Connect with us

BANTWAL

ಬಂಟ್ವಾಳ ಅಸಹಜ ಸಾವು ಪ್ರಕರಣ ಭೇದಿಸಿದ ಪೊಲೀಸರು – ಕೇರ್ ಟೇಕರ್ ನಿಂದಲೇ ನಡೆದಿತ್ತು ವೃದ್ಧೆಯ ಕೊಲೆ..!

Published

on

ಬಂಟ್ವಾಳ ಅಸಹಜ ಸಾವು ಪ್ರಕರಣ ಭೇದಿಸಿದ ಪೊಲೀಸರು – ಕೇರ್ ಟೇಕರ್ ನಿಂದಲೇ ನಡೆದಿತ್ತು ವೃದ್ಧೆಯ ಕೊಲೆ..!

ಬಂಟ್ವಾಳ: ವೃದ್ಧೆಯೊಬ್ಬರು ಅಸಹಜವಾಗಿ ಸಾವನ್ನಪ್ಪಿದ ಪ್ರಕರಣವೊಂದು ಕೊಲೆ ಪ್ರಕರಣವಾಗಿ ಬದಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ವರದಿಯಾಗಿದೆ.

ಸಾವಿನ ಪ್ರಕರಣವನ್ನು ಗಂಭೀರವಾಗಿ ತಗೊಂಡು ತನಿಖೆ ನಡೆಸಿದ ಪೊಲೀಸರಿಗೆ ಕಾದಿತ್ತು ಶಾಕ್..! ಅಮ್ಮುಂಜೆ ಗ್ರಾಮದ 72 ವರ್ಷದ ಬೆನೆಡಿಕ್ಟ ಕಾರ್ಲೊ ಸಾವನ್ನಪ್ಪಿದವರು.

ಇವರನ್ನು ಹತ್ಯೆ ಮಾಡಿದ ಆರೋಪದಲ್ಲಿ ವೃದ್ಧೆಯನ್ನು ನೋಡಿಕೊಳ್ಳಲು ಬರುತ್ತಿದ್ದ ಅಮ್ಟಾಡಿ ನಿವಾಸಿ ಎಲ್ಮಾ ಪ್ರಶ್ಚಿತಾ ಬರೆಟ್ಟೊ (25) ಜೊತೆಗೆ ನರಿಕೊಂಬು ನಿವಾಸಿಗಳಾದ ಸತೀಶ್ ಮತ್ತು ಚರಣ್ ಎಂಬುವರು ಇದೀಗ ಕೊಲೆ ಸಂಬಂಧ ಕಂಬಿಯ ಹಿಂದೆ ಬಂಟ್ವಾಳ ಪೊಲೀಸರು ತಳ್ಳಿದ್ದಾರೆ.

ಅವರಿಂದ 98 ಗ್ರಾಂ ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದೆ. ಬಂಟ್ವಾಳ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ವೈಲೆಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕರಾದ ಟಿ.ಡಿ.ನಾಗರಾಜ್ ನೇತೃತ್ವದಲ್ಲಿ ಬಂಟ್ವಾಳ ಗ್ರಾಮಾಂತರ ಠಾಣಾ ಪಿ.ಎಸ್.ಐ ಪ್ರಸನ್ನ. ಎಂ.ಎಸ್. ವಿಟ್ಲ ಠಾಣಾ ಪಿ.ಎಸ್.ಐ ವಿನೋದ್ ರೆಡ್ಡಿ ಹಾಗೂ ಎಚ್.ಸಿಗಳಾದ ಗಿರೀಶ್, ಸುರೇಶ್, ಜನಾರ್ದನ, ಪ್ರಮೀಳಾ, ಕಿರಣ್, ಪಿಸಿಗಳಾದ ನಝೀರ್, ಪುನೀತ್, ಮನೋಜ್, ಪ್ರಸನ್ನ ಅವರ ತಂಡ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ ಪ್ರಕರಣ ಬಯಲಿಗೆ ಬಂದಿದೆ.

ಜನವರಿ 26ರಂದು ಬಂಟ್ವಾಳ ತಾಲೂಕು ಅಮ್ಮುಂಜೆ ಗ್ರಾಮದಲ್ಲಿ ಬೆನೆಡಿಕ್ಟ್ ಕಾರ್ಲೋ (72) ಎಂಬ ಮಹಿಳೆಯ ಅಸಹಜ ಸಾವು ಪ್ರಕರಣ ವರದಿಯಾಗಿತ್ತು.

ಫೆ. 2ರಂದು ಮೃತ ಮಹಿಳೆಯ ಪುತ್ರ ಠಾಣೆಗೆ ಆಗಮಿಸಿ ತಮ್ಮ ತಾಯಿಯ ಸಾವಿನ ಬಗ್ಗೆ ಅನುಮಾನವಿದೆ ಎಂದು ದೂರು ನೀಡಿದ ಮೇರೆಗೆ ಹಲವರನ್ನು ವಿಚಾರಿಸಲಾಯಿತು.

ಈ ಸಂದರ್ಭ ಕೆಲಸದಾಕೆಯನ್ನು ಹೆಚ್ಚಿನ ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಎಲ್ಮಾ ಪ್ರಶ್ಚಿತ ಬರೆಟ್ಟೋ, ವೃದ್ಧೆ ಬಳಿ ಇದ್ದ ಚಿನ್ನಾಭರಣ ದೋಚಲು ಈ ಸ್ಕೆಚ್ ಹಾಕಿದ್ದಾಳೆ.

ಈಕೆ ತನ್ನ ಸ್ನೇಹಿತರಾದ ನರಿಕೊಂಬು ನಿವಾಸಿಯಾದ ಸತೀಶ ಮತ್ತು ಚರಣ್​ ಜೊತೆ ಸೇರಿಕೊಂಡು ಜನವರಿ 25ರಂದು ಕಾರ್ಲೋರವರ ಮನೆಯಲ್ಲಿ ಆಕೆಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ.

ತಾನು ಕೆಲಸ ಮಾಡಲು ಬರುತ್ತಿದ್ದ ಮನಗೆ ಕನ್ನ ಹಾಕಿ, ಮನೆ ಮಾಲೀಕರನ್ನೇ ಹತ್ಯೆ ಮಾಡಿ ಏನೂ ಗೊತ್ತಿಲ್ಲದಂತೆ ಈಕೆ ಕುಳಿತಿದ್ದಳು.

ಇದೀಗ ಪೊಲೀಸ್ ತನಿಖೆ ವೇಳೆ ವಿಷಯ ಬಹಿರಂಗವಾಗಿದ್ದು, ವೃದ್ದಯೆ ಕೊಲೆ ಆರೋಪದ ಮೇಲೆ ಪ್ರಶ್ಚಿತಾ ಬರೆಟ್ಟೊ (25) ಜೊತೆಗೆ ನರಿಕೊಂಬು ನಿವಾಸಿಗಳಾದ ಸತೀಶ್ ಮತ್ತು ಚರಣ್ ಎಂಬುವರನ್ನು ಇದೀಗ ಕೊಲೆ ಸಂಬಂಧ ಕಂಬಿಯ ಹಿಂದೆ ಬಂಟ್ವಾಳ ಪೊಲೀಸರು ತಳ್ಳಿದ್ದಾರೆ.

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಇದನ್ನೂ ಓದಿ : ಕರಡಿಗೂ ಕ್ಯಾಪ್ಟನ್ ಗೂ ಫೈಟ್; ಮನೆಯಂಗಳದಲ್ಲೇ ಕಾದಾಟ! ವೀಡಿಯೋ ವೈರಲ್

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

BANTWAL

ಗಂಡ ಹೆಂಡತಿಗೆ ನಾಲ್ವರಿಂದ ಹಲ್ಲೆ..!!

Published

on

ಬಂಟ್ವಾಳ; ಅಪಘಾತದ ವಿಚಾರದಲ್ಲಿ ಗಂಡ ಹೆಂಡತಿಗೆ ನಾಲ್ವರು ಹಲ್ಲೆ ಮಾಡಿರುವ ಘಟನೆ ಕಲ್ಲಡ್ಕದ ಕರಿಂಗಾನ ಕ್ರಾಸ್ ಎಂಬಲ್ಲಿ ಎ.15ರಂದು ಸಂಜೆ ವೇಳೆ ನಡೆದಿದೆ. ಪುತ್ತೂರು ಏರ್ಮುಂಜ ಪಲ್ಲ ನಿವಾಸಿಗಳಾದ ಮಂಜುನಾಥ್ ಮತ್ತು ಅವರ ಪತ್ನಿ ಪೂರ್ಣಿಮಾ ಹಲ್ಲೆಗೊಳಗಾದವರು. ಹಲ್ಲೆಗೊಳಗಾದವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಮಂಜುನಾಥ್ ಅವರು ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಕಲ್ಲಡ್ಕ ಸಮೀಪದ ನರಹರಿ ಎಂಬಲ್ಲಿ ಇವರ ಕಾರಿಗೆ ಹರಿಯಾಣ ಮೂಲದ ಕಾರೊಂದ ಓವರ್ ಟೇಕ್ ಮಾಡುವ ಭರದಲ್ಲಿ ಡಿಕ್ಕಿಯಾಗಿದೆ. ಈ ಸಂದರ್ಭದಲ್ಲಿ ಕೈ ಸನ್ನೆಯ ಮೂಲಕ ಪ್ರಶ್ನಿಸಿದಕ್ಕೆ ಅಪಘಾತ ಎಸಗಿದ ಕಾರು ಮುಂದೆ ಹೋಗಿ ಕರಿಂಗಾಣ ಕ್ರಾಸ್ ಎಂಬಲ್ಲಿ ಅಡ್ಡವಾಗಿ ಇರಿಸಿ ಮಂಜುನಾಥ್ ಹಾಗೂ ಅವರ ಪತ್ನಿ ಪೂರ್ಣಿಮಾ ಅವರ ಮೇಲೆ ಹಲ್ಲೆ ನಡೆಸಿದ್ದಾರೆ.

ಇದೇ ಸಂದರ್ಭದಲ್ಲಿ ಪೂರ್ಣಿಮಾ ಅವರ ಕುತ್ತಿಗೆಯಲ್ಲಿದ್ದ ಬಂಗಾರದ ಚೈನ್ ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಹಲ್ಲೆಯಿಂದ ಮಂಜುನಾಥ್ ಅವರ ಕಣ್ಣಿಗೆ ಏಟಾಗಿದ್ದು, ಅವರು ಬಂಟ್ವಾಳ ನಗರ ಪೋಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ಘಟನೆ ನಡೆದ ಕೂಡಲೇ ಸಂಚಾರ ಪೊಲೀಸರು ಭೇಟಿ ನೀಡಿ ವಾಹನವನ್ನು ಹಾಗೂ ಸ್ಥಳದಲ್ಲಿದ್ದವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಟ್ವಾಳ ನಗರ ಪೊಲೀಸ್‌ ಇನ್ಸ್ ಪೆಕ್ಟರ್ ಅನಂತ ಪದ್ಮನಾಭ ಅವರು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಭಜರಂಗದಳ, ವಿಶ್ವಹಿಂದೂಪರಿಷತ್ ಕಲ್ಲಡ್ಕ ಪ್ರಖಂಡ ಖಂಡನೆ ವ್ಯಕ್ತಪಡಿಸಿದ್ದಾರೆ.

Continue Reading

BANTWAL

ಹಿಂದೂ ಸಂಘಟನೆಯ ಮುಖಂಡನಿಗೆ ಸ್ನೇಹಿತನಿಂದಲೆ ಚೂ*ರಿ ಇರಿತ

Published

on

ಬಂಟ್ವಾಳ : ಹಿಂದೂ ಸಂಘಟನೆಯ ಮುಖಂಡನೋರ್ವನಿಗೆ ಸ್ನೇಹಿತನೇ ಚೂ*ರಿಯಿಂದ ಇರಿದ ಘಟನೆ ಬಂಟ್ವಾಳದಲ್ಲಿ ಭಾನುವಾರ(ಎ.14) ರಾತ್ರಿ ನಡೆದಿದೆ.

ಹಿಂದೂ ಯುವಸೇನೆಯ ಮುಖಂಡ ಉದ್ಯಮಿಯಾಗಿರುವ ಪುಷ್ಪರಾಜ್ ಎಂಬವರಿಗೆ ಜಕ್ರಿಬೆಟ್ಟು ಎಂಬಲ್ಲಿ ಚೂ*ರಿ ಇರಿತವಾಗಿದೆ. ಇರಿತಕ್ಕೆ ಸ್ಪಷ್ಟವಾದ ಕಾರಣ ತಿಳಿದುಬಂದಿಲ್ಲ. ರಿಕ್ಷಾದಲ್ಲಿ ಜತೆಯಾಗಿ ತೆರಳುತ್ತಿದ್ದಾಗಲೇ ಸ್ನೇಹಿತ ರವಿ ಎಂಬಾತ ಚೂ*ರಿಯಿಂದ ಕುತ್ತಿಗೆಗೆ ಇರಿದಿದ್ದಾನೆ ಎಂದು ಹೇಳಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಪುಷ್ಪರಾಜ್ ರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆರೋಪಿ ರವಿ ಚೂ*ರಿ ಇರಿದು ಪರಾರಿಯಾಗಿದ್ದಾನೆ. ಬಂಟ್ವಾಳ ನಗರ ಠಾಣಾ ಪೋಲೀಸರು ಸ್ಥಳಕ್ಕೆ ‌ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

LATEST NEWS

Trending