Connect with us

    LATEST NEWS

    ಉಡುಪಿಯಲ್ಲಿ ಒಂದು ಕೋಟಿಗೂ ಅಧಿಕ ಬೆಲೆಯ ಮಾದಕ ವಸ್ತು ನಾಶ

    Published

    on

    ಉಡುಪಿ: ಅಂತರಾಷ್ಟ್ರೀಯ ಮಾದಕವಸ್ತು ಮತ್ತು ಅಕ್ರಮ ಕಳ್ಳಸಾಗಣೆ ವಿರೋಧಿ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಜಪ್ಪಿ ಮಾಡಿದ್ದ ಒಂದು ಕೋಟಿ ರೂ. ಅಧಿಕ ಬೆಲೆಯ ಮಾದಕ ವಸ್ತುಗಳನ್ನು ನಂದಿಕೂರು ಕೈಗಾರಿಕಾ ಪ್ರದೇಶದಲ್ಲಿ ನಾಶಪಡಿಸಲಾಯಿತು.


    30,13,100 ರೂ. ಬೆಲೆಯ 103 ಕೆ.ಜಿ ಗಾಂಜಾ, 9,82,500 ರೂ. ಬೆಲೆಯ ಹೈಡ್ರೋವೀಡ್ ಗಾಂಜಾ, 30,33,000 ರೂ. ಬೆಲೆಯ ಎಂ.ಡಿ.ಎಂ.ಎ ಮಾತ್ರೆಗಳು, 30 ಲಕ್ಷ ರೂ. ಬೆಲೆಯ ಎಲ್.ಎಸ್.ಡಿ ಸ್ಟಿಪ್ಸ್ ಸೇರಿ ಒಟ್ಟು 1,00,28,600 ರೂ. ಮೌಲ್ಯದ ಮಾದಕ ವಸ್ತುಗಳನ್ನು ನಾಶಪಡಿಸಲಾಯಿತು.


    ಮಣಿಪಾಲ ಪೊಲೀಸ್ ಠಾಣೆಯಲ್ಲಿ 12, ಉಡುಪಿ ನಗರ ಠಾಣೆಯಲ್ಲಿ 10, ಸಿಇಎನ್ ರಲ್ಲಿ 8, ಕುಂದಾಪುರ 6, ಕಾಪು 5, ಪಡುಬಿದ್ರಿ ಹಾಗು ಕುಂದಾಪುರ ಗ್ರಾಮಾಂತರದಲ್ಲಿ ತಲಾ 2, ಗಂಗೊಳ್ಳಿ, ಹಿರಿಯಡ್ಕ ಮತ್ತು ಶಿರ್ವ ಠಾಣೆಗಳಲ್ಲಿ ತಲಾ 1 ಸೇರಿ 13 ವರ್ಷಗಳಿಂದ ಒಟ್ಟು 50ಕ್ಕೂ ಪ್ರಕರಣಗಳಲ್ಲಿ ಜಪ್ಪಿ ಮಾಡಲಾದ ಮಾದಕ ವಸ್ತುಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
    ಈ ಸಂದರ್ಭ ಎಸ್ಪಿ ವಿಷ್ಣುವರ್ಧನ್, ಎ ಎಸ್ಪಿ ಕುಮಾರ ಚಂದ್ರ, ಡಿವೈಎಸ್ಪಿ ಪ್ರಮೋದ್ ಕುಮಾರ್, ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್, ಉಡುಪಿ ಡಿವೈಎಸ್ಪಿ ಸುಧಾಕರ ನಾಯ್ಕ್ ,ಕಾರ್ಕಳ ಡಿವೈಎಸ್ಪಿ ಎಸ್ ವಿಜಯ ಪ್ರಸಾದ್, ವೃತ್ತ ನಿರೀಕ್ಷಕರಾದ ಮಂಜುನಾಥ್, ಸಂಪತ್, ಮಂಜುನಾಥ ಗೌಡ, ಪ್ರಮೋದ್ ಹಾಗು ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ಕಾಮೆಂಟ್ ಮೂಲಕ ಹಿಂದೂ ಧರ್ಮದ ದೇವರುಗಳ ಬಗ್ಗೆ ಅವಹೇಳನ​: ದೂರು ದಾಖಲು

    Published

    on

    ಮಂಗಳೂರು/ಬೆಂಗಳೂರು: ಹಿಂದೂ ದೇವರುಗಳ  ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಕಾಮೆಂಟ್​ ಹಾಕಿದ ವ್ಯಕ್ತಿಯ ವಿರುದ್ಧ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮಹಾಲಕ್ಷ್ಮಿ ಲೇಔಟ್ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. ಅಂಜುಮ್ ಶೇಖ್ ಎಂಬ ವ್ಯಕ್ತಿ ಸಾಮಾಜಿಕ ಜಾಲತಾಣದಲ್ಲಿ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ ಅಮ್ಮನ ಬಗೆಗೆ ಕೆಟ್ಟದಾಗಿ ಕಾಮೆಂಟ್​ ಮಾಡಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಆಗ್ರಹಿಸಿದೆ.

    ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಈ ಕುರಿತು ಮಾತನಾಡಿ, “ಅಂಜುಮ್ ಶೇಖ್ ಎಂಬಾತ ಹೊರನಾಡು ಅನ್ನಪೂರ್ಣೇಶ್ವರಿ, ಶೃಂಗೇರಿ ಶಾರದಂಭೆ, ಕೊಲ್ಲೂರು ಮೂಕಾಂಬಿಕೆ, ತಿರುಪತಿ ತಿಮ್ಮಪ್ಪ ಮತ್ತು ಗಣೇಶ ದೇವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ. ಈ ಕಾಮೆಂಟ್​ನಿಂದ ನಮಗೆ ಅತ್ಯಂತ ನೋವುಂಟು ಆಗಿದೆ ಇಂತವರ ಮೇಲೆ ಕ್ರಮ ಕೈಗೊಳ್ಳಬೇಕು” ಎಂದು ಪೊಲೀಸರಿಗೆ ದೂರು ನೀಡಿದ್ದಾರೆ.

    ಇದನ್ನೂ ಓದಿ :  ವಾರದ ರಜೆಯಲ್ಲಿ “ಪ್ರಕೃತಿಯೊಂದಿಗೆ ಓದು” ವಿನೂತನ ಕಾರ್ಯಕ್ರಮ; ಎಲ್ಲಿ ಗೊತ್ತಾ ??

    ಧರ್ಮದ ಬಗ್ಗೆ ಈ ರೀತಿ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. “ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ. ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ. ನಾವು ರಾಮನ ತರಹ ಇದ್ದೀವಿ, ಆದರೆ ಪರಶುರಾಮ ಆಗಬೇಕಾಗುತ್ತದೆ” ಎಂದು ದೂರಿನಲ್ಲಿ ದಾಖಲಿಸಿದ್ದಾರೆ. ಈ ಕುರಿತು ಪೊಲೀಸರು ಸೂಕ್ಷ್ಮ ರಿತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ.

    Continue Reading

    bangalore

    ಬಿಗ್ ಬಾಸ್ ನಿಂದ ಧರ್ಮ ಎಲಿಮಿನೆಟ್ ಆಗಿದ್ದು ಯಾಕೆ ಗೊತ್ತಾ ?

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ರ ರಿಯಾಲಿಟಿ ಶೋ 119ನೇ ದಿನಕ್ಕೆ ಕಾಲಿಡುತ್ತಿದೆ. ಅದರ ನಡುವೆ ವಾರ ವಾರ ಎಲಿಮಿನೇಟ್ ಪ್ರಕ್ರಿಯೆ ತೀವ್ರ ಕೂತುಹಲ ಕೆರಳಿಸಿದೆ. ಈ ವಾರ ಬಿಗ್ ಬಾಸ್ ನಿಂದ ಧರ್ಮ ಕೀರ್ತಿರಾಜ್ ಎಲಿಮೀನೆಟ್ ಆಗಿ ಹೊರಬಂದಿದ್ದಾರೆ.


    ಸದಾ ನಗುಮುಖದಲ್ಲೇ ಕಾಣಿಸಿಕೊಳ್ಳುವ ಧರ್ಮ, ಯಾರ ತಂಟೆಗೂ ಹೊಗುತ್ತಿರಲಿಲ್ಲ. ‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ಧರ್ಮ ಹಾಗೂ ಅನುಷಾ ಒಟ್ಟಿಗೆ ದೊಡ್ಮನೆ ಸೇರಿದ್ದರು. ಆದರೆ ಧರ್ಮ ಮತ್ತು ಅನುಷಾ ಬಿಗ್ ಬಾಸ್ ಮನೆಯಲ್ಲಿ ಕ್ಲೋಸ್ ಆಗಿದ್ದರು. ಆದರೆ ಅನುಷಾ ಈ ಮೊದಲೇ ಎಲಿಮಿನೇಟ್ ಆಗಿದ್ದರು. ಇದು ಧರ್ಮ ಅವರಿಗೆ ಬೇಸರ ಮೂಡಿಸಿತ್ತು.
    ಈ ವಾರ ಬಿಗ್ ಬಾಸ್ ಮನೆಯಿಂದ ಆಚೆ ಹೋಗಲು 7 ಮಂದಿ ನಾಮಿನೇಟ್ ಆಗಿದ್ದರು. ಕೊನೆಯ ಹಂತದಲ್ಲಿ ಧರ್ಮ ಹಾಗೂ ಚೈತ್ರಾ ಉಳಿದುಕೊಂಡಿದ್ದರು. ಫೈನಲ್ ಆಗಿ ಧರ್ಮ ಮನೆಯಿಂದ ಹೊರಬಂದರು. ಧರ್ಮ ಬೇಸರದಿಂದಲೇ ಹೊರನಡೆದರು.

    ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

    ಧರ್ಮ ಸದಾ ಕೂಲ್ ಆಗಿಯೇ ಇರುತ್ತಾರೆ. ಅವರು ಯಾವುದೇ ಕಿತ್ತಾಟಕ್ಕೂ ಹೋಗುತ್ತಿರಲಿಲ್ಲ. ತಾಳ್ಮೆ ಕಳೆದುಕೊಂಡು ಒಂದು ದಿನ ಕೂಗಾಡಿದವರಲ್ಲ. ಇನ್ನೊಂದು ಕಡೆ, ಧರ್ಮ ಎಲ್ಲಿಯೂ ಕೂಡ ಹೈಲೈಟ್ ಆಗುತ್ತಿರಲಿಲ್ಲ. ಇವರಿಗಿಂತ ನಂತರ ವೈಲ್ಡ್ ಕಾರ್ಡ್ ನಲ್ಲಿ ಬಂದ ಹನುಮಂತ, ರಜತ್ ಹಾಗೂ ಶೋಭಾ ಶೆಟ್ಟಿ ಈಗಗಾಲೇ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ.
    ಧರ್ಮ ಶಾಂತತೆಯ ಸ್ವರೂಪವನ್ನು ಹೊಂದಿರುವ ವ್ಯಕ್ತಿತ್ವ. ಈ ಮೊದಲು ಎಲಿಮಿನೇಟ್ ಆಗಿರುವ ಲಾಯರ್ ಜಗದೀಶ್ ವಿರುದ್ದ ಇಡೀ ಮನೆಯೇ ತಿರುಗಿ ಬಿದ್ದಾಗಲೂ ಧರ್ಮ ಫೈಟ್ ಗೆ ಹೋಗಿರಲಿಲ್ಲ. ಇದು ಅವರ ಮುಗ್ದತೆ ಮತ್ತು ತಾಳ್ಮೆಯ ಸ್ವರೂಪವನ್ನು ತೋರಿಸುತ್ತದೆ.
    ಬಿಗ್ ಬಾಸ್ ಮನೆ ಎಂದರೆ ನೆನಪಾಗುವುದೇ ಜಗಳ, ಕೋಪ ಮತ್ತು ಮಾತುಗಾರಿಕೆ. ಎಲ್ಲೋ ಒಂದು ಕಡೆ ಧರ್ಮ ಅವರಿಗೆ ತಮ್ಮ ತಾಳ್ಮೆಯೇ ಮುಳುವಾಗಿ ಎಲಿಮಿನೇಟ್ ಆಗಲು ಕಾರಣವಾಯಿತು ಎಂದು ಹೇಳಬಹುದು.

     

    Continue Reading

    LATEST NEWS

    ಸ್ನೇಹಿತನಿಗೆ ಥಳಿಸಿ ಅ*ಪ್ರಾಪ್ತೆ ಮೇಲೆ ಅ*ತ್ಯಾಚಾ*ರ ಎಸಗಿದ ಟ್ರಕ್ ಚಾಲಕ

    Published

    on

    ಮಂಗಳೂರು/ ಮಧ್ಯಪ್ರದೇಶ : 15 ವರ್ಷದ ಬಾ*ಲಕಿಯ ಮೇಲೆ ಟ್ರಕ್ ಚಾಲಕ ಅ*ತ್ಯಾಚಾ*ರವೆಸಗಿರುವ ಘಟನೆ ರೈಸನ್ ಜಿಲ್ಲೆಯಲ್ಲಿ ನಡೆದಿದೆ. ಸಿಲ್ವಾನಿ – ಸಾಗರ್ ರಸ್ತೆಯಲ್ಲಿರುವ ಸಿಯರಾಮೌ ಅರಣ್ಯದಲ್ಲಿ ಕೃ*ತ್ಯ ನಡೆದಿದೆ. ಟ್ರಕ್ ಚಾಲಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದು, ಓರ್ವ ಆರೋಪಿ ಪರಾರಿಯಾಗಿದ್ದಾನೆ.

    ಸ್ನೇಹಿತನಿಗೆ ಥಳಿಸಿ ಕೃ*ತ್ಯ :

    ಸಂ*ತ್ರಸ್ತೆ ಮತ್ತು ಆಕೆಯ 21 ವರ್ಷದ ಸ್ನೇಹಿತ ವನದೇವಿ ದೇವಾಲಯ ಭೇಟಿ ನೀಡಲು ತಮ್ಮ ಬೈಕನ್ನು ರಸ್ತೆ ಬದಿ ನಿಲ್ಲಿಸಿ ತೆರಳುತ್ತಿದ್ದರು. ಈ ವೇಳೆ ಒಂದು ಟ್ರಕ್ ಕೆಟ್ಟು ನಿಂತಿತ್ತು. ಅದರ ಚಾಲಕ ಮತ್ತು ಅವನ ಸಹಚರರು ಕೂಡ ಕಾಡಿನೊಳಗೆ ಹೋಗಿದ್ದಾರೆ.  ಬಾಲಕಿಯ ಸ್ನೇಹಿತನಿಗೆ ಥಳಿಸಿ ಬೈಕ್ ಕೀ ಕಿತ್ತುಕೊಂಡಿದ್ದಾರೆ. ಟ್ರಕ್ ಚಾಲಕ ಸಂಜು ಅ*ಪ್ರಾಪ್ತೆಯನ್ನು ಕಾಡಿನೊಳಗೆ ಎಳೆದೊಯ್ದು ಆಕೆಯ ಮೇಲೆ ಆ*ತ್ಯಾಚಾ*ರ ಎಸಗಿದ್ದಾನೆ ಎಂದು ತಿಳಿದುಬಂದಿದೆ.

    ಇದನ್ನೂ ಓದಿ : ಗೂಗಲ್ ಮ್ಯಾಪ್ ನಂಬಿ ಎಡವಟ್ಟು; 50 ಅಡಿ ಆಳಕ್ಕೆ ಕಾರು ಬಿದ್ದು ಮೂವರ ದುರ್ಮ*ರಣ

    ಮೂವರು ಆರೋಪಿಗಳು ಹೋದ ಬಳಿಕ ಅಪ್ರಾ*ಪ್ತೆ ಹಾಗೂ ಆಕೆಯ ಸ್ನೇಹಿತ ಮುಖ್ಯರಸ್ತೆಗೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆರೋಪಿಗಳ ಬೆಂಬತ್ತಿದ ಪೊಲೀಸರು ಟ್ರಕ್ ಚಾಲಕ ಸಂಜು, ಸಹಚರರಾದ ಶಿವನಾರಾಯಣ ಎಂಬವರನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವ ಮತ್ತೊರ್ವ ಆರೋಪಿ  ಅಕ್ಷಯ್ ಗಾಗಿ ಬಲೆ ಬೀಸಿದ್ದಾರೆ.

    Continue Reading

    LATEST NEWS

    Trending