Connect with us

    LATEST NEWS

    ರೇಣುಕಾಸ್ವಾಮಿ ಕುಟುಂಬವನ್ನು ಸಂತೈಸಿದ ವಿನೋದ್ ರಾಜ್..! 1 ಲಕ್ಷ ರೂ. ಧನಸಹಾಯ ನೀಡಿ ನೆರವು

    Published

    on

    ಚಿತ್ರದುರ್ಗ/ಮಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಸೇರಿರುವ ದರ್ಶನ್‌ನ್ನು ನೋಡಲು ಪ್ರತಿದಿನ ಸೆಲೆಬ್ರೆಟಿಗಳು ಜೈಲಿನತ್ತ ಧಾವಿಸುತಿದ್ದಾರೆ. ಜು.23ರಂದು ವಿನೋದ್ ರಾಜ್‌ಕುಮಾರ್‌ರವರು ದರ್ಶನ್‌ನನ್ನು ಭೇಟಿ ಮಾಡಿದ್ದಾರೆ. ಜೈಲಿಗೆ ಹೋಗವಾಗ ದರ್ಶನ್‌ಗೆ ಇಷ್ಟವಾದ ಊಟವನ್ನು ತೆಗೆದುಕೊಂಡು ಹೋಗಿದ್ದರು. ದಾಸನನ್ನು ಭೇಟಿ ಮಾಡಿದ ಬಳಿಕ ವಿನೋದ್ ರಾಜ್ ಹತ್ಯೆಗೀಡಾದ ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿದ್ದಾರೆ. ಚಿತ್ರದುರ್ಗದಲ್ಲಿರುವ ರೇಣುಕಾಸ್ವಾಮಿ ಅವರ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವಾನ ಹೇಳಿದ್ದಾರೆ. ಬಳಿಕ ವೈಯಕ್ತಿಕವಾಗಿ ಕುಟುಂಬದವರಿಗೆ 1 ಲಕ್ಷ ರೂ ಧನಸಹಾಯ ನೀಡಿದ್ದಾರೆ.

    ರೇಣುಕಾಸ್ವಾಮಿ ಕುಟುಂಬದವರನ್ನು ಭೇಟಿ ಮಾಡಿದ ಬಳಿಕ ಮಾತನಾಡಿದ ವಿನೋದ್ ರಾಜ್, ಮನೆಗೆ ಆಧಾರಸ್ತಂಭವಾಗಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಸಂಕಟ ನೋಡಲು ಸಾಧ್ಯವಾಗುತ್ತಿಲ್ಲ. ಕುಟುಂಬದ ಪರಿಸ್ಥಿತಿ ನೋಡಿದರೆ ಕರುಳು ಕಿತ್ತು ಬರುತ್ತಿದೆ. ಪ್ರತೀ ಜೀವಿಗೂ ಜೀವವಿದೆ. ಯಾರನ್ನೂ ಯಾರಿಗೂ ಕೊಲ್ಲುವ ಹಕ್ಕಿಲ್ಲ. ಕೆಟ್ಟದ್ದು ಜಾಸ್ತಿಯಾದಂತೆ ಇಂತಹ ಘಟನೆಗಳು ಹೆಚ್ಚುತ್ತದೆ. ಇನ್ನು ಇಂತಹ ಘಟನೆಗಳು ಹೆಚ್ಚಾಗದಂತೆ ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು. ಕಲಾವಿದರನ್ನು ನೋಡಿ ಜನರು ಅನುಕರಣೆ ಮಾಡುತ್ತಾರೆ. ಹಾಗಾಗಿ ನಾವು ಜಾಗೃತರಾಗಿರಬೇಕು. ಉನ್ನತ ಸ್ಥಾನಕ್ಕೆ ಹೋದವರು ವಿವೇಕವನ್ನು ಮರೆಯಬಾರದು ಎಂದು ಹೇಳಿದ್ದಾರೆ.

    ಕೊಲ್ಲೂರು ದೇವಾಲಯದಲ್ಲಿ ನಟ ದರ್ಶನ್ ಪತ್ನಿ..! ಸಂಕಷ್ಟ ನಿವಾರಣೆಗೆ ತಾಯಿಯ ಮೊರೆ

    ದರ್ಶನ್ ಭೇಟಿ ಕುರಿತು ಮಾತನಾಡಿರುವ ವಿನೋದ್ ರಾಜ್ ದರ್ಶನನ್ನು ಜೈಲಲ್ಲಿ ಭೇಟಿ ಮಾಡಿದ್ದೇನೆ. ನನ್ನನ್ನು ನೋಡಿದ ಕೂಡಲೇ ಭಾವುಕರಾಗಿ ತಬ್ಬಿಕೊಂಡರು. ರೇಣುಕಾಸ್ವಾಮಿ ಕುಟುಂಬದವರ ಬಗ್ಗೆ ಮಾತನಾಡಲು ಸಾಧ್ಯವಾಗಲಿಲ್ಲ. ಸಿಕ್ಕ ಸಮಯಾವಕಾಶದಲ್ಲಿ ಹೆಚ್ಚು ಮಾತನಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

    Click to comment

    Leave a Reply

    Your email address will not be published. Required fields are marked *

    Baindooru

    ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ

    Published

    on

    ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್‌ ಸಿಮ್‌ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.

    ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್‌ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್‌ ನಂಬರ್‌ ರಿಜಿಸ್ಟರ್‌ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್‌ ನೆಪದಲ್ಲಿ ಈ ನಂಬರ್‌ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್‌ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್‌ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.

    ಅನಂತರ ವಾಟ್ಸಪ್‌ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್‌ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.

    Continue Reading

    LATEST NEWS

    ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’

    Published

    on

    ಮೂಡುಬಿದಿರೆ: 2024 ರ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಗೆ ಭಜನಾ ಗುರು ಅಶೋಕ್ ನಾಥ್ ಕಳಸಬೈಲ್ ಆಯ್ಕೆಯಾಗಿದ್ದಾರೆ.

    ಕಲಾಭೂಮಿ ಪ್ರತಿಷ್ಠಾನ ರಿ. ಬೆಂಗಳೂರು ಇದರ ವತಿಯಿಂದ ಇದೇ ನವೆಂಬರ್ 29ರಂದು ನಾಡು, ನುಡಿ, ಕಲೆ, ಸಾಹಿತ್ಯ, ಸಂಸ್ಕೃತಿ, ಜನಪದ ಮತ್ತು ಜನಪದ ಸೇವೆಯಲ್ಲಿ ಗುರುತಿಸಿ ನೀಡಲ್ಪಡುವ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು, ಕುಣಿತ ಭಜನೆ, ಸಂಗೀತ, ಕ್ರೀಡೆ, ಪರಿಸರ ಮತ್ತು ನೃತ್ಯ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ಕುಣಿತ ಭಜನಾ ಗುರು ಅಶೋಕ್ ನಾಯ್ಕ ಕಳಸಬೈಲು ಇವರಿಗೆ ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದೆಂದು ಕಲಾಭೂಮಿ ಪ್ರತಿಷ್ಠಾನವು ಪ್ರಕಟಣೆಯಲ್ಲಿ ತಿಳಿಸಿದೆ.

    ಅಶೋಕ್ ನಾಯ್ಕರವರು ನಮ್ಮ ಕುಡ್ಲ ವಾಹಿನಿಯ ನೃತ್ಯ ಭಜನೆ ಸೀಸನ್ 1 ಹಾಗು ಸೀಸನ್ 2 ರಲ್ಲಿ ಹಲವು ತಂಡಗಳೊಂದಿಗೆ ಭಾಗವಹಿಸಿದ್ದಾರೆ. ಇವರಿಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’ ಲಭಿಸಿದ ಈ ಸಂಧರ್ಭದಲ್ಲಿ ನಮ್ಮ ಕುಡ್ಲ ವಾಹಿನಿಯು ಶುಭಾಶಯ ಕೋರುತ್ತಿದೆ.

    Continue Reading

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    LATEST NEWS

    Trending