Friday, August 19, 2022

ಒಂದು ವರ್ಷ 3 ತಿಂಗಳು ಮೋರ್ಚರಿಯಲ್ಲೇ ಕೊಳೆತ ಡೆಡ್‌ಬಾಡಿ: ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ

ಬೆಂಗಳೂರು: ಕರೊನಾ ಸೋಂಕಿಗೆ ಬಲಿಯಾಗಿದ್ದ ಇಬ್ಬರ ಮೃತದೇಹಗಳು ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ 15 ತಿಂಗಳ ಕಾಲ ಅಂತ್ಯಸಂಸ್ಕಾರವನ್ನೂ ಕಾಣದೆ ಶವಾಗಾರದ ಶೈತ್ಯಪೆಟ್ಟಿಗೆಯಲ್ಲಿ ಕೊಳೆಯುತ್ತಿದ್ದ ಅಮಾನವೀಯ ಪ್ರಕರಣ ಶನಿವಾರ ಬೆಳಕಿಗೆ ಬಂದಿದೆ.

ಇದು ಬೆಂಗಳೂರಿನ ಇಎಸ್​ಐ ಆಸ್ಪತ್ರೆ ಸಿಬ್ಬಂದಿಯ ನಿರ್ಲಕ್ಷ್ಯ ಎಂಬುದು ಮೇಲ್ನೋಟಕ್ಕೆ ಸಾಬೀತಾಗಿದೆ. ಎರಡು ಶವಗಳು ಕೊಳೆತ ಸ್ಥಿತಿಯಲ್ಲಿದ್ದರಿಂದ ಮುಖ ಚಹರೆ ಸಿಗದೆ ದೊಡ್ಡ ತಲೆನೋವಾಗಿತ್ತು.

ಕೊನೆಗೆ ಒಂದೂವರೆ ವರ್ಷದಿಂದ ಮೃತರಾದವರ ಪಟ್ಟಿ ಮತ್ತು ಹಸ್ತಾಂತರ ಮಾಡಿದ ಶವಗಳ ವಿವರವನ್ನು ಸುದೀರ್ಘವಾಗಿ ಪರಿಶೀಲನೆ ನಡೆಸಿದಾಗ ಚಾಮರಾಜಪೇಟೆಯ ವಿಧವೆ ದುರ್ಗಾ ಮತ್ತು ಕೆ.ಪಿ. ಅಗ್ರಹಾರದ ಮುನಿರಾಜು ಎಂಬುದು ಗೊತ್ತಾಗಿದೆ.
ಏನಿದು ಪ್ರಕರಣ
ಕರೊನಾ ಸೋಂಕು ತಗುಲಿದ್ದ ಚಾಮರಾಜಪೇಟೆಯ 40 ವರ್ಷದ ಮಹಿಳೆ ದುರ್ಗಾ ಮತ್ತು 35 ವರ್ಷದ ಕೆ.ಪಿ. ಅಗ್ರಹಾರದ ಮುನಿರಾಜು ಚಿಕಿತ್ಸೆಗೆಂದು ಕಾರ್ವಿುಕರ ವಿಮಾ ಆಸ್ಪತ್ರೆ ಇಎಸ್​ಐಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಿಸದೆ 2020ರ ಜುಲೈನಲ್ಲಿ ಅಸುನೀಗಿದ್ದರು. ಆನಂತರ ಶವಗಳನ್ನು ಶವಾಗಾರದ ಶೈತ್ಯಾಗಾರಕ್ಕೆ ಸ್ಥಳಾಂತರಿಸಲಾಗಿತ್ತು. ಇದರ ನಡುವೆ ಇಎಸ್​ಐ ಆಸ್ಪತ್ರೆಯಲ್ಲಿ ಹೊಸ ಶವಾಗಾರ ತೆರೆಯಲಾಗಿತ್ತು.

ಈ ಹಿನ್ನೆಲೆಯಲ್ಲಿ ಹಳೆಯ ಶವಾಗಾರ ಬಂದ್ ಮಾಡಲಾಗಿತ್ತು. ದುರ್ದೈವವೆಂದರೆ, ಮುಚ್ಚಲ್ಪಟ್ಟ ಹಳೆಯ ಶವಾಗಾರದಲ್ಲಿ ಈ ಇಬ್ಬರು ನತದೃಷ್ಟರ ಕಳೇಬರ ಉಳಿದುಕೊಂಡಿದ್ದವು.

ಆನಂತರ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿ ಹಳೆ ಶವಾಗಾರದ ಕಡೆ ಕಣ್ಣೆತ್ತಿಯೂ ನೋಡಿಲ್ಲ. ಮೃತರ ಕುಟುಂಬ ಸದಸ್ಯರು ಸಹ ಆಸ್ಪತ್ರೆಗೆ ಹೋಗಿ ವಿಚಾರಿಸುವ ಪ್ರಯತ್ನ ಮಾಡಿಲ್ಲ ಎನ್ನಲಾಗುತ್ತಿದೆ.

ಹಳೆಯ ಶವಾಗಾರ ಪರಿಶೀಲಿಸುವುದಕ್ಕಾಗಿ ಮೊನ್ನೆ ನ.27ರಂದು ಬಾಗಿಲು ತೆಗೆದು ನೋಡಿದಾಗ ಶೈತ್ಯಾಗಾರದಲ್ಲಿ ಮಹಿಳೆ ಮತ್ತು ಪುರುಷನ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಸ್ಪತ್ರೆ ವೈದ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಇದು ದಿಗ್ಭ್ರಮೆಗೊಳಿಸಿದೆ. ಬಳಿಕ ರಾಜಾಜಿನಗರ ಠಾಣೆಗೆ ವಿಷಯ ಮುಟ್ಟಿದೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು 2 ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ.

ಕೊಳೆತ ಶವಗಳ ಮುಖ ಚಹರೆ ಪತ್ತೆಯಾಗಿರಲಿಲ್ಲ.

ದಾಖಲೆ ಪರಿಶೀಲಿಸಿದಾಗ ಮೃತರ ಗುರುತು ಗೊತ್ತಾಗಿದೆ. ವಿಳಾಸ ಮತ್ತು ಸಂಬಂಧಿಕರ ಮೊಬೈಲ್ ನಂಬರ್ ಪಡೆದು ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ…!

ಕಾಸರಗೋಡು: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಎಂಟು ಲಕ್ಷ ಪಂಗನಾಮ ಹಾಕಿದ ಘಟನೆಗೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಕಾಸರಗೋಡಿನಲ್ಲಿ ನಡೆದಿದೆ.ಸುರತ್ಕಲ್ ನ ಬಿನೋಯ್ ಯಾನೆ ಸನತ್ ಶೆಟ್ಟಿ ಬಂಧಿತ ಆರೋಪಿ.ಈತ ಸಂಗಮ್...

ಸುರತ್ಕಲ್‌ನಲ್ಲಿ ಕತ್ತಿ ಬೀಸಿ ಹುಚ್ಚಾಟ: ಓರ್ವನ ಬಂಧನ

ಮಂಗಳೂರು: ದಾರಿ ಮಧ್ಯೆ ಕತ್ತಿ ಬೀಸಿ ಹುಚ್ಚಾಟ ನಡೆಸಿದ ಜಾರ್ಖಾಂಡ್‌ ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಮಂಗಳೂರು ಹೊರ ವಲಯದ ಸುರತ್ಕಲ್ ಸಮೀಪದ ಕಾನದಲ್ಲಿ ನಡೆದಿದೆ.ಅತಲ್ ಕುಲ್ಲು (30) ಬಂಧಿತ...

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...