Connect with us

    ರಸ್ತೆ ಕಾಮಗಾರಿ ವರ್ಷ ಕಳೆದರೂ ಪೂರ್ಣಗೊಳಿಸದ ಹಿನ್ನೆಲೆ ಡಿವೈಎಫ್ಐ ಪಕ್ಕಲಡ್ಕ ನೇತೃತ್ವದಲ್ಲಿ ಪ್ರತಿಭಟನೆ

    Published

    on

    ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿ- ಸಂತೋಷ್ ಬಜಾಲ್

    ಮಂಗಳೂರು: ಬಜಾಲ್ ಪಕ್ಕಲಡ್ಕದಿಂದ ಚರ್ಚ್ ವರೆಗಿನ ಮುಖ್ಯ ರಸ್ತೆ ಕಾಮಗಾರಿ ಕೆಲಸ ಕೈಗೊಂಡು ವರ್ಷ ಕಳೆದರೂ ಪೂರ್ಣಗೊಳಿಸಲು ಸಾದ್ಯವಾಗದ ಗುತ್ತಿಗೆದಾರನನ್ನು ಕಪ್ಪು ಪಟ್ಟಿಗೆ ಸೇರಿಸಿರಿ ಎಂದು ಡಿವೈಎಫ್ಐ ದ.ಕ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಇಂದು ಬಜಾಲ್ ಪಕ್ಕಲಡ್ಕ ಮುಖ್ಯ ರಸ್ತೆಯ ಕಾಂಕ್ರೀಟೀಕರಣ ಕೆಲಸವನ್ನು ಕೂಡಲೇ ಪೂರ್ಣಗೊಳಿಸಲು ಒತ್ತಾಯಿಸಿ ಡಿವೈಎಫ್ಐ ಪಕ್ಕಲಡ್ಕ ಘಟಕದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

    ಸುಮಾರು ಮೂರುವರೆ ಕೋಟಿ ರೂಪಾಯಿ ವೆಚ್ವದ ಯೋಜನೆ ಪಡೆದ ಗುತ್ತಿಗೆದಾರ ಕಂಪೆನಿ ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಈ ಗುತ್ತಿಗೆದಾರನ ಜೊತೆ ಸರಿಯಾಗಿ ಸಿಬ್ಬಂದಿಗಳಿಲ್ಲ ಇರುವ ಬೆರಳೆಣಿಕೆಯ ನೌಕರರು ಸರಿಯಾಗಿ ಸಲಕರಣಿಗಳಿಲ್ಲದೆ ಸುತ್ತಮುತ್ತಲಿನ ಜನರಲ್ಲಿ ಕೇಳುವಂತಾಗಿದೆ. ಈ ಬಗ್ಗೆ ಗಮನಹರಿಸ ಬೇಕಾಗಿದ್ದ ಪಾಲಿಕೆ ಇಂಜನೀಯರ್ ಗಳಾಗಲಿ, ಸ್ಥಳೀಯ ಶಾಸಕನಾಗಲಿ ಕಾಮಗಾರಿ ಕೆಲಸಕ್ಕೆ ಸರಿಯಾಗಿ ಮತ್ತುವರ್ಜಿವಹಿಸುತ್ತಿಲ್ಲ ಕಾಮಗಾರಿ ಕೆಲಸ ಇದೇ ರೀತಿ ನಿಧಾನಗತಿಯಲ್ಲಿ ಮುಂದುವರಿದಲ್ಲಿ ಮನಪಾ ಕಮೀಷನರ್ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಎಚ್ಚರಿಸಿದರು.

    ಡಿವೈಎಫ್ಐ ಮಂಗಳೂರು ನಗರಾದ್ಯಕ್ಷರಾದ ನವೀನ್ ಕೊಂಚಾಡಿ ಮಾತನಾಡಿ ಬಜಾಲ್ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಾಸಿಸುವಂತ ಬಹುತೇಕರು ಬಡವರು, ಮದ್ಯಮವರ್ಗದವರಾಗಿರುತ್ತಾರೆ. ಈ ಭಾಗಕ್ಕೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಮಂಗಳೂರು ನಗರ ಪಾಲಿಕೆ ನಿರ್ಲಕ್ಷಿಸಿದೆ. ಈ ಭಾಗದ ಎಲ್ಲಾ ಸೌಕರ್ಯಗಳ ಈಡೇರಿಕೆಗೆ ಜನ ಪ್ರತಿ ಬಾರಿ ಬೀದಿಗೆ ಬರುವಂತಾಗಿದೆ. ಈ ರಸ್ತೆ ಹೋರಾಟವೂ ಯಶಸ್ವಿಯಾಗಲಿ ಮನಪಾ ಸ್ಥಳೀಯ ಸಮಸ್ಯೆ ಕೂಡಲೇ ಪರಿಹರಿಸಲು ಮದ್ಯಪ್ರವೇಶಿಸಬೇಕೆಂದು ಒತ್ತಾಯಿಸಿದರು.

    ಪ್ರತಿಭಟನೆಯಲ್ಲಿ ಡಿವೈಎಫ್ಐ ಸ್ಥಳೀಯ ಮುಖಂಡರಾದ ದೀಪಕ್ ಬೊಲ್ಲ, ಸ್ಥಳೀಯ ವೈದ್ಯರಾದ ಡಾ. ಪ್ಲಾಯಿಡ್ ಡಿಸೋಜ, ವಿಲ್ಪ್ರೇಡ್ ಡಿಸೋಜ, ಉದಯ ಕುಂಟಲ್ ಗುಡ್ಡೆ, ಅಶೋಕ್ ಸಾಲ್ಯಾನ್, ಶಾಂತಾ ಪಕ್ಕಲಡ್ಕ, ಜಗದೀಶ್ ಕುಲಾಲ್ ಮುಂತಾದವರು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ಕೇಸ್‌ಗಳು ದಾಖಲು

    Published

    on

    ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆ ಕುಡಿದು ವಾಹನ ಚಾಲನೆ ಮಾಡದಂತೆ ಬೆಂಗಳೂರು ಸಂಚಾರಿ ಪೊಲೀಸರು ಎಚ್ಚರಿಕೆ ನೀಡಿದ್ದರು. ಆದರೂ ಕೂಡ ಜನರು ಕ್ಯಾರೇ ಎನ್ನದೇ ಮದ್ಯ ಸೇವಿಸಿ ವಾಹನ ಚಲಾಯಿಸಿ ಪೊಲೀಸರಿಗೆ ಸಿಕ್ಕಿ ಹಾಕಿಕೊಂಡಿದ್ದಾರೆ.

     

    ಹೌದು, ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ 513 ಡ್ರಿಂಕ್ & ಡ್ರೈವ್ ದಾಖಲಾದರೆ, ಡಿಸೆಂಬರ್ 31ರ ರಾತ್ರಿ ಕೇವಲ 513 ಪ್ರಕರಣಗಳನ್ನು ದಾಖಲು ಮಾಡಲಾಗಿದೆ ಎಂದು ಬೆಂಗಳೂರು ಪೊಲೀಸರು ಮಾಹಿತಿ ನೀಡಿದ್ದಾರೆ.

    ಹೊಸ ವರ್ಷ 2025 ರನ್ನು ರಾಜ್ಯದ ಜನರು ಅದ್ದೂರಿಯಾಗಿ ಬರ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಎಂಜಿ ರೋಡ್, ಬ್ರಿಗೇಡ್ ರೋಡ್ ಸೇರಿ ಹಲವು ರಸ್ತೆಗಳಲ್ಲಿ ಜನ ಜಂಗುಳಿ ನೆರೆದಿತ್ತು. ಇನ್ನೂ ಇಯರ್ ಎಂಡ್ ಹಿನ್ನೆಲೆ ರಾಜ್ಯದಲ್ಲಿ ಭರ್ಜರಿ ಮದ್ಯ ಮಾರಾಟವಾಗಿತ್ತು, ಅಬಕಾರಿ ಇಲಾಖೆಗೆ ಭಾರೀ ಆದಾಯ ತಂದುಕೊಟ್ಟಿದೆ.

    Continue Reading

    BIG BOSS

    ಮೂರು ತಿಂಗಳು ದೂರ ಇದ್ದ ಅಕ್ಕನ ಗುರುತಿಸಲೇ ಇಲ್ಲ ತಮ್ಮ; ಮೋಕ್ಷಿತಾ ಕಣ್ಣೀರಿಗೆ ಕರುಳು ಕಿವುಚುತ್ತೆ

    Published

    on

    ಕಿಚ್ಚ ಸುದೀಪ್ ಅವರು ನಡೆಸಿ ಕೊಡುವ ಕನ್ನಡದ ಬಿಗ್ ರಿಯಾಲಿಟಿ ಶೋ ಕನ್ನಡಿಗರ ಮನ ಗೆದ್ದಿದೆ. ವಾರದಿಂದ ವಾರಕ್ಕೆ ಹೆಚ್ಚು ಹೆಚ್ಚು ಜನರನ್ನು ಸೆಳೆಯುತ್ತ ಯಶಸ್ವಿಯಾಗಿ ಸಾಗುತ್ತಿದೆ. ನ್ಯೂ ಇಯರ್ ಹಿನ್ನೆಲೆಯಲ್ಲಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳ ಕುಟುಂಬಸ್ಥರು ಬಂದು ನೋಡಿಕೊಂಡು ಹೋಗುತ್ತಿದ್ದಾರೆ. ಇದೇ ರೀತಿ ಮೋಕ್ಷಿತಾಗೆ ಬಿಗ್​ಬಾಸ್ ಬಿಗ್​ ಸರ್​ಪ್ರೈಸ್​ ಕೊಟ್ಟಿದ್ದಾರೆ. ಆದರೆ ತಮ್ಮನನ್ನು ನೋಡಿ ಅಕ್ಕ ಮೋಕ್ಷಿತಾ ಕಣ್ಣೀರು ಹಾಕಿರುವುದು ಎಲ್ಲರ ಕರುಳು ಚುರುಕ್ ಅನ್ನುತ್ತೆ.

    ಹೊಸ ವರ್ಷ ಬಿಗ್​ಬಾಸ್​ ಮನೆಯಲ್ಲೂ ಅದ್ಧೂರಿಯಾಗಿ ಸೆಲೆಬ್ರೆಷನ್ ಮಾಡಲಾಗಿದೆ. ಎಲ್ಲ ಸ್ಪರ್ಧಿಗಳು ಸಖತ್ ಆಗಿಯೇ ಕುಣಿದು ಕುಪ್ಪಳಿಸುತ್ತಿದ್ದರು. ಮೋಕ್ಷಿತಾ ಕೂಡ ನಾನೇನು ಕಮ್ಮಿ ಇಲ್ಲ ಎನ್ನುವಂತೆ ಬಿಗ್​ಬಾಸ್​ಗೆ ಬಂದ ಮೇಲೆ ಪ್ರೀತಿಯ ಸಹೋದರನ್ನು ಮರೆತು ಡ್ಯಾನ್ಸ್​ ಮಾಡುತ್ತಿದ್ದರು. ಆದರೆ ಈ ವೇಳೆ ನೋಡಿ ಫುಲ್ ಶಾಕ್ ಆಗಿರೋದು. ಬಿಗ್​ಬಾಸ್​ ಮನೆಗೆ ಕುಟುಂಬ ಬರುತ್ತಿದ್ದಂತೆ ತಮ್ಮನನ್ನು ನೋಡಿ ಮೋಕ್ಷಿತಾ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ.

    ಇಷ್ಟು ದಿನ ಬಿಟ್ಟು ಇದ್ದಿದ್ದೆ. ತುಂಬಾ ಮಿಸ್​ ಮಾಡಿಕೊಳ್ಳುತ್ತಿದ್ದೆ. ಪುಟಾಣಿ ಎಂದು ಕರೆದರೂ ವೀಲ್ ಚೇರ್ ಮೇಲಿದ್ದ ಸಹೋದರ, ಮೋಕ್ಷಿತಾರನ್ನ ಯಾರೆಂದು ಗುರುತಿಸಲಿಲ್ಲ. ಅದಕ್ಕೆ ನನ್ನನ್ನು ಮರೆತು ಹೋಗಿದ್ದಾನೆ. ಇಷ್ಟು ದಿನ ಮನೆಯಲ್ಲಿ ಇರದಿದ್ದಕ್ಕೆ ನನ್ನನ್ನು ಮರೆತು ಹೋಗಿ ಬಿಟ್ಟಿದ್ದಾನೆ ಎಂದು ಮೋಕ್ಷಿತಾ, ತಮ್ಮನನ್ನು ತಬ್ಬಿಕೊಂಡು ಕಣ್ಣೀರು ಹಾಕಿದ್ದಾರೆ. ಇದೇ ವೇಳೆ ಮೋಕ್ಷಿತಾ ತಂದೆ, ತಾಯಿ ಕೂಡ ಕಣ್ಣೀರು ಹಾಕಿರುವುದು ಎಲ್ಲರನ್ನೂ ಮೂಕವಿಸ್ಮಿತರಾಗಿ ಮಾಡುತ್ತದೆ.

    ಮೋಕ್ಷಿತಾ ತಮ್ಮನ ಪರಿಸ್ಥಿತಿಯನ್ನು ನೋಡಿ ಮನೆಯಲ್ಲಿರುವ ಎಲ್ಲ ಸ್ಪರ್ಧಿಗಳು ಬೆರಗಾಗಿದ್ದರು. ಗೌತಮಿಯಂತೂ ದುಃಖಿಸಿರುವುದು ಎಲ್ಲರ ಮನ ಕದಡುವಂತೆ ಇತ್ತು. ಚೈತ್ರಾ, ಮಂಜು, ರಜತ್, ಹನುಮಂತು, ತ್ರಿವಿಕ್ರಮ್, ಧನರಾಜ್ ಎಲ್ಲರ ಮುಖದಲ್ಲಿನ ಭಾವ ಕೂಡ ಏನೋ ಹೇಳುವಂತೆ ಇತ್ತು.

    Continue Reading

    DAKSHINA KANNADA

    ಭೀ*ಕರ ಅ*ಪಘಾ*ತಕ್ಕೊಳಗಾಗಿ ದ್ವಿಚಕ್ರ ಸವಾರ ಸಾ*ವು

    Published

    on

    ಉಳ್ಳಾಲ: ಲಾರಿಗೆ ದ್ವಿಚಕ್ರ ವಾಹನವೊಂದು ಡಿ*ಕ್ಕಿ ಹೊಡೆದ ಪರಿಣಾಮ ವಾಹನ ಸವಾರ ಸ್ಥಳದಲ್ಲೇ ಮೃ*ತಪಟ್ಟ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಸಂಕೋಲಿಗೆ ಬಳಿ ನಿನ್ನೆ (ಡಿ.31) ತಡರಾತ್ರಿ ಸಂಭವಿಸಿದೆ.
    ದೇರಳಕಟ್ಟೆ ಸಮೀಪದ ಪನೀರ್‌ ನಿವಾಸಿ ಅಝರ್ ಮೃ*ತ ವ್ಯಕ್ತಿ ಎಂದು ತಿಳಿದು ಬಂದಿದೆ.

    ಮೃ*ತ ವ್ಯಕ್ತಿ ಸ್ಕೂಟರ್ ನಲ್ಲಿ ಬರುತ್ತಿದ್ದಾಗ ಕೇರಳ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಈ ಸಂದರ್ಭ ರಸ್ತೆಗೆ ಎಸೆಯಲ್ಪಟ್ಟ ಸವಾರನ ಮೇಲೆ ಲಾರಿ ಚಲಿಸಿದ ಪರಿಣಾಮ ಸ್ಥಳದಲ್ಲೇ ಸಾ*ವನ್ನಪ್ಪಿದ್ದಾನೆ. ಅಝರ್‌ನ ಮೃ*ತದೇಹವನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

     

    Continue Reading

    LATEST NEWS

    Trending