Connect with us

LATEST NEWS

ಇಲ್ಲಿನ ಪ್ರತಿಯೊಂದು ಮನೆಯಲ್ಲೂ ಇದೆ ವಿಮಾನ.. ರಸ್ತೆ ಬದಿಯಲ್ಲೇ ಪಾರ್ಕಿಂಗ್!

Published

on

ಒಂದು ಮನೆಯಲ್ಲಿ ಬೈಕ್ ಅಥವಾ ಕಾರ್‌ನ್ನು ಮನೆಯ ಎದುರಿಗೆ ಪಾರ್ಕಿಂಗ್ ಮಾಡಿರುವುದನ್ನು ನೀವು ನೋಡಿರಬಹುದು. ಆದರೆ ವಿದೇಶದಲ್ಲಿರುವ 124 ಮನೆಗಳಿರುವ ಈ ಊರಿನಲ್ಲಿ ಎಲ್ಲಿ ನೋಡಿದರಲ್ಲಿಯೂ ವಿಮಾನಗಳು. ಪ್ರತಿಯೊಂದು ಮನೆಯ ಎದುರುಗಡೆ ಅಥವಾ ರೋಡ್‌ನ ಬದಿಯಲ್ಲಿ ವಿಮಾನಗಳು ಪಾರ್ಕಿಂಗ್ ಆಗಿರುತ್ತದೆ. ಈ ಊರು ಯಾವುದು ಎನ್ನುವುದನ್ನು ತಿಳಿಯೋಣ.

ಅಮೆರಿಕಾದ ಕ್ಯಾಲಿಫೋರ್ನಿಯಾದ ಕ್ಯಾಮರೂನ್ ಎನ್ನುವ ಊರು ಏರ್‌ಪಾರ್ಕ್‌ ಗ್ರಾಮ ಆಗಿದೆ. ಇಲ್ಲಿನ ಜನರು ದಾರಿಯ ಬದಿಯಲ್ಲೇ ತಮ್ಮ ಸ್ವಂತ ವಿಮಾನವನ್ನು ಪಾರ್ಕ್‌ ಮಾಡುತ್ತಾರೆ. ಆಫೀಸ್‌ಗೆ ಹೋಗಲು ಜನರು ವಿಮಾನವನ್ನೇ ಬಳಸುತ್ತಾರೆ. ವಿಮಾನ ನಿರ್ವಹಣೆಯ ತರಬೇತಿಯನ್ನು ಪಡೆದಿದ್ದಾರೆ. ಈ ಗ್ರಾಮದಲ್ಲಿ ವಾಸವಾಗಿರುವ ಹೆಚ್ಚಿನ ಜನರು ವೃತ್ತಿಪರ ಪೈಲೆಟ್‌ಗಳು, ನಿವೃತ್ತ ಮಿಲಿಟರಿ ಪೈಲೆಟ್‌ಗಳು ಆಗಿದ್ದಾರೆ. ಅದರೊಂದಿಗೆ ವೈದ್ಯರು, ಇಂಜಿನಿಯರ್‌ಗಳೂ ವಾಸವಾಗಿದ್ದು ಅವರೂ ಸ್ವಂತ ವಿಮಾನವನ್ನು ಹೊಂದಿದ್ದಾರೆ.

1963 ರಲ್ಲಿ ಕ್ಯಾಮರೂನ್ ಪಾರ್ಕ್‌ ಎನ್ನುವ ಊರು ನಿರ್ಮಾಣ ಆಗಿದೆ. ಇಲ್ಲಿ ಒಟ್ಟು 124 ಮನೆಗಳಿದ್ದು, 100 ಅಡಿ ಅಗಲದ ಮಾರ್ಗಗಳು ಇದೆ. ವಿಮಾನ ಲ್ಯಾಂಡಿಂಗ್ ಹಾಗೂ ಟೇಕಾಫ್ ವ್ಯವಸ್ಥೆ ಪ್ರತಿಯೊಂದು ಮನೆಯಲ್ಲೂ ಇದೆ. ಎರಡನೇ ಮಹಾಯುದ್ಧದ ನಂತರ ಯುನೈಟೆಡ್ ಸ್ಟೇಟ್ಸ್ ವಿಮಾನ ಬಳಸುವ ಬಗ್ಗೆ ಹೆಚ್ಚಿನ ಪ್ರೋತ್ಸಾಹ ನೀಡಿದ್ದರು. ಆಗಿನಿಂದ ಇಲ್ಲಿ ವಿಮಾನ ಹಾರಾಟ ಮಾಡುವುದು ಹೆಚ್ಚಾಯಿತು. ವಿಶೇಷವಾಗಿ ನಿವೃತ್ತ ಸೇನಾ ಪೈಲೆಟ್‌ನವರೇ ಈ ಏರ್‌ಪಾರ್ಕ್ ನಿರ್ಮಾಣ ಮಾಡಿದ್ದಾರೆ.

LATEST NEWS

ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?

Published

on

ಮಂಗಳೂರು : ತಿರುಪತಿ ದೇವಸ್ಥಾನ ಈಗಾಗಲೇ ಭಕ್ತರಿಗಾಗಿ ಮಾಂಗಲ್ಯವನ್ನು ಮಾರಾಟ ಮಾಡುವ ನಿರ್ಣಯದ ಮೂಲಕ ಈಗಾಗಲೇ ಶುಭ ಸುದ್ದಿ ನೀಡಿತ್ತು. ಈ ಮೂಲಕ ಮನೆಯಲ್ಲಿ ಮದುವೆ ಕಾರ್ಯ ಇದ್ದಲ್ಲಿ ತಿರುಮಲ ತಿರುಪತಿ ದೇವಸ್ಥಾನದಿಂದ ಮಾಂಗಲ್ಯವನ್ನು ಖರೀದಿಸಬಹುದು. ಅಲ್ಲದೇ, ತಿಮ್ಮಪ್ಪನ ದರ್ಶನವನ್ನು ಉಚಿತವಾಗಿ ಪಡೆಯಬಹುದಾಗಿದೆ.


ಕಾಣಿಕೆಯಿಂದ ಮಾಂಗಲ್ಯ ತಯಾರಿ :

ತಿರುಮಲ ತಿರುಪತಿ ದೇವಸ್ಥಾನ ಕಳೆದ ಫೆಬ್ರವರಿಯಲ್ಲಿ ಭಕ್ತರಿಗೆ ಮಾಂಗಲ್ಯ ಸರ ಒದಗಿಸಬೇಕೆಂಬ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು. ತಿರುಪತಿಗೆ ಕಾಣಿಕೆಯಾಗಿ ನೀಡುವ ಚಿನ್ನದಿಂದ 5 ಮತ್ತು 10 ಗ್ರಾಂ ತೂಕದ ಮಾಂಗಲ್ಯವನ್ನು ತಯಾರಿಸಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿದೆ.

ಪಡೆಯುವುದು ಹೇಗೆ?

* ನವದಂಪತಿ ತಮ್ಮ ಮದುವೆ ಕಾರ್ಡ್‌ನೊಂದಿಗೆ ತಿರುಪತಿ ವಿಳಾಸಕ್ಕೆ ಪೋಸ್ಟ್ ಕಳುಹಿಸಬಹುದು.
* ತಿರುಪತಿಯಲ್ಲಿಯೂ ಮಾಂಗಲ್ಯ ಖರೀದಿ ಮಾಡಬಹುದು.
* ನವ ದಂಪತಿ ಸ್ವತ: ತಿರುಪತಿಗೆ ಹೋಗಿ ಮಾಂಗಲ್ಯ ಖರೀದಿ ಮಾಡಬಹುದು.
* ಜೊತೆಗೆ ತಿಮ್ಮಪ್ಪನ ದರ್ಶನವನ್ನೂ ಪಡೆಯಬಹುದು

ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ! 

ವಿಶಿಷ್ಟ ಕಲ್ಯಾಣಮಸ್ತು ಕಾರ್ಯಕ್ರಮ :

ಈಗಾಗಲೇ ತಿರುಪತಿ ದೇವಸ್ಥಾನಂ ಟ್ರಸ್ಟ್ ತನ್ನ ವಿಶಿಷ್ಟ ಕಲ್ಯಾಣಮಸ್ತು ಕಾರ್ಯಕ್ರಮದ ಮೂಲಕ 32,000 ಬಡ ಜೋಡಿಗಳಿಗೆ ವಿವಾಹ ಮಾಡಿದೆ. ಇವರಿಗೆ ದೇವಸ್ಥಾನದ ಆಡಳಿತ ಮಂಡಳಿ 2 ಗ್ರಾಂ ಚಿನ್ನದ ತಾಳಿಯನ್ನು ನೀಡಿದೆ. ಇದೀಗ ಮಾಂಗಲ್ಯ ಮಾರಾಟವನ್ನು ಪರಿಚಯಿಸುವ ಮೂಲಕ, ನವ ದಂಪತಿಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುತ್ತದೆ. ಸಂತೋಷದ ದಾಂಪತ್ಯ ಜೀವನಕ್ಕೆ ಸಹಾಯ ಮಾಡುತ್ತದೆ ಎಂದು ದೇವಸ್ತಾನಂ ಅರ್ಚಕರು ಹೇಳುತ್ತಾರೆ.

ಈ ಮಂಗಲ ಸೂತ್ರಗಳು 5 ಗ್ರಾಂ ಮತ್ತು 10 ಗ್ರಾಂ ಗಾತ್ರದಲ್ಲಿ ನಾಲ್ಕೈದು ವಿನ್ಯಾಸಗಳಲ್ಲಿ ಬೆಲೆಗೆ ಅನುಗುಣವಾಗಿ ಲಭ್ಯವಿರುತ್ತದೆ. ಇವುಗಳ ಜತೆಗೆ ಲಕ್ಷ್ಮೀ ಕಾಸನ್ನೂ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ತಾನದ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಆಡಳಿತ ಮಂಡಳಿ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.

Continue Reading

LATEST NEWS

ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!

Published

on

ಮಂಗಳೂರು : ಜಗತ್ತು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಕೊಳ್ಳುತ್ತದೆ. ಹೊಸ ಆವಿಷ್ಕಾರಗಳು ಜನರ ಹುಬ್ಬೇರಿಸುವಂತೆ ಮಾಡುತ್ತದೆ. ರೋಬೋಟ್ ತಂತ್ರಜ್ಞಾನವೇನೋ ಹಳತು. ಆದ್ರೆ, ಈಗ ಈ ರೊಬೋಟ್ ಬಗ್ಗೆ ನಾವು ಹೇಳುತ್ತಿರುವ ಸುದ್ದಿ ಹೊಸತು. ಹೌದು, ಇಲ್ಲೊಬ್ಬ ರೋಬೋಟ್ ಅನ್ನೇ ಮದುವೆಯಾಗುತ್ತಿದ್ದಾನೆ. ಇದು ಸಾಧ್ಯನಾ ಅನ್ಬೇಡಿ! ಇದು ಸಾಧ್ಯ ಎಂದು ಯುವಕ ಸಾರಲು ಹೊರಟಂತಿದೆ.


ಎಲ್ಲಿ ನಡೆಯಲಿದೆ ಈ ಅಚ್ಚರಿಯ ಘಟನೆ?

ರೋಬೋಟ್ ತಂತ್ರಜ್ಞಾನ ಆವಿಷ್ಕಾರ ಆದಂದಿನಿಂದಲೂ ಅಚ್ಚರಿ ಹುಟ್ಟು ಹಾಕುತ್ತಿರುವುದೇನೋ ಸರಿ. ಆದ್ರೆ ಮದುವೇನೂ ಆಗ್ಬೋದಾ!? ಈ ಹಿಂದೆ ಸಿನಿಮಾವೊಂದರಲ್ಲಿ ರೋಬೋಟ್ ನ್ನು ಮದುವೆಯಾಗಿದ್ದ ಕಥೆ ಹೆಣೆಯಲಾಗಿತ್ತು. ‘ತೇರೆ ಬಾತೋಮೆ ಅಯ್ಸಾ ಉಲ್ಜಾದಿಯಾ’ ಅನ್ನೋ ಈ ಹಿಂದಿ ಸಿನೆಮಾದಲ್ಲಿ ಹೀರೋ ರೋಬೋಟ್ ಅನ್ನು ಮದುವೆಯಾಗಿ, ಸಂಸಾರ ಮಾಡುವ ಕಥೆ ಇದೆ.


ಇದೀಗ ರಾಜಸ್ಥಾನದಲ್ಲಿ ಯುವಕನೊಬ್ಬ ರೋಬೋಟ್‌ ಜೊತೆ ಮದುವೆ ಆಗಲು ಮುಂದಾಗಿದ್ದಾನೆ. ಅಂದಹಾಗೆ, ಈ ಯುವಕ ಸಾಫ್ಟ್ ವೇರ್ ಇಂಜಿನಿಯರ್. ಆತನ ಹೆಸರು ಸೂರ್ಯಪ್ರಕಾಶ್ ಸುಮೋತಾ. ಸಿಕರ್ ಎಂಬ ಗ್ರಾಮವೊಂದರ ಸೂರ್ಯಪ್ರಕಾಶ್ ಸುಮೋತಾ ರೋಬೋಟ್ ಜೊತೆ ಮದುವೆಯಾಗಲು ಮುಂದಾಗಿದ್ದಾರೆ.

ಮದುವೆ ದಿನಾಂಕ ಫಿಕ್ಸ್ ಆಗಿಲ್ಲ :


ಮಾರ್ಚ್ 22 ರಂದು ರೋಬೋಟ್ ಜೊತೆ ಎಂಗೇಜ್ ಮೆಂಟ್ ಮುಗಿಸಿಕೊಂಡಿದ್ದು, ಮದುವೆಯ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ರೋಬೋಟ್‌ ಜೊತೆ ಮದುವೆಗೆ ಮುಂದಾಗಿರುವ ಸೂರ್ಯಪ್ರಕಾಶ್ ಸುಮೋತಾ ಮೂಲತಃ ಬಡ ಕೃಷಿ ಕುಟುಂಬದಿಂದ ಬಂದವರು. ತಂದೆ – ತಾಯಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಮಗ ರೋಬೋಟ್ ಜೊತೆ ಸಂಸಾರ ಮಾಡುತ್ತೇನೆ ಅಂದ್ರೆ ತಂದೆ – ತಾಯಿ ಒಪ್ತಾರೆಯೇ ? ಸೂರ್ಯಪ್ರಕಾಶ ತಂದೆ – ತಾಯಿ ಈ ಮದುವೆಗೆ ಸಮ್ಮತಿ ಸೂಚಿಸಿಲ್ಲ. ಕುಟುಂಬದ ಸದಸ್ಯರು ಸೂರ್ಯಪ್ರಕಾಶ್‌ಗೆ ಓಕೆ ಅಂದಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ತಂದೆ ತಾಯಿ ಕೂಡಾ ಈ ರೋಬೋಟ್ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿದ್ದಾರೆ.

ಇದನ್ನೂ ಓದಿ : ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

ರೋಬೋ ತಯಾರಿಗೆ 19 ಲಕ್ಷ ಖರ್ಚು :

ಎನ್‌ಎಮ್‌ಎಸ್‌ 5.0 ಗಿಗಾ ಎಂದು ರೋಬೋಟ್‌ಗೆ ಹೆಸರಿಟ್ಟಿದ್ದು, ಈ ರೋಬೋಟ್ ತಯಾರು ಮಾಡಲು ಸೂರ್ಯಪ್ರಕಾಶ್ 19 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರಂತೆ. ರೋಬೋಟನ್ನು ತಮಿಳನಾಡು ಹಾಗೂ ನೋಯ್ಡಾದ ಕಂಪೆನಿಗಳು ಜಂಟಿಯಾಗಿ ತಯಾರು ಮಾಡುತ್ತಿದೆ. ಇನ್ನು ರೋಬೋಟ್‌ಗೆ ಬೇಕಾದ ಸಾಫ್ಟ್‌ವೇರ್‌ ಹಾಗೂ ಅದರ ಕಮಾಂಡ್‌ಗಳನ್ನು ಖುದ್ದು ಸೂರ್ಯಪ್ರಕಾಶ್ ರೆಡಿ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ರೋಬೋಟ್‌ಗಳನ್ನು ಕೃಷಿಯಲ್ಲಿ ಬಳಕೆ ಮಾಡಿ ಅವುಗಳ ವರ್ತನೆಯನ್ನು ಸೂರ್ಯಪ್ರಕಾಶ ಅಧ್ಯಯನ ಮಾಡಿದ್ದಾನೆ.

ಇದೇ ವೇಳೆ ಮನೆಯವರು ಮದುವೆಗೆ ಒತ್ತಾಯಿಸಿದಾಗ ಈ ರೀತಿ ರೋಬೋಟ್‌ ಜೊತೆ ಮದುವೆ ಆಗುವ ಇಚ್ಚೆ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಕಳೆದ ಎರಡು ವರ್ಷದಿಂದ ಪರಿಪೂರ್ಣ ಮನುಷ್ಯರಂತೆ ವರ್ತಿಸೋ ರೋಬೋಟ್ ತಯಾರಿಯಲ್ಲಿ ಸೂರ್ಯಪ್ರಕಾಶ್ ತೊಡಗಿಸಿಕೊಂಡಿದ್ದರು.

Continue Reading

LATEST NEWS

ಅಜೆಕಾರು : ಮನೆ ಟೆರೇಸ್ ಮೇಲೆ ಮಲಗಿದ್ದ ಶಿಕ್ಷಕ ಸಾ*ವು

Published

on

ಕಾರ್ಕಳ : ಭಾರೀ ಸೆಕೆಯಿಂದಾಗಿ ಮನೆಯೊಳಗಡೆ ಮಲಗಲಾಗದೇ ಮನೆ ಟೆರೇಸ್ ಮೇಲೆ ಮಲಗಲು ಹೋಗಿದ್ದ ಶಿಕ್ಷಕ ಗಾಢ ನಿದ್ದೆಯಲ್ಲಿ ಉರುಳಿ ಬಿದ್ದು ಸಾ*ವನ್ನಪ್ಪಿದ ಘಟನೆ ಅಜೆಕಾರು ಕುಮೇರಿಯಲ್ಲಿ ನಡೆದಿದೆ. ಸುಂದರ ನಾಯ್ಕ(55) ಇಹಲೋಕ ತ್ಯಜಿಸಿದ ಶಿಕ್ಷಕ.

ಸುಂದರ ಅವರು ಆಶ್ರಯ ನಗರದ ನಿವಾಸಿಯಾಗಿದ್ದು, ಕಾರ್ಕಳ ತಾಲೂಕಿನ ಎಣ್ಣೆಹೊಳೆ ಪ್ರಾಥಮಿಕ ಶಾಲಾ ಶಿಕ್ಷಕರಾಗಿದ್ದರು. ಸೆಕೆಯ ಹಿನ್ನೆಲೆಯಲ್ಲಿ ಮನೆಯ ಟೆರೇಸ್ ಮೇಲೆ ಮಲಗಿದ್ದರು. ರಾತ್ರಿ ಸುಮಾರು 10:30 ರ ವೇಳೆಗೆ ಟೆರೇಸ್ ಮೇಲೆ ಮಲಗಲು ತೆರಳಿದ್ದ ಇವರನ್ನು ಮನೆ ಮಂದಿ ಬೆಳಿಗ್ಗೆ 6:30ಕ್ಕೆ ಎಬ್ಬಿಸಲೆಂದು ಹೋದಾಗ ಇವರು ಟೆರೇಸ್‌ನಿಂದ ಕೆಳಕ್ಕೆ ಬಿದ್ದಿರುವುದು ಕಂಡು ಬಂದಿದೆ.

ಇದನ್ನೂ ಓದಿ : ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಗಾಢ ನಿದ್ರೆಯಲ್ಲಿ ಆಯತಪ್ಪಿ ಟೆರೇಸ್ ಮೇಲಿಂದ ಕೆಳಗೆ ಬಿದ್ದು ಮೃ*ತಪಟ್ಟಿರುವುದಾಗಿ ಶಂಕೆ ವ್ಯಕ್ತವಾಗಿದೆ. ಮೃತ ಶಿಕ್ಷಕ ಸುಂದರ್ ನಾಯ್ಕ್ ಪತ್ನಿ ಪುತ್ರಿಯರನ್ನು ಅಗಲಿದ್ದಾರೆ.

Continue Reading

LATEST NEWS

Trending