Monday, July 4, 2022

ಗೇಮ್ ಆಡುತ್ತಿದ್ದ ಕಾರಣಕ್ಕೆ ಮೊಬೈಲ್ ಕಿತ್ತುಕೊಂಡ ತಾಯಿ: ನೊಂದ 11 ರ ಬಾಲಕಿ ಆತ್ಮಹತ್ಯೆ

ಕಾಸರಗೋಡು: ಕ್ಷುಲ್ಲಕ ಕಾರಣಕ್ಕೆ 11ರ ಹರೆಯದ ಬಾಲಕಿ ನೇಣು ಬಿಗಿದು ಮೃತ ಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮೇಲ್ಪರಂಬದಲ್ಲಿ ನಡೆದಿದೆ.

ಮೇಲ್ಪರಂಬ ಕಡೆಂಗೋಡಿನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಬಾಲಕಿ. ಬಾಲಕಿ ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತು ಕೊಂಡಿದ್ದರು ಎನ್ನಲಾಗಿದೆ.

ಇದರಿಂದ ನೊಂದಿದ್ದ ಆಕೆ ರಾತ್ರಿ ವೇಳೆ ಕಿಟಕಿಗೆ ಚೂಡಿದಾರ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಲಕಿಯ‌ ದೇಹ ನೇಣು ಬಿಗಿದ ಮನೆಯ ಕಿಟಕಿಯಲ್ಲಿ ನೇತಾಡುತ್ತಿರುವುದನ್ನು ಗಮನಿಸಿದ ಮನೆಯವರು ಹಾಗೂ ಸ್ಥಳೀಯರು ದೇಹವನ್ನು ಕೆಳಗಿಳಿಸಿ ಆಸ್ಪತ್ರೆಗೆ ಸಾಗಿಸಿದರಾದರೂ ಜೀವ ಉಳಿಸಲಾಗಲಿಲ್ಲ ಎನ್ನಲಾಗಿದೆ.

ಬಾಲಕಿಯ ಶವವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು , ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಬಿಟ್ಟು ಕೊಡಲಾಗಿದೆ.

ಮೇಲ್ಪರಂಬ ಠಾಣಾ ಪೊಲೀಸರು ಅಸಹಜ ಪ್ರಕರಣ ದಾಖಲಿಸಿದ್ದಾರೆ. ಕೇವಲ ಮೊಬೈಲ್ ನಂತಹ ಕ್ಷುಲ್ಲಕ ವಿಷಯಕ್ಕೆ ಬಾಲಕಿ ಆತ್ಮಹತ್ಯೆಯ ದೊಡ್ಡ ಹೆಜ್ಜೆಗೆ ಕೈ ಹಾಕಿದ್ದು ಅಘಾತಕ್ಕೆ ಕಾರಣವಾಗಿದೆ.

LEAVE A REPLY

Please enter your comment!
Please enter your name here

Hot Topics

ಬೈಂದೂರಿನಲ್ಲಿ ಘನ ತ್ಯಾಜ್ಯ ಘಟಕ ನಿರ್ಮಾಣಕ್ಕೆ ಗ್ರಾಮಸ್ಥರ ವಿರೋಧ

ಕುಂದಾಪುರ: ಉಡುಪಿ ಜಿಲ್ಲೆಯ ಬೈಂದೂರು ಪಂಚಾಯತ್ ವ್ಯಾಪ್ತಿಯ ತಗ್ಗರ್ಸೆ ಗ್ರಾಮದ ಸರ್ವೆ ನಂಬ್ರ 170 ರಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಘಟಕ (ಎಸ್.ಎಲ್.ಆರ್.ಎಂ) ನಿರ್ಮಿಸಬಾರದು ಎಂದು ಸ್ಥಳೀಯರು ಬೃಹತ್ ಪ್ರತಿಭಟನೆ...

ಬೆಳ್ತಂಗಡಿ: ಕೆರೆಗೆ ಕಾಲು ಜಾರಿ ಬಿದ್ದು ವ್ಯಕ್ತಿ ಕೊನೆಯುಸಿರು

ಬೆಳ್ತಂಗಡಿ: ಕೆರೆಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ನ್ಯಾಯತರ್ಪು ಗ್ರಾಮದ ಬದ್ಯಾರು ಬಳಿ ಇಂದು ನಡೆದಿದೆ.ಕುಶಾಲಪ್ಪ ಗೌಡ (46) ಮೃತ ವ್ಯಕ್ತಿ. ಮೃತ ಕುಶಾಲಪ್ಪ ಗೌಡ ಮನೆಯ...

ಮರವಂತೆಯಲ್ಲಿ ಸಮುದ್ರಪಾಲಾದ ಕಾರು: ಓರ್ವ ಸ್ಪಾಟ್ ಡೆತ್-ಓರ್ವ ನಾಪತ್ತೆ

ಕುಂದಾಪುರ: ಚಲಿಸುತ್ತಿದ್ದ ಕಾರೊಂದು ಚಾಲಕನ‌ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಸಮುದ್ರ ಪಾಲಾಗಿ ಕಾರಿನೊಳಗಿದ್ದ ನಾಲ್ವರ ಪೈಕಿ ಚಾಲಕ ಸಾವನ್ನಪ್ಪಿದ್ದು, ಓರ್ವ ನಾಪತ್ತೆಯಾಗಿ ಇಬ್ಬರು ಪ್ರಯಾಣಿಕರು ಗಾಯಾಳುಗಳಾಗಿ ಆಸ್ಪತ್ರೆಗೆ ಸೇರಿದಂತಹ ದಾರುಣ ಘಟನೆ ಉಡುಪಿ...