ನಾದಿನಿಯ ಮುಖಕ್ಕೆ ಬಾವನೇ ಆ್ಯಸಿಡ್ ಎರಚಿದ..! ಸ್ಥಿತಿ ಗಂಭೀರ..!
ನಾದಿನಿಯ ಮುಖಕ್ಕೆ ಬಾವನೇ ಆ್ಯಸಿಡ್ ಎರಚಿದ..!
ಪುತ್ತೂರು : ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಕಡಬ ಪೋಲೀಸರು ವಶಕ್ಕೆ ಪಡೆದಿದ್ದಾರೆ.
ಆ್ಯಸಿಡ್ ಎರಚಿದ ಆರೋಪಿಯನ್ನು ಕೊಂಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ.
ಇವರ ವೃತ್ತಿಯಲ್ಲಿ ಎಲ್ಐಸಿ ಏಜೆಂಟ್ ಆಗಿದ್ದಾನೆ. ಈತ ತನ್ನ ತಮ್ಮನ ಪತ್ನಿ ವಿಧವೆ ಮಹಿಳೆ ಸ್ವಪ್ನಾ(35) ಎಂಬವರ ಮುಖಕ್ಕೆ ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಎಸೆದಿದ್ದಾರೆ. ಈ ಸಂದರ್ಭದಲ್ಲಿ ಮಹಿಳೆಯ ಹತ್ತಿರವಿದ್ದ ತನ್ನ ಹೆಣ್ಣು ಮಗಳಿಗೂ ಆ್ಯಸಿಡ್ ತಾಗಿದ್ದು, ತಾಯಿ ಹಾಗೂ ಮಗು ಇಬ್ಬರನ್ನೂ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ವಪ್ನಾ ಅವರ ಪತಿ ರವಿ ಅವರು ಈಗಾಗಲೇ ಮೃತಪಟ್ಟಿದ್ದು , ಪ್ರತ್ಯೇಕವಾಗಿ ತನ್ನ ಮೂರು ಹೆಣ್ಣು ಮಕ್ಕಳೊಂದಿಗೆ ವಾಸವಾಗಿದ್ದಾರೆ. ಜಯಾನಂದ ಹಾಗೂ ಸ್ವಪ್ನಾ ಅವರ ಮಧ್ಯೆಹಣಕಾಸಿನ ವಿಚಾರದಲ್ಲಿ ಮನಸ್ತಾಪವಿದ್ದು, ಅದು ಭೂವಿವಾದಕ್ಕೆ ತಿರುಗಿ ಇವರ ಮಧ್ಯೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಆದರೆ ಮೂಲಗಳ ಪ್ರಕಾರ ಗಂಡ ತೀರಿ ಹೋದ ಸ್ವಪ್ನಾ ಅವರ ಮೇಲೆ ಜಯಾನಂದ ಕಣ್ಣು ಹಾಕಿದ್ದು ಕೆಟ್ಟ ದೃಷ್ಟಿಯಿಂದ ನೋಡುತ್ತಿದ್ದ. ಇದೇ ವಿಚಾರವಾಗಿ ಇಬ್ಬರ ನಡುವೆ ಮನಸ್ಥಾಪ ಜೋರಾಗಿ ಈ ಹಿಂದೆಯೂ ಜಯಾನಂದ ಸ್ವಪ್ನಳನ್ನು ಬೆದರಿಸಿದ್ದ . ಈ ಹಿನ್ನೆಲೆಯಲ್ಲಿ ಸ್ವಪ್ನಾ ಜಯಾನಂದನ ಮೇಲೆ ಪುತ್ತೂರು ಮಹಿಳಾ ಪೊಲೀಸ್ ಠಾಣೆ ಹಾಗೂ ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದರು ಆದರೆ ಜಯಾನಂದನ ಮೇಲೆ ಕ್ರಮ ಕೈಗೊಳ್ಳಬೇಕಾಗಿದ್ದ ಪೊಲೀಸರು ಸ್ವಪ್ನ ಅವರಿಗೇ ಬೆದರಿಸಿ ವಾಪಸ್ ಕಳುಹಿಸಿದ್ದರು ಎನ್ನಲಾಗಿದೆ. ಅಂದು ಪೊಲಿಸರು ಕ್ರಮ ಕೈಗೊಂಡಿದ್ದರೆ ಈ ವಿಷಯ ಇಷ್ಟು ಮುಂದುವರೆದು ಈ ಘನಘೋರ ದುರಂತಕ್ಕೆ ಕಾರಣವಾಗುತ್ತಿರಲಿಲ್ಲ ಎಂದು ಹೇಳಲಾಗಿದೆ.
ವಿಡಿಯೋಗಾಗಿ..
FILM
ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ
ಉಡುಪಿ: ಇಂದು ಬೆಳಂಬೆಳಗ್ಗೆ ರಾಜಕೀಯ ನಾಯಕರು, ಜನಸಾಮಾನ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸಿದರೆ ಉಡುಪಿಯ ಮತಗಟ್ಟೆಯಲ್ಲಿ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತದಾನ ಮಾಡಿದ್ದಾರೆ.
ಕುಕ್ಕಿಕಟ್ಟೆ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತಗಟ್ಟೆ ಸಂಖ್ಯೆ 197 ಕ್ಕೆ ಆಗಮಿಸಿ ಮತ ಚಲಾಯಿಸಿದರು. ರಕ್ಷಿತ್ ಶೆಟ್ಟಿ ಮನೆಯ ಮುಂಭಾಗದಲ್ಲೇ ಇರುವ ಮತಗಟ್ಟೆಗೆ ಕುಟುಂಬ ಸಹಿತರಾಗಿ ಬಂದು ಮತದಾನ ಮಾಡಿದರು. ರಕ್ಷಿತ್ ಶೆಟ್ಟಿ ಈ ಸಂದರ್ಭದಲ್ಲಿ ಸೆಲೆಬ್ರೆಟಿಯನ್ನು ಕಂಡ ಇತರ ಮತದಾರರು ಹರ್ಷಚಿತ್ತರಾಗಿ ಸೆಲ್ಫೆ ಕ್ಲಿಕಿಸಲು ಮುಂದಾದ ಘಟನೆ ನಡೆಯಿತು.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
LATEST NEWS
ಅಯೋಧ್ಯೆಯ ಅಂಗಳದಲ್ಲಿ ಶೂಟಿಂಗ್ ಮಾಡಿದ ಮೊಟ್ಟ ಮೊದಲ ಕನ್ನಡ ಸೀರಿಯಲ್ ಇದು?
ಮಹಿಳೆಯರಿಗೆ ಸೀರಿಯಲ್ ನೋಡುವುದಂದರೆ ಒಂತಾರ ಹುಚ್ಚು. ಮನೆಯಲ್ಲೇ ಇರುವ ಮಹಿಳೆಯರು ಕೆಲವೊಮ್ಮೆ ಬೆಳಗ್ಗೆಯಿಂದ ಸಂಜೆಯವರೆಗೆ ಟಿವಿಯಲ್ಲಿ ಸೀರಿಯಲ್ ನೋಡುತ್ತಾ ಇರುತ್ತಾರೆ. ಸೀರಿಯಲ್ ನೋಡೊದು ಮಾತ್ರ ಅಲ್ಲ ಅದರ ಬಗ್ಗೆ ಸಂವಾದ ಕೂಡ ಮನೆಯವರಲ್ಲಿ ಮಾಡುತ್ತಾ ಇರುತ್ತಾರೆ.
ಈ ನಡುವೆ ಅಯೋಧ್ಯೆ ರಾಮಮಂದಿರ ನಿರ್ಮಾಣದ ನಂತರ ದೇಶದ ಜನರು ತುಂಬಾ ಸಂತೋಷದಲ್ಲಿದ್ದಾರೆ. ಅದೆಷ್ಟೋ ಜನ ಹಿಂದೂಗಳ ಕನಸು ನನಸಾದ ಕ್ಷಣ ಎಂದು ಹೇಳಬಹುದು. ಒಮ್ಮೆಯಾದ್ರೂ ಅಯೋಧ್ಯೆಗೆ ಹೋಗಿಬರಬೇಕು ಅಂತಾ ಪ್ಲಾನ್ ಅಂತೂ ಮಾಡ್ತಾ ಇರೋದು ಕಂಡಿತ. ಕೆಲವರು ಹೋಗಿ ಬಂದಿದ್ದಾರೆ ಕೂಡ ಆದರೆ ಇನ್ನು ಕೆಲವರು ಇನ್ನು ಹೋಗಬೇಕು. ಇದುವರೆಗೆ ಅಯೋಧ್ಯೆ ರಾಮಮಂದಿರದಲ್ಲಿ ಯಾವೂದೇ ರೀತಿದ ಫಿಲ್ಮ್ ಶೂಟಿಂಗ್, ಸೀರಿಯಲ್, ಕಿರುಚಿತ್ರ ಯಾವೂದು ಶೂಟಿಂಗ್ ಆಗಲಿಲ್ಲ. ಆದರೇ ಇದೇ ಮೊದಲ ಬಾರಿಗೇ ಕನ್ನಡ ಸೀರಿಯಲ್ ಇಂಡಸ್ಟ್ರಿಯಲ್ಲಿ ಕನ್ಯಾದಾನ ಸೀರಿಯಲ್ ಹೊಸ ದಾಖಲೆ ಬರೆದಿದೆ.
ಉದಯ ಟಿವಿಯಲ್ಲಿ ಪ್ರಸಾರವಾಗೋ ಕನ್ಯಾದಾನ ಧಾರಾವಾಹಿ ಈಗ ಹೊಸ ದಾಖಲೆ ಬರೆದಿದ್ದಾರೆ. ಕನ್ನಡ ಟೆಲಿವಿಷನ್ ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ಅಯೋಧ್ಯೆಯಲ್ಲಿ ಚಿತ್ರೀಕರಣಗೊಂಡ ಮೊಟ್ಟ ಮೊದಲ ಸೀರಿಯಲ್ ಎಂಬ ಹೆಗ್ಗಳಿಕೆಗೆ ಕನ್ಯಾದಾನ ಧಾರಾವಾಹಿ ಪಾತ್ರವಾಗಿದೆ.
ಜನವರಿ 22ರಂದು ಅಂದ್ರೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಇಲ್ಲಿಯವೆರೆಗೂ ಯಾವುದೇ ಸಿನಿಮಾವಾಗ್ಲಿ, ಅಥವಾ ಸೀರಿಯಲ್ ಆಗ್ಲಿ ಶೂಟ್ ಮಾಡಿರಲಿಲ್ಲ. ಆದ್ರೆ, ಕನ್ಯಾದಾನ ಧಾರವಾಹಿ ತಂಡ ಫಸ್ಟ್ಟೈಮ್ ಅಯೋಧ್ಯೆಗೆ ಹೋಗಿ ಚಿತ್ರೀಕರಣ ಮಾಡಿದೆ.
ಈ ಸೀರಿಯಲ್ನಲ್ಲಿ ಬಹುತೇಕ ಪಾತ್ರಗಳು ಒಂದಲ್ಲ ಒಂದು ಸಮಸ್ಯೆ ಎದುರಿಸ್ತಿವೆ. ಹಾಗಾಗಿ ರಾಮನ ದರ್ಶನ ಪಡೆದು ಆ ಕಷ್ಟಗಳಿಂದ ಹೊರಬರಬೇಕು ಎಂದು ನಿರ್ಧರಿಸಿ, ರಾಮಮಂದಿರಕ್ಕೆ ಹೋಗಿ ಬಾಲರಾಮನ ದರ್ಶನ ಪಡೆದಿದ್ದಾರೆ. ಅಯೋಧ್ಯೆಯಲ್ಲಿ ಶೂಟಿಂಗ್ ಮಾಡಿರೋ ಬಗ್ಗೆ ಸೀರಿಯಲ್ ತಂಡ ಸಂತಸ ಹಂಚಿಕೊಂಡಿದೆ.