Thursday, September 29, 2022

10ರ ಬಾಲೆ-ತಾಯಿ ಬೇರೆ ಬೇರೆ ಕೋಣೆಯಲ್ಲಿ ಸೂಸೈಡ್‌: ಪ್ರೀತಿಸಿ ಮದ್ವೆಯಾಗಿದ್ದ ದಂಪತಿ

ಬೆಂಗಳೂರು: ತಾಯಿಯೊಬ್ಬಳು 10 ವರ್ಷದ ಮಗುವನ್ನು ಕೊಂದು ತಾಯಿ ತಾನು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬನಶಂಕರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.


ತನ್ನ 10 ವರ್ಷದ ಮಗಳು ಆರಾಧನಾಗೆ ಮನೆಯಲ್ಲೇ ನೇಣು ಹಾಕಿ ಹತ್ಯೆ ಮಾಡಿದ ಬಳಿಕ ಸೈಮಾ ತಾನು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಪ್ರಸ್ತುತ ಪೊಲೀಸರು ಸೈಮಾ ಪತಿ ನಾರಾಯಣ್ ಅವರನ್ನು ವಿಚಾರಣೆ ಮಾಡುತ್ತಿದ್ದಾರೆ.

ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವಿರಾಜಪೇಟೆ ಮೂಲದ ಪತ್ನಿ ಸೈಮಾ ಮುತ್ತಪ್ಪ, ಕೋಲಾರ ಮೂಲದ ಪತಿ ನಾರಾಯಣ್ ಕಳೆದ 10 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ದಂಪತಿ ಡೆಂಟಲ್ ಡಾಕ್ಟರ್ ಆಗಿದ್ದರು. ನಾರಾಯಣ್ ಮತ್ತು ಸೈಮಾ ಇಬ್ಬರು ಒಟ್ಟಿಗೆ ಆಸ್ಪತ್ರೆಯನ್ನು ನಡೆಸುತ್ತಿದ್ದರು.

ಎರಡು ದಿನಗಳ ಹಿಂದೆ ನಾರಾಯಣ್ ಮನೆಯಲ್ಲಿ ಇರಲಿಲ್ಲ. ಈ ವೇಳೆ ಸೈಮಾ ಮತ್ತು ಮಗಳು ಮನೆಯಲ್ಲಿನ ಪ್ರತ್ಯೇಕ ಕೋಣೆಗಳಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಎರಡು ದಿನಗಳ ಬಳಿಕ ನಾರಾಯಣ್ ಮನೆಗೆ ಬಂದು ನೋಡಿದ ಮೇಲೆ ಘಟನೆ ಬೆಳಕಿಗೆ ಬಂದಿದೆ.

ಈ ದೃಶ್ಯವನ್ನು ನೋಡಿ ತಾಯಿಯೇ ಮಗಳನ್ನು ನೇಣಿಗೆ ಹಾಕಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇಬ್ಬರು ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವುದು ತನಿಖೆಯಾಗಬೇಕಿದೆ.

ವಿಷಯ ತಿಳಿದ ತಕ್ಷಣ ಆಸ್ಟ್ರೇಲಿಯಾದಲ್ಲಿದ್ದ ಸೈಮಾ ಸಹೋದರ ಬೆಂಗಳೂರಿಗೆ ಬಂದಿದ್ದಾರೆ. ಇಂದು ಪೊಲೀಸರಿಗೆ ದೂರು ನೀಡಿದ್ದು, ಇವರ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಉಡುಪಿ: ಮೊಬೈಲ್‌ ಶಾಪ್‌ನಲ್ಲಿ 1 ಲಕ್ಷ ರೂ ಮೌಲ್ಯದ ಸೊತ್ತು ಕದ್ದ ಕಳ್ಳ-ಪ್ರಕರಣ ದಾಖಲು

ಉಡುಪಿ: ಮೊಬೈಲ್ ಅಂಗಡಿಗೆ ರಾತ್ರಿ ವೇಳೆ ನುಗ್ಗಿದ ಕಳ್ಳನೊಬ್ಬ ಮೊಬೈಲ್ ಮತ್ತಿತರ ವಸ್ತುಗಳನ್ನು ಕಳವುಗೈದ ಘಟನೆ ಉಡುಪಿಯ ಮಲ್ಪೆಯ ಬಸ್ ನಿಲ್ದಾಣ ಸಮೀಪದ ಅಂಗಡಿಯಲ್ಲಿ ನಡೆದಿದೆ.ಇತ್ತೀಚಿನ ದಿನಗಳಲ್ಲಿ ಉಡುಪಿಯಲ್ಲಿ ಕಳ್ಳಕಾಕರ ಹಾವಳಿ ಮತ್ತೆ...

ದ್ವೇಷದ ಕಿಚ್ಚು ಹಚ್ಚುವ ಸಂಘಟನೆಗಳ ವಿರುದ್ಧ ತಾರತಮ್ಯವಿಲ್ಲದೇ ಕ್ರಮ ಕೈಗೊಳ್ಳಿ: ಖಾದರ್‌ ಕಿಡಿ

ಮಂಗಳೂರು: ಸರ್ಕಾರ ಕೆಲವು ನೀತಿಗಳಲ್ಲಿ ತಾರತಮ್ಯ ಮಾಡುತ್ತದೆ. ಪರಿಹಾರ ಕೊಡುವುದರಲ್ಲಿ ಕೂಡಾ ಸರ್ಕಾರ ಭೇಧಭಾವ ಮಾಡಿದೆ. ಈ ರೀತಿಯ ತಾರತಮ್ಯ ಧೋರಣೆಯನ್ನು ನಾವು ಸಹಿಸುವುದಿಲ್ಲ. ಪಿಎಫ್‌ಐ ಬ್ಯಾನ್ ಮಾಡಿದಂತೆ ಯಾವ ಸಂಘಟನೆಗಳು ದೇಶದಲ್ಲಿ...

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...