Connect with us

ಆಡಳಿತ ನಡೆಸಲು ಬಿಜೆಪಿ ನಾಲಾಯಕ್‌: ರಮಾನಾಥ ರೈ ವಾಗ್ದಾಳಿ

Published

on

ಆಡಳಿತ ನಡೆಸಲು ಬಿಜೆಪಿ ನಾಲಾಯಕ್‌: ರಮಾನಾಥ ರೈ ವಾಗ್ದಾಳಿ

ಮಂಗಳೂರು: ಆಡಳಿತ ನಡೆಸಲು ಬಿಜೆಪಿ ನಾಲಾಯಕ್‌. ಕೇಂದ್ರದ ಹಣದಿಂದ ಆಪರೇಷನ್‌ ಕಮಲ ಮಾಡಿ ಬಿಜೆಪಿ ಅಧಿಕಾರಿಕ್ಕೇರಿದೆ ಎಂದು ಮಾಜಿ ಸಚಿವ ರಮಾನಾಥ ರೈ ವ್ಯಂಗ್ಯವಾಡಿದರು.

ಕಾಂಗ್ರೆಸ್‌ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷವಾಗಿರಲು ಕಾಂಗ್ರೆಸ್ ನಾಲಾಯಕ್ ಎಂಬ ನಳಿನ್‌ ಕುಮಾರ್‌ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅಧಿಕಾರ ನಡೆಸೋದಕ್ಕೆ ಬಿಜೆಪಿ ನಾಲಾಯಕ್‌. ಬ್ರಿಟೀಷರ ಜೊತೆ ಬಿಜೆಪಿಯವರು ಸೇರಿದ್ದರು. ಅಕ್ರಮ ಗಣಿಗಾರಿಕೆ ನಡೆಸಿ ಜೈಲಿಗೆ ಹೋದವರನ್ನು ಮಂತ್ರಿ ಮಾಡಿ ಬಿಜೆಪಿ ಚರಿತ್ರೆ ನಿರ್ಮಿಸಿದೆ ಎಂದು ಆರೋಪಿಸಿದರು. ಇನ್ನು ಕಾಂಗ್ರೆಸ್ ನಾಶ ಆಗಿದೆ ಅಂತ ಅಪಹಾಸ್ಯ ಮಾಡುವುದು ಸರಿಯಲ್ಲ. ಧರ್ಮದ ಅಮಲನ್ನು ತಲೆಗೆ ಹತ್ತಿಸಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಈಗ ಅಧಿಕಾರದ ಅಮಲಿನಲ್ಲಿ ಮಾತನಾಡುತ್ತಿದ್ದಾರೆ. ಜನರಿಗೆ ಧಮ್ಕಿ ಹಾಕುತ್ತಿದ್ದಾರೆ. ಬಡವರಿಗೆ ಮನೆ ಕಟ್ಟಿಕೊಡಲು ಇವರಿಗೆ ಆಗುತ್ತಿಲ್ಲ, ಪರ್ಸಂಟೇಜ್ ಕೆಲಸಗಳು ಮಾತ್ರ ಬಿಜೆಪಿಯಿಂದ ಆಗುತ್ತಿದೆ ಎಂದು ಬಿಜೆಪಿ ವಿರುದ್ದ ಹರಿಹಾಯ್ದರು.

Click to comment

Leave a Reply

Your email address will not be published. Required fields are marked *

DAKSHINA KANNADA

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್

Published

on

ಬಂಟ್ವಾಳ : ಅನೇಕ ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಕಾರ್ಪೋರೇಟರ್‌ ಆಗಿ ಮೇಯರ್ ಆಗಿದ್ದ ಕವಿತಾ ಸನಿಲ್ ಇದೀಗ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಮುಂಚೂಣಿಯಲ್ಲಿದ್ದ ಕವಿತಾ ಸನಿಲ್‌ ವಿಧಾನ ಸಭಾ ಚುನಾವಣೆಯಲ್ಲೂ ಸಾಕಷ್ಟು ಪ್ರಚಾರ ಮಾಡಿದ್ರು. ಸಿಎಂ ಸಿದ್ದರಾಮಯ್ಯ ಅವರಿಗೂ ಉತ್ತಮ ಒಡನಾಟ ಇಟ್ಟುಕೊಂಡಿದ್ದ ಕವಿತಾ ಸನಿಲ್ ಸದ್ಯ ಪಕ್ಷದ ನಾಯಕರ ಬಗ್ಗೆ ಅಸಮಾಧಾನಗೊಂಡಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ್ರೂ ತನಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಪಕ್ಷ ಚಟುವಟಿಕೆಯಿಂದ ದೂರ ಉಳಿದಿದ್ದರು. ಯಾವುದಾದರು ಒಂದು ನಿಗಮ ಸಿಗಬಹುದು ಎಂಬ ಅವರ ನಿರೀಕ್ಷೆ ಹುಸಿಯಾದ ಹಿನ್ನಲೆಯಲ್ಲಿ ಇದೀಗ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬಂಟ್ವಾಳಕ್ಕೆ ಆಗಮಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಂದ ಬಿಜೆಪಿ ಬಾವುಟ ಪಡೆದು ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇದನ್ನೂ ಓದಿ : ಸೂಪರ್ ಹಿಟ್ ಚಿತ್ರ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್ ಡೇಟ್ ಫಿಕ್ಸ್!

Continue Reading

DAKSHINA KANNADA

‘ಕೇಸರಿಕರಣ’ವಾದ ಡಿಡಿ ನ್ಯೂಸ್..! ಚರ್ಚೆಗೆ ಕಾರಣವಾದ ಹೊಸ ಲೋಗೋ..!

Published

on

ಮಂಗಳೂರು : ಚುನಾವಣಾ ಸಮಯದಲ್ಲೇ ದೇಶದ ಸರ್ಕಾರಿ ಚಾನೆಲ್ ದೂರದರ್ಶನ ತನ್ನ ಲೋಗೋದ ಬಣ್ಣವನ್ನು ಬದಲಾಯಿಸಿದೆ. ಡಿಡಿ ನ್ಯೂಸ್‌ ತನ್ನ ಲೋಗೋ ಬಣ್ಣವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿರುವುದು ಈಗ ಚರ್ಚೆಗೆ ಕಾರಣವಾಗಿದೆ. 1959 ರಲ್ಲಿ ಆರಂಭವಾಗಿದ್ದ ದೂರದರ್ಶನದ ಲೋಗೋ ನೀಲಿ ಬಣ್ಣದಾಗಿದ್ದು, ಇದೀಗ ಚುನಾವಣೆಯ ಹೊಸ್ತಿಲಲ್ಲಿ ಕೇಸರಿ ಬಣ್ಣಕ್ಕೆ ಬದಲಾಯಿಸಿದ ಬಗ್ಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ದೇಶದಲ್ಲಿ ಎಲ್ಲವನ್ನೂ ಕೇಸರಿಕರಣ ಮಾಡುವ ಭಾಗವಾಗಿ ಈ ಬದಲಾವಣೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದೆ.

ಕೇಂದ್ರ ಸರ್ಕಾರದ ಪ್ರಸಾರಭಾರತಿ ಅಡಿಯಲ್ಲಿ ಬರುವ ದೂರದರ್ಶನ ಏಕಾಏಕಿ ತನ್ನ ಲೋಗೋವನ್ನು ಕೇಸರಿ ಬಣ್ಣಕ್ಕೆ ಬದಲಾಯಿಸಿದೆ. ಇದನ್ನು ದೂರದರ್ಶನ ತನ್ನ ಅಧಿಕೃತ ‘X’ ಖಾತೆಯಲ್ಲಿ ಹಂಚಿಕೊಂಡಿದ್ದು, ಲೋಗೋ ಕೇವಲ ದೃಶ್ಯ ಸೌಂದರ್ಯದ ಬದಲಾವಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದಾರೆ.

“ನಮ್ಮ ಮೌಲ್ಯಗಳು ಒಂದೇ ಆಗಿರುವಾಗ, ನಾವು ಈಗ ಹೊಸ ಅವತಾರದಲ್ಲಿ ಸಿಗಲಿದ್ದೇವೆ. ಹಿಂದೆಂದಿಗಿಂತಲೂ ಉತ್ತಮ ಸುದ್ದಿ ಪ್ರಯಾಣಕ್ಕೆ ಸಿದ್ಧರಾಗಿ. ಎಲ್ಲಾ ಹೊಸ ಡಿಡಿ ನ್ಯೂಸ್ ಅನ್ನು ಅನುಭವಿಸಿ! ” ಎಂದು DD News ತನ್ನ ಅಧಿಕೃತ ‘X’ ಹ್ಯಾಂಡಲ್‌ನಲ್ಲಿ ಅದರ ಹೊಸ ಲೋಗೋದ ವೀಡಿಯೊದೊಂದಿಗೆ ಪೋಸ್ಟ್ ಮಾಡಿದೆ. ಜೊತೆಗೆ “ಕೇವಲ ಧೈರ್ಯದ ಬರವಸೆಯಲ್ಲ..ವೇಗದ ಮತ್ತು ನಿಖರತೆಯ ಬರವಸೆ ; ಹಕ್ಕುಗಳ ಮತ್ತು ಸತ್ಯದ ಬರವಸೆ ; ಸಂವೇದನೆಯ ಹಾಗೂ ಸತ್ಯದ ಬರವಸೆ ;  ಯಾಕೆಂದರೆ ಡಿಡಿ ನ್ಯೂಸ್ ನಲ್ಲಿ ಬಂದರೆ ಅದು ಸತ್ಯ! ಡಿಡಿ ನ್ಯೂಸ್ – ಭರೋಸಾ ಸಚ್ ಕಾ..” ಎಂದು ಹೇಳಿಕೊಂಡಿದ್ದಾರೆ.

2012 ಮತ್ತು 2014 ರ ನಡುವೆ ಪ್ರಸಾರ ಭಾರತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ (CEO) ಸೇವೆ ಸಲ್ಲಿಸಿದ ಅಖಿಲ ಭಾರತ ತೃಣಮೂಲ ಕಾಂಗ್ರೆಸ್ (AITC) ರಾಜ್ಯಸಭಾ ಸಂಸದ ಜವಾಹರ್ ಸಿರ್ಕಾರ್ ಈ ಬೆಳವಣಿಗೆಯನ್ನು ಟೀಕಿಸಿದ್ದಾರೆ. ಪ್ರಸಾರ ಭಾರತಿ ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೊ (AIR) ಮೇಲ್ವಿಚಾರಣೆ ಮಾಡುವ ಶಾಸನಬದ್ಧ ಸಂಸ್ಥೆಯಾಗಿದೆ.”ರಾಷ್ಟ್ರೀಯ ಬ್ರಾಡ್‌ಕಾಸ್ಟರ್ ತನ್ನ ಬ್ರ್ಯಾಂಡಿಂಗ್‌ಗಾಗಿ ಕೇಸರಿ ಬಣ್ಣವನ್ನು ಆಯ್ಕೆ ಮಾಡಿರುವುದು ಸರಿಯಲ್ಲ” ಎಂದು ಸಿರ್ಕಾರ್ ಸಾಮಾಜಿಕ ಮಾಧ್ಯಮ ಸೈಟ್ ‘X’ ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಹೇಳಿದ್ದಾರೆ “ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ನಾನು ಪರಿಗಣಿಸುತ್ತೇನೆ” ಎಂದು ಸಿರ್ಕಾರ್ ಹೇಳಿದ್ದಾರೆ, ಲೋಗೋ ಬದಲಾವಣೆ ಮಾಡಿರುವ ಸಮಯವನ್ನು ಪ್ರಶ್ನಿಸಿದ ಅವರು. “ಇದು ರಾಜ್ಯಗಳಲ್ಲಿ ಪ್ರಭಾವ ಬೀರುತ್ತದೆ ಎಂದು ಹೇಳಿದ್ದಾರೆ. ಕೇಸರಿ ಒಂದು ನಿರ್ಧಿಷ್ಟ ಧರ್ಮವನ್ನು ಸೂಚಿಸುವ ಬಣ್ಣವಾಗಿದ್ದು ಅದನ್ನು ದೂರದರ್ಶನ ಬಳಸಿಕೊಂಡಿದ್ದು ತಪ್ಪು” ಎಂದಿದ್ದಾರೆ.

ದೂರದರ್ಶನದ ಈ ಬೆಳವಣಿಗೆಯ ಬಗ್ಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದು, ಹೊಸ ಸಂಸತ್‌ನಲ್ಲಿ ಒಳಗೆ ಎಲ್ಲಾ ಕಡೆ ಕೇಸರಿಕರಣ ಮಾಡಲಾಗಿದೆ. ಇದೀಗ ದೇಶದ ಜನರನ್ನು ದೂರದರ್ಶನದ ಮೂಲಕ ಕೇಸರಿಕರಣ ಮಾಡಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದಾರೆ.

Continue Reading

LATEST NEWS

ಉಡುಪಿ : ದೇಶದಲ್ಲಿ ಕೇಸರಿ ಆಡಳಿತವೇ ನಮ್ಮ ಉದ್ದೇಶ : ಸುನಿಲ್ ಕುಮಾರ್

Published

on

ಉಡುಪಿ : ದೇಶದಲ್ಲಿ ಕೇಸರಿ ಆಡಳಿತವನ್ನು ಮಾಡಲೆಂದೇ ಬಿಜೆಪಿ ಚುನಾವಣೆಗೆ ಹೋಗುತ್ತಿದೆ. ಇದನ್ನು ಹೇಳಿಕೊಳ್ಳಲು ನಮಗೆ ಯಾವುದೇ ಸಂಕೋಚ ಇಲ್ಲ. ನಾವು ಕೇಸರಿ ಆಡಳಿತವನ್ನ ತರಲು ಹೊರಟಿದ್ದೇವೆ ಎಂದು ಕಾರ್ಕಳ ಶಾಸಕ ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ.


ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುನಿಲ್ ಕುಮಾರ್, ಕಾಂಗ್ರೆಸ್ ಒಂದು ಕೋಮಿನವರಿಗೆ ಬೆಂಬಲ ನೀಡುತ್ತಿದೆ. ಆ ಮೂಲಕ ಇನ್ನೊಂದು ಕೋಮಿನವರು ನೆಮ್ಮದಿಯಾಗಿ ಬದುಕಬಾರದು ಅನ್ನೋದು ಅವರ ಸಿದ್ಧಾಂತ. ಇದಕ್ಕೆ ನಮ್ಮ ವಿರೋಧವಿದ್ದು, ನಾವು ರಾಷ್ಟ್ರೀಯತೆಯ ಸಂಕೇತವಾದ ಕೇಸರಿಯನ್ನೇ ಮುಂದಿಟ್ಟು ಆಡಳಿತ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಉಡುಪಿ: ಅನ್ಯಕೋಮಿನವರ ಕೊಬ್ಬಿಗೆ ಸಿದ್ದರಾಮಯ್ಯ ಆಡಳಿತವೇ ಮುಖ್ಯ ಕಾರಣ : ಸುನಿಲ್ ಕುಮಾರ್
ಚೊಂಬು ಕೊಟ್ಟಿದ್ದು ಕಾಂಗ್ರೆಸ್ :

ಕಾಂಗ್ರೆಸ್ ನೀಡಿದ ಚೊಂಬಿನ ಜಾಹಿರಾತು ವಿಚಾರವಾಗಿ ಮಾತನಾಡಿದ ಸುನಿಲ್ ಕುಮಾರ್, ಶೌಚಾಲಯ ನಿರ್ಮಾಣ ಮಾಡದೆ ಹಳ್ಳಿಯ ಮಹಿಳೆಯರಿಗೆ ಚೊಂಬು ಕೊಟ್ಟಿದ್ದು ಕಾಂಗ್ರೆಸ್‌ ಸರ್ಕಾರ. ಆದ್ರೆ ಶೌಚಾಲಯ ನಿರ್ಮಾಣ ಮಾಡಿಕೊಟ್ಟಿದ್ದು ಬಿಜೆಪಿ ಸರ್ಕಾರ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನಾವು ಕೇಸರಿ ಹಾಕಿಕೊಂಡು ದ್ವೇಷ ಮಾಡಲು ಹೊರಟಿಲ್ಲ. ನಾವು ರಾಷ್ಟ್ರದಲ್ಲಿ ಕೇಸರಿ ಆಡಳಿತ ತರಲು ಹೊರಟಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ.

Continue Reading

LATEST NEWS

Trending