DAKSHINA KANNADA
ಬಂಟ್ವಾಳ : 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರ್ ಡಿಕ್ಕಿ – ವಾಹನಗಳು ಜಖಂ
Published
4 hours agoon
By
NEWS DESK2ಬಂಟ್ವಾಳ: ರಸ್ತೆ ಬದಿಯಲ್ಲಿ ಖಾಲಿ ಜಾಗದಲ್ಲಿ ನಿಲ್ಲಿಸಿ ಟಯರ್ ಚೆಕ್ ಮಾಡುತ್ತಿದ್ದ ವೇಳೆ 108 ಆಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಎರಡು ವಾಹನಗಳು ಜಖಂಗೊಂಡಿದ್ದು ಅದೃಷ್ಟವಶಾತ್ ಯಾರಿಗೂ ಗಾಯವಿಲ್ಲದೆ ಪಾರಾಗಿರುವ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳದ ತುಂಬೆ ಸಮೀಪದ ಕಡೆಗೋಳಿಯಲ್ಲಿ ನಡೆದಿದೆ.
ವಿಟ್ಲದಿಂದ ಮಂಗಳೂರಿಗೆ ರೋಗಿಯನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿ ವಾಪಸು ವಿಟ್ಲಕ್ಕೆ ಬರುತ್ತಿದ್ದ 108 ಅಂಬ್ಯುಲೆನ್ಸ್ ವಾಹನಕ್ಕೆ ಇನ್ನೋವಾ ಕಾರು ಡಿಕ್ಕಿಯಾಗಿದೆ. ಕಡೆಗೋಳಿ ಎಂಬಲ್ಲಿ ಆಂಬ್ಯುಲೆನ್ಸ್ ವಾಹನದ ಚಕ್ರದಲ್ಲಿ ಶಬ್ದ ಬಂದಿದೆ ಎಂದು ರಸ್ತೆಯ ಬದಿಯಲ್ಲಿ ನಿಲ್ಲಿಸಿ ಚಾಲಕ ಕರುಣಾಕರ ಅವರು ಪರಿಶೀಲನೆ ಮಾಡುತ್ತಿದ್ದ ವೇಳೆ ಇನ್ನೋವ ಕಾರು ಚಾಲಕ ಶ್ರವಣ್ ಅಂಬ್ಯುಲೆನ್ಸ್ ವಾಹನದ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ.
ಘಟನೆಯಲ್ಲಿ ಯಾವುದೇ ಗಾಯವಾಗದಿದ್ದರೂ ಎರಡು ವಾಹನಗಳಿಗೆ ಹಾನಿಯಾಗಿದೆ. ಪಾಣೆಮಂಗಳೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
BELTHANGADY
ಶ್ರೀಲಂಕಾದಿಂದ ಧರ್ಮಸ್ಥಳಕ್ಕೆ ಆಗಮಿಸಿದ 38 ಜನರ ತಂಡ: ಬಿ.ಸಿ. ಮಾದರಿ ಅಳವಡಿಸಲು ಖಾವಂದರ ಸಲಹೆ
Published
38 minutes agoon
24/01/2025By
NEWS DESK2ಶ್ರೀಲಂಕಾ ದೇಶದ ‘ಲಂಕಾ ಮೈಕ್ರೋಫೈನಾನ್ಸ್ ಪ್ರಾಕ್ಟೀಸನರ್ಸ್ ಅಸೋಸಿಯೇಶನ್’ ನೇತೃತ್ವದಲ್ಲಿ ಅಲ್ಲಿನ 8 ಪ್ರಮುಖ ಆರ್ಥಿಕ ಸಂಸ್ಥೆಗಳು ಧರ್ಮಸ್ಥಳಕ್ಕೆ ಭೇಟಿ ನೀಡಿದೆ. ಸುಮಾರು 38 ಜನರ ತಂಡ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಯನ ನಡೆಸಿದೆ.
‘ಲಂಕಾ ಮೈಕ್ರೋಫೈನಾನ್ಸ್ ಪ್ರಾಕ್ಟೀಸನರ್ಸ್ ಅಸೋಸಿಯೇಶನ್’ ಸಂಸ್ಥೆಯು ಶ್ರೀಲಂಕಾ ದೇಶದ ಕಿರು ಆರ್ಥಿಕ ಸಂಸ್ಥೆಗಳನ್ನು ನಿರ್ವಹಿಸುವ ಅತ್ಯಂತ ಜವಾಬ್ದಾರಿಯುತ ಸಂಸ್ಥೆಯಾಗಿದೆ. ದೇಶದ ಎಲ್ಲಾ ಪ್ರಮುಖ 30 ಕಿರು ಆರ್ಥಿಕ ಸಂಸ್ಥೆಗಳು ಇದರ ಸದಸ್ಯತ್ವ ಪಡೆದುಕೊಂಡಿದೆ. ಈ ಸಂಸ್ಥೆಯು ಶ್ರೀಲಂಕಾದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮಾದರಿಯನ್ನು ಅನುಷ್ಟಾನ ಮಾಡುವ ನಿಟ್ಟಿನಲ್ಲಿ ಈ ಪ್ರವಾಸ ಕೈಗೊಂಡಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ವ್ಯವಸ್ಥೆಯ ಅಧ್ಯಯನ ನಡೆಸಿ ತಮ್ಮ ದೇಶದಲ್ಲೂ ಆರ್ಥಿಕ ಸಂಕಷ್ಟ ದೂರ ಮಾಡಲು ಇದು ಸಹಕಾರಿಯಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಭೇಟಿಯ ಪ್ರಥಮ ಅಧ್ಯಯನ ಮುಗಿದಿದ್ದು, ಕೊನೆಯ ದಿನ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಲಹೆಗಳನ್ನು ಪಡೆದುಕೊಂಡಿದ್ದಾರೆ.
ಈ ವೇಳೆ ‘ಲಂಕಾ ಮೈಕ್ರೋಫೈನಾನ್ಸ್ ಪ್ರಾಕ್ಟೀಸನರ್ಸ್ ಅಸೋಸಿಯೇಶನ್’ ಸದಸ್ಯರು ತಮ್ಮ ಹಲವು ಅನಿಸಿಕೆಗಳನ್ನು ಡಾ.ವೀರೇಂದ್ರ ಹೆಗ್ಗಡೆಯವರ ಬಳಿ ಹಂಚಿಕೊಂಡಿದ್ದಾರೆ. ಬಳಿಕ ಮಾತನಾಡಿದ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಮೈಕ್ರೋ ಫೈನಾನ್ಸ್ ಯಾವ ರೀತಿ ಗ್ರಾಮೀಣ ಜನರ ಆರ್ಥಿಕ ಸಬಲೀಕರಣ ಮಾಡಿದ ಎಂಬ ಮಾಹಿತಿ ಹಂಚಿಕೊಂಡಿದ್ದಾರೆ.
DAKSHINA KANNADA
ನಿಶ್ಚಿತಾರ್ಥಗೊಂಡ ಯುವತಿಯ ಆ ಒಂದು ಪ್ರಶ್ನೆಗೆ ಆತ್ಮಹ*ತ್ಯೆ ಮಾಡಿಕೊಂಡ ಯುವಕ ?
Published
5 hours agoon
24/01/2025By
NEWS DESK3ಪುಂಜಾಲಕಟ್ಟೆ : ವಿವಾಹ ನಿಶ್ಚಿತಾರ್ಥವಾಗಿದ್ದ ಹುಡುಗಿ ಜತೆ ಇನ್‌ಸ್ಟಾಗ್ರಾಮ್ ಬಗ್ಗೆ ನಡೆದ ಜಗಳದಿಂದ ಯುವಕನ ಆತ್ಮಹ*ತ್ಯೆಯಲ್ಲಿ ಅಂತ್ಯಗೊಂಡ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಜ. 21ರಂದು, ಬಂಟ್ವಾಳ ತಾಲೂಕು ಕುಕ್ಕಿಪಾಡಿ ಗ್ರಾಮದ ಎಲ್ಪೇಲು ನಿವಾಸಿ ದಿ. ಯೋಗಿಶ್ ಅವರ ಪುತ್ರ ಚೇತನ್ (25) ಆತ್ಮಹ*ತ್ಯೆ ಮಾಡಿಕೊಂಡವರು. ಚೇತನ್ ದೈವದ ಪಾತ್ರಿಯಾಗಿ ಕೆಲಸ ಮಾಡಿಕೊಂಡಿದ್ದು, ಅವರಿಗೆ ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಮಂಗಳೂರು ತಾಲೂಕು ಕಂದಾವರ ಗ್ರಾಮದ ಓಣಿಬಾಗಿಲು ಮನೆ ನಿವಾಸಿ ದಿ. ಬಾಬು ಅವರ ಪುತ್ರಿ ಚೈತನ್ಯಾಳೊಂದಿಗೆ ಸುಮಾರು 8 ತಿಂಗಳ ಹಿಂದೆ ಮದುವೆ ನಿಶ್ಚಯವಾಗಿತ್ತು.
ಜ. 21ರ ಬೆಳಿಗ್ಗೆ ಸುಮಾರು 11 ಗಂಟೆಗೆ ಚೇತನ್ ಮಾತ್ರ ಮನೆಯಲ್ಲಿದ್ದು, ತಾಯಿ ಪುಷ್ಪಾ ಅವರು ತನ್ನ ತವರು ಮನೆಯಲ್ಲಿದ್ದ ಸಮಯ ಚೈತನ್ಯಾಳು ಅವಳ ಮೊಬೈಲ್‌ನಿಂದ ಪುಷ್ಪಾ ಅವರಿಗೆ ಕರೆ ಮಾಡಿ, ನಾನು ನಿಮ್ಮ ಮನೆಗೆ ಬಂದಿದ್ದೇನೆ, ಚೇತನ್ ಮನೆಯಲ್ಲಿ ಮಲಗಿದ್ದು ಎದ್ದೇಳುತ್ತಿಲ್ಲ ಕೂಡಲೇ ಮನೆಗೆ ಬನ್ನಿ ಎಂದು ತಿಳಿಸಿದ್ದಳು.
ಇದನ್ನೂ ಓದಿ: ಮಸಾಜ್ ಸೆಂಟರ್ ದಾಂಧಲೆ ಪ್ರಕರಣ; 14 ಮಂದಿ ಅರೆಸ್ಟ್
ಪುಷ್ಪಾ ಅವರು 11.30 ರ ವೇಳೆಗೆ ಬಂದು ನೋಡಿದಾಗ ಮನೆಯ ಬಾತ್ ರೂಂ ಮತ್ತು ಮನೆಯ ಮಧ್ಯೆ ಇರುವ ಪ್ಯಾಸೇಜ್‌ನಲ್ಲಿ ಚೇತನ್ ಮಲಗಿದ ಸ್ಥಿತಿಯಲ್ಲಿದ್ದು, ಎಬ್ಬಿಸಲು ಪ್ರಯತ್ನಿಸಿದರೂ ಏಳದೇ ಇದ್ದಾಗ, ಪುಷ್ಪಾ ಅವರು ಮನೆಯ ಛಾವಣಿ ಕಡೆ ನೋಡಿದಾಗ ಲುಂಗಿಯಲ್ಲಿ ನೇಣು ಹಾಕಿದ ರೀತಿಯಲ್ಲಿ ಲುಂಗಿಯನ್ನು ನೋಡಿ ಚೈತನ್ಯಾಳಲ್ಲಿ ಪ್ರಶ್ನಿಸಿದ್ದಾರೆ.
ಅಷ್ಟಕ್ಕೂ ಆಗಿದ್ದೇನು ?
ಚೇತನ್ ಇನ್‌ಸ್ಟಾಗ್ರಾಂನಲ್ಲಿ ಹುಡುಗಿಯೊಬ್ಬಳಿಗೆ ಲೈಕ್ ಮಾಡಿರುವುದು ಪ್ರಶ್ನಿಸಲು ತಾನು ಮನೆಗೆ ಬಂದಿರುವುದಾಗಿ, ಈ ವಿಚಾರದ ಬಗ್ಗೆ ಗಲಾಟೆಯಾಗಿತ್ತು. ಇದರಿಂದ ಬೇಸರಗೊಂಡ ಚೇತನ್ ಮನೆಯೊಳಗೆ ಓಡಿ ಹೋಗಿ ಛಾವಣಿಯ ಅಡ್ಡಕ್ಕೆ ಲುಂಗಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ತಾನೇ ಕೆಳಗಿಳಿಸಿ ಆರೈಕೆ ಮಾಡಿರುವುದಾಗಿ ತಿಳಿಸಿದ್ದಳು.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪುಂಜಾಲಕಟ್ಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಮಂಗಳೂರಿಗೆ ದುಬೈನಿಂದ ಬಂದ ವ್ಯಕ್ತಿಯಲ್ಲಿ ಮಂಕಿಫಾಕ್ಸ್ ಪತ್ತೆ
Published
7 hours agoon
24/01/2025ಬೆಂಗಳೂರು, ಜನವರಿ 23: ಕಳೆದ 14 ವರ್ಷಗಳಿಂದ ದುಬೈನಲ್ಲಿ ವಾಸವಿದ್ದ ವ್ಯಕ್ತಿಯೊಬ್ಬ ಜನವರಿ 17ರಂದು ಮಂಗಳೂರಿಗೆ ಭೇಟಿ ನೀಡಿದ್ದು, ಅವನಿಗೆ ಪುಣೆಯ ಎನ್‌ಐವಿ ಲ್ಯಾಬ್‌ನಲ್ಲಿ ಮಂಕಿಫಾಕ್ಸ್ ಇರುವುದು ದೃಢವಾಗಿದ್ದು ಕರ್ನಾಟಕದಲ್ಲಿ ಪತ್ತೆಯಾದ ಮೊದಲ ಮಂಕಿಪಾಕ್ಸ್ ಪ್ರಕರಣ ಇದಾಗಿದೆ.
ಸೋಂಕಿತನ ಆರೋಗ್ಯ ಸ್ಥಿರವಾಗಿದ್ದು, ಸದ್ಯದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಇನ್ನು ಏರ್‌ಪೋರ್ಟ್‌ನಲ್ಲಿ ಸೋಂಕಿತ ಪತಿಯನ್ನು ನೋಡಲು ಬಂದಿದ್ದ ಪತ್ನಿಯನ್ನು ಐಸೋಲೇಷನ್‌ನಲ್ಲಿರಲು ಸೂಚನೆ ನೀಡಲಾಗಿದೆ. ತಕ್ಷಣ ಐಸೋಲೆಟ್ ಮಾಡಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವ್ಯಕ್ತಿಯ ಸ್ಯಾಂಪಲ್ನ್ನು ಬೆಂಗಳೂರು ಮೆಡಿಕಲ್ ಕಾಲೇಜು ಹಾಗೂ ಪುಣೆಯ ಎನ್‌ಐವಿ ಲ್ಯಾಬ್‌ಗೆ ರವಾನಿಸಲಾಗಿತ್ತು. ಇದೀಗ ಎನ್‌ಐವಿ ಲ್ಯಾಬ್ ರಿಪೋರ್ಟ್‌ನಲ್ಲಿ ಮಂಕಿಪಾಕ್ಸ್ ಸೋಂಕು ದೃಢ ಪಟ್ಟಿದೆ. ಸದ್ಯ ಮಂಕಿಪಾಕ್ಸ್ಗೆ ಕೇಂದ್ರ ಸರ್ಕಾರ ಯಾವುದೇ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿಲ್ಲ.
ಮಂಕಿಪಾಕ್ಸ್ನ ಲಕ್ಷಣಳು :
- ಊದಿಕೊಂಡ ದುಗ್ಧರಸ ಗ್ರಂಥಿಗಳು
- ಜ್ವರ
- ಚಳಿಯ ಅನುಭವ
- ಸ್ನಾಯು ನೋವು
- ತಲೆನೋವು
- ಸುಸ್ತು
ಮಂಕಿಪಾಕ್ಸ್ಗೆ ಇಲ್ಲಿಯವರೆಗೆ ಯಾವುದೇ ಲಸಿಕೆ ಅಥವಾ ಶಿಫಾರಸು ಮಾಡಿದ ಔಷಧವಿಲ್ಲ. ರೋಗಿಗೆ ಆತನ ರೋಗಲಕ್ಷಣಗಳ ಆಧಾರದ ಮೇಲೆ ಮಾತ್ರ ಚಿಕಿತ್ಸೆ ನೀಡಲಾಗುತ್ತದೆ. ಆಂಟಿವೈರಲ್ ಔಷಧಿಗಳನ್ನು ನೀಡುವ ಮೂಲಕ ವೈದ್ಯರು ರೋಗಿಯ ರೋಗವನ್ನು ನಿಯಂತ್ರಿಸುತ್ತಾರೆ.
LATEST NEWS
Oyo ರೂಮ್ ನಲ್ಲಿ ಮಾಡಬಾರದನ್ನು ಮಾಡಿ ಸಿಕ್ಕಿಬಿದ್ದ ಜೋಡಿಹಕ್ಕಿ
ಶ್ರೀಲಂಕಾದಿಂದ ಧರ್ಮಸ್ಥಳಕ್ಕೆ ಆಗಮಿಸಿದ 38 ಜನರ ತಂಡ: ಬಿ.ಸಿ. ಮಾದರಿ ಅಳವಡಿಸಲು ಖಾವಂದರ ಸಲಹೆ
ಬೆಂಗಳೂರು: ಮಂತ್ರಿಮಾಲ್ನಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ
ಕಂದಕಕ್ಕೆ ಉರುಳಿದ ಕಾರು; ಮೂವರ ದು*ರ್ಮರಣ
ಟೀ ಮಾರುವವನ ಯಡವಟ್ಟಿಗೆ 13 ಮಂದಿ ಬಲಿ
ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?
Trending
- BIG BOSS2 days ago
ಗೌತಮಿ-ಧನರಾಜ್ ಬೆನ್ನಲ್ಲೇ ಈ ವಾರ ಫಸ್ಟ್ ಎಲಿಮಿನೇಟ್ ಆಗೋದ್ಯಾರು ?
- BIG BOSS4 days ago
ಬಿಗ್ ಬಾಸ್ ತೊರೆಯುವ ಬಗ್ಗೆ ಮತ್ತೊಮ್ಮೆ ಘೋಷಣೆ ಮಾಡಿದ ಕಿಚ್ಚ
- BIG BOSS1 day ago
ಭಾವನೆಗಳ ಮಹಾಪೂರ ನೀನು, ಕನಸುಗಳ ಶಿಖರ ನೀನು: ಭವ್ಯಾಗೆ ತ್ರಿವಿಕ್ರಮ್ ಪ್ರಪೋಸ್
- BIG BOSS4 days ago
ಬಿಗ್ ಬಾಸ್ ಸೀಸನ್ 11ರ ವಿನ್ನರ್ ಒಬ್ಬರಲ್ಲ ಇಬ್ಬರು… ಅಷ್ಟಕ್ಕೂ ಟ್ರೋಫಿ ನೀಡಿದ ಸುಳಿವೇನು ?