣಿಸಿದೆ. ಆದ್ರೆ ಈ ಬಗ್ಗೆ ಯಾವುದೇ ಉತ್ತರ ನೀಡದೆ ಐಶ್ವರ್ಯಾ ರೈ ಬೈ ಎಂದು ಅಲ್ಲಿಂದ ಮುಂದೆ ಸಾಗಿದ್ದರು.

Continue Reading

DAKSHINA KANNADA

ಮಂಗಳೂರು : ಮೇ 25 ರಂದು ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ

Published

on

ಮಂಗಳೂರು : ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ.), ಮಂಗಳೂರು ಮತ್ತು ನಾರಾಯಣ ಗುರು ಕಾಲೇಜು ಇದರ ಆಶ್ರಯದಲ್ಲಿ ಕೆ.ಎಮ್.ಸಿ. ಆಸ್ಪತ್ರೆ ಅತ್ತಾವರ ಮಂಗಳೂರು ಇದರ ಸಹಕಾರದಿಂದ ಹಿಂದುಳಿದ ಸಮಾಜದ ಸಾಮಾಜಿಕ ಕ್ರಾಂತಿಯ ಹರಿಕಾರ ದಿ.ದಾಮೋದರ ಆರ್.ಸುವರ್ಣ ಜನ್ಮಶತಾಬ್ದಿ ಪ್ರಯುಕ್ತ ಮೇ 25 ರಂದು ಕುದ್ರೋಳಿ ನಾರಾಯಣ ಗುರು ಕಾಲೇಜಿನ ದಾಮೋದರ ಆರ್.ಸಭಾಂಗಣದಲ್ಲಿ ಉಚಿತ ವೈದ್ಯಕೀಯ ಮತ್ತು ರಕ್ತದಾನ ಶಿಬಿರ ನಡೆಯಲಿದೆ. ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ಈ ಕಾರ್ಯಕ್ರಮ ನಡೆಯಲಿದೆ.


ವೈದ್ಯಕೀಯ ಶಿಬಿರದಲ್ಲಿ ಕಣ್ಣು, ಕಿವಿ, ಮೂಗು, ಗಂಟಲು, ಎಲುಬು, ಕೀಲು ಮತ್ತು ಸಾಮಾನ್ಯ ರೋಗ ತಪಾಸಣೆ, ಮಧುಮೇಹ, ರಕ್ತದೊತ್ತಡ ಪರೀಕ್ಷೆ, ರೀಡಿಂಗ್ ಕನ್ನಡಕ ಅಗತ್ಯ ಇದ್ದವರಿಗೆ ಉಚಿತವಾಗಿ ನೀಡಲಾಗುವುದು. ಶಿಬಿರದಲ್ಲಿ ಭಾಗವಹಿಸುವವರಿಗೆ ಕೆ.ಎಮ್.ಸಿ.ಯ ಹಸಿರು ಕಾರ್ಡ್ ನೀಡಲಾಗುವುದು.

ಇದನ್ನೂ ಓದಿ : ಟಿ 20 ವಿಶ್ವಕಪ್ ಗೆ ಲಗ್ಗೆಯಿಟ್ಟ ‘ನಂದಿನಿ’; ಕ್ರಿಕೆಟಿಗರ ಜೆರ್ಸಿಯಲ್ಲಿ ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್‌

ಸಾರ್ವಜನಿಕರು ಶಿಬಿರದ ಸದುಪಯೋಗ ಪಡೆಯಬೇಕು. ಅದೇ ರೀತಿ ರಕ್ತದಾನದಲ್ಲೂ ಸ್ವಯಂ ಸ್ಪೂರ್ತಿಯಿಂದ ಭಾಗವಹಿಸಬೇಕೆಂದು ಅಖಿಲ ಭಾರತ ಬಿಲ್ಲವರ ಯೂನಿಯನ್ ನ ಅಧ್ಯಕ್ಷ ನವೀನ್ ಚಂದ್ರ ಸುವರ್ಣ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

Continue Reading

LATEST NEWS

Trending