Connect with us

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಶ್ರೀ ಪ್ರಕಾಶ್ ನಾಯಕ್ ಆಯ್ಕೆ

Published

on

ಸರ್ವೋತ್ತಮ ಸೇವಾ ಪ್ರಶಸ್ತಿಗೆ ಶ್ರೀ ಪ್ರಕಾಶ್ ನಾಯಕ್ ಆಯ್ಕೆ

ಮಂಗಳೂರು : ಕರ್ನಾಟಕ ರಾಜ್ಯ ಸರಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆ ನೀಡಿ ಸಾಧನೆಗೈದು ನಾಡಿನ ಜನತೆಯ ಮುಖದಲ್ಲಿ ಮುಗುಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ಧತಿ; ನಾಗರಿಕ ಸ್ನೇಹಿ; ಗುಣಾತ್ಮಕ; ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ಸರಕಾರವು ಪ್ರತಿ ವರ್ಷ ನೀಡುತ್ತಿದ್ದು 2019-2020 ನೆಯ ಸಾಲಿನ ಈ ಪ್ರಶಸ್ತಿಗೆ ನ್ಯಾಯಾಂಗ ಇಲಾಖೆಯ ಶಿರಸ್ತೆದಾರ್ ಶ್ರೀ ಪ್ರಕಾಶ್ ನಾಯಕ್ ಅವರು ಆಯ್ಕೆಯಾಗಿದ್ದಾರೆ.

ಕಳೆದ ಮೂರು ದಶಕಗಳಿಂದ ನ್ಯಾಯಾಂಗ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀ ಪ್ರಕಾಶ್ ನಾಯಕ್ ಅವರು ತಮ್ಮ ದಕ್ಷ ಹಾಗೂ ಸಮರ್ಪಣಾ ಭಾವದ ಸೇವೆಗಾಗಿ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಹ ವ್ಯಕ್ತಿಯೆಂದು ಪರಿಗಣಿಸಲ್ಪಟ್ಟಿದ್ದಾರೆ.

ಪ್ರಸ್ತುತ ಮ೦ಗಳೂರಿನ ಜಿಲ್ಲಾ ನ್ಯಾಯಾಲಯ ಸ೦ಕೀಣ೯ದಲ್ಲಿರುವ ಜುಡಿಶಿಯಲ್  ಸವಿ೯ಸ್‌ ಸೆಂಟರ್ ನಲ್ಲಿ ಸೇವೆ ಸಲ್ಲಿಸುತ್ತಿರುವ ಇವರು ಕಾನೂನು ಪದವಿ ಹಾಗೂ ಕಾನೂನು ಸ್ನಾತಕೋತರ ಪದವಿಯನ್ನು ಪಡೆದಿರುತ್ತಾರೆ.

ಸೇವಾ ಸ೦ಬ೦ಧಿತ ಕಾನೂನುಗಳ ಬಗ್ಗೆ ವಿಶೇಷ ಅದ್ಯಯನ ನಡೆಸಿರುವ ಇವರು ಪ್ರತಿ ವರ್ಷ ಕನಾ೯ಟಕ ಲೋಕಸೇವಾ ಆಯೋಗವು ನಡೆಸುವ ಇಲಾಖಾ ಪರೀಕ್ಷೆಗಳಿಗೆ ಹಾಜರಾಗುವ ಸರಕಾರಿ ನೌಕರರಿಗೆ ಉಚಿತ ತರಬೇತಿ ತರಗತಿಗಳನ್ನು  ನಡೆಸಿಕೊಂಡು ಬರುತ್ತಿದ್ದಾರೆ.ಕನಾ೯ಟಕ ರಾಜ್ಯ ನ್ಯಾಯಾ೦ಗ ಇಲಾಖಾ ನೌಕರರ ಸ೦ಘ ಮತ್ತು ಕನಾ೯ಟಕ ರಾಜ್ಯ ಸರಕಾರಿ ನೌಕರರ ಸ೦ಘ ಇದರ ದ.ಕ.ಜಿಲ್ಲಾ ಶಾಖೆಯ ಅದ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತಮ್ಮ ಸೇವಾವಧಿಯಲ್ಲಿ ನೌಕರರಿಗೆ ಉಪಯುಕ್ತವಾಗಿರುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸ೦ಘದ ಬೆಳವಣಿಗೆಗೆ ತಮ್ಮ ಕೊಡುಗೆ ನೀಡಿದ್ದಾರೆ.  ಪ್ರಸ್ತುತ ಅವಿಭಜಿತ ದ.ಕ.ಜಿಲ್ಲೆಯ ಸರಕಾರಿ ನೌಕರರ ಹೆಮ್ಮೆಯ ಆಥಿ೯ಕ ಸ೦ಸ್ಥೆಯಾಗಿರುವ ದಿ ಸೌತ್ ಕೆನರಾ ಗವರ್ನಮೆಂಟ್ ಆಫೀಸರ್ಸ ಕೋ ಆಪರೇಟಿವ್ ಬ್ಯಾ೦ಕಿನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.ಮ೦ಗಳೂರಿನ ನೆಹರೂ ಮೈದಾನದಲ್ಲಿ ಜರಗಲಿರುವ ಗಣರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ವಿಡಿಯೋಗಾಗಿ..

Click to comment

Leave a Reply

Your email address will not be published. Required fields are marked *

DAKSHINA KANNADA

ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!

Published

on

ಮಂಗಳೂರು ( ರಾಜಸ್ಥಾನ ) :  ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.

ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :

ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.

ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.

Continue Reading

DAKSHINA KANNADA

ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ

Published

on

ಮಂಗಳೂರು  : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್‌ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.

ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್‌ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್‌ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್‌ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್‌ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್‌ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್‌ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್‌ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.

Continue Reading

DAKSHINA KANNADA

ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ

Published

on

ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.

ಸ್ಫಟಿಕ ಲೋಹ

ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.

ಬಿದಿರಿನ ಗಿಡ

ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.

ಬುದ್ಧನ ಪ್ರತಿಮೆ

ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.

ಹಡಗು ಚಿತ್ರವಿರುವ ನಾಣ್ಯ

ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.

ಗಣೇಶ ಮೂರ್ತಿ

ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.

Continue Reading

LATEST NEWS

Trending