Connect with us

DAKSHINA KANNADA

ಪುತ್ತೂರು ಬಸ್ ನಿಲ್ದಾಣದಲ್ಲಿ ಯುವಕರಿಗೆ ಹಲ್ಲೆ ಪ್ರಕರಣ : ಕ್ಷಿಪ್ರ ಕಾರ್ಯಾಚರಣೆಯಲ್ಲಿ ಇಬ್ಬರು ವಶಕ್ಕೆ..

Published

on

ಪುತ್ತೂರು: ಸ್ನ್ಯಾಪ್ ಚ್ಯಾಟ್ ಮೂಲಕ ಪರಿಚಯವಾದ ಪುತ್ತೂರಿನ ಯುವತಿಯ ಭೇಟಿಯಾಗಲು ಪುತ್ತೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ ರಾಯಚೂರಿನ ಯುವಕ ಮತ್ತು ಆತನ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ತಂಡವೊಂದರಲ್ಲಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕುರಿಯ ನಿವಾಸಿ ಫಾರೂಕ್ (32) ,ಬಲ್ನಾಡು ನಿವಾಸಿ ಅಬ್ದುಲ್ ಮಜೀದ್( 21) ಬಂಧಿತ ಆರೋಪಿಗಳು. ಪುತ್ತೂರು ನಗರ ಪೋಲೀಸ್ ಉಪ ನಿರೀಕ್ಷಕ ಸುತೇಶ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಪುತ್ತೂರು ಸರ್ಕಾರಿ ಬಸ್ ನಿಲ್ದಾಣದಲ್ಲಿ ಈ ಘಟನೆ ನಡೆದಿತ್ತು. ಶೇರ್ ಚಾಟ್ ನಲ್ಲಿ ಪರಿಚಯಗೊಂಡಿದ್ದ ಯುವತಿಯನ್ನು ಭೇಟಿಯಾಗಲು ರಾಯಚೂರು ಜಿಲ್ಲೆಯ ಮಾನ್ವಿಯಿಂದ ಯುವಕರು ಬಂದಿದ್ದರು.

ಆರು ಜನರಿದ್ದ ತಂಡದಿಂದ ಯುವಕರ ಮೇಲೆ ಹಲ್ಲೆ ನಡೆದಿದ್ದು, ಹಲ್ಲೆಯಿಂದ ಹನುಮಂತರಾಯ ಮತ್ತು ಚೌಡಯ್ಯ ಎಂಬವರು ಗಾಯಗೊಂಡಿದ್ದರು. ಪುತ್ತೂರು ನಗರ ಪೋಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು.

DAKSHINA KANNADA

ಹೊತ್ತಿ ಉರಿದು ಭಸ್ಮ*ವಾದ ಸ್ವೀಟ್ ಕಾರ್ನ್ ಸ್ಟಾಲ್‌..!! ಓಡಿ ಜೀವ ಉಳಿಸಿಕೊಂಡ ಸ್ಟಾಲ್ ಮಾಲೀಕ, ಗ್ರಾಹಕರು

Published

on

ಉಳ್ಳಾಲ: ರಸ್ತೆಯ ಬದಿಯಲ್ಲಿ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಸ್ಟಾಲ್ ಒಂದರಲ್ಲಿ ಆಕಸ್ಮಿ*ಕ ಬೆಂಕಿಯಿಂದಾಗಿ ಸ್ಟಾಲ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಉಳ್ಳಾಲದ ದೇರಳಕಟ್ಟೆಯಲ್ಲಿ ನಡೆದಿದೆ.

sweet corn burn

ಗ್ಯಾಸ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿದೆ. ರಸ್ತೆಯ ಬದಿಯಲ್ಲೇ ಇರಿಸಲಾಗಿದ್ದ ಸ್ವೀಟ್ ಕಾರ್ನ್ ಅಂಗಡಿ ಮಾಲೀಕ ಕಾರ್ನ್ ತಯಾರಿಸುವಾಗ ಈ ಅವಘಡ ಸಂಭವಿಸಿದೆ. ತಕ್ಷಣ ಅಂಗಡಿ ಮಾಲೀಕ ಹಾಗೂ ಸ್ವೀಟ್ ಕಾರ್ನ ತಿನ್ನಲು ಬಂದಿದ್ದ ಗ್ರಾಹಕರು ಓಡಿ ತಪ್ಪಿಸಿಕೊಂಡಿದ್ದಾರೆ. ಸ್ಥಳೀಯರು ತಕ್ಷಣ ಮರಳು ಹಾಗೂ ನೀರನ್ನ ಹಾಕಿ ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಆದ್ರೆ ಅಷ್ಟರಲ್ಲಾಗಲೇ ಸ್ಟಾಲ್ ಉರಿದು ಭಸ್ಮವಾಗಿ ಹೋಗಿದೆ.

Read More..; ಬೆಂಕಿ ಹಚ್ಚಿ ಯುವತಿಯ ಬರ್ಬ*ರ ಹ*ತ್ಯೆ..!! ಕತ್ತು ಕೊಯ್ದು ಸು*ಟ್ಟು ಹಾಕಿರುವ ಶಂಕೆ

sweet corn burn 2

Continue Reading

DAKSHINA KANNADA

ಮಂಡ್ಯದಲ್ಲಿ ಅವಳಿ ಮಕ್ಕಳ ಸಾ*ವಿನ ಪ್ರಕರಣಕ್ಕೆ ಟ್ವಿಸ್ಟ್..! ತಾಯಿಯಿಂದ ಕೃತ್ಯ..!

Published

on

ಮಂಗಳೂರು,(ಮಂಡ್ಯ): ಮಂಡ್ಯದಲ್ಲಿ ಐಸ್‌ ಕ್ರೀಮ್‌ ತಿಂದು ಅವಳಿ ಮಕ್ಕಳು ಸಾವನ್ನಪ್ಪಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌ ಸಿಕ್ಕಿದೆ. ಬುಧವಾರ ಅವಳಿ ಮಕ್ಕಳು ಸಾವನ್ನಪ್ಪಿದ್ದರು. ಐಸ್ ಕ್ರೀಂ ತಿಂದು ಮಕ್ಕಳು ಇಹಲೋಕ ತ್ಯಜಿಸಿವೆ ಎನ್ನಲಾಗಿತ್ತು. ಆದರೆ, ಮರಣೋತ್ತರ ಪರೀಕ್ಷೆ ಬಳಿಕ ಸತ್ಯಾಂಶ ಬಯಲಾಗಿದೆ. ತಾಯಿಯೇ ಮಕ್ಕಳಿಗೆ ವಿಷ ಹಾಕಿ ಸಾಯಿಸಿದ್ದಾಳೆ ಎನ್ನುವುದು ಖಚಿತವಾಗಿದೆ.

ಹೆತ್ತ ಮಕ್ಕಳಿಗೆ ವಿಷವಿಕ್ಕಿದ ತಾಯಿ!

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದ ಪೂಜಾ ಹಾಗೂ ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ಅವಳಿ ಕಂದಮ್ಮಗಳು ಸಾವನ್ನಪ್ಪಿದ್ದವು.

ಪೊಲೀಸ್‌ ತನಿಖೆಯ ಬಳಿಕ ತಾಯಿ ಪೂಜಾಳೇ ಮೂವರು ಮಕ್ಕಳಿಗೆ ವಿಷ ಹಾಕಿದ್ದಾಳೆಂಬುದು ಗೊತ್ತಾಗಿದೆ.

ತ್ರಿಶುಲ್, ತ್ರಿಶ ಅವಳಿ ಮಕ್ಕಳು ಹಾಗೂ ಮಗಳು ಬೃಂದಾಗೆ ಪೂಜಾ ಹಾಕಿದ್ದಳು. ಬಳಿಕ ಐಸ್ ಕ್ರೀಂ ತಿಂದು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಬಿಂಬಿಸಲಾಗಿತ್ತು. ಇದೀಗ ಪೊಲೀಸ್ ವಿಚಾರಣೆ ವೇಳೆ ಸತ್ಯಾಂಶ ಬಯಲಾಗಿದೆ.

ಪೂಜಾ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಈ ಜಗಳದಿಂದ ಬೇಸತ್ತು ಬುಧವಾರ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾಳೆ. ಬಳಿಕ ತಾನೂ ಸೇವಿಸಿದ್ದಳು. ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು.

ಸದ್ಯ ತಾಯಿ ಹಾಗೂ ಮೊದಲ ಮಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

DAKSHINA KANNADA

ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!

Published

on

ಮಂಗಳೂರು (ಹುಬ್ಬಳ್ಳಿ) : ಕಾರ್ಪೋರೇಟರ್ ನಿರಂಜನ್ ಹಿರೇಮಠ ಎಂಬವರ ಮಗಳನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ನಡೆದಿದೆ. ನೇಹಾ ಹಿರೇಮಠ ಕೊಲೆಗೀಡಾದಾಕೆ. ಕಾಲೇಜ್ ಕ್ಯಾಂಪಸ್​ನಲ್ಲಿರುವ ಕ್ಯಾಂಟೀನ್​ನಲ್ಲಿ ಫಯಾಜ್ ಎಂಬಾತ 9 ಬಾರಿ ಚಾಕುವಿನಿಂದ ಇರಿದಿದ್ದಾನೆ. ತಕ್ಷಣ ನೇಹಾಳನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನೇಹಾ ಮೃತಪಟ್ಟಿದ್ದಾಳೆ.

ತಂದೆ ನಿರಂಜನ್ ಹಿರೇಮಠ ಜೊತೆಗೆ ನೇಹಾ

ಪ್ರೀತಿ ನಿರಾಕರಣೆಗೆ ಪಾಪಿಯಿಂದ ಹೇಯ ಕೃತ್ಯ..!

ಹುಬ್ಬಳ್ಳಿಯ ಬಿವಿಬಿ‌ ಕಾಲೇಜಿನಲ್ಲಿ ಓದುತ್ತಿರುವ ನೇಹಾ ಹಿರೇಮಠಗೆ ಆರೋಪಿ ಫಯಾಜ್ ಎಂಬಾತ ಪ್ರೀತಿಸುವಂತೆ ಪೀಡಿಸಿದ್ದಾನೆ. . ಆದರೆ, ನೇಹಾ ಇದನ್ನು ನಿರಾಕರಿಸುತ್ತಲೇ ಬಂದಿದ್ದಾಳೆ. ಇದರಿಂದ ರೊಚ್ಚಿಗೆದ್ದ ಆತ ಗುರುವಾರ ಕಾಲೇಜು ಕ್ಯಾಂಪಸ್‌ಗೆ ಬಂದಿದ್ದಾನೆ. ಪುನಃ ಆಕೆ ಬಳಿ ಪ್ರೇಮ ನಿವೇದನೆ ಮಾಡಿಕೊಂಡಿದ್ದಾನೆ. ಆದರೆ, ನೇಹಾ ಪ್ರೀತಿಸಲು‌ ನಿರಾಕರಿಸಿದ್ದಾಳೆ. ಹೀಗಾಗಿ ಮೊದಲೇ ನಿರ್ಧರಿಸಿ ಬಂದಿದ್ದ ಆರೋಪಿಯು ನೇಹಾಳಿಗೆ ಕಾಲೇಜು ಕ್ಯಾಂಟೀನ್‌ನಲ್ಲಿಯೇ ಚಾಕುವಿನಿಂದ ಇರಿದಿದ್ದಾನೆ.
ಆರೋಪಿ ಫಯಾಜ್ ಕೊಂಡಿಕೊಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರ ಠಾಣೆ‌ ಪೊಲೀಸರಿಂದ ಆರೋಪಿಯ ವಿಚಾರಣೆ ನಡೆಸಲಾಗಿದೆ.ಇನ್ನು ನೇಹಾ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

 

Continue Reading

LATEST NEWS

Trending