Connect with us

    ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಶೀಘ್ರಗುಣಮುಖರಾಗುವಂತೆ ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

    Published

    on

    ಮಂಗಳೂರು:   ಕಾಂಗ್ರೆಸ್ ಅಧಿನಾಯಕಿ, ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸ ದಿಲ್ಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ಸೋನಿಯಾ ಗಾಂಧಿ ಅವರನ್ನು ದಾಖಲಿಸಲಾಗಿದೆ. ಮೂಲಗಳ ಪ್ರಕಾರ ಸೋನಿಯಾ ಗಾಂಧಿ ಅವರನ್ನು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

    ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಸೋನಿಯಾ ಗಾಂಧಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಸೋನಿಯಾ ಅನಾರೋಗ್ಯ ಸುಧಾರಣೆಗಾಗಿ ಮಂಗಳೂರು ,ಕುದ್ರೋಳಿ ಗೋಕರ್ನಾಥೇಶ್ವರ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಕ್ಷೇತ್ರದ ರುವಾರಿ , ಮಾಜಿ ವಿತ್ತ ಸಚಿವ ಜನಾರ್ಧನ ಬಿ.ಪೂಜಾರಿಯವರು ಪ್ರಾರ್ಥನೆ ಸಲ್ಲಿಸಿದ್ದು, ಸೋನಿಯಾ ಗಾಂಧಿ ಶೀಘ್ರ ಗುಣಮುಖರಾಗುವಂತೆ ಬೇಡಿಕೊಂಡರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೊನೀಯಾ ಗಾಂಧಿಯವರ ಆರೋಗ್ಯ ಸ್ಥಿತಿ ತೀವ್ರ ಗಂಭೀರವಾಗಿದೆ. ಪ್ರತೀ ಸಲವೂ ಅವರು ಅನಾರೋಗ್ಯಪೀಡಿತರಾದಾಗ ಅವರು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗುತ್ತಾರೆ.

    ಈ ಬಾರಿಯೂ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಅವರ ಮಕ್ಕಳು ಬಹಳ ಉತ್ತಮ ರೀತಿಯಲ್ಲಿ ನೋಡಿಕೊಳ್ಳುತ್ತಿದ್ದಾರೆ. ಕುದ್ರೋಳಿ ಕ್ಷೇತ್ರಕ್ಕೂ ಸೋನಿಯಾ ಗಾಂದಿಗೂ ಅವಿನಾಭಾವ ಸಂಬಂಧ.ಜಿಲ್ಲೆಗೆ ಆಗಮಿಸುವಾಗ ಅವರು ಕ್ಷೇತ್ರಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದಾರೆ.. ಈ ನಿಟ್ಟಿನಲ್ಲಿ ಆಡಳಿತ ಮಂಡಳಿ ಅಧ್ಯಕ್ಷರು, ಕೋಶಾಧಿಕಾರಿ ಹಾಗೂ ಸದಸ್ಯರು ಸೇರಿ ಪ್ರಾರ್ಥನೆ ಮಾಡಿದ್ದೇವೆ. ದೇವರೇ ಸೋನಿಯಾರವರನ್ನು ಬದುಕಿಸಿ ಅಂತ ಕೇಳಿಕೊಂಡಿದ್ದೇವೆ. ದೇವರು ಅವರನ್ನು ಬದುಕಿಸುತ್ತಾರೆ ಅನ್ನುವ ನಂಬಿಕೆ ನನಗಿದೆ. ಇನ್ನು ಮೂರು ದಿವಸಗೊಳಗಾಗಿ ಸೋನಿಯಾ ಗಾಂಧಿ ಗುಣಮುಖರಾಗದಿದ್ದರೆ ದೇವಸ್ಥಾನದೊಳಗೆ ಪ್ರವೇಶ ಮಾಡುವುದಿಲ್ಲ ಅಂತ ದೇವರ ಮೇಲೆ ಪ್ರಮಾಣ ಮಾಡುತ್ತಿದ್ದೇನೆ ಅಂತ ಹೇಳಿದ್ರು..ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮಂಡಳಿಯ ಅಧ್ಯಕ್ಷ ಹೆಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ರು.

    ವಿಡೀಯೋಗಾಗಿ

     

    Click to comment

    Leave a Reply

    Your email address will not be published. Required fields are marked *

    LATEST NEWS

    ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆ

    Published

    on

    ಮಂಗಳೂರು/ಚೆನ್ನೈ: ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ನಿರ್ಮಿಸಿರುವ ದೇಶದ ಮೊದಲ ಗಾಜಿನ ಸೇತುವೆ ಲೋಕಾರ್ಪಣೆಯಾಗಿದೆ.

    ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಯನ್ನು ಸಂಪರ್ಕಿಸುವ 77ಮೀ. ಉದ್ದದ ಸೇತುವೆಯನ್ನು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಉದ್ಟಾಟಿಸಿದರು. ಸುಮಾರು 37 ಕೋಟಿ ರೂ. ವೆಚ್ಚದಲ್ಲಿ ಈ ಗಾಜಿನ ಸೇತುವೆ ನಿರ್ಮಾಣವಾಗಿದ್ದು, ಪಾರದರ್ಶಕ ಗಾಜಿನ ಮೇಲ್ಮೈ ಹೊಂದಿದೆ. ತಿರುವಳ್ಳುವರ್ ಪ್ರತಿಮೆ ಅನಾವರಣದ ಬೆಳ್ಳಿ ಮಹೋತ್ಸವದಂದು ಸೇತುವೆ ಉದ್ಘಾಟನೆಯಾಗಿದೆ.

    ಈ ಸೇತುವೆ 77 ಮೀ (252 ಅಡಿ) ಉದ್ದ ಮತ್ತು 10 ಮೀಟರ್ ಅಗಲವನ್ನು ಹೊಂದಿದ್ದು, ಇಬ್ಬರು ಮಹಾನ್ ವ್ಯಕ್ತಿಗಳ ಸ್ಮಾರಕವಾದ ವಿವೇಕಾನಂದ ರಾಕ್ ಸ್ಮಾರಕ ಮತ್ತು ತಿರುವಳ್ಳುವರ್ ಪ್ರತಿಮೆಗೆ ಸಂಪರ್ಕ ಸಾಧಿಸಲಿದ್ದು, ದೇಶದ ಮೊದಲ ಗಾಜಿನ ಸೇತುವೆ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.

    ಇದನ್ನೂ ಓದಿ: ಹೊಸ ವರ್ಷದ ಮೊದಲ ದಿನವೇ ಗ್ರಾಹಕರಿಗೆ ಗುಡ್ ನ್ಯೂಸ್ !

    ಇದುವರೆಗೆ ಈ ಎರಡು ಸ್ಮಾರಕಗಳಿಗೆ ಭೇಟಿ ನೀಡಲು ಸಮುದ್ರದ ಮೂಲಕವೇ ತೆರಳಬೇಕಿತ್ತು. ಆದರೆ ಗಾಜಿನ ಸೇತುವೆ ಪ್ರವಾಸಿಗರಿಗೆ ಎರಡೂ ಸ್ಮಾರಕ ತಲುಪಲು ಹೊಸ ಮಾರ್ಗ ಕಲ್ಪಿಸಿದೆ. ಜೊತೆಗೆ ಪ್ರವಾಸದ ಹೊಸ ಅನುಭೂತಿ ನೀಡಲಿದೆ.

    Continue Reading

    LATEST NEWS

    ಮಂಗಳೂರು: ಹೊಸ ವರ್ಷಾಚರಣೆ- ವಾಹನ ಸವಾರರಿಗೆ ಕೇಕ್ ವಿತರಿಸಿದ ಪೊಲೀಸ್ ಸಿಬ್ಬಂದಿ

    Published

    on

    ಮಂಗಳೂರು: ಹೊಸ ವರ್ಷ ಹಿನ್ನೆಲೆಯಲ್ಲಿ ಹಲವೆಡೆ ಸಂಭ್ರಮಾಚರಣೆ ನಡೆಸಲಾಗಿದೆ. ಅದರಂತೆ ಮಂಗಳೂರು ನಗರದಲ್ಲಿ ಪೊಲೀಸ್ ಸಿಬ್ಬಂದಿ ವಾಹನ ಸವಾರರಿಗೆ ಕೇಕ್ ನೀಡುವ ಮೂಲಕ ಸಂಭ್ರಮಾಚರಣೆ ನಡೆಸಿದರು.

    ಮಂಗಳೂರಿನ ಪ್ರಮುಖ ರಸ್ತೆಗಳ ಚೆಕ್ ಪೋಸ್ಟ್ ಗಳಲ್ಲಿ ಪೊಲೀಸ್ ಸಿಬ್ಬಂದಿ ಕೇಕ್ ಕತ್ತರಿಸಿ ನೂತನ ವರ್ಷವನ್ನು ಸ್ವಾಗತಿಸಿದ್ದು, ಬಳಿಕ ವಾಹನ ಸವಾರರಿಗೆ ಕೇಕ್ ನೀಡುವ ಮೂಲಕ ಸಂಭ್ರಮಾಚರಣೆ ನಡೆಸಿದರು.

    Continue Reading

    BELTHANGADY

    ಹೊಸ ವರ್ಷಾಚರಣೆ ಹಿನ್ನೆಲೆ: ಧರ್ಮಸ್ಥಳದಲ್ಲಿ ಭಕ್ತ ಸಾಗರ

    Published

    on

    ಮಂಗಳೂರು: ಹೊಸ ವರ್ಷಾರಂಭ ಸಂದರ್ಭದಲ್ಲಿ ಕರ್ನಾಟಕ ಕರಾವಳಿಯ ದೇವಸ್ಥಾನಗಳಿಗೆ ಭಕ್ತರ ದಂಡೇ ಹರಿದು ಬಂದಿದೆ. ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನ ಹಾಗೂ ಧರ್ಮಸ್ಥಳ ಮಂಜುನಾಥೇಶ್ವರ ದೇಗುಲಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಭಕ್ತರು ದೇಗುಲಗಳಿಗೆ ಆಗಮಿಸಿ ದೇವರ ದರ್ಶನ ಪಡೆದು ಹೊಸ ವರ್ಷದ ದಿನಾರಂಭ ಮಾಡುತ್ತಿದ್ದಾರೆ.

    ಕದ್ರಿ ಮಂಜುನಾಥ ದೇಗುಲಕ್ಕೆ ಬೆಳ್ಳಗ್ಗಿನಿಂದಲೂ ನೂರಾರು ಭಕ್ತರು ಆಗಮಿಸುತ್ತಿದ್ದಾರೆ. ದೇವಳದ ಕೆರೆಯಲ್ಲಿ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ. ದೇವಳದ ಮುಂದೆ ಕಲಶ ಸ್ನಾನ ಮಾಡುತ್ತಿದ್ದಾರೆ. ಕದ್ರಿ ದೇವಳದಲ್ಲಿ ಕಲಶ ಸ್ನಾನ ಸೇವೆ ಸಾಕಷ್ಟು ಪ್ರಸಿದ್ಧಿ ಪಡೆದಿದೆ.

    ಹೊಸ ವರ್ಷಾರಂಭದ ಸಂದರ್ಭದಲ್ಲಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ಭಕ್ತ ಸಾಗರವೇ ನೆರೆದಿದೆ. ಲಕ್ಷಾಂತರ ಸಂಖ್ಯೆಯಲ್ಲಿ ಆಗಮಿಸಿದ ಭಕ್ತರ ದಂಡು ಮಂಜುನಾಥ ಸ್ವಾಮಿಯ ದರ್ಶನಕ್ಕೆ ಮುಗಿಬಿದ್ದಿದೆ. ಬೆಂಗಳೂರು ಹಾಗೂ ಉತ್ತರ ಕರ್ನಾಟಕ ಭಾಗದಿಂದ ಭಾರೀ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದಾರೆ. ಸದ್ಯ ದೇವಸ್ಥಾನದ ಕ್ಯೂ ಸೆಂಟರ್ನಲ್ಲಿ ಭಾರೀ ಜನಜಂಗುಳಿ ಏರ್ಪಟ್ಟಿದೆ.

    ದೇವಸ್ಥಾನದ ಮುಂಭಾಗದಲ್ಲಿಯೂ ಭಾರೀ ಸಂಖ್ಯೆಯಲ್ಲಿ ಭಕ್ತ ಸಮೂಹ ಸೇರಿದ್ದು, ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆಯುತ್ತಿದ್ದಾರೆ.

    Continue Reading

    LATEST NEWS

    Trending