Connect with us

DAKSHINA KANNADA

ಗಾಂಜಾ ಸೇವಿಸಿ, ಸಪ್ಲೈ ಮಾಡ್ತಿದ್ದ 12 ವಿದ್ಯಾರ್ಥಿಗಳಿಗೆ ಕೈಕೋಳ ತೊಡಿಸಿದ ಮಂಗಳೂರು ಸಿಸಿಬಿ

Published

on

ಮಂಗಳೂರು: ನಗರದ ಸಾರ್ವಜನಿಕರಿಗೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾವನ್ನು ಹೊಂದಿದ 12 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.


ಕೇರಳ ಮೂಲದ ವಿದ್ಯಾರ್ಥಿಗಳಾದ ಶಾನೂಫ್ ಅಬ್ದುಲ್ ಗಫೂರ್(21), ಮೊಹಮ್ಮದ್ ರಸೀನ್(22), ಗೋಕುಲ ಕೃಷ್ಣನ್(22), ಶಾರೂನ್ ಆನಂದ(19), ಅನಂತು ಕೆ ಪಿ(18), ಅಮಲ್(21), ಅಭಿಷೇಕ(21), ನಿದಾಲ್(21), ಶಾಹೀದ್ ಎಂ ಟಿ ಪಿ(22), ಫಹಾದ್ ಹಬೀಬ್(22), ಮೊಹಮ್ಮದ್ ರಿಶಿನ್(22), ರಿಜಿನ್ ರಿಯಾಜ್(22) ಬಂಧಿತ ಆರೋಪಿಗಳು.

ಮಂಗಳೂರು ನಗರದಲ್ಲಿ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಹಾಗೂ ಸೇವನೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಪಿಎಸ್ಐ ರಾಜೇಂದ್ರ ಬಿ ರವರ ನೇತೃತ್ವದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರಿನ ನಗರದ ವೆಲೆನ್ಸಿಯಾ ಸೂಟರ್ ಪೇಟೆ 3 ನೇ ಕ್ರಾಸ್ ನ ವಸತಿಗೃಹವೊಂದಕ್ಕೆ ದಾಳಿ ನಡೆಸಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಹೊಂದಿದ್ದವರನ್ನು ವಶಕ್ಕೆ ಪಡೆಯಲಾಗಿದೆ.

ಅವರಿಂದ ಒಟ್ಟು 900 ಗ್ರಾಂ ತೂಕದ ರೂ. 20,000/- ಮೌಲ್ಯದ ಗಾಂಜಾ, ಗಾಂಜಾವನ್ನು ಸೇದುವ Smoking Pipes, ರೋಲಿಂಗ್ ಪೇಪರ್ ಗಳನ್ನು, ನಗದು ರೂ. 4,500/- ಹಾಗೂ 11 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ.

ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 2,85,000/- ಆಗಬಹುದು. ಈ ಗಾಂಜಾ ಮಾರಾಟ ಜಾಲದಲ್ಲಿ ಇನ್ನೂ ಹಲವು ಯುವಕರು/ವಿದ್ಯಾರ್ಥಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳನ್ನು ಮಾದಕ ವಸ್ತುಗಳ ಸೇವನೆ ಬಗ್ಗೆ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದ್ದು, 11 ಮಂದಿ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡಿರುವ ಬಗ್ಗೆ ದೃಢಪಟ್ಟಿದೆ.

ಆರೋಪಿಗಳ ಪೈಕಿ 9 ಮಂದಿ ವಿದ್ಯಾರ್ಥಿಗಳು ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದು ಆರೋಪಿಗಳ ವಿರುದ್ಧ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳ ಪೈಕಿ 8 ಮಂದಿ ವಿದ್ಯಾರ್ಥಿಗಳು ಅಂತಿಮ ವರ್ಷದ ಬಿಬಿಎ, ಬಿಸಿಎ ಪದವಿ, ಫಾರೆನ್ಸಿಕ್ ಸಯನ್ಸ್ ಪದವಿ ವ್ಯಾಸಂಗವನ್ನು, ಮತ್ತು ಓರ್ವ ಪ್ರಥಮ ವರ್ಷದ ಬಿಬಿಎ ಪದವಿ ವ್ಯಾಸಂಗವನ್ನು ಹಾಗೂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ 3 ಮಂದಿ ವಿದ್ಯಾರ್ಥಿಗಳ ಪೈಕಿ ಒಬ್ಬಾತ ವಿದ್ಯಾರ್ಥಿ ನರ್ಸಿಂಗ್ ಪದವಿ, ಓರ್ವ ರೇಡಿಯೋಲಾಜಿ , ಹಾಗೂ ಇನ್ನೋರ್ವ Allied Science ಪದವಿ ವ್ಯಾಸಂಗ ಮಾಡುತ್ತಿದ್ದಾರೆ.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀ*ರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

DAKSHINA KANNADA

ದೊಡ್ಡವರ ಜಗಳದಲ್ಲಿ ಇಹಲೋಕ ತಜ್ಯಿಸಿದ 3 ರ ಕಂದಮ್ಮ…

Published

on

ಮಂಗಳೂರು (ಬೆಳಗಾವಿ): ಅದು ಎರಡು ಕುಟುಂಬಗಳ ನಡುವೆ ನಡೆದಿರೋ ಜಗಳ . ಆದ್ರೆ ಆ ಜಗಳಕ್ಕೆ ಏನೂ ಅರಿಯದ ಮೂರು ವರ್ಷದ ಪುಟ್ಟ ಮಗು ಬಲಿಯಾಗಿದೆ. ಪಾಪಿಯೊಬ್ಬ ಮಗುವಿನ ಎದೆಗೆ ಕಾಲಿಟ್ಟು ಮಗುವಿನ ಉಸಿರು ನಿಲ್ಲಿಸಿದ್ದಾನೆ.

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಎಂಬ ಗ್ರಾಮದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ದೊಡ್ಡವರ ಜಗಳದಲ್ಲಿ ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ ಎಂಬ ಮೂರು ವರ್ಷದ ಮಗು ಹತವಾಗಿದೆ. ಜೋತಿಭಾ ತುಕಾರಾಮ ಬಾಬಬರ ಎಂಬಾತ ಮಗುವಿನ ಜೀವಕ್ಕೆ ಕುತ್ತು ತಂದ ಆರೋಪಿಯಾಗಿದ್ದಾನೆ.
ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿತ್ತು. ಈ ವೇಳೆ ಜಗಳ ತಾರಕ್ಕೇರಿದಾಗ ಸಿಟ್ಟಿನಲ್ಲಿ ಜೋತಿಬಾ ತುಕಾರಾಮ ಬಾಬಾಬರ ಮಗುವಿನ ಎದೆ ಮೇಲೆ ಕಾಲಿಟ್ಟು ನಿಂತಿದ್ದಾನೆ. ಈ ವೇಳೆ ಮಗುವನ್ನು ಆತನ ಕಾಲಿನ ಅಡಿಯಿಂದ ತೆಗೆಯಲು ಮಗುವಿನ ತಾಯಿ ಯತ್ನಿಸಿದ್ದಾಳೆ . ಆ ವೇಳಗೆ ಇನ್ನಷ್ಟು ಗಟ್ಟಿಯಾಗಿ ಕಾಲಿನಿಂದ ಮಗುವಿನ ಎದೆಗೆ ಕಾಲಿನಿಂದ ಒತ್ತಿದ ಕಾರಣ ಮಗು ಉಸಿರು ನಿಲ್ಲಿಸಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಗುವಿನ ದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆ ನಡೆಯುತ್ತಿದ್ದಂತೆ ಆರೋಪಿ ಸ್ಥಳದಿಂದ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆ.

Continue Reading

DAKSHINA KANNADA

ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!

Published

on

ನ್ಯೂಯಾರ್ಕ್‌ : ಅಮೇರಿಕಾದಲ್ಲಿ ನಡೆದ ಕಾರು ಅಪಘಾತದಲ್ಲಿ ಭಾರತೀಯ ಮೂಲದ ಮೂವರು ಮಹಿಳೆಯರು ಇಹಲೋಕ ತ್ಯಜಿಸಿದ್ದಾರೆ. ಕೌಂಟಿಯ ಹೆದ್ದಾರಿಯ ಸೇತುವೆಯೊಂದರ ಮೇಲೆ ವೇಗವಾಗಿ ಕಾರು ಚಲಾಯಿಸಿದ ಕಾರಣ ಈ ಅಪಘಾತ ಸಂಭವಿಸಿದೆ. ಹೆದ್ದಾರಿಯಲ್ಲಿ ಉತ್ತರದ ಕಡೆಗೆ ಕಾರು ಪ್ರಯಾಣಿಸುತ್ತಿದ್ದು, ಎಲ್ಲಾ ಲೇನ್‌ಗಳನ್ನು ದಾಟಿ, ಹಂಪ್‌ ಮೇಲೆ ವೇಗವಾಗಿ ಏರಿತ್ತು. ಈ ಕಾರಣದಿಂದ ಕನಿಷ್ಟ 20 ಅಡಿಗಳಷ್ಟು ಮೇಲಕ್ಕೆ ಹಾರಿ ಸೇತುವೆಯ ಮುಂದೆ ಇದ್ದ ಮರಗಳಿಗೆ ಕಾರು ಅಪ್ಪಳಿಸಿದೆ. ಗುಜಾರಾತ್ ಮೂಲದ ಮೂವರು ಮಹಿಳೆಯರು ಈ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಗುಜರಾತ್‌ನ ಆನಂದ್ ಜಿಲ್ಲೆಯ ರೇಖಾಬೆನ್‌ ಪಟೇಲ್ , ಸಂಗೀತಾಬೆನ್ ಪಟೇಲ್ ಹಾಗೂ ಮನೀಶಾಬೆನ್ ಪಟೇಲ್‌ ಅವರು ಇಹಲೋಕ ತ್ಯಜಿಸಿದವರಾಗಿದ್ದಾರೆ.

 

ಕಾರು ನಿಗದಿಪಡಿಸಿದ ವೇಗದ ಮಿತಿಗಿಂತ ಹೆಚ್ಚು ವೇಗದಲ್ಲಿತ್ತು ಎಂದು ಅಲ್ಲಿನ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಅಪಘಾತದ ಪ್ರಮಾಣ ಎಷ್ಟಿತ್ತು ಮತ್ತು ಕಾರು ಎಷ್ಟು ಎತ್ತರಕ್ಕೆ ಹಾರಿತ್ತು ಅನ್ನೋದಿಕ್ಕೆ ಮರದ ಮೇಲಿರುವ ಕಾರಿನ ಅವಶೇಷಗಳು ಸಾಕ್ಷಿ ಎಂದು ಅವರು ಹೇಳಿದ್ದಾರೆ. ಮರದ ಮೇಲೆ ಬಿದ್ದ ಕಾರು ಛಿದ್ರಗೊಂಡು ಕಾರಿನ ಅವಶೇಷಗಳು ಚೆಲ್ಲಾಪಿಲ್ಲಿಯಾಗಿತ್ತು.


ದಕ್ಷಿಣ ಕೆರೊಲಿನಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ತಕ್ಷಣ ಸ್ಥಳಕ್ಕೆ ರಕ್ಷಣಾ ತಂಡಗಳು, ಪೊಲೀಸರು ಆಗಮಿಸಿದ್ದಾರೆ. ಅಪಘಾತದಲ್ಲಿ ಓರ್ವ ಬದುಕಿ ಉಳಿದಿದ್ದು, ಆತನ ಸ್ಥಿತಿ ಗಂಭೀರವಾಗಿದ್ದು ಈಗಲೇ ಏನೂ ಹೇಳಲು ಆಗದ ಪರಿಸ್ಥಿತಿಯಲ್ಲಿದ್ದಾನೆ. ವಾಹನ ಅಪಘಾತವಾದ ತಕ್ಷಣ ಅದರಲ್ಲಿದ್ದ ತಾಂತ್ರಿಕ ವ್ಯವಸ್ಥೆಯ ಕಾರಣ ತಕ್ಷಣ ಕುಟುಂಬ ಸದಸ್ಯರಿಗೆ ಅಲರ್ಟ್‌ ಮೆಸೆಜ್ ರವಾನೆಯಾಗಿತ್ತು. ಹೀಗಾಗಿ ತಕ್ಷಣ ಕುಟುಂಬಸ್ಥರು ಕೂಡಾ ತಕ್ಷಣ ಸ್ಥಳಕ್ಕೆ ಆಗಮಿಸಿದ್ದಾರೆ.

Continue Reading

LATEST NEWS

Trending