Connect with us

    LATEST NEWS

    10 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ..! 16 ವರ್ಷದ ಸ್ನೇಹಿತನಿಂದ ಕೃತ್ಯ..!

    Published

    on

    ಮಂಗಳೂರು/ ಗುಜರಾತ್ : 16 ವರ್ಷದ ಹುಡುಗನೊಬ್ಬ 5 ನೇ ತರಗತಿಯ ವಿದ್ಯಾರ್ಥಿನಿಯನ್ನು ಅಪಹರಿಸಿ ಅತ್ಯಾಚಾರ ಮಾಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ. ಗುಜರಾತ್‌ನ ಅರಾವಳಿ ಜಿಲ್ಲೆಯ ಧನ್ಸೂರಾ ಗ್ರಾಮದ ಮನೆಯಿಂದ ನಾಪತ್ತೆಯಾಗಿದ್ದ ಬಾಲಕಿಯ ಪೋಷಕರು ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

    ತನ್ನ ತಾಯಿಯ ಸ್ಮಾರ್ಟ್‌ ಫೋನ್ ಬಳಸುತ್ತಿದ್ದ ಬಾಲಕಿಗೆ ಇನ್‌ಸ್ಟಾಗ್ರಾಮ್‌ನಲ್ಲಿ 16 ವರ್ಷದ ಯುವಕನೊಬ್ಬನ ಪರಿಚಯವಾಗಿದೆ. ಇಬ್ಬರೂ ಚಾಟಿಂಗ್ ಮಾಡುತ್ತಿದ್ದು, ಫೋನ್‌ ನಂಬರ್ ಹಂಚಿಕೊಂಡು ಮಾತನಾಡುತ್ತಿದ್ದರು ಎಂಬುದಾಗಿ ವಿಚಾರಣೆ ವೇಳೆ ಪೋಷಕರು ಹೇಳಿಕೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಅತ್ಯಾಚಾರಕ್ಕೆ ಒಳಗಾದ ಬಾಲಕಿ ಮತ್ತು ಆಕೆಯ ಮತ್ತೋರ್ವ ಅಪ್ರಾಪ್ತ ಸಹೋದರಿ ಇನ್‌ಸ್ಟಾಗ್ರಾಮ್‌ನಲ್ಲಿ 7 ಖಾತೆಗಳನ್ನು ತೆರೆದಿದ್ದು, 2 ಅಕೌಂಟ್‌ನಲ್ಲಿ ಸಕ್ರೀಯವಾಗಿದ್ದರು ಎಂಬುದ ಕೂಡಾ ಗೊತ್ತಾಗಿದೆ.

    ಬಾಲಕಿಯ ಜೊತೆ ಚಾಟಿಂಗ್ ಮಾಡಿ ಫೋನ್ ಕೂಡಾ ಮಾಡುತ್ತಿದ್ದ ಹುಡುಗ ಮನೆಯವರಿಗೆ ತಿಳಿಯದಂತೆ ಆಕೆಯನ್ನು ಕರೆದೊಯ್ದಿದ್ದಾನೆ. ಬಾಲಕಿ ನಾಪತ್ತೆ ಪ್ರಕರಣದ ವಿಚಾರಣೆ ನಡೆಸಿದ ಪೊಲೀಸರು ಮನೆಯವರು ನೀಡಿದ ಮಾಹಿತಿ ಆದರಿಸಿ ಹುಡುಕಾಟ ನಡೆಸಿ ಬಾಲಕಿಯನ್ನು ಪತ್ತೆ ಹಚ್ಚಲಾಗಿದೆ. ಬಳಿಕ ವಿಚಾರಣೆ ನಡೆಸಿದ ಪೊಲೀಸರಿಗೆ ಬಾಲಕಿಯ ಅತ್ಯಾಚಾರ ನಡೆದಿರುವುದು ಆಕೆಯ ಹೇಳಿಕೆಯಿಂದ ಗೊತ್ತಾಗಿದೆ.

    ಇಬ್ಬರೂ ಅಪ್ರಾಪ್ತರಾಗಿದ್ದು , ಸಂತ್ರಸ್ತ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಬಾಲಕನನ್ನು ಬಾಲ ನ್ಯಾಯ ಮಂಡಳಿಗೆ ಹಸ್ತಾಂತರ ಮಾಡಲಾಗಿದ್ದು, ಬಾಲಪರಾಧ ಕಾಯ್ದೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

    BELTHANGADY

    ಧರ್ಮಸ್ಥಳ; ಭಕ್ತರಿಗೆ ಸುಸಜ್ಜಿತವಾದ ಸರತಿ ಸಾಲಿನ ನೋಂದಣಿ ವ್ಯವಸ್ಥೆ: ಡಾ. ವೀರೇಂದ್ರ ಹೆಗ್ಗಡೆ

    Published

    on

    ಧರ್ಮಸ್ಥಳ: ವಿವಿಧ ಪ್ರದೇಶದಿಂದ ಆಗಮಿಸುವ ಜನರು ಸಾಕಷ್ಟು ಹೊತ್ತು ಸರತಿ ಸಾಲಿನಲ್ಲಿ ದೇವರ ದರ್ಶನಕ್ಕೆ ಕಾಯು ತ್ತಾರೆ. ಭಕ್ತರಿಗೆ ಆಗುತ್ತಿರುವ ಈ ತೊಂದರೆಯನ್ನು ತಪ್ಪಿಸಲು ಸುಸಜ್ಜಿತವಾದ ಸರತಿ ಸಾಲಿನ ನೋಂದಣಿ ವ್ಯವಸ್ಥೆ ಮತ್ತು ಆರಾಮವಾಗಿ ಕುಳಿತುಕೊಳ್ಳಲು ವ್ಯವಸ್ಥೆ ಇರುವ ಸುಸಜ್ಜಿತ ಕಟ್ಟಡ ನಿರ್ಮಿಸಬೇಕೆನ್ನುವುದು ಹಲವು ವರ್ಷಗಳ ಹಿಂದಿನ ನಿರೀಕ್ಷಿತ ಯೋಜನೆ ಇದೀಗ ಪೂರ್ಣಗೊಂಡು ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಲಿದ್ದಾರೆ. ಕ್ಷೇತ್ರಕ್ಕೆ ಭೇಟಿ ನೀಡುವ ಭಕ್ತಾಧಿಗಳು ಈ ವ್ಯವಸ್ಥೆಯನ್ನು ಉಪಯೋಗಿಸುವಂತೆ ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.

    ಭಾರತದ ಉಪರಾಷ್ಟ್ರ ಪತಿ ಜಗದೀಪ್ ಧನ್ಕರ್ ಅವರು ಮಂಗಳವಾರ ಶ್ರೀ ಕ್ಷೇತ್ರದ ನೂತನ ಸೌಲಭ್ಯಗಳನ್ನು ಒಳ ಗೊಂಡ ಸರತಿ ಸಾಲಿನ ಕಟ್ಟಡ ಸಂಕೀರ್ಣ ಶ್ರೀ ಸಾನ್ನಿಧ್ಯ ಇದರ ಉದ್ಘಾಟನೆ ಮತ್ತು ಗ್ರಾಮಾಭಿವೃದ್ಧಿ ಯೋಜನೆಯ 2024- 25ರ ಜ್ಞಾನದೀಪ ಕಾರ್ಯಕ್ರಮದ ಉದ್ಘಾಟನೆಯ ತಯಾರಿಯ ಸಂದರ್ಭ ಸೋಮವಾರ ಸುದ್ದಿಗಾರ ರನ್ನುದ್ದೇಶಿಸಿ ಮಾತನಾಡುತ್ತಿದ್ದರು.

    ಈ ರೀತಿಯ ಸುಸಜ್ಜಿತ ಸಂಕೀರ್ಣ ನಿರ್ಮಿ ಸಲು ಕಳೆದ 15 ವರ್ಷದಿಂದ ಯೋಜಿಸಿ 11 ವಿವಿಧ ಯೋಜನೆ ರೂಪಿಸಿ ಅಂತಿಮವಾಗಿ ರೂಪಿಸಿದ ಸಾನಿಧ್ಯ ಸಂಕೀರ್ಣ ಸುಸಜ್ಜಿತ ವಾಗಿ ರೂಪಿಸಲಾಗಿದೆ.ಇದರಲ್ಲಿ ವ್ಯವಸ್ಥಿ ತವಾಗಿ ನೋಂದಣಿ, ಸೂಕ್ತ ಮಾಹಿತಿ ನೀಡುವ ವ್ಯವಸ್ಥೆ, ಕುಳಿತು ಕೊಳ್ಳಲು ವ್ಯವಸ್ಥೆ, ಇದರಿಂದ ಭಕ್ರರು ಸಮಾಧಾನ ಚಿತ್ತ ರಾಗಿ ಕುಳಿತು ದೇವರ ದರ್ಶನ ಮಾಡಬಹುದಾಗಿದೆ. ಈ ವ್ಯವಸ್ಥೆ ಉಪಯೋಗ ಭಕ್ತಾದಿಗಳಿಗೆ ಲಭಿಸಲಿದೆ ಎಂದು ಹೆಗ್ಗಡೆ ವಿವರಿಸಿದರು.

    Continue Reading

    LATEST NEWS

    ಮಂಗಳೂರು:‌ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

    Published

    on

    ಮಂಗಳೂರು: ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಶಿಶುಗಳಿಗೆ ಜನ್ಮ ನೀಡಿದ್ದಾರೆ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

    ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ವರು ಶಿಶುಗಳಿಗೆ ಜನ್ಮ ನೀಡಿದ ಮಹಾತಾಯಿ. ಈ ನಾಲ್ವರು ಶಿಶುಗಳ ಪೈಕಿ ಎರಡು ಗಂಡು, ಎರಡು ಹೆಣ್ಣು ಶಿಶುಗಳಿಗೆ ಜನ್ಮ ನೀಡಿದ್ದಾರೆ. ಈ ಶಿಶುಗಳು ಕ್ರಮವಾಗಿ 1.1 ಕೆಜಿ, 1.2 ಕೆಜಿ, 800 ಗ್ರಾಂ, 900 ಗ್ರಾಂ ತೂಕ ಹೊಂದಿದೆ. ಆದರೆ 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಶಿಶುಗಳಿಗೆ ಎನ್‌ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ನಾಲ್ಕು ಶಿಶುಗಳ ಜನನ ಬಹಳ ಅಪರೂಪವಾಗಿದ್ದು, ಇದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ. ಸ್ತ್ರೀರೋಗತಜ್ಞೆ, ಡಾ.ಜೋಯ್ಲೀನ್ ಡಿಅಲ್ಮೇಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದರು. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ.ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣವಾಗಿದೆ.

    Continue Reading

    LATEST NEWS

    ಉಡುಪಿ: ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ-ಮಹಿಳೆ ಸಾವು

    Published

    on

    ಉಡುಪಿ: ಬೈಕ್‌ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನ ಹಿಂದೆ ಕುಳಿತಿದ್ದ ನಾಗವೇಣಿ (30) ಮೃತಪಟ್ಟ ಘಟನೆ ಜ.5ರಂದು ನಡೆದಿದೆ.

    ಬೈಂದೂರಿನ ಬೋಳಂಬಳ್ಳಿ ನಿವಾಸಿಗಳಾದ ಸತೀಶ್ (33) ಮತ್ತು ಅವರ ಪತ್ನಿ ನಾಗವೇಣಿ (30) ಅವರು ಜ.5ರಂದು ರಾಷ್ಟ್ರೀಯ ಹೆದ್ದಾರಿ 66ರ ಮೂಲಕ ಮಣಿಪಾಲ ಕಡೆಗೆ ಮೋಟಾರು ಸೈಕಲ್‌ನಲ್ಲಿ ತೆರಳುತ್ತಿದ್ದು, ಸಂಜೆ 4.30ರ ಸುಮಾರಿಗೆ ಬ್ರಹ್ಮಾವರ ತಾಲೂಕಿನ ಹೇರೂರು ಗ್ರಾಮದ ಶೆಟ್ಟಿಗಾರ್ ಇಂಡಸ್ಟ್ರೀಸ್ ಬಳಿ ಬರುತ್ತಿದ್ದಂತೆ. KL-07-DC-6401 ನೋಂದಣಿ ಸಂಖ್ಯೆ ಹೊಂದಿರುವ ಅತಿವೇಗ ಮತ್ತು ಅಜಾಗರೂಕ ಕಂಟೈನರ್ ಲಾರಿ, ತೀವ್ರ ಎಡಕ್ಕೆ ತಿರುಗಿ ಮೋಟಾರ್‌ಸೈಕಲ್‌ನ ಬಲ ಹ್ಯಾಂಡಲ್‌ಗೆ ಹೊಡೆದಿದೆ.

    ಪರಿಣಾಮ ದಂಪತಿ ಬೈಕ್‌ನಿಂದ ರಸ್ತೆಗೆ ಬಿದ್ದಿದ್ದಾರೆ. ಸತೀಶ್ ಅವರ ಕೈ ಮತ್ತು ತೊಡೆಯ ಭಾಗಕ್ಕೆ ಗಾಯಗಳಾಗಿದ್ದರೆ, ನಾಗವೇಣಿ ಅವರ ತಲೆ, ಮುಖ ಮತ್ತು ಎಡ ಭುಜಕ್ಕೆ ತೀವ್ರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ನಾಗವೇಣಿ ಸಂಜೆ 6.30ರ ಸುಮಾರಿಗೆ ಮೃತಪಟ್ಟಿದ್ದಾರೆ.

    ಕಂಟೈನರ್ ಲಾರಿ ಚಾಲಕ ವಾಹನವನ್ನು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ.ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Continue Reading

    LATEST NEWS

    Trending