Monday, July 4, 2022

ಕಾಸರಗೋಡು : ಹುಟ್ಟುಹಬ್ಬದಂದೇ ಕ್ರೂರವಿಧಿಗೆ ಬಲಿಯಾದ ಪುಟ್ಟ ಬಾಲೆ ದೀಪಿಕಾ..!

ಕಾಸರಗೋಡು: ವಿಧಿಯೇ ಕ್ರೂರ.. 11 ನೇ ವರ್ಷದ ಹುಟ್ಟುಹಬ್ಬದ ದಿನದಂದೇ ಅಪಘಾತಕ್ಕೆ ಸಿಲುಕಿ  ಬಾಲಕಿ ಮೃತಪಟ್ಟ ದಾರುಣ ಘಟನೆ ಕಾಸರಗೋಡಿನ ಮಂಜೇಶ್ವರದಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ.

ಮಂಜೇಶ್ವರ ಕಟ್ಟೆಬಜಾರಿನ ರವಿಚಂದ್ರ ಹೆಗ್ಡೆ ರವರ ಪುತ್ರಿ ದೀಪಿಕಾ ( 11) ಮೃತ ದುರ್ದೈವಿಯಾಗಿದ್ದಾಳೆ.

ಬಂಗ್ರ ಮಂಜೇಶ್ವರ ಜಿಎಚ್ಎಸ್ಎಸ್ ನ ಆರನೇ ತರಗತಿ ವಿದ್ಯಾರ್ಥಿನಿಯಾಗಿರುವ ದೀಪಿಕಾ ಹುಟ್ಟುಹಬ್ಬದ ಆಚರಣೆಗೆ ಸಾಮಾಗ್ರಿ ತರಲೆಂದು ಮಂಜೇಶ್ವರಕ್ಕೆ ಅಪ್ಪನ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.

ಮಂಜೇಶ್ವರ ಒಳರಸ್ತೆಯ ಗಿಳಿವಿಂಡು ಸಮೀಪ ಇವರು ಸಂಚರಿಸುತ್ತಿದ್ದ ಸ್ಕೂಟರ್ ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.

ಡಿಕ್ಕಿಯಿಂದ ಇಬ್ಬರು ರಸ್ತೆ ಬದಿಗೆ ಬಿದ್ದಿದ್ದು , ಗಂಭೀರ ಗಾಯಗೊಂಡ ದೀಪಿಕಾ ಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ.

ದೀಪಿಕಳ ಅಪ್ಪ ರವಿಚಂದ್ರ ಗಾಯಗೊಂಡಿದ್ದು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತಳು ತಾಯಿ ಮಂಗಳ, ಸಹೋದರಿ ದೀಕ್ಷಾ ಹಾಗೂ ಅಪಾರ ಬಳಗವನ್ನು ಅಗಲಿದ್ದಾರೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಡಿಸಿಪಿ ಹರಿರಾಂ ಶಂಕರ್‌ಗೆ ಮಂಗಳೂರು ನಗರ ಪೊಲೀಸರ ಹೃದಯಸ್ಪರ್ಶಿ ಬೀಳ್ಕೊಡುಗೆ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನಿಂದ ಹಾಸನ ಜಿಲ್ಲೆಗೆ ಎಸ್ಪಿಯಾಗಿ ವರ್ಗಾವಣೆಗೊಂಡ ಡಿಸಿಪಿ ಹರಿರಾಂ ಶಂಕರ್‌ ಅವರನ್ನು ಇಂದು ಮಂಗಳೂರು ನಗರ ಪೊಲೀಸರು ಬೀಳ್ಕೊಟ್ಟರು.ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿರಾಂ ಶಂಕರ್‌, ಮಂಗಳೂರಿನಲ್ಲಿ ವಿವಿಧ...

ಕುವೈಟ್‌-ಮಂಗಳೂರು ಪ್ರಯಾಣಿಕನ ಜೊತೆ ಸಿಬ್ಬಂದಿ ಉದ್ಧಟತನ: ಕ್ಷಮೆ ಕೇಳಿದ ಏರ್‌ಇಂಡಿಯಾ

ಮಂಗಳೂರು: ಕುವೈಟ್‌ನಿಂದ ಮಂಗಳೂರಿಗೆ ಹೊರಡುವ ವೇಳೆ ಕುವೈಟ್‌ನ ಏರ್‌ಇಂಡಿಯಾ ಕೌಂಟರ್‌ನ ವ್ಯವಸ್ಥಾಪಕ ಉದ್ಧಟತನದ ವರ್ತನೆ ಬಗ್ಗೆ ದೂರಿದ ಮಂಗಳೂರಿಗರೊಬ್ಬರಿಗೆ ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ಸಂಸ್ಥೆ ಕ್ಷಮೆ ಕೋರಿದ ಘಟನೆ ನಿನ್ನೆ ನಡೆದಿದೆ.ಕುವೈತ್‌ನ ಅನಿವಾಸಿ ಭಾರತೀಯ,...

ಸಮಾಜವಾದಿ ಪಕ್ಷದ ಎಲ್ಲ ಘಟಕಗಳನ್ನು ವಿಸರ್ಜಿಸಿದ ಅಖಿಲೇಶ್‌ ಯಾದವ್‌

ಲಖನೌ: ಸಮಾಜವಾದಿ ಪಕ್ಷದ (ಎಸ್‌ಪಿ) ಮುಖ್ಯಸ್ಥ ಅಖಿಲೇಶ್ ಯಾದವ್, ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಎಲ್ಲ ಘಟಕಗಳನ್ನು ಭಾನುವಾರ ವಿಸರ್ಜಿಸಿದ್ದಾರೆ. ಇದರಲ್ಲಿ ಯುವ ಘಟಕ ಮತ್ತು ಮಹಿಳಾ ಘಟಕಗಳು ಕೂಡ ಸೇರಿವೆ.ತಮ್ಮ ಈ...