Tuesday, January 31, 2023

ಬೈಂದೂರು: ಎರಡು ದಿನಗಳಾದರೂ ಹೊಳೆಗೆ ಬಿದ್ದ 7 ರ ಬಾಲಕಿಯ ಸುಳಿವಿಲ್ಲ..!

ಉಡುಪಿ: ಕಳೆದ ಸೋಮವಾರ ಬೈಂದೂರಿನ ಕಾಲ್ತೋಡಿನಲ್ಲಿ ಶಾಲೆಯಿಂದ ಹಿಂತಿರುಗುತ್ತಿದ್ದ ವೇಳೆ ಮರದ ಕಾಲುಸಂಕದಿಂದ ಜಾರಿ ನೀರುಪಾಲಾಗಿದ್ದ 7ರ ಬಾಲಕಿಯ ಮೃತದೇಹ ಎರಡು ದಿನಗಳಾದರೂ ಪತ್ತೆಯಾಗಿಲ್ಲ.


ಘಟನೆ ನಡೆದ ತಕ್ಷಣ ಅಗ್ನಿ ಶಾಮಕ ದಳ ಹಾಗೂ ಗ್ರಾಮಸ್ಥರಿಂದ ಸತತ ಎರಡು ದಿನಗಳಿಂದ ಹುಡುಕಾಟ ನಡೆಸುತ್ತಿದ್ದರೂ ಮೃತದೇಹ ಪತ್ತೆಯಾಗಿಲ್ಲ. ಸದ್ಯ ಶೋಧ ಮುಂದುವರೆದಿದೆ.

ಆ.8 ರಂದು ಮಧ್ಯಾಹ್ನ ಮೂರು ಗಂಟೆ ವೇಳೆಗೆ ಬೈಂದೂರಿನ ಕಾಲ್ತೋಡುವಿನ ಚಪ್ಪರಿಕೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಎರಡನೇ ತರಗತಿ ಕಲಿಯುತ್ತಿದ್ದ 7 ರ ಹರೆಯದ ಸನ್ನಿಧಿ ಇತರ ಮೂರು ವಿದ್ಯಾರ್ಥಿಗಳೊಂದಿಗೆ ಮರದ ಕಾಲು ಸಂಕ ದಾಟುತ್ತಿದ್ದಳು.

ಈ ವೇಳೆ ಕಾಲು ಜಾರಿ ಹೊಳೆಗೆ ಬಿದ್ದಿದ್ದಾಳೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಊರವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದಾಗ ಹೊಳೆಯಲ್ಲಿ ಕೊಚ್ಚಿ ಹೋಗಿದ್ದಳು. ಸದ್ಯ ಎರಡು ದಿನಗಳಿಂದ ಅಗ್ನಿ ಶಾಮಕ ದಳ, ಈಜುಪಟು, ಮುಳುಗುತಜ್ಞರು ಹಾಗೂ ಗ್ರಾಮಸ್ಥರಿಂದ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.
ಸನ್ನಿದಿಯ ಮನೆಯಲ್ಲಿ ತಂದೆ-ತಾಯಿ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

LEAVE A REPLY

Please enter your comment!
Please enter your name here

Hot Topics

ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ತುಳು: ಅಧ್ಯಯನಕ್ಕೆ ಡಾ.ಮೋಹನ್‌ ಆಳ್ವ ನೇತೃತ್ವ.!

ಬೆಂಗಳೂರು : ತುಳು ಭಾಷೆಯನ್ನು (Tulu language) ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ಕುರಿತು ಅಧ್ಯಯನ ನಡೆಸಿ ವರದಿ ನೀಡಲು ಆಳ್ವಾಸ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ್‌ ಆಳ್ವ ನೇತೃತ್ವದ...

ಬೆಳ್ತಂಗಡಿ ಆಟೋ ಚಾಲಕನ ನಿರ್ಲಕ್ಷ್ಯಕ್ಕೆ ಒಂದು ವರ್ಷದ ಮಗು ಮೃತ್ಯು..!

ಆಟೋ ರಿಕ್ಷಾವೊಂದು ಸೇತುವೆ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿದ್ದ ಒಂದು ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಮಾಲಾಡಿಯಲ್ಲಿ ನಡೆದಿದೆ.ಬೆಳ್ತಂಗಡಿ : ಆಟೋ ರಿಕ್ಷಾವೊಂದು ಸೇತುವೆ...

ಮಂಗಳೂರು: ಪಾಳುಬಾವಿಗೆ ಬಿದ್ದ 4 ಬೃಹತ್ ಹೆಬ್ಬಾವುಗಳ ರಕ್ಷಣೆ..!

ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು ಬಾವಿಗೆ ಬಿದ್ದಿದ್ದ ನಾಲ್ಕು ಬೃಹತ್ ಗಾತ್ರದ ಹೆಬ್ಬಾವುಗಳನ್ನು ಪರಿಸರ ಪ್ರೇಮಿಗಳು ರಕ್ಷಿಸಿದ್ದಾರೆ.ಮಂಗಳೂರು: ಮಂಗಳೂರು ನಗರದ ಕೊಟ್ಟಾರದ ಪೃಥ್ವಿ ಅಪಾರ್ಟ್‌ಮೆಂಟ್ ಬಳಿಯ ಪಾಳು...