ಆರ್ಥಿಕ ಸಂಕಷ್ಟದಲ್ಲಿರುವ ಜನತೆಗೆ ಗಾಯದ ಮೇಲೆ ಬರೆ : ಕೇಂದ್ರದಿಂದ ವಿದ್ಯುತ್ ದರ ಏರಿಕೆ
ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ಅವರು ಸರಣಿ ಟ್ವೀಟ್ ಮಾಡಿದ್ದಾರೆ..
ರಾಜ್ಯದ ಎಲ್ಲಾ ವಿದ್ಯುತ್ ಕಂಪನಿಗಳ ವಿದ್ಯುತ್ ದರವನ್ನು ಪ್ರತಿ ಯುನಿಟ್‌ಗೆ 40 ಪೈಸೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ನಡೆಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ.
ಸರಣಿ ಟ್ವೀಟ್‌ಗಳ ಮೂಲಕ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿದ ಅವರು ಕೋವಿಡ್ ಸಂಕಷ್ಟದ ಅವಧಿಯಲ್ಲಿ
ವಿದ್ಯುತ್ ದರ ಏರಿಕೆ ಮಾಡುವ ಮೂಲಕ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದಿದ್ದಾರೆ.
ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸುವುದಾಗಿ ಟ್ವೀಟ್ ಮಾಡಿದ್ದಾರೆ.
ವಿದ್ಯುತ್ ದರ ಪ್ರತಿ ಯೂನಿಟ್‌ಗೆ ಸರಾಸರಿ 40 ಪೈಸೆ ಹೆಚ್ಚಳ,
ಕೊರೊನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು.
ಕೊರೊನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಮಾಜಿ ಸಿಎಂ ಕುಮಾರ ಸ್ವಾಮಿ ಹೇಳಿದ್ದಾರೆ…
ಬಂಟ್ವಾಳ: ಅಕ್ರಮವಾಗಿ ಮನೆಯಲ್ಲಿ ಜುಗಾರಿ ಆಟ ಆಡುತ್ತಿದ್ದ ವೇಳೆ ಬಂಟ್ವಾಳ ಪೊಲೀಸರು ದಾಳಿ ನಡೆಸಿ ಒಟ್ಟು 33 ಜನರನ್ನು ಹಾಗೂ ಬರೋಬ್ಬರಿ ಏಳು ಲಕ್ಷಕ್ಕೂ ಅಧಿಕ ಮೌಲ್ಯದ ನಗದು ವಶಪಡಿಸಿಕೊಂಡ ಘಟನೆ ನಿನ್ನೆ (ಡಿ.17) ಮುಂಜಾನೆ ವೇಳೆ ಬಂಟ್ವಾಳ ತಾಲೂಕು, ಬಡಗಬೆಳ್ಳೂರು ಗ್ರಾಮದ, ಬಡಗಬೆಳ್ಳೂರು ಎಂಬಲ್ಲಿ ನಿಶಾಂತ್ ಎಂಬವರ ಮನೆಯಲ್ಲಿ ನಡೆದಿದೆ.
ಅಕ್ರಮವಾಗಿ ಜುಗಾರಿ ಆಟ ಆಡುತ್ತಿದ್ದಾಗ, ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರಾದ ಶಿವಕುಮಾರ ಬಿ, ಸಬ್ ಇನ್ಸ್ಪೆಕ್ಟರ್ ಹರೀಶ್ ಹಾಗೂ ಪೊಲೀಸ್ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಕಾರ್ಯದಕ್ಷತೆ ಮೆರೆದಿದ್ದಾರೆ. ದಾಳಿ ವೇಳೆ ಸದ್ರಿ ಸ್ಥಳದಲ್ಲಿ ಅಕ್ರಮವಾಗಿ “ಉಲಾಯಿ-ಪಿದಾಯಿ” ಜುಗಾರಿ ಆಟ ಆಡುತ್ತಿರುವುದು ಕಂಡುಬಂದಿರುತ್ತದೆ. ದಾಳಿ ವೇಳೆ ಜುಗಾರಿ ಆಟ ಆಡಿಸುತ್ತಿದ್ದ ಆರೋಪಿತ ನಿಶಾಂತ್ ತಪ್ಪಿಸಿಕೊಂಡಿದ್ದು, ಆಟದಲ್ಲಿ ನಿರತರಾಗಿದ್ದ ಒಟ್ಟು 33 ಜನರನ್ನು ವಶಕ್ಕೆ ಪಡೆದುಕೊಂಡು, ಅಪಾದಿತರಿಂದ ಜುಗಾರಿ ಆಟಕ್ಕೆ ಬಳಸಿದ ನಗದು ರೂ. 7,81,420/-, ಇಸ್ಪೀಟ್ ಎಲೆಗಳು, ಸ್ಟೀಲ್ ಟೇಬಲ್, ಪ್ಲಾಸ್ಟಿಕ್ ಚೆಯರ್ ಹಾಗೂ ಇತರೆ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.
ಸ್ವಾಧೀನಪಡಿಸಿದ ಸ್ವತ್ತುಗಳ ಒಟ್ಟು ಮೌಲ್ಯ ರೂ.7,90,220/- ಆಗಿರುತ್ತದೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 112/2024 ಕಲಂ: 79,80 ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಕಡ್ತಾಲಬೆಟ್ಟು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ಇದರ ಸಹಯೋಗದಲ್ಲಿ ಶಾಲಾ ವಾರ್ಷಿಕೋತ್ಸವವು ಡಿಸೆಂಬರ್ 19 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.
ಬೆಳಿಗ್ಗೆ 9 ಗಂಟೆಗೆ ಪ್ರಗತಿಪರ ಕೃಷಿಕರು ಮತ್ತು ಉದ್ಯಮಿಗಳು ಆದ ಜಯಪ್ರಕಾಶ್ ಶೆಟ್ಟಿ ಬುಳೇರಿ ಉದ್ಘಾಟನೆಯನ್ನು ಮಾಡಲಿದ್ದಾರೆ. ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷರಾದ ಭಾರತಿ ರಾಜೇಂದ್ರ ಪೂಜಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಗತಿಪರ ಕೃಷಿಕ ಕೃಷ್ಣ ಶೆಟ್ಟಿ ಗೋಂಜಗುತ್ತು ಧ್ವಜಾರೋಹಣ ಮಾಡಲಿದ್ದು, ಯಕ್ಷಗಾನ ಕಲಾವಿದ ದಿನೇಶ್ ಶೆಟ್ಟಿ ಕಾವಳಕಟ್ಟೆ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಚೆನ್ನೈತ್ತೋಡಿ ಗ್ರಾಮ ಪಂಚಾಯತ್ ಸದಸ್ಯೆ ಮುತ್ತಮ್ಮ, ಪುಷ್ಪಾವತಿ ಸೇರಿದಂತೆ ಹಲವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಬಂಟ್ವಾಳ ವಿಧಾನಸಭಾ ಕ್ಷೇತ್ರದ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅಧ್ಯಕ್ಷತೆ ವಹಿಸಲಿದ್ದಾರೆ. ಸಂಜೆ 6.30 ಕ್ಕೆ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆ ಬಳಿಕ ಶ್ರೀ ವಿಠಲ ನಾಯಕ್ ಮತ್ತು ಬಳಗದವರಿಂದ ನಿತ್ಯ ನೂತನ ಕಾರ್ಯಕ್ರಮ ಗೀತಾ ಸಾಹಿತ್ಯ ಸಂಭ್ರಮ, ಹಳೇ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಶಾಲಾ ಹಳೇ ವಿದ್ಯಾರ್ಥಿ ಭರತ್ ರಾಜ್ ಶೆಟ್ಟಿ ಮತ್ತು ಬಳಗದವರಿಂದ ಯಕ್ಷ-ಗಾನ-ವೈಭವ ನಡೆಯಲಿದೆ.
ಬಂಟ್ವಾಳ : ಗರ್ಭಿಣಿ ಇರುವ ಮನೆಗೆ ನುಗ್ಗಿ ಗೂಂಡಾಗಿರಿ ನಡೆಸಿದ್ದಾರೆಂಬ ಆ*ರೋಪ ಬಂಟ್ವಾಳದ ಮೂಡ ಗ್ರಾಮದ ಕಾಂಗ್ರೆಸ್ ಪುರಸಭೆ ಸದಸ್ಯ ಪಟಾಲಂ ವಿರುದ್ಧ ಕೇಳಿಬಂದಿದೆ. ಪೊಲೀಸರು ಈ ಕುರಿತು ಪ್ರಕರಣ ದಾಖಲಾಗಿದೆ.
ಬಂಟ್ವಾಳ ಪುರಸಭೆ ಸದಸ್ಯ, ರೌ*ಡಿಶೀಟರ್ ಆಗಿರೊ ಅಸೈನರ್ ತಂಡದಿಂದ ಈ ದಾಂಧಲೆ ನಡೆದಿದ್ದು ಮನೆ ಬಾಡಿಗೆ ವ್ಯಾಜ್ಯ ಸಂಬಂಧ ಮ*ಧ್ಯರಾತ್ರಿ ಗರ್ಭಿಣಿ ಮನೆಗೆ ನುಗ್ಗಿ ಹ*ಲ್ಲೆ ಮಾಡಲಾಗಿದೆ. ಸಾಹುಲ್ ಹಮೀದ್ ಎಂಬುವವರ ಮನೆಗೆ ಮಧ್ಯರಾತ್ರಿ ನುಗ್ಗಿ ಅಸೈನರ್ ಹ*ಲ್ಲೆ ಮಾಡಿದ್ದಾನೆ ಎಂದು ಗಂ*ಭೀರ ಆರೋಪ ಕೇಳಿಬಂದಿದೆ.
ಈ ಘಟನೆ ವೇಳೆ ಮನೆಯವರು 112ಗೆ ಕರೆ ಮಾಡಿದ್ದು, ಇದರಿಂದ ಪೊಲೀಸರು ಬಂದಿದ್ದರಿಂದ ಅ*ನಾಹುತ ತಪ್ಪಿದೆ. ಹ*ಲ್ಲೆಯಿಂದ ಕೆಲವರಿಗೆ ಗಾ*ಯಗಳಾಗಿದ್ದು, ಬಂಟ್ವಾಳ ಟೌನ್ ಠಾಣೆಯಲ್ಲಿ ಎರಡು ಕಡೆಯಿಂದ ದೂರು-ಪ್ರತಿದೂರು ದಾಖಲಾಗಿದೆ. ಪೊಲೀಸರು ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್. ದಾಖಲಿಸಿಕೊಂಡಿದ್ದು, ತಲೆಮರೆಸಿಕೊಂಡಿರೋ ಆರೋಪಿಗಳಿಗಾಗಿ ತನಿಖೆ ನಡೆಸಿದ್ದಾರೆ.