Connect with us

LATEST NEWS

ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ರಾಹುಲ್‌ಗೆ ನೋಟಿಸ್‌

Published

on

ದೆಹಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ನಂತರ ಸರ್ಕಾರದ ಬಂಗಲೆಯನ್ನು ಖಾಲಿ ಮಾಡುವಂತೆ ನೋಟಿಸ್ ನೀಡಿದೆ.


2004 ರಲ್ಲಿ ಉತ್ತರಪ್ರದೇಶದ ಅಮೇಠಿಯಿಂದ ರಾಹುಲ್ ಮೊದಲ ಲೋಕಸಭಾ ಚುನಾವಣೆಯಲ್ಲಿ ಗೆದ್ದಾಗ, ಅವರಿಗೆ ದೆಹಲಿ ಲುಟ್ಯೆನ್ಸ್‌ನ 12 ತುಘಲಕ್ ಲೇನ್‌ನಲ್ಲಿರುವ 5 ಬೆಡ್‌ರೂಮ್ ಬಂಗಲೆಯನ್ನು ನೀಡಲಾಗಿತ್ತು.

ಸಂಸದ ಸ್ಥಾನದಿಂದ ಅನರ್ಹಗೊಂಡ ಬೆನ್ನಲ್ಲೇ ರಾಹುಲ್ ಗಾಂಧಿಗೆ ಲೋಕಸಭೆಯ ಹೌಸಿಂಗ್ ಕಮಿಟಿಯಿಂದ ಈ ನೋಟಿಸ್ ಬಂದಿದೆ.

bangalore

ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ

Published

on

ಮಂಗಳೂರು/ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧನ ಹೊಂದಿದ್ದಾರೆ.

ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಹಲವು ದಿಗ್ಗಜ ನಟರ ಜೊತೆ ತೆರೆಹಂಚಿಕೊಂಡಿದ್ದರು. ಹಾಸ್ಯ ಪಾತ್ರಗಳಲ್ಲಿ ಸರಿಗಮ ವಿಜಿ ಮಿಂಚಿದ್ದರು. ಹಲವು ಧಾರವಾಹಿಗಳಲ್ಲೂ ಅವರು ಬಣ್ಣಹಚ್ಚಿದ್ದಾರೆ. 400ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿರುವ ಅವರು 100ಕ್ಕೂ ಅಧಿಕ ಚಿತ್ರಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ತೆಲುಗು ವಿಜ್ಞಾನ ಸಮಿತಿ ನೀಡುವ ‘ಶ್ರೀ ಕೃಷ್ಣದೇವರಾಯ ಪುರಸ್ಕಾರ’, ರಾಜ್ಯೋತ್ಸವ ಪ್ರಶಸ್ತಿ ಪಡೆದಿದ್ದಾರೆ.

ಇದನ್ನೂ ಓದಿ: ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ

ಮಹಾಲಕ್ಷೀ ಲೇಔಟ್ ನಲ್ಲಿರುವ ಅವರ ನಿವಾಸದಲ್ಲಿ ನಾಳೆ ಬೆಳಿಗ್ಗೆ 10 ಗಂಟೆವರೆಗೆ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ವೇಳೆ ಅಂತ್ಯಕ್ರಿಯೆ ನಡೆಯಲಿದೆ.

 

Continue Reading

DAKSHINA KANNADA

ಮಂಗಳೂರು: ಕೈದಿಗಳಿಂದ ಜೈಲು ಅಧಿಕಾರಿ, ಸಿಬಂದಿಯ ಕರ್ತವ್ಯಕ್ಕೆ ಅಡ್ಡಿ

Published

on

ಮಂಗಳೂರು : ನಗರದ ಜೈಲಿನಲ್ಲಿ ಕೈದಿಗಳು ಜೈಲು ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹ*ಲ್ಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

ಮಂಗಳೂರಿನ ಜಿಲ್ಲಾ ಕಾರಾಗೃಹದ ‘ಎ’ ಬ್ಲಾಕ್‌ನ ಸೆಲ್‌ಗಳಲ್ಲಿ ನಿಷೇಧಿತ ವಸ್ತುಗಳಿರುವ ಶಂಕೆಯ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಜೈಲು ಸಿಬಂದಿ ತಪಾಸಣೆಗೆ ತೆರಳಿದ್ದರು. ಈ ವೇಳೆ ವಿಚಾರಣಾಧೀನ ಕೈದಿಗಳು ಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

 

ಇದನ್ನೂ ಓದಿ : ಮಂಗಳೂರಿಗೆ ಆಗಮಿಸಲಿದ್ದಾರೆ ಡಾಲಿ ಚಾಯ್ ವಾಲ

 

ಜೈಲಿನಲ್ಲಿ ಮೊಬೈಲ್, ಗಾಂಜಾ ಮೊದಲಾದ ನಿಷೇಧಿತ ವಸ್ತುಗಳಿರುವ ಶಂಕೆಯಿಂದ ಜೈಲು ಅಧೀಕ್ಷಕ ಎಂ.ಎಚ್.ಆಶೇಖಾನ್ ನೇತೃತ್ವದಲ್ಲಿ ತಪಾಸಣೆಗೆ ಮುಂದಾಗಿದ್ದರು. ಆಗ ಪಾತ್ರೆ ಮತ್ತಿತರ ವಸ್ತುಗಳಿಂದ ವಿಚಾರಣಾ ಕೈದಿಗಳು ಹಲ್ಲೆಗೆ ಮುಂದಾಗಿದ್ದಾರೆ. ಅಲ್ಲದೆ ಅ*ವಾಚ್ಯ ಶಬ್ದಗಳಿಂದ ಬೈ*ದು ಬೆದರಿಕೆ ಒಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಬರ್ಕೆ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.

Continue Reading

LATEST NEWS

ಮೃ*ತಪಟ್ಟರೆಂದು ಭಾವಿಸಿ ಶವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವ್ಯಕ್ತಿ

Published

on

ಮಂಗಳೂರು/ಕಣ್ಣೂರು : ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರನ್ನು ಮನೆಗೆ ಕರೆದುಕೊಂಡು ಹೋಗುವ ವೇಳೆ ಮೃ*ತಪಟ್ಟರೆಂದು ಭಾವಿಸಿ ಕುಟುಂಬ ಸದಸ್ಯರು ಶ*ವಾಗಾರಕ್ಕೆ ಸ್ಥಳಾಂತರಿಸುತ್ತಿದ್ದಂತೆ ಬದುಕುಳಿದ ವಿಚಿತ್ರ ಘಟನೆ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿದ್ದ ಕೂತುಪರಂಬ್ ಪಾಚ್ಚಪೋಯ್ಕ ಮಹಿಳಾ ಬ್ಯಾಂಕ್ ಬಳಿಯ ವೆಳ್ಳುವಕಂಡಿ ಪವಿತ್ರನ್ (67) ನಿಧನರಾದರೆಂದೂ ಭಾವಿಸಿ ಸೋಮವಾರ ರಾತ್ರಿ ಕಣ್ಣೂರಿನ ಎಕೆಜಿ ಸಹಕಾರಿ ಆಸ್ಪತ್ರೆಯ ಶವಗಾರಕ್ಕೆ ಕರೆದೊಯ್ಯಲಾಗಿತ್ತು.

ಅಂಬ್ಯುಲೆನ್ಸ್ ನಿಂದ ಶವಾಗಾರಕ್ಕೆ ಸ್ಥಳಾಂತರಿಸುವಾಗ ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದಾರೆ. ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಲಾಗಿದೆ.

ಉಸಿರಾಟದ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯ ವೆಂಟಿಲೇಟರ್ ನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯದಲ್ಲಿ ಯಾವುದೇ ಸುಧಾರಣೆಯಾಗದ ಕಾರಣ, ಪವಿತ್ರನ್ ಅವರನ್ನು ಸೋಮವಾರ ರಾತ್ರಿ ಕಣ್ಣೂರಿನ ಮನೆಗೆ ಕೊಂಡೊಯ್ಯಲು ನಿರ್ಧರಿಸಲಾಗಿತ್ತು.

ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲಿ?

ವೆಂಟಿಲೇಟರ್ ನಿಂದ ಹೊರ ತೆಗೆದರೆ, ಜೀವ ಉಳಿಯದು ಎಂದು ವೈದ್ಯರು ತಿಳಿಸಿದ್ದರು. ಆದರೆ, ಸಂಬಂಧಿಕರು ವೆಂಟಿಲೇಟರ್ ನಿಂದ ಹೊರ ತೆಗೆದು ಮನೆಗೆ ಕರೆದೊಯ್ಯಲು ನಿರ್ಧರಿಸಿದ್ದರು. ಕಣ್ಣೂರು ತಲುಪಿದಾಗ ಅವರು ಮೃ*ತಪಟ್ಟರೆಂದು ಭಾವಿಸಿ ಶ*ವಾಗಾರಕ್ಕೆ ತಲುಪಿಸಲಾಗಿತ್ತು.

ಆದರೆ, ಪವಿತ್ರನ್ ತನ್ನ ಕೈ ಹಿಡಿದಿರುವುದಾಗಿ ಅಲ್ಲಿನ ಸಹಾಯಕ ತಿಳಿಸಿದ್ದರಿಂದ, ತಕ್ಷಣವೇ ವೈದ್ಯರಿಗೆ ಮಾಹಿತಿ ನೀಡಿದರು. ಪ್ರಸ್ತುತ ಎಕೆಜಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending

Exit mobile version