Connect with us

    BANTWAL

    ಬಂಟ್ವಾಳದಲ್ಲಿ ಅವ್ಯವಸ್ಥೆಯ ಆಗರದಲ್ಲಿ ಬಿಚ್ಚಿಹೋದ 10 ಕೋಟಿ ವೆಚ್ಚದ ಆಡಳಿತ ಸೌಧ..!!

    Published

    on

    ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಿಸಿರೋಡಿನ ಹೃದಯಭಾಗದಲ್ಲಿ ಕಳೆದ 8 ವರ್ಷಗಳ ಹಿಂದೆ ಸುಮಾರು 10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಮಿನಿವಿಧಾನ ಸೌಧದ ಕಟ್ಟಡದಲ್ಲಿ ಬಿರುಕುಗಳು ಕಂಡಿದ್ದು, ನೀರು ಸೋರಿಕೆಯಾಗುತ್ತಿದೆ.


    ಕಂದಾಯ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ವತಿಯಿಂದ ನಿರ್ಮಾಣವಾದ ಈ ಕಟ್ಟಡ ಕಳಪೆ ಗುಣಮಟ್ಟದ್ದಾಗಿದ್ದು, ವರ್ಷಪೂರ್ತಿ ನೀರಿನ ಸೋರಿಕೆಯಾಗುತ್ತಿದೆ ಎಂಬ ಆರೋಪವನ್ನು ಇಲ್ಲಿನ ಸಿಬ್ಬಂದಿಗಳು ಮಾಡುತ್ತಿದ್ದಾರೆ.

    ಇನ್ನು ಇತ್ತ ಕಟ್ಟಡ ನಿರ್ಮಾಣದ ಬಳಿಕ ಇದರ ಸಮಗ್ರವಾದ ನಿರ್ವಹಣೆಯನ್ನು ಸಂಬಂಧ ಪಟ್ಟ ಇಲಾಖೆ ಮಾಡದೆ ನುಣುಚಿಕೊಂಡಿದ್ದ ಪರಿಣಾಮ ಕಟ್ಟಡದಲ್ಲಿ ಸೋರಿಕೆಯಾಗುತ್ತಿದೆ ಎಂಬ ಆರೋಪವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ಮಾಡ್ತಾ ಇದ್ದಾರೆ.


    ಕಳೆ ಅಂತಸ್ತಿನ ಕೊಠಡಿಯೊಂದರಲ್ಲಿ ವರ್ಷದ 365 ದಿನವೂ ನೀರು ಸೋರಿಕೆಯಗುತ್ತಿದ್ದು, ಪ್ಲಾಸ್ಟಿಕ್ ಬಕೆಟ್ ಇರಿಸಿದ್ದೇವೆ.ಪ್ರತಿ ದಿನ ಬೆಳಿಗ್ಗೆ ಹಾಗೂ ಸಂಜೆ ವೇಳೆ ಬಕೆಟ್ ನಲ್ಲಿ ತುಂಬಿದ ನೀರನ್ನು ಚೆಲ್ಲುವ ಕೆಲಸ ಮಾಡುತ್ತಿದ್ದೇವೆ.

    ಕಚೇರಿ ಕೆಲಸಕ್ಕೆ ಬರುವ ಸಾರ್ವಜನಿಕರ ತಲೆಯ ಮೇಲೆ ನೀರು ಬೀಳುತ್ತದೆ.
    ಕಚೇರಿಯ ಒಳಗಡೆ ಅಧಿಕಾರಿಗಳು ಕುಳಿತುಕೊಳ್ಳಲು ಅಸಾಧ್ಯ ಪರಿಸ್ಥಿತಿ ಇದೆ. ಈ ಬಗ್ಗೆ ಸಂಬಂಧಿಸಿದ ಇಲಾಖೆಗೆ ತಿಳಿಸಿದ್ದು, ತಾತ್ಕಾಲಿಕ ಪರಿಹಾರಕ್ಕೆ ಮನವಿ ಮಾಡಿದ್ದೇವೆ ಎನ್ನುತ್ತಿದ್ದಾರೆ ಇಲ್ಲಿನ ಅಧಿಕಾರಿಗಳು.

    ಇನ್ನು ಇಲ್ಲಿ ಮಿನಿವಿಧಾನ ಸೌಧದ ಕಟ್ಟಡ ನಿರ್ಮಾಣವಾದ ಬಳಿಕ ಸೋಲಾರ್ ವಿದ್ಯುತ್ ಪೂರೈಕೆ ಮಾಡುವ ಉದ್ದೇಶದಿಂದ ಮೇಲ್ಚಾವಣಿಯಲ್ಲಿ ಸೋಲಾರ್ ಸಿಸ್ಟಮ್ ಅಳವಡಿಕೆ ಮಾಡಲಾಗಿದೆ.

    ಈ ಕಾಮಗಾರಿ ವೇಳೆ ಮೇಲ್ಚಾವಣಿಗೆ ಹಾನಿಯಾಗಿರುವ ಸಾಧ್ಯತೆಗಳು ಹೆಚ್ಚು ಇವೆ ಎನ್ನಲಾಗಿದೆ. ಹಾಗಾಗಿ ಕಟ್ಟಡ ಬಿರುಕು ಬೀಳುವ ಸಾಧ್ಯತೆಗಳಿದ್ದು, ಅ ಬಿರುಕಿನ ಮೂಲಕ ನೀರು ಸೋರಿಕೆಗೆ ಕಾರಣವಿರಬಹುದು ಎಂಬ ಮಾತುಗಳು ಕೇಳಿಬಂದಿವೆ.

    ಕಟ್ಟಡ ನಿರ್ಮಾಣವಾದ ಬಳಿಕ ಐದು ವರ್ಷಗಳಿಗೊಮ್ಮೆ ಕಟ್ಟಡಕ್ಕೆ ಪೈಟಿಂಗ್ ಹಾಗೂ ವಾಟರ್ ಪ್ರೂಪಿಂಗ್ ಕೆಲಸ ಮಾಡಿಸಬೇಕು. ಆದರೆ ಈ ಕಟ್ಟಡದ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿವೆ.

    ಸ್ವಚ್ಚತೆಯಿಲ್ಲದ ಕಚೇರಿಯಲ್ಲಿ ಅಲ್ಲಲ್ಲಿ ಕಸದ ರಾಶಿ, ಹಾಗೂ ಗೋಡೆಗಳಲ್ಲಿ, ಅಲ್ಲಲ್ಲಿ ಉಗುಳಿದ ಎಂಜಲುಗಳಿವೆ ಎಂಬುದು ಸಾರ್ವಜನಿಕ ಆರೋಪವಾಗಿದೆ.

    ಅಷ್ಟು ಮಾತ್ರವಲ್ಲ ಇಲ್ಲಿ ಮಹಿಳೆಯರಿಗಾಗಿ ಎರಡು ಶೌಚಾಲಯಗಳ ನಿರ್ಮಾಣ ಮಾಡಲಾಗಿದ್ದು ಒಂದಕ್ಕೆ ಬಾಗಿಕು ಮೊದಲೇ ಇಲ್ಲ. ಇನ್ನೊಂದರ ಬಾಗಿಲು ಮುರಿದು ಬೀಳುವ ಸ್ಥಿತಿಯಲ್ಲಿ ಇದೆ ಎಂದು ಇಲ್ಲಿನ ಮಹಿಳಾ ಸಿಬ್ಬಂದಿ ಆರೋಪ ಮಾಡಿದ್ದಾರೆ.

    ಒಟ್ಟಿನಲ್ಲಿ ಅವ್ಯವಸ್ಥೆಯ ಆಗರವಾಗಿರುವ ಮಿನಿವಿಧಾನ ಸೌಧಕ್ಕೆ ಕಿವಿಹಿಂಡಿ ಸರಿ ಮಾಡುವ ಕೆಲಸ ಶೀಘ್ರವೇ ಆಗಬೇಕಾಗಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending