Thursday, December 2, 2021

12 ಪ್ರಕರಣ ಬೇಧಿಸಿದ ಬಂಟ್ವಾಳ ನಗರ ಪೊಲೀಸರು: ವಾರಸುದಾರರಿಗೆ ಸ್ವತ್ತುಗಳ ಹಸ್ತಾಂತರ

ಬಂಟ್ವಾಳ: ಇಲ್ಲಿನ ನಗರ ಠಾಣಾ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ಹಾಗೂ ಎಸ್.ಐ.ನೇತೃತ್ವದಲ್ಲಿ ಈ ವರ್ಷದಲ್ಲಿ ಒಟ್ಟು 12 ಪ್ರಕರಣಗಳನ್ನು ಭೇಧಿಸಿ ಲಕ್ಷಾಂತರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.


2021 ನೇ ವರ್ಷದಲ್ಲಿ ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳ್ಳತನ, ಸುಲಿಗೆ, ವಂಚನೆ ಸೇರಿದಂತೆ ಒಟ್ಟು 12 ಪ್ರಕರಣಗಳನ್ನು ಬೇಧಿಸಿ ಒಟ್ಟು 17 ಲಕ್ಷದ 33 ಸಾವಿರ ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.
ವಿವಿಧ ಪ್ರಕರಣಗಳಲ್ಲಿ ಸೊತ್ತುಗಳನ್ನು ಸ್ವಾಧೀನಪಡಿಸಿಕೊಂಡಿರುವ ಪೋಲೀಸರು ನ್ಯಾಯಾಲಯದ ಅನುಮತಿ ಪಡೆದುಕೊಂಡು ಇಂದು ಸಹಾಯಕ ಪೋಲೀಸ್ ಅಧೀಕ್ಷಕ ಶಿವಾಂಷು ರಜಪೂತ್ ಐ.ಪಿ‌.ಎಸ್.ಅವರು ವಾರಸುದಾರರಿಗೆ ಹಸ್ತಾಂತರ ಮಾಡಿದರು.
11,3400 ರೂ ಮೌಲ್ಯದ 252.390 ಗ್ರಾಂ.ತೂಕ ದ ಚಿನ್ನಾಭರಣಗಳು, 5,49,00 ಮೌಲ್ಯದ ಬೋಲೇರೊ ಜೀಪ್, ಒಂದು ಆಲ್ಟೋ ಕಾರು, ಒಂದು ಮೋಟಾರ್ ಸೈಕಲ್, ರೂ.50000 ಮೌಲ್ಯದ ಲ್ಯಾಪ್ ಟಾಪ್ ಗಳನ್ನು ಸ್ವಾಧೀನಪಡಿಸಿಕೊಂಡು ಪ್ರಕರಣಗಳನ್ನು ಭೇಧಿಸುವಲ್ಲಿ ಯಶಸ್ವಿಯಾಗಿ ದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೋನಾವಣೆ, ಅವರ ನಿರ್ದೇಶನದಂತೆ, ಹೆಚ್ಚುವರಿ ಪೋಲೀಸ್ ಅಧೀಕ್ಷಕರಾದ ಡಾ. ಶಿವಕುಮಾರ್ ಗುಣಾರೆರವರ ಮಾರ್ಗದರ್ಶನದಲ್ಲಿ, ಬಂಟ್ವಾಳ ಎ.ಎಸ್.ಪಿ.ಶಿವಾಂಷು ರಜಪೂತ್ ಐ.ಪಿ.ಎಸ್ ನೇತೃತ್ವದಲ್ಲಿ ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ವಿವೇಕಾನಂದ ಹಾಗೂ ಬಂಟ್ವಾಳ ನಗರ ಠಾಣಾ ಎಸ್ ‌ಐ.ಅವಿನಾಶ್ ಮತ್ತು ಸಿಬ್ಬಂದಿಯ ವರು ಪಾಲ್ಗೊಂಡಿದ್ದರು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...