Saturday, August 20, 2022

ಹೆಸರಿಗೆ ಮಾತ್ರ ವೀಕೆಂಡ್‌ ಕರ್ಫ್ಯೂ: ಬಿಗುವಿಲ್ಲದ ಪೊಲೀಸರ ಬಂದೋಬಸ್ತ್‌

ಮಂಗಳೂರು: ಜಿಲ್ಲೆಯಾದ್ಯಂತ ಇಂದು ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿದ್ದರೂ, ಮಂಗಳೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟು ಜೋರಾಗಿ ನಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ವಾಹನ ಸಂಚಾರ ನಡೆಯುತ್ತಿದೆ.

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೀಕೆಂಡ್‌ ಕರ್ಪ್ಯೂ ಜಾರಿಯಾದೆ. ಮಧ್ಯಾಹ್ನ 2ರ ತನಕ ಹಾಲು, ದಿನಸಿ ಸೇರಿದಂತೆ ಅಗತ್ಯ ಸೇವೆಗಳಿಗ ಅವಕಾಶ ನೀಡಲಾಗಿತ್ತು. ಆದರೆ ಮಂಗಳೂರು ನಗರದಲ್ಲಿ ವೀಕಂಡ್‌ ಕರ್ಪ್ಯೂ ಇದ್ದಂತೆ ಕಾಣಿಸುತ್ತಿಲ್ಲ. ಕಾರಣ ಖಾಸಗಿ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಓಡಾಟ ನಡೆಸುತ್ತಿದೆ ಜೊತೆಗೆ ಅಲ್ಲಲ್ಲಿ ಮೊಬೈಲ್‌ ಅಂಗಡಿ ಸೇರಿದಂತೆ ಅಗತ್ಯ ವಸ್ತುಗಳ ಹೊರತು ಬೇರೆ ವಹಿವಾಟು ನಡೆದ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ವ್ಯಕ್ತಪಡಿಸುತ್ತಿದ್ದಾರೆ.

ಬಿಗುವಿಲ್ಲದ ಪೊಲೀಸರ ಬಂದೋಬಸ್ತ್ 

ಕೊರೊನಾದ ಎರಡನೇ ಅಲೆ ಇನ್ನೂ ಹೋಗಿಲ್ಲ. ಈ ಹಿನ್ನೆಲೆ ನಿರ್ಬಂಧ ಸಡಿಲಿಸುವಾಗ ಎಚ್ಚರವಿರಲಿ ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಕಡಿಮೆಯಾಗಿದ್ದರೂ, ಸಾವಿನ ಸಂಖ್ಯೆ ಕಡಿಮೆಯಾಗಿಲ್ಲ ಎಂದು ಅಂಕಿಸಂಖ್ಯೆಗಳೇ ತಿಳಿಸುತ್ತಿವೆ.

ಉಡುಪಿಯಲ್ಲೂ ಇದೇ ಕಥೆ

ಉಡುಪಿ ಜಿಲ್ಲೆಯಲ್ಲಿ ಜುಲೈ 3 ಮತ್ತು 4ರಂದು ವೀಕೆಂಡ್ ಕರ್ಫ್ಯೂ ವೇಳೆ ಬಸ್ ಸಂಚಾರಕ್ಕೆ ಅವಕಾಶವಿಲ್ಲ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿಸಿದ್ದರೂ ಕೂಡ ಕೆಎಸ್ಆರ್‌ಟಿಸಿ ಮತ್ತು ಖಾಸಗಿ ಬಸ್ ಸಂಚಾರ ನಡೆಸಿದೆ.

 

 

LEAVE A REPLY

Please enter your comment!
Please enter your name here

Hot Topics