DAKSHINA KANNADA
ಆದಾಯಕ್ಕಿಂತ ಅಧಿಕ ಆಸ್ತಿ: ಮೀನುಗಾರಿಕಾ ಮಾಜಿ ಜಂಟಿ ನಿರ್ದೇಶಕಗೆ 1.30 ಕೋಟಿ ರೂ ದಂಡ 5 ವರ್ಷ ಜೈಲು
ಮಂಗಳೂರು: ಮೀನುಗಾರಿಕಾ ಇಲಾಖೆಯ ಜಂಟಿ ನಿರ್ದೇಶಕರಾಗಿದ್ದ ಗಂಗಾಧರ ವಿ. ಮಡ್ಡಿಕೇರಿ ಅವರು ಆದಾಯಕ್ಕಿಂತ ಅಧಿಕ ಪ್ರಮಾಣದ ಆಸ್ತಿ ಹೊಂದಿದ್ದ ಆರೋಪವು ಸಾಬೀತಾಗಿದ್ದು, ಅವರಿಗೆ ನಗರದ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಬಿ.ಬಿ.ಜಕಾತಿ ಅವರು 5 ವರ್ಷಗಳ ಸಾದಾ ಸಜೆ ಮತ್ತು 1.30 ಕೋಟಿ ರೂ ದಂಡ ವಿಧಿಸಿ ಮಂಗಳವಾರ ತೀರ್ಪು ನೀಡಿದ್ದಾರೆ.
ಅಪರಾಧಿಯು ದಂಡ ಕಟ್ಟಲು ವಿಫಲನಾದರೆ ಹೆಚ್ಚುವರಿಯಾಗಿ 6 ತಿಂಗಳ ಸಾದಾ ಸಜೆ ಅನುಭವಿಸಬೇಕು ಎಂದು ತೀರ್ಪಿನಲ್ಲಿ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಗಂಗಾಧರ ವಿ. ಮಡ್ಡಿಕೇರಿ ವಿರುದ್ಧ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಲೋಕಾಯುಕ್ತ ಪೊಲೀಸ್ ಡಿವೈಎಸ್ಪಿ ವಿಠಲದಾಸ್ ಪೈ ಅವರು ಆರಂಭಿಕ ಹಂತದ ತನಿಖೆ ನಡೆಸಿದ್ದರು. ಬಳಿಕ ಡಿವೈಎಸ್ಪಿ ಉಮೇಶ್ ಜಿ. ಶೇಟ್ ಅವರು ಪ್ರಕರಣದ ತನಿಖೆ ಮುಂದುವರಿಸಿದ್ದರು.
ಲೋಕಾಯುಕ್ತ ಪೊಲೀಸ್ ಇನ್ಸ್ಪೆಕ್ಟರ್ ಎಸ್.ವಿಜಯ ಪ್ರಸಾದ್ ಅವರು 2015ರ ಡಿಸೆಂಬರ್ನಲ್ಲಿ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ವಕೀಲ ರವೀಂದ್ರ ಮುನ್ನಿಪ್ಪಾಡಿ ಅವರು ಲೋಕಾಯುಕ್ತ ಸಂಸ್ಥೆ ಪರವಾಗಿ ವಾದಿಸಿದ್ದರು.ಗಂಗಾಧರ ವಿ. ಮಡ್ಡಿಕೇರಿ ಅವರು ಸೇವೆಯಿಂದ ನಿವೃತ್ತರಾಗಿದ್ದಾರೆ.
DAKSHINA KANNADA
ನಾಲ್ಕು ತಿಂಗಳ ಮಗುವಿಗೆ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿದ ಅಜ್ಜಿ..! ಅಜ್ಜಿ ಮಾಡಿದ ಎಡವಟ್ಟಿಗೆ ಕೋಮಾಗೆ ಜಾರಿದ ಮಗು !!
ಮಂಗಳೂರು/ಇಟಲಿ: ಇಟಲಿಯಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ಅಜ್ಜಿಯೊಬ್ಬರು ನಾಲ್ಕು ತಿಂಗಳ ಮಗುವಿಗೆ ಕುಡಿಯುವ ಹಾಲಿನಲ್ಲಿ ಆಲ್ಕೋಹಾಲ್ ಬೆರೆಸಿರುವ ಘಟನೆ ನಡೆದಿದೆ.
ಮೊಮ್ಮಗು ಕುಡಿಯುವ ಹಾಲಿಗೆ ಅಜ್ಜಿ ತಪ್ಪಾಗಿ ಆಲ್ಕೋಹಲ್ ಬೆರೆಸಿದ್ದಾರೆ. ಮಗು ಅರ್ಧ ಹಾಲು ಕುಡಿದ ಬಳಿಕ ಮಗು ಅಳಲು ಆರಂಭಿಸಿದೆ. ಅಜ್ಜಿಗೆ ಅನುಮಾನ ಬಂದು ತಾನು ಕುಡಿಸಿದ ಹಾಲಿನ ವಾಸನೆಯನ್ನು ತೆಗೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಆಲ್ಕೋಹಾಲ್ ಮಿಶ್ರಣ ಹಾಕಿರುವುದು ಬೆಳಕಿಗೆ ಬಂದಿದೆ. ಇದರಿಂದ ಆಘಾತಕ್ಕೊಳಗಾದ ವೃದ್ಧೆ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.
ಮುಂದೆ ಓದಿ..; ಜೀವಾಂತ್ಯವಾದ ಕಾಂತಾಬಾರೆ-ಬೂದಬಾರೆ ಜನ್ಮಕ್ಷೇತ್ರದ ಮರ..! ಇತಿಹಾಸದ ಜೀವಂತ ಸಾಕ್ಷಿಯ ಅಂತ್ಯ..!
ಕೋಮಾಗೆ ಜಾರಿದ ಮಗು:
ಅದಾಗಲೇ ಮಗುವಿನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕೋಮ ಸ್ಥಿತಿಗೆ ಜಾರಿತ್ತು. ಬಳಿಕ ವೈದ್ಯರು ಚಿಕಿತ್ಸೆ ನೀಡಿದ ಬಳಿಕ ಚೇತರಿಸಿಕೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದೆ. ಮಗುವಿಗೆ ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಗುವಿನ ಆರೋಗ್ಯವನ್ನು ಸಂಪೂರ್ಣ ಪರಿಶೀಲಿಸಿದ ಬಳಿಕ ಅಜ್ಜಿ ವಿರುದ್ಧ ಪ್ರಕರಣ ದಾಖಲಿಸಲು ನಿರ್ಧರಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
DAKSHINA KANNADA
ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ
ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.
ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.
ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
DAKSHINA KANNADA
ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ
ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.
ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.
ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್ ಕೈ..!! ವೀಡಿಯೋ ವೈರಲ್
- DAKSHINA KANNADA2 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM4 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- BELTHANGADY3 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
- dehali3 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?