Monday, January 24, 2022

ಗೇಟ್ ಬಿದ್ದು 10 ವರ್ಷದ ಬಾಲಕ ಸಾವು

ಚಿಕ್ಕೋಡಿ: ಇಲ್ಲಿನ ಪಟ್ಟಣದ ಆರ್​ಡಿ ಕಾಲೇಜಿನ ಮುಖ್ಯ ಗೇಟ್ ಬಿದ್ದು 10 ವರ್ಷದ ಬಾಲಕ ಸಾವನ್ನಪ್ಪಿರುವ ಅಹಿತಕರ ಘಟನೆ ನಡೆದಿದೆ.

ಪಟ್ಟಣದ ಇಂದ್ರಾ ನಗರ ನಿವಾಸಿ ಸುಫೀಯಾನ ರಾಜು ಮುಲ್ಲಾ (10) ಸ್ಥಳದಲ್ಲೇ ಸಾವನ್ನಪ್ಪಿರುವ ಬಾಲಕ ಎಂದು ಗುರುತಿಸಲಾಗಿದೆ. ಕಾಲೇಜ್ ಗೇಟ್ ಬಿದ್ದು ಬಾಲಕ ಸಾವುಗೇಟ್ ಮುಂದೆ ಸುಫೀಯಾನ ರಾಜು ಮುಲ್ಲಾ ಆಟವಾಡುತ್ತಿರುವಾಗ ರಭಸದ ಗಾಳಿಗೆ ಗೇಟ್ ಆತನ ಮೈಮೇಲೆ ಬಿದ್ದಿದೆ.

ಪರಿಣಾಮ ಬಾಲಕ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ. ಈ ಘಟನೆಯ ಮಾಹಿತಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಚಿಕ್ಕೋಡಿ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕೋಡಿ ಪೊಲೀಸ್​​ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ.

Hot Topics

ಮಲಗಿದ್ದ ಅತ್ತೆಯನ್ನು ಸುತ್ತಿಗೆಯಿಂದ ಹೊಡೆದು ಕೊಂದ ಸೊಸೆ

ಚಿತ್ರದುರ್ಗ: ಅತ್ತೆ-ಸೊಸೆ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನ ರಾಮಜೋಗಿಹಳ್ಳಿಯಲ್ಲಿ ನಡೆದಿದೆ.ರುದ್ರಮ್ಮ(60) ಹತ್ಯೆಗೀಡಾದ ದುರ್ದೈವಿಯಾಗಿದ್ದು, ಆರೋಪಿ ಸೊಸೆ ಮುದ್ದಕ್ಕ (38)ಳನ್ನು ಪೊಲೀಸರ ವಶಕ್ಕೆ ಪಡೆದುಕೊಂಡಿದ್ದಾರೆ. ಅತ್ತೆ-ಸೊಸೆ ನಡುವೆ ಹೊಂದಾಣಿಕೆ...

ಕಿನ್ನಿಗೋಳಿ ಶಾಂಭವಿ ನದಿಯಲ್ಲಿನ ಅಕ್ರಮ ಮರಳುಗಾರಿಕೆ ಅಡ್ಡೆಗೆ ಅಧಿಕಾರಿಗಳ ದಾಳಿ..!

ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಮಂಗಳೂರು ಗಣಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.ಇಲ್ಲಿನ ಶಾಂಭವಿ ನದಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾತ್ರಿ ಹಗಲೆನ್ನದೆ...

ದುಬೈನಿಂದ ಅಕ್ರಮವಾಗಿ ಸಾಗಿಸುತ್ತಿದ್ದ 1ಕೆ.ಜಿ, 300ಗ್ರಾಂ ಚಿನ್ನ ವಶಕ್ಕೆ

ದೇವನಹಳ್ಳಿ: ದುಬೈನಿಂದ ಬೆಂಗಳೂರಿಗೆ ಬಂದಿಳಿದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ವಶಪಡಿಸಿಕೊಂಡ ಘಟನೆ ನಗರದ ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ಮುಂಬೈಗೆ ಬಂದು ನಂತರ ಮುಂಬೈನಿಂದ ಬೆಂಗಳೂರಿಗೆ...