ಉಡುಪಿ: ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವಾಲಯ ದೇಶದಾದ್ಯಂತ 23 ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರುಗೊಂಡಿದೆ.
ಇಎಸ್ಐ ಆಸ್ಪತ್ರೆ ಉಡುಪಿ ಭಾಗದ ಜನತೆಯ ಹಲವಾರು ವರ್ಷಗಳ ಬೇಡಿಕೆಯಾಗಿದ್ದು, ಉಡುಪಿಗೆ 100 ಬೆಡ್ ಸಾಮರ್ಥ್ಯದ ಇಎಸ್ಐ ಆಸ್ಪತ್ರೆ ಮಂಜೂರು ಮಾಡಿದ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಸಚಿವ ಭುಪೇಂದ್ರ ಯಾದವ್ ಹಾಗೂ ಈ ಬಗ್ಗೆ ಶ್ರಮ ವಹಿಸಿದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.