Wednesday, October 5, 2022

ಶ್ರೀಲಂಕಾದ ದೋಣಿಯಿಂದ 100ಕೆಜಿ ಹೆರಾಯ್ನ್ ವಶಕ್ಕೆ :ಭಾರತೀಯ ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ..!

ಶ್ರೀಲಂಕಾದ ದೋಣಿಯಿಂದ 100ಕೆಜಿ ಹೆರಾಯ್ನ್ ವಶಕ್ಕೆ :ಭಾರತೀಯ ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ..!

ನವದೆಹಲಿ: ತಮಿಳುನಾಡಿನ ತೂತ್ತುಕುಡಿಯಲ್ಲಿ ಶ್ರೀಲಂಕಾಕ್ಕೆ ಸೇರಿದ ದೋಣಿಯಿಂದ 100 ಕೆಜಿ ಹೆರಾಯ್ನ್ ನ್ನು ಭಾರತೀಯ ಕರಾವಳಿ ರಕ್ಷಣಾ ಪಡೆ ವಶಪಡಿಸಿಕೊಂಡಿದೆ.ಆದರೆ ಆದರ ಮೂಲ ಪಾಕಿಸ್ತಾನ ಎಂದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದ್ವೀಪರಾಷ್ಟ್ರದ ನಾಗರಿಕರು ಎಂದು ಹೇಳಲಾಗಿರುವ ಆರು ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.ನ.17ರಿಂದ ಒಂಭತ್ತು ದಿನಗಳ ಕಾಲ ನಡೆದ ಶೋಧ ಕಾರ್ಯಾಚರಣೆ ಸಂದರ್ಭದಲ್ಲಿ ಈ ಅಂಶ ಬೆಳಕಿಗೆ ಬಂದಿದೆ .ಪಾಕಿಸ್ತಾನದ ಕರಾಚಿಯಿಂದ ಮಾದಕ ವಸ್ತುಗಳನ್ನು ತಂದು ಸಮುದ್ರ ಮಧ್ಯದಲ್ಲಿಯೇ ಅದನ್ನು ಲಂಕೆಯ ದೋಣಿಗೆ ವರ್ಗಾಯಿಸಲಾಗಿತ್ತು.ಆಸ್ಟ್ರೇಲಿಯಾ ಮತ್ತು ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಅದನ್ನು ಕಳುಹಿಸಿಕೊಡುವ ನಿಟ್ಟಿನಲ್ಲಿ ಅದನ್ನು ದೋಣಿಯಲ್ಲಿ ತರಲಾಗುತ್ತಿತ್ತು ಎಂದು ಆರಂಭಿಕ ವಿಚಾರಣೆ ವೇಳೆ ತಿಳಿದು ಬಂದಿದೆ.

99 ಪ್ಯಾಕೆಟ್‌ ಹೆರಾಯ್ನ್, 20 ಸಣ್ಣ ಪೊಟ್ಟಣಗಳಲ್ಲಿ ಸಿಂಥೆಟಿಕ್‌ ಡ್ರಗ್ಸ್‌, ಐದು ಎಂಎಂ ಪಿಸ್ತೂಲ್‌ ಮತ್ತು ತುರಾಯ ಸ್ಯಾಟಲೈಟ್‌ ಫೋನ್‌ ಅನ್ನು ಕರಾವಳಿ ತೀರ ರಕ್ಷಣಾ ಪಡೆಗಳು ವಶಪಡಿಸಿಕೊಂಡಿವೆ.

ದೋಣಿ ಲಂಕೆಯ ನೆಗೊಂಬೋ ನಗರದ ವ್ಯಕ್ತಿಗೆ ಸೇರಿದ್ದಾಗಿದೆ. ಸಂಶಯ ಬಾರದೆ ಇರಲಿ ಎಂದು ಮಾದಕ ವಸ್ತುಗಳನ್ನು ಇಂಧನ ಟ್ಯಾಂಕ್‌ನಲ್ಲಿ ಇರಿಸಲಾಗಿತ್ತು. ವಿಚಾರಣೆ ವೇಳೆ ಮಾದಕ ವಸ್ತುಗಳನ್ನು ಆಸೀಸ್‌, ಪಾಶ್ಚಿಮಾತ್ಯ ರಾಷ್ಟ್ರಗಳಿಗೆ ಕಳುಹಿಸಲು ಕೊಂಡೊಯ್ಯಲಾಗುತ್ತಿತ್ತು ಎಂದು ಹೇಳಿದ್ದರೂ, ತಮಿಳುನಾಡಿನಲ್ಲಿ ಅದನ್ನು ಸ್ವೀಕರಿಸಲು ಸಿದ್ಧತೆ ನಡೆಸುತ್ತಿದ್ದರೇ ಎಂಬ ಬಗ್ಗೆ ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ತನಿಖೆಗೆ ಮುಂದಾಗಿದ್ದಾರೆ.

ಹಿಂದಿನ ಸಂದರ್ಭಗಳಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳ ಸಾಗಣೆ ಪತ್ತೆಹಚ್ಚಿದಾಗ ಉಗ್ರ ಸಂಘಟನೆಗಳಾದ ಲಷ್ಕರ್‌, ಹಿಜ್ಬುಲ್‌ ಕೈವಾಡ ಇದ್ದದ್ದು ದೃಢವಾಗಿತ್ತು.

LEAVE A REPLY

Please enter your comment!
Please enter your name here

Hot Topics

‘ಮಂಗಳೂರು ದಸರಾ’ ವೈಭವದ ಶೋಭಾಯಾತ್ರೆಗೆ ಕ್ಷಣಗಣನೆ ಆರಂಭ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಶರನ್ನವರಾತ್ರಿ ಅಂಗವಾಗಿ ಕಳೆದ 9 ದಿನಗಳಿಂದ ಪೂಜಿಸಲ್ಪಟ್ಟ ಶಾರದೆ ಹಾಗೂ ನವ ದುರ್ಗೆಯರ ವೈಭವದ ಶೋಭಾ ಯಾತ್ರೆ ಇಂದು ಸಂಜೆ ನಡೆಯಲಿದೆ.ಸಂಜೆ 4 ಗಂಟೆಗೆ ಶಾರದಾ...

ಮಹಾನವಮಿ ಸಂಭ್ರಮ: ಕಟೀಲು ಕ್ಷೇತ್ರದಲ್ಲಿ ಮಹಾ ರಂಗ ಪೂಜೆ

ಮಂಗಳೂರು: ಪುರಾಣ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಮಹಾನವಮಿ ಪ್ರಯುಕ್ತ ಮಹಾ ರಂಗ ಪೂಜೆ ನಡೆಯಿತು. ಆರು ನೂರಕ್ಕೂ ಹೆಚ್ಚು ವಿಶಿಷ್ಟ ಆರತಿಗಳಿಂದ ಸುಮಾರು ಒಂದೂಕಾಲು ಗಂಟೆಗಳ ಕಾಲ ನಡೆದ ಮಹಾಪೂಜೆಯನ್ನು...

ಮಂಗಳೂರು: ಹೆಲಿಕಾಪ್ಟರ್‌ನಲ್ಲಿ ವೈಷ್ಣೋದೇವಿ ಮಂದಿರಕ್ಕೆ ಕರೆದೊಯ್ಯುವುದಾಗಿ 38 ಸಾವಿರ ರೂ. ವಂಚನೆ

ಮಂಗಳೂರು: ವೈಷ್ಣೋದೇವಿ ಮಂದಿರ ಯಾತ್ರೆಗೆ ಹೆಲಿಕಾಪ್ಟರ್ ಬುಕ್ಕಿಂಗ್ ಮಾಡುತ್ತೇನೆಂದು ನಂಬಿಸಿ ಮಂಗಳೂರು ಮೂಲದ ವ್ಯಕ್ತಿಯೊಬ್ಬರಿಗೆ ರೂ.38 ಸಾವಿರ ವಂಚನೆಗೈದ ಬಗ್ಗೆ ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ವಂಚನೆಗೊಳಗಾದ ವ್ಯಕ್ತಿ ಬೆಂಗಳೂರಿನಲ್ಲಿ IT consultant...