ಮಂಗಳೂರು: ಸ್ವತಂತ್ರ ಭಾರತದ ಮೊತ್ತ ಮೊದಲ ಭಯೋತ್ಪಾದನಾ ಕೃತ್ಯವಾದ ಗಾಂಧೀಜಿಯನ್ನು ಹತ್ಯೆಗೈದ ದಿನದ ಪ್ರಯುಕ್ತ ದೇಶದಾದ್ಯಂತ ಎಸ್‌ಡಿಪಿಐ ವತಿಯಿಂದ `ಗಾಂಧಿಯ ಹಂತಕರು ದೇಶದ ಹಂತಕರು” ಎಂಬ ಘೋಷಣೆ ಯೊಂದಿಗೆ ರಾಷ್ಟ್ರ ವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು ಇದರ ಅಂಗವಾಗಿ ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಮಂಗಳೂರಿನ ಪುರಭವನದ ಮುಂಬಾಗದಲ್ಲಿರುವ ಗಾಂಧಿ ಪ್ರತಿಮೆಯ ಬಳಿ ಪ್ರತಿಭಟನೆ ನಡೆಯಿತು.
ಪ್ರತಿಭಟನಾ ಸಭೆಯ ನೇತೃತ್ವವನ್ನು ವಹಿಸಿದ ಜಿಲ್ಲಾಧ್ಯಕ್ಷರಾದ ಅಥಾವುಲ್ಲಾ ಜೋಕಟ್ಟೆ ಮಾತನಾಡಿ ಗಾಂಧಿಯ ಹತ್ಯೆಯನ್ನು ನಡೆಸಿದ ನಾಥೂರಾಮ್ ಗೋಡ್ಸೆಯ ಸಂತತಿಗಳ ಘೋರ ಕೃತ್ಯವನ್ನು ಖಂಡಿಸಿದರು ಹಾಗೂ ಇಂತಹ ಕೃತ್ಯಗಳು ಮತ್ತೆ ದೇಶದಾಧ್ಯಂತ ಸಂಘಪರಿವಾರದಿಂದ ಮರುಕಳಿಸುತ್ತಿದೆ ಇದರ ವಿರುಧ್ಧ ಎಲ್ಲರೂ ಒಟ್ಟಾಗಿ ಹೋರಾಟ ನಡೆಸಬೇಕಾದ ಅನಿವಾರ್ಯತೆ ಇದೆ ಎಂದರು.
ಪ್ರತಿಭಟನಾ ಸಭೆಯನ್ನುದ್ದೇಶಿಸಿ ಎಸ್‌ಡಿಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಜಲೀಲ್ ಕೆ. ಮಾತನಾಡಿ ಮಹಾತ್ಮ ಗಾಂಧೀಜಿಯವರ ಹತ್ಯೆ ಸ್ವಾತಂತ್ರ ಭಾರತದ ಪ್ರಥಮ ಭಯೋತ್ಪಾದಕ ಕೃತ್ಯವಾಗಿದೆ. ನಾಥೂರಾಮ್ ಗೋಡ್ಸೆ ಎಂಬ ಭಯೋತ್ಪಾದಕ ನಮಸ್ಕರಿಸುವ ರೀತಿಯಲ್ಲಿ ನಾಟಕವಾಡಿ ಅಹಿಂಸೆಯ ಪ್ರತಿಪಾದಕ ಸ್ವಾತಂತ್ರಕ್ಕೆ ಬೇಕಾಗಿ ನೇತೃತ್ವವನ್ನು ಕೊಟ್ಟ ರಾಷ್ಟ್ರಪಿತ ಗಾಂಧೀಜಿಯನ್ನು ಹತ್ಯೆಗೈದನು. ಅದೇ ಸಂತತಿಗಳು ಇಂದು ದೇಶದ ಆಡಳಿತವನ್ನು ಹಿಡಿದು ದೇಶವನ್ನೇ ದಿವಾಳಿ ಮಾಡುತ್ತಿದೆ ಎಂದು ಹೇಳಿದರು.
ನಂತರ ಮಾತನಾಡಿದ ಎಸ್‌ಡಿಪಿಐ ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ ಗಾಂಧೀಜಿಯ ಹತ್ಯೆಯನ್ನು ನಡೆಸಿದ ದೇಶದ್ರೋಹಿ ಭಯೋತ್ಪಾದಕ ನಾಥೂರಾಮ್ ಗೋಡ್ಸೆ ಮತ್ತು ಅವರ ಸಂತತಿಗಳ ಈ ಘೋರ ಕೃತ್ಯವನ್ನು ಮರೆಯಲು ಖಂಡಿತ ಸಾಧ್ಯವಿಲ್ಲ. ಇದೀಗ ದೇಶವನ್ನೇ ಎನ್.ಆರ್.ಸಿ, ಸಿ.ಎ.ಎ ಮತ್ತು ಎನ್.ಪಿ.ಆರ್ ಎಂಬ ಕರಾಳ ಖಾಯಿದೆಯನ್ನು ಜಾರಿಗೆ ತಂದು ದೇಶದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಜ್ಯಾತ್ಯಾತೀತ ಮೌಲ್ಯವನ್ನು ಕೊಲ್ಲುವಂತಹ ಷಡ್ಯಂತರಕ್ಕೆ ಕೈ ಹಾಕಿದ್ದಾರೆ ಎಂದರು.
ಪ್ರತಿಭಟನಾ ಸಭೆಯಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರಾಧ್ಯಕ್ಷ ಸುಹೈಲ್ ಫಳ್ನೀರ್, ಮ.ನ.ಪಾ ಕಾರ್ಪರೇಟರ್ ಮುನೀಬ್ ಬೆಂಗರೆ, ಝಾಹಿದ್ ಮಲಾರ್, ಅಬ್ಬಾಸ್ ಕೀನ್ಯ, ಆಶಿಫ್ ಕೋಟೆಬಾಗಿಲು, ಅಝರ್ ಚೊಕ್ಕಬೆಟ್ಟು,ಮೊಯಿದ್ದೀನ್ ಹಳೆಯಂಗಡಿ ಮೊದಲಾದವರು ಉಪಸ್ಥಿತರಿದ್ದರು.
ಮಂಗಳೂರು/ವಾಷಿಂಗ್ಟನ್ : ಸುಮಾರು 3,000 ಜನರನ್ನು ಬಲಿಪಡೆದ 2001ರಲ್ಲಿ ನಡೆದ 9/11 ಭಯೋತ್ಪಾದಕ ದಾಳಿಯ ಆರೋಪಿಗಳ ಜತೆ ಮಾಡಿಕೊಂಡಿರುವ ವಿಚಾರಣಾಪೂರ್ವ ಒಪ್ಪಂದವನ್ನು ರದ್ದುಗೊಳಿಸುವಂತೆ ಸರ್ಕಾರವು ಫೆಡರಲ್ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದೆ.
ದಾಳಿಯ ಪ್ರಮುಖ ಸಂಚುಕೋರ ಖಾಲಿದ್ ಶೈಖ್ ಮೊಹಮ್ಮದ್ ಮತ್ತು ಇತರ ಇಬ್ಬರು ಆರೋಪಿಗಳು ಹಾಗೂ ಪ್ರಾಸಿಕ್ಯೂಟರ್ ಗಳ ನಡುವೆ ಈಚೆಗೆ ವಿಚಾರಣಾಪೂರ್ವ ಒಪ್ಪಂದ ಏರ್ಪಟ್ಟಿತ್ತು. ಇದರಿಂದ ಶೈಖ್ ಹಾಗೂ ಇತರರಿಗೆ ಗಲ್ಲು ಶಿಕ್ಷೆಯಿಂದ ಪಾರಾಗುವ ಅವಕಾಶ ದೊರೆತಿದೆ.
‘ಶೈಖ್ ಹಾಗೂ ಇತರ ಇಬ್ಬರು ಸಹ ಆರೋಪಿಗಳ ತಪ್ಪೊಪ್ಪಿಗೆ ಸ್ವೀಕರಿಸಿದರೆ, ಅವರನ್ನು ಬಹಿರಂಗವಾಗಿ ವಿಚಾರಣೆಗೆ ಒಳಪಡಿಸುವ ಅವಕಾಶವನ್ನು ಸರ್ಕಾರ ಕಳೆದುಕೊಳ್ಳಲಿದೆ. ಸಾವಿರಾರು ಮಂದಿಯ ಸಾವಿಗೆ ಕಾರಣವಾದ ಮತ್ತು ಇಡೀ ಜಗತ್ತನ್ನು ಬೆಚ್ಚಿ ಬೀಳಿಸಿದ ಘೋರ ಕೃತ್ಯದ ಆರೋಪ ಹೊತ್ತಿರುವ ಮೂವರಿಗೆ ಗಲ್ಲು ಶಿಕ್ಷೆ ವಿಧಿಸುವ ಅವಕಾಶವೂ ತಪ್ಪಲಿದೆ’ ಎಂದು ಕೊಲಂಬಿಯಾ ಜಿಲ್ಲಾ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ನ್ಯಾಯಾಂಗ ಇಲಾಖೆಯು ಮಂಗಳವಾರ ವಾದಿಸಿದೆ.
ಈ ಮೂವರು ಆರೋಪಿಗಳು ಕಳೆದ ಎರಡು ದಶಕಗಳಿಂದ ಕ್ಯೂಬಾದ ಗ್ವಾಂಟನಾಮೊದಲ್ಲಿರುವ ಅಮೆರಿಕ ಸೇನೆಯ ಜೈಲಿನಲ್ಲಿದ್ದಾರೆ. ಈಗಾಗಲೇ ನಿಗದಿಯಾಗಿರುವಂತೆ ಖಾಲಿದ್ ಶೈಖ್ ತಪ್ಪೊಪ್ಪಿಗೆ ಹೇಳಿಕೆಯನ್ನು ಶುಕ್ರವಾರ ನೀಡಲಿದ್ದಾನೆ. ಇದರ ನಡುವೆಯೇ ಸರ್ಕಾರವು ಮೇಲ್ಮನವಿ ನ್ಯಾಯಾಲಯದ ಮೊರೆ ಹೋಗಿದೆ.
2001ರ ಸೆಪ್ಟೆಂಬರ್ 11ರಂದು ಭಯೋತ್ಪಾದಕರಿಂದ ಅಪಹರಿಸಲಾದ ಎರಡು ಪ್ರಯಾಣಿಕ ವಿಮಾನಗಳು ನ್ಯೂಯಾರ್ಕ್ ನಗರದ ವಿಶ್ವ ವ್ಯಾಪಾರ ಕೇಂದ್ರದ ಅವಳಿ ಕಟ್ಟಡಗಳಿಗೆ ಡಿಕ್ಕಿ ಹೊಡೆದಿದ್ದವು. ಮೂರನೇ ವಿಮಾನವು ವಾಷಿಂಗ್ಟನ್ ನಲ್ಲಿರುವ ಪೆಂಟಗನ್ ಗೆ ಅಪ್ಪಳಿಸಿತ್ತು. ನಾಲ್ಕನೇ ವಿಮಾನದಲ್ಲಿದ್ದ ಪ್ರಯಾಣಿಕರು ಅಪಹರಣಕಾರರೊಂದಿಗೆ ಹೋರಾಡಿದ್ದರಿಂದ ಅದು ಪೆನ್ಸಿಲ್ವೇನಿಯಾದಲ್ಲಿ ಪತನಗೊಂಡಿತ್ತು.
ಬೆಂಗಳೂರು: ಕನ್ನಡದ ಖ್ಯಾತ ನಿರೂಪಕಿ ದಿವಂಗತ ಅಪರ್ಣಾ ಸಹೋದರ ಚೈತನ್ಯ ಇಂದು ನಿಧನರಾಗಿದ್ದಾರೆ ಎಂದು ಅಪರ್ಣಾ ಪತಿ ನಾಗರಾಜ್ ರಾಮಸ್ವಾಮಿ ವಸ್ತಾರೆ ತಿಳಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ಅಪರ್ಣೆಯ ಅಣ್ಣ ಚೈತನ್ಯ ನಿನ್ನೆ ನಡುರಾತ್ರಿಯಲ್ಲಿ ಈ ಇಹತೊರೆದು ಸರಿದಿದ್ದಾರೆ. ತೀವ್ರತಮ ವಿಷಾದ. ಕೆಲವು ಹೂವುಗಳು ಅರಳದೆ ಮೊಗ್ಗಾಗಿಯೇ ಉದುರಿಹೋಗುತ್ತವೆ. ಇನ್ನು ಕೆಲವು ಅರಳಿ ಹಣ್ಣಾಗದೆ ಕಮರುತ್ತವೆ. ಇನ್ನೂ ಕೆಲವನ್ನು ಒತ್ತಾಯದಿಂದ ಕೊಯ್ದು ಕತ್ತರಿಸಲಾಗುತ್ತದೆ. ಯಾರು ಯಾವುದೆಂದು ನಾನು ಈವರೆಗೂ ಅರಿತಿಲ್ಲ. ಅರಿಯುವ ಜಿಜ್ಞಾಸೆಯೂ ಈ ಹೊತ್ತಿನದಲ್ಲ. ದಿನದಿಂದ ದಿನಕ್ಕೂ ನಾನು ಹೆಚ್ಚು ಹೆಚ್ಚು ಒಬ್ಬನಾಗುತ್ತಿರುವುದು ಯಾವೊತ್ತಿನ ಸತ್ಯ. ಬಹುಶಃ ಎಲ್ಲರದೂನು ಎಂದು ಹೇಳಿದ್ದಾರೆ.
ಮಂಗಳೂರು/ನವದೆಹಲಿ : ತಿರುಪತಿಯಲ್ಲಿ ದುರಂ*ತವೊಂದು ಸಂಭವಿಸಿದೆ. ವೈಕುಂಠದ್ವಾರ ಸರ್ವದರ್ಶನದ ಟಿಕೆಟ್ ವಿತರಣಾ ಕೇಂದ್ರಗಳಲ್ಲಿ ಉಂಟಾದ ನೂಕುನುಗ್ಗಲಿನಿಂದಾಗಿ 7 ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂ*ತಾಪ ಸೂಚಿಸಿದ್ದಾರೆ.
ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಆಂಧ್ರಪ್ರದೇಶದ ತಿರುಪತಿಯಲ್ಲಿ ಸಂಭವಿಸಿದ ಕಾ*ಲ್ತುಳಿತ ಘಟನೆಯಿಂದ ನೋ*ವಾಗಿದೆ. ಘಟನೆಯಲ್ಲಿ ಗಾ*ಯಗೊಂಡವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರ ಪ್ರದೇಶ ಸರ್ಕಾರ ಎಲ್ಲ ರೀತಿಯ ನೆರವು ನೀಡುತ್ತಿದೆ ಎಂದು ಹೇಳಿದ್ದಾರೆ.
ರಾಷ್ಟ್ರಪತಿ ಸಂತಾಪ :
ಘಟನೆಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ದು*ರ್ಘಟನೆಯಲ್ಲಿ ಮೃ*ತಪಟ್ಟವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ದೇವರು ಕುಟುಂಬಸ್ಥರಿಗೆ ತಮ್ಮ ಆಪ್ತರನ್ನು ಕಳೆದುಕೊಂಡ ದು:ಖವನ್ನು ಭರಿಸುವ ಶಕ್ತಿ ಕೊಡಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಗುರುವಾರ(ಜ.9) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್ ನೀಡಲು ಟಿಟಿಡಿ ನಿರ್ಧರಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಬುಧವಾರ ಸಂಜೆಯೇ ಭಾರಿ ಜನರು ಜಮಾಯಿಸಿದ್ದರು.
ಈ ನಡುವೆ ಟಿಕೆಟ್ ಕೌಂಟರ್ ಸಿಬ್ಬಂದಿಯೊಬ್ಬರು ಅಸ್ವಸ್ಥಗೊಂಡ ಕಾರಣ ಅವರನ್ನು ಹೊರಕ್ಕೆ ಕರೆದೊಯ್ಯಲು ಗೇಟ್ ತೆರೆದಾಗ ಹೊರಗಿದ್ದವರೆಲ್ಲರೂ ಗುಂಪು ಗುಂಪಾಗಿಒಳನುಗ್ಗುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ಕೆಲವರು ಕೆಳಗೆ ಬಿದ್ದಿದ್ದು ಕಾಲ್ತುಳಿತದಿಂದ ಅಸ್ವಸ್ಥಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಯಿತು. ಆದರೆ, ಅವರಲ್ಲಿ 7 ಭಕ್ತರು ಸಾವನ್ನಪ್ಪಿದ್ದು, ಉಳಿದವರಿಗೆ ಚಿಕಿತ್ಸೆ ಮುಂದುವರಿದಿದೆ.