Connect with us

ರಾಜ್ಯದಲ್ಲೂ ಕೊರೋನಾ ಆರ್ಭಟ.. ಒಂದು ವಾರ ಕರ್ನಾಟಕ ಬಂದ್..!

Published

on

ರಾಜ್ಯದಲ್ಲೂ ಕೊರೋನಾ ಆರ್ಭಟ ಒಂದು ವಾರ ಕರ್ನಾಟಕ ಬಂದ್..!

ಕರ್ನಾಟಕ:  ರಾಜ್ಯದಲ್ಲೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನೇ ದಿನೇ ಏರಿಕೆಯಾಗುತ್ತಿದ್ದು, ಸೋಂಕು ತಡೆಗೆ ಮುಂಜಾಗೃತಾ ಕ್ರಮವಾಗಿ ಕರ್ನಾಟಕ ರಾಜ್ಯ ಒಂದು ವಾರ ಸಂಪೂರ್ಣವಾಗಿ ಬಂದ್ ಆಗಲಿದೆ.

ಕಲಬುರ್ಗಿಯಲ್ಲಿ ಕೊರೋನಾ ಸೋಂಕು ಪೀಡಿತ ನಿಧನರಾದ ಹಿನ್ನಲೆ ತುರ್ತು ಸಭೆ ನಡೆಸಿದ ಸಿಎಂ ಬಿ.ಎಸ್ ಯಡಿಯೂರಪ್ಪ ಈ ನಿರ್ಧಾರವನ್ನು ಘೋಷಣೆ ಮಾಡಿದ್ದಾರೆ. ಕರ್ನಾಟಕದಲ್ಲಿ ಒಂದು ವಾರ ಯಾವುದೇ ಸಭೆ-ಸಮಾರಂಭ, ಮದುವೆ, ನಿಶ್ಚಿತಾರ್ಥ, ನಾಮಕರಣ, ಜಾತ್ರೆ ಅಥವಾ ಇನ್ಯಾವುದೇ ಚಟುವಟಿಕೆಗಳು ನಡೆಯಲ್ಲ.

 

ನಾಳೆಯಿಂದ ಒಂದು ವಾರ ಕಾಲ ರಾಜ್ಯದಲ್ಲಿ ಮಾಲ್, ಸಿನಿಮಾ ಥಿಯೇಟರ್, ನೈಟ್ ಕ್ಲಬ್, ಸ್ವಿಮ್ಮಿಂಗ್ ಫುಲ್, ನಿಲ್ಲಿಸಲು ಸೂಚನೆ ನೀಡಲಾಗಿದೆ. ಎಲ್ಲ ವಿವಿಗಳು ಬಂದ್ ಆಗಲಿದ್ದು, ಸಾಧ್ಯವಾದಷ್ಟು ಪ್ರವಾಸ ಮಾಡುವುದನ್ನು ರದ್ದು ಮಾಡಬೇಕು. ಎಸ್ ಎಸ್ ಎಲ್ ಸಿ ಇತರೆ ಪರೀಕ್ಷೆಗಳು ಎಂದಿನಂತೆ ನಡೆಯಲಿದೆ. ಐಟಿ ಯವರಿಗೆ ವರ್ಕ್ ಫ್ರಂ ಹೋಮ್ ಮಾಡಲು ಈಗಾಗಲೇ ಸೂಚನೆ ನೀಡಿದ್ದೇವೆ. ಅಧಿವೇಶನ ಎಂದಿನಂತೆ ನಡೆಯುತ್ತದೆ.

ಸರ್ಕಾರಿ ಕಚೇರಿಗಳು ಎಂದಿನಂತೆ ನಡೆಯುತ್ತವೆ ಎಂದು ಸಿಎಂ ಯಡಿಯೂರಪ್ಪ ಹೇಳಿದರು.ಆರೋಗ್ಯ ಇಲಾಖೆಯ ಶಿಫಾರಸ್ಸಿನ ಮೇಲೆ ಈ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದಿದ್ದಾರೆ.

 

 

 

Click to comment

Leave a Reply

Your email address will not be published. Required fields are marked *

DAKSHINA KANNADA

ಪುತ್ತೂರು : ಕಾಲೇಜು ವಿದ್ಯಾರ್ಥಿನಿ ನೇ*ಣಿಗೆ ಶರಣು; ಕಾರಣ ನಿಗೂಢ

Published

on

ಪುತ್ತೂರು : ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇ*ಣು ಬಿ*ಗಿದು ಆ*ತ್ಮಹ*ತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.

ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ದೀಕ್ಷಿತಾ(17ವ) ಮೃ*ತ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

 

ಇದನ್ನೂ ಓದಿ : ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

 

ದೀಕ್ಷಿತಾ ಜ 9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇ*ಣು ಬಿ*ಗಿದು ಅ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಆ*ತ್ಮಹ*ತ್ಯೆಯ ಹಿಂದಿನ ಕಾರಣ ನಿಗೂಢವಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಮೊಸಳೆ ತಲೆ ಬುರುಡೆ ಕಳ್ಳ ಸಾಗಣೆ ಯತ್ನ; ಕೆನಡಾ ಮೂಲದ ವ್ಯಕ್ತಿ ಅರೆಸ್ಟ್

Published

on

ಮಂಗಳೂರು/ನವದೆಹಲಿ : ಮೊಸಳೆಯ ತಲೆಬುರುಡೆ ಕಳ್ಳಸಾಗಣೆಗೆ ಯತ್ನಿಸಿದ ಆರೋಪದಲ್ಲಿ ಕೆನಡಾ ಮೂಲದ ವ್ಯಕ್ತಿಯನ್ನು ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಟರ್ಮಿನಲ್ 3ರಲ್ಲಿ ಕೆನಡಾ ಮೂಲದ ವ್ಯಕ್ತಿ ಮಾಂಟ್ರಿಯಲ್‌ಗೆ ವಿಮಾನ ಹತ್ತಲು ಯತ್ನಿಸುತ್ತಿದ್ದಾಗ ಭದ್ರತಾ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ. ಈ ವೇಳೆ ಮೊಸಳೆಯ ಮರಿಯನ್ನು ಹೋಲುವ ಸುಮಾರು 770 ಗ್ರಾಂ ತೂಕದ ಚೂಪಾದ ಹಲ್ಲುಗಳನ್ನು ಹೊಂದಿರುವ ತಲೆಬುರುಡೆ ಪತ್ತೆಯಾಗಿದೆ.

ದೆಹಲಿ ಸರ್ಕಾರದ ಅಧೀನದಲ್ಲಿರುವ ಅರಣ್ಯ ಮತ್ತು ವನ್ಯಜೀವಿ ಇಲಾಖೆಯು ನಡೆಸಿದ ಶೋಧ ಕಾರ್ಯದಲ್ಲಿ ಅದು ಮೊಸಳೆ ಮರಿಯ ತಲೆಬುರುಡೆ ಎಂಬುದಾಗಿ ದೃಢಪಟ್ಟಿದೆ. 1972ರ ವನ್ಯ ಜೀವಿ ಕಾಯ್ದೆಯಡಿಯಲ್ಲಿ ಸಂರಕ್ಷಿತ ಜಾತಿಗೆ ಸೇರಿದ ತಲೆಬುರುಡೆ ಇದಾಗಿದೆ. ಹೆಚ್ಚಿನ ವೈಜ್ಞಾನಿಕ ತಪಾಸಣೆಗಾಗಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

 

Continue Reading

LATEST NEWS

ಶರಣಾದ ನಕ್ಸಲರನ್ನು NIA ವಿಶೇಷ ಕೋರ್ಟ್ ಗೆ ಹಾಜರುಪಡಿಸಿದ ಪೊಲೀಸರು!

Published

on

ಬೆಂಗಳೂರು: ಸಮಾಜದ ಮುಖ್ಯ ವಾಹಿನಿಗೆ ಬರಲು ನಿರ್ಧರಿಸಿ ನಿನ್ನೆ ಮೋಸ್ಟ್ ವಾಂಟೆಡ್ 6 ಜನ ನಕ್ಸಸಲರು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಶರಣಾದರು. ಬಳಿಕ ಅವರನ್ನ ವಶಕ್ಕೆ ಪಡೆದ ಪೊಲೀಸರು ಇಂದು ಅವರನ್ನು ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟಿಗೆ ಹಾಜರುಪಡಿಸಿದ್ದಾರೆ.

ಹೌದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಸಂಕಿರಣದ ಎನ್ಐಐ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ನಕ್ಸಲರನ್ನು ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಇದೀಗ ಹಾಜರುಪಡಿಸಿದ್ದಾರೆ. ಇದಕ್ಕೂ ಮೊದಲು 6 ಜನರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಎನ್ಐಎ ವಿಶೇಷ ಕೋರ್ಟ್ ಮುಂದೆ ಇದೀಗ ಹಾಜರುಪಡಿಸಿದ್ದಾರೆ.

Continue Reading

LATEST NEWS

Trending

Exit mobile version