Thursday, August 11, 2022

ಸುಳ್ಯ: ಸೊಸೈಟಿಗೆ ಕನ್ನ ಹಾಕಿದ ಕಳ್ಳರು: 1.52 ಲಕ್ಷ ಮೌಲ್ಯದ ಎಲೆಕ್ಟ್ರಾನಿಕ್ ಸಾಧನ ಕಳವು

ಸುಳ್ಯ: ಕೃಷಿ ಪತ್ತಿನ ಸಹಕಾರಿ ಸಂಘದ ಹೊಸ ಕಟ್ಟಡದಲ್ಲಿ ಸಂಘದ ವ್ಯವಹಾರಗಳನ್ನು ಲೆಕ್ಕ ಇರಿಸಿಕೊಳ್ಳಲು ತಂದಿಟ್ಟಿದ್ದ ಅಪಾರ ಮೌಲ್ಯದ ವಸ್ತುವನ್ನು ಕಳವು ಮಾಡಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ.


ಮುರುಳ್ಯ ಗ್ರಾಮದ ಮುರುಳ್ಯ -ಎಣ್ಮೂರು ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಅಲೆಕ್ಕಾಡಿ ಕಟ್ಟಡದಲ್ಲಿ ತಂದಿಟ್ಟಿದ್ದ ಮಾನಿಟರ್-2, ಕಂಪ್ಯೂಟರ್-1 ಸೇರಿದಂತೆ LED ಸ್ಮಾರ್ಟ್ ಟಿವಿಗಳು ಸೇರಿದಂತೆ

1.52 ಲಕ್ಷ ರೂಪಾಯಿ ಮೌಲ್ಯದ ವಸ್ತುವನ್ನು ಮಾ.18ರಿಂದ ನಿನ್ನೆಯ ನಡುವಿನ ಅವಧಿಯಲ್ಲಿ ಯಾರೋ ದರೋಡೆ ಮಾಡಿಕೊಂಡು ಹೋಗಿರುವ ಘಟನೆ ಬೆಳಕಿಗೆ ಬಂದಿದೆ.

ಈ ಬಗ್ಗೆ ಸಹಕಾರಿ ಸಂಘ ಸುಳ್ಯ ತಾಲೂಕು ನಿಯಮಿತ ಅಲೆಕ್ಕಾಡಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ದೂರು ನೀಡಿದ್ದು ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

LEAVE A REPLY

Please enter your comment!
Please enter your name here

Hot Topics

ಕಾಶ್ಮೀರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: 3 ಯೋಧರು ಹುತಾತ್ಮ -ಇಬ್ಬರು ಉಗ್ರರು ಉಡೀಸ್

ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಸೇನಾ ಶಿಬಿರದ ಮೇಲೆ ಉಗ್ರರು ಆತ್ಮಾಹುತಿ ದಾಳಿ ನಡೆಸಿದ್ದು, ಮೂವರು ಯೋಧರು ಹುತಾತ್ಮರಾಗಿದ್ದಾರೆ. ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಘಟನೆಯಲ್ಲಿ ಇನ್ನಿಬ್ಬರು ಯೋಧರು ಗಾಯಗೊಂಡಿದ್ದು, ಅದರಲ್ಲಿ ಓರ್ವ ಸ್ಥಿತಿ...

ಸ್ವಾತಂತ್ರ್ಯೋತ್ಸವ ಹಿನ್ನೆಲೆ ಜಗಮಗಿಸುತ್ತಿದೆ ಮಂಗಳೂರು ಸಿಟಿ ಕಾರ್ಪೊರೇಶನ್

ಮಂಗಳೂರು: ಆಜಾದಿ ಕಾ ಅಮೃತ್‌ಮಹೋತ್ಸವದ ಹಿನ್ನೆಲೆಯಲ್ಲಿ ಇದೀಗ ಎಲ್ಲೆಡೆ ಸಂಭ್ರಮದ ವಾತಾವರಣ ಕಂಡು ಬರುತ್ತಿದೆ.ನಿನ್ನೆ ರಾತ್ರಿಯಿಂದ ಮಂಗಳೂರು ನಗರ ಪಾಲಿಕೆ ಕಚೇರಿಯಲ್ಲಿ ವಿಶೇಷ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸಲಾಗಿದ್ದು, ಇದೀಗ ಪಾಲಿಕೆ ಕಚೇರಿ ಜಗಮಗಿಸುತ್ತಿದೆ. ಹರ್‌ಘರ್‌ತಿರಂಗಾ...

ಸ್ಥಳೀಯರೇ ಪ್ರವೀಣ್‌ನನ್ನು ಹತ್ಯೆಗೈದಿದ್ದು, ಆರೋಪಿಗಳಿಗೆ ಎಸ್‌ಡಿಪಿಐ ಲಿಂಕ್‌ ಎಂದ ಎಡಿಜಿಪಿ

ಮಂಗಳೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಲಾಗಿದೆ. ಇವರೆಲ್ಲರೂ ಸ್ಥಳೀಯರೇ ಆಗಿದ್ದಾರೆ ಎಂದು ಎಡಿಜಿಪಿ ಅಲೋಕ್‌ ಕುಮಾರ್‌ ತಿಳಿಸಿದ್ದಾರೆ.ಈ ಬಗ್ಗೆ ಮಂಗಳೂರಿನ ಎಸ್‌ಪಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ...