Home ಪ್ರಮುಖ ಸುದ್ದಿ ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಇಂದಿನಿಂದ ಸಾಂವಿಧಾನಿಕ ಪೀಠದಿಂದ ವಿಚಾರಣೆ ಆರಂಭ

ಶಬರಿಮಲೆಗೆ ಮಹಿಳೆಯರ ಪ್ರವೇಶ ವಿಚಾರ ಇಂದಿನಿಂದ ಸಾಂವಿಧಾನಿಕ ಪೀಠದಿಂದ ವಿಚಾರಣೆ ಆರಂಭ

ಕೇರಳ:  ಎಲ್ಲ ವಯೋಮಾನದ ಮಹಿಳೆಯರಿಗೆ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಪ್ರವೇಶಕ್ಕೆ ಅವಕಾಶ ನೀಡಬೇಕೆನ್ನುವ ಸುಪ್ರೀಂಕೋರ್ಟ್​ ತೀರ್ಪಿನ ಮರುಪರಿಶೀಲನೆ ಕೋರಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಇಂದಿನಿಂದ ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ನೇತೃತ್ವದಲ್ಲಿ 9 ನ್ಯಾಯಮೂರ್ತಿಗಳನ್ನೊಳಗೊಂಡ ಪೀಠವು ನಡೆಸಲಿದೆ.

ಈ ಹಿಂದೆ ಶಬರಿಮಲೆಗೆ ಮಹಿಳೆಯರ ಪ್ರವೇಶದ ಪರವಾಗಿದ್ದ ನ್ಯಾ. ಆರ್.ಎಫ್.ನಾರಿಮನ್ ಮತ್ತು ಡಿ.ವೈ.ಚಂದ್ರಚೂಡ್, ಹಾಗೂ ಇದನ್ನು ವಿರೋಧಿಸಿದ್ದ ಮಹಿಳಾ ನ್ಯಾಯಮೂರ್ತಿ ಇಂದು ಮಲ್ಹೋತ್ರಾ ಕೂಡ ಈ ಪೀಠದಲ್ಲಿ ಇಲ್ಲ. ಶಬರಿಮಲೈ ದೇವಸ್ಥಾನ ಪ್ರವೇಶ ವಿಚಾರ ಸಂಬಂಧ 2018ರ ಸುಪ್ರೀಂಕೋರ್ಟ್​ ನೀಡಿದ್ದ ತೀರ್ಪನ್ನು ಮರು ಪರಿಶೀಲಿಸುವಂತೆ ಕೋರಿ 60 ಅರ್ಜಿಗಳು ಬಂದಿದ್ದವು.

ಇಂದು ಸಿಜೆಐ ನೇತೃತ್ವದಲ್ಲಿ ಈ ಅರ್ಜಿಗಳನ್ನು ನ್ಯಾ. ಆರ್​ ಭಾನುಮತಿ, ಎಲ್​ ನಾಗೇಶ್ವರ ರಾವ್​​, ಅಶೋಕ್​ ಭೂಷಣ್​, ಮೋಹನ್​​ ಎಂ ಶಾಂತನಗೌಡರ್​, ಎಸ್​ ಅಬ್ದುಲ್​ ನಜೀರ್​​, ಆರ್​ ಸುಭಾಷ್​ ರೆಡ್ಡಿ, ಬಿ ಆರ್​ ಗವಾಯಿ ಹಾಗೂ ಸೂರ್ಯ ಕಾಂತ್​ ಇರುವ ಸಾಂವಿಧಾನಿಕ ಪೀಠ ನಡೆಸಲಿದೆ. ಇದರ ಜೊತೆಗೆ ಮುಸ್ಲಿಂ ಹಾಗೂ ಪಾರ್ಸಿ ಮಹಿಳೆಯರ ವಿರುದ್ಧ ತಾರತಮ್ಯ ಸೇರಿದಂತೆ ಇತರ ವಿವಾದಾತ್ಮಕ ವಿಷಯಗಳ ವಿಚಾರಣೆ ಕೂಡ ನಡೆಯಲಿದೆ.

 

- Advertisment -

RECENT NEWS

ಮಂಗಳೂರು- ಉಡುಪಿಗೆ ಕೊರೋನಾ ಭಯದಿಂದ ಕೊಂಚ ನೆಮ್ಮದಿ- ಕಾಸರಗೋಡಿಗೆ ಭಾರಿ ಭೀತಿ..!!

ಮಂಗಳೂರು- ಉಡುಪಿಗೆ ಕೊರೋನಾ ಭಯದಿಂದ ಕೊಂಚ ನೆಮ್ಮದಿ- ಕಾಸರಗೋಡಿಗೆ ಭಾರಿ ಭೀತಿ..!! ಮಂಗಳೂರು /ಉಡುಪಿ/ಕಾಸರಗೋಡು : ಇಂದು ಕೂಡ ಕರಾವಳಿಯ ಜನತೆಗೆ ನಮ್ಮದಿಯ ಉಸಿರು ಬಿಟ್ಟಿದ್ದಾರೆ. ಕೋರೊನದ ವಿರುದ್ದದ ಜಿಲ್ಲಾಡಳಿತಗಳು, ಸರ್ಕಾರ, ಜನಪ್ರತಿನಿಧಿಗಳು ನಡೆಸುತ್ತಿರುವ ಸಮರಕ್ಕೆ...

ಗಡಿ ದಾಟಲು ಬಲವಂತದ ಯತ್ನ : ತಡೆದ ಕರ್ನಾಟಕ ಪೊಲೀಸರ ಮೇಲೆ ಕಲ್ಲು ತೂರಾಟ..! 

ಗಡಿ ದಾಟಲು ಬಲವಂತದ ಯತ್ನ : ತಡೆದ ಕರ್ನಾಟಕ ಪೊಲೀಸರ ಮೇಲೆ ಕಲ್ಲು ತೂರಾಟ..!  ಸುಳ್ಯ: ಕೇರಳ ಗಡಿ ದಾಟಲು ಯತ್ನಿಸಿ ವಿಫಲನಾದ ಯುವಕ ಕರ್ನಾಟಕ ಪೊಲೀಸರು ಮತ್ತು ವಾಹನದ ಮೇಲೆ ಕಲ್ಲು ತೂರಿದ...

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳು ಎರೆಸ್ಟ್..!

ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳು ಎರಸ್ಟ್..! ಬಂಟ್ವಾಳ : ಬಂಟ್ವಾಳದಲ್ಲಿ ಆಶಾ ಕಾರ್ಯಕರ್ತೆಯನ್ನು ನಿಂದಿಸಿ ಬೆದರಿಕೆ ಹಾಕಿದ ಆರೋಪಿಗಳನ್ನು ಪೊಲಿಸರು ಬಂಧಿಸಿದ್ದಾರೆ. ಬಂಟ್ವಾಳ ಅಮ್ಟಾಡಿ ನಿವಾಸಿಗಳಾದ ಮಾರಪ್ಪ ಪೂಜಾರಿ ಹಾಗೂ...

ಮಂಗಳೂರು ರೈಲುಗಳಲ್ಲಿ ಕೂಡ ಭರದಿಂದ ಸಾಗಿದೆ ಕೊರೊನಾ ಐಸೋಲೇಷನ್ ವಾರ್ಡ್ ಕಾರ್ಯ

ಮಂಗಳೂರು ರೈಲುಗಳಲ್ಲಿ ಕೂಡ ಭರದಿಂದ ಸಾಗಿದೆ ಕೊರೊನಾ ಐಸೋಲೇಷನ್ ವಾರ್ಡ್ ಕಾರ್ಯ ಮಂಗಳೂರು: ಕೊರೋನ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ರೈಲು ಬೋಗಿಗಳಲ್ಲಿ ಐಸೋಲೇಶನ್ ವಾರ್ಡ್ ತೆರೆಯುವ ನಿಟ್ಟಿನಲ್ಲಿ ಭಾರತೀಯ ರೈಲ್ವೆ ಮಂಡಳಿ ಕೊಂಕಣ...