ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಇಂದಿನಿಂದ ಸಾಂವಿಧಾನಿಕ ಪೀಠದಿಂದ ವಿಚಾರಣೆ ಆರಂಭ
Published
5 years agoon
By
Adminಕೇರಳ: ಎಲ್ಲ ವಯೋಮಾನದ ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದಿನಿಂದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.
ಈ ಹಿಂದೆ ಶಬರಿಮಲೆಗೆ ಮಹಿಳೆಯರ ಪ್ರವೇಶದ ಪರವಾಗಿದ್ದ ನ್ಯಾ. ಆರ್.ಎಫ್.ನಾರಿಮನ್ ಮತ್ತು ಡಿ.ವೈ.ಚಂದ್ರಚೂಡ್, ಹಾಗೂ ಇದನ್ನು ವಿರೋಧಿಸಿದ್ದ ಮಹಿಳಾ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಕೂಡ ಈ ಪೀಠದಲ್ಲಿ ಇಲ್ಲ. ಶಬರಿಮಲೈ ದೇವಸ್ಥಾನ ಪ್ರವೇಶ ವಿಚಾರ ಸಂಬಂಧ 2018ರ ಸುಪ್ರೀಂಕೋರ್ಟ್ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ 60 ಅರ್ಜಿಗಳು ಬಂದಿದ್ದವು.
ಇಂದು ಸಿಜೆಐ ನೇತೃತ್ವದಲ್ಲಿ ಈ ಅರ್ಜಿಗಳನ್ನು ನ್ಯಾ. ಆರ್ ಭಾನುಮತಿ, ಎಲ್ ನಾಗೇಶ್ವರ ರಾವ್, ಅಶೋಕ್ ಭೂಷಣ್, ಮೋಹನ್ ಎಂ ಶಾಂತನಗೌಡರ್, ಎಸ್ ಅಬ್ದುಲ್ ನಜೀರ್, ಆರ್ ಸುಭಾಷ್ ರೆಡ್ಡಿ, ಬಿ ಆರ್ ಗವಾಯಿ ಹಾಗೂ ಸೂರ್ಯ ಕಾಂತ್ ಇರುವ ಸಾಂವಿಧಾನಿಕ ಪೀಠ ನಡೆಸಲಿದೆ. ಇದರ ಜೊತೆಗೆ ಮುಸ್ಲಿಂ ಹಾಗೂ ಪಾರ್ಸಿ ಮಹಿಳೆಯರ ವಿರುದ್ಧ ತಾರತಮ್ಯ ಸೇರಿದಂತೆ ಇತರ ವಿವಾದಾತ್ಮಕ ವಿಷಯಗಳ ವಿಚಾರಣೆ ಕೂಡ ನಡೆಯಲಿದೆ.
You may like
LATEST NEWS
ಟೀಂ ಇಂಡಿಯಾಗೆ ಮತ್ತೊಂದು ಆಘಾತ; ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Published
19 minutes agoon
06/01/2025By
NEWS DESK3ಮಂಗಳೂರು/ಮುಂಬೈ : ಟೀಂ ಇಂಡಿಯಾ ಮತ್ತು ಹಿಮಾಚಲ ಪ್ರದೇಶದ ಆಲ್ ರೌಂಡರ್, 2013ರ ಐಪಿಎಲ್ ವಿಜೇತ ರಿಷಿ ಧವನ್ ಅವರು ಭಾರತೀಯ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.
34 ವರ್ಷದ ಆಲ್ ರೌಂಡರ್ ಇನ್ಮುಂದೆ ಏಕದಿನ ಮತ್ತು ಟಿ20 ಕ್ರಿಕೆಟ್ ಆಡುವುದಿಲ್ಲ. ದೇಶೀಯ ಕ್ರಿಕೆಟ್ ನಲ್ಲಿ ಹಿಮಾಚಲ ಪ್ರದೇಶದ ಪರ ಆಡುತ್ತಿರುವ ರಿಷಿ ಧವನ್, ಭಾರತಕ್ಕಾಗಿ ಮೂರು ಏಕದಿನ ಮತ್ತು ಒಂದು ಟಿ-20 ಅಂತರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.
2016ರಲ್ಲಿ ಟೀಂ ಇಂಡಿಯಾಗೆ ಕಾಲಿಟ್ಟಿದ್ದರು. ಧವನ್ ಅಂತರಾಷ್ಟ್ರೀಯ ವೃತ್ತಿಜೀವನವನ್ನು ಆಸ್ಟ್ರೇಲಿಯಾ ಪ್ರವಾಸದಿಂದ ಪ್ರಾರಂಭಿಸಿದರು. ಇನ್ನೂ ಸೀಮಿತ ಓವರ್ ಗಳ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಧವನ್ ದೇಶಿಯ ಕ್ರಿಕೆಟ್ ನಲ್ಲಿ ಒಟ್ಟು 9000 ರನ್ ಗಳಿಸಿದ್ದಾರೆ. 650ಕ್ಕೂ ಹೆಚ್ಚು ವಿಕೆಟ್ ಪಡೆದಿದ್ದಾರೆ.
ಇದನ್ನೂ ಓದಿ: ಗುಜರಾತ್ ನಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಪತನ
ಐಪಿಎಲ್ ನಲ್ಲಿ, ಧವನ್ ಕಿಂಗ್ಸ್ ಇಲೆವೆನ್ ಪಂಜಾಬ್ (2014-2024) ಮತ್ತು ಮುಂಬೈ ಇಂಡಿಯನ್ಸ್ (2013) ಅನ್ನು ಪ್ರತಿನಿಧಿಸಿದರು. 39 ಪಂದ್ಯಗಳಲ್ಲಿ 25 ವಿಕೆಟ್ ಮತ್ತು 210 ರನ್ ಗಳಿಸಿದ್ದರು.
LATEST NEWS
ಬೆಂಗಳೂರಿನ 8 ತಿಂಗಳ ಮಗುವಿನಲ್ಲಿ HMPV ವೈರಸ್ ಪತ್ತೆ
Published
21 minutes agoon
06/01/2025By
NEWS DESK2ಬೆಂಗಳೂರು: ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ಮಾಹಿತಿ ನೀಡಿದ್ದಾರೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ.
ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.
ಕೇಂದ್ರಕ್ಕೆ ಮಾಹಿತಿ:
ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.
ಏನಿದು HMPV ವೈರಸ್?
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ. ಸದ್ಯ ಎಚ್ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಹೇಳಿದೆ.
STATE
ಬೈಕ್ ವ್ಹೀಲಿಂಗ್ ಮಾಡಿ ವಿಡಿಯೋ ಅಪ್ಲೋಡ್: ಆರೋಪಿ ವಶ
Published
42 minutes agoon
06/01/2025By
NEWS DESK3ಉಡುಪಿ : ಮಣಿಪಾಲದ ರಜತಾದ್ರಿ ರಸ್ತೆಯಲ್ಲಿ ಬೈಕ್‌ನಲ್ಲಿ ಅಪಾಯಕಾರಿ ರೀತಿಯಲ್ಲಿ ವೀಲಿಂಗ್ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಒಂದು ಹರಿದಾಡಿದ್ದು ಅದರಲ್ಲಿ ಒಬ್ಬ ವ್ಯಕ್ತಿ ಬೈಕ್ ನಲ್ಲಿ ಹಿಂಬದಿಯಲ್ಲಿ ಇನ್ನೊಬ್ಬ ವ್ಯಕ್ತಿಯನ್ನು ಕುರಿಸಿಕೊಂಡು ಮಣಿಪಾಲದ NH 169 ಹಾಗೂ ರಜತಾದ್ರಿ ರಸ್ತೆಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವ್ಹೀಲಿಂಗ್ ಮಾಡುತ್ತಿರುವುದು ಕಂಡು ಬಂದಿದ್ದು, ಈ ವಿಡಿಯೋ ವೈರಲ್ ಆಗಿತ್ತು.
ಇದನ್ನೂ ಓದಿ : ವೇಶ್ಯಾವಾಟಿಕೆ: ಇಬ್ಬರು ಆರೋಪಿಗಳ ಬಂಧನ, ಯುವತಿಯ ರಕ್ಷಣೆ
ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ ಮಣಿಪಾಲ ಠಾಣಾ ಪಿ.ಐ ದೇವರಾಜ್ ಟಿ.ವಿ ನೇತೃತ್ವದಪೊಲೀಸ್ ತಂಡ ಆರೋಪಿ ಮಹಮ್ಮದ್ ಆಶಿಕ್(19) ವಶಕ್ಕೆ ಪಡೆದು ವಿಲಿಂಗ್ ಮಾಡಿದ ಸ್ಕೂಟರ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದೆ.
LATEST NEWS
ವೇಶ್ಯಾವಾಟಿಕೆ: ಇಬ್ಬರು ಆರೋಪಿಗಳ ಬಂಧನ, ಯುವತಿಯ ರಕ್ಷಣೆ
ಸಾಗರದ ಗಾಂಧಿ ಮೈದಾನದಲ್ಲಿ ನಡೆಯಲಿದೆ ಡಾ ನಾ ಡಿ ಸೋಜ ಅಂತಿಮ ದರ್ಶನ
ಶೀತ, ಜ್ವರವಿದ್ದರೆ ಸಾರ್ವಜನಿಕ ಸ್ಥಳಕ್ಕೆ ಹೋಗಬಾರದು; ರಾಜ್ಯಸರ್ಕಾರದ ಮಾರ್ಗಸೂಚಿ
ಎಡಪದವು : ಇರುಮುಡಿ ಕಟ್ಟಿ, ಶಬರಿಮಲೆಗೆ ಹೊರಟ ಅಯ್ಯಪ್ಪ ಮಾಲಾಧಾರಿಗಳು
ಮಂಗಳೂರು : ಎನ್ಸಿಸಿಯ ರಾಷ್ಟ್ರಮಟ್ಟದ ಪ್ಯಾರಾ ಜಂಪ್ನಲ್ಲಿ ತೇರ್ಗಡೆಯಾದ ಗ್ರಾಮೀಣ ಪ್ರತಿಭೆ
10 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ..! 16 ವರ್ಷದ ಸ್ನೇಹಿತನಿಂದ ಕೃತ್ಯ..!
Trending
- DAKSHINA KANNADA5 days ago
ಬೊಜ್ಜು ಕರಗಿಸಲು ವ್ಯಾಯಾಮದ ಅಗತ್ಯ ಇಲ್ಲ : ಮಾತ್ರೆ ತಿಂದರೆ ಸಾಕು..!
- DAKSHINA KANNADA3 days ago
ಜಮೀನು ಮಾಲೀಕರಿಗೆ ಸಿಹಿ ಸುದ್ದಿ ನೀಡಿದ ಸುಪ್ರೀಂ ಕೋರ್ಟ್..!
- LATEST NEWS6 days ago
ಮೈಸೂರು: ಇನ್ಫೋಸಿಸ್ ಕ್ಯಾಂಪಸ್ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ
- DAKSHINA KANNADA4 days ago
ಚಲಿಸುತ್ತಿದ್ದ ಅಟೋ ಗೆ ಅಡ್ಡ ಬಂದ ನಾಯಿ; ಅ*ಪಘಾತ ತಪ್ಪಿಸುವ ಯತ್ನದಲ್ಲಿ ಯಕ್ಷಗಾನ ಕಲಾವಿದನಿಗೆ ಗಾಯ