Tuesday, January 26, 2021

ನಕಲಿ ಮದ್ಯ ಸೇವನೆ 10ಸಾವು; ಹಲವರು ಆಸ್ಪತ್ರೆಗೆ ದಾಖಲು..!

ನಕಲಿ ಮದ್ಯ ಸೇವನೆ 10ಸಾವು; ಹಲವರು ಆಸ್ಪತ್ರೆಗೆ ದಾಖಲು..!

ಭೋಪಾಲ್: ನಕಲಿ ಮದ್ಯ ಸೇವನೆ ಪರಿಣಾಮ 10ಮಂದಿ ಸಾವನ್ನಪ್ಪಿದ್ದು 10ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಮಧ್ಯಪ್ರದೇಶದ ಮೊರೊನಾ ಜಿಲ್ಲೆಯಲ್ಲಿ ನಡೆದಿದೆ.

ಮೊರೋನಾ ಜಿಲ್ಲೆಯ ಮಾನ್ಪುರಿ ಪೃಥ್ವಿ ಮತ್ತು ಪಹಾವಾಲಿ ಗ್ರಾಮಗಳಲ್ಲಿ ಈ ಸಾವು ಸಂಭವಿಸಿದೆ. ಅಸ್ವಸ್ಥರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಜಿಪಿ ಮನೋಜ್ ಶರ್ಮಾ ಅವರು ಹೇಳಿದ್ದಾರೆ. ಮೃತದೇಹಗಳ ವೈದ್ಯಕೀಯ ವರದಿ ಇನ್ನಷ್ಟೇ ಬರಬೇಕಾಗಿದೆ.

ಮನ್ಪುರಿ ಪೃಥ್ವಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ನಕಲಿ ಮದ್ಯ ಸೇವನೆ ಮಾಡಿದ್ದ ಹಲವರು ಇದ್ದಕ್ಕಿದ್ದಂತೆ ಅಸ್ವಸ್ಥರಾಗಿದ್ದರು. ಕೂಡಲೇ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, 10 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆಂದು ಬಲ್ಲ ವರದಿಗಳಿಂದ ತಿಳಿದು ಬಂದಿದೆ.

10 ಮಂದಿಯಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೂವರನ್ನು ಬಂಟಿ, ಜಿತೇಂದ್ರ ಗುರ್ಜಾರ್, ರಾಮ್ನಿವಾಸ್ ಗುರ್ಜಾರ್ ಎಂದು ಗುರ್ತಿಸಲಾಗಿದೆ.

ಘಟನೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಮಧ್ಯಪ್ರದೇಶ ಸಚಿವ ನರೋತ್ತಮ್ ಮಿಶ್ರಾ ಅವರು, ಘಟನೆ ಸಾಕಷ್ಟು ನೋವು ತಂದಿದೆ. ಈ ಸಂಬಂಧ ಆರೋಗ್ಯಾಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಈಗಾಗಲೇ ಹಿರಿಯ ಅಧಿಕಾರಿಗಳು ಭೇಟಿ ನೀಡಿದ್ದು, ಪ್ರಕರಣದ ತನಿಖೆ ನಡೆಸಲು ತಂಡ ರಚಿಸಲಾಗಿದೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...
Copy Protected by Chetans WP-Copyprotect.