Connect with us

LATEST NEWS

ಕೊಡಗಿನಲ್ಲಿ ಹೃದಯಾಘಾತದಿಂದ 12 ವರ್ಷದ ಬಾಲಕ‌ ದಾರುಣ ಸಾವು..!

Published

on

ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 12 ವರ್ಷದ ಬಾಲಕ‌ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

ಮಡಿಕೇರಿ : ಇತ್ತೀಚಿಗೆ ರಾಜ್ಯದಲ್ಲಿ ಹದಿಹರೆಯದವರು ಮತ್ತು ಬಾಲಕರು ಹೃದಯಾಘತದಿಂದ ಸಾವನ್ನಪ್ಪುತ್ತಿರುವುದು ದುರದೃಷ್ಟಕರ ಮತ್ತು ಕಳವಳಕಾರಿ ಸಂಗತಿಯಾಗಿದೆ.ಈ ದುರ್ಘಟನೆಗಳು ಪೋಷಕರಲ್ಲಿ ತೀವೃ ಆತಂಕ ಮೂಡಿಸಿದೆ ಮತ್ತು ವೈದ್ಯರಿಗೆ ಸವಾಲಿನ ಸಂಗತಿಯಾಗಿದೆ.

ಇದೀಗ ಇಂತಹುದೇ ಘಟನೆ ಕೊಡಗಿನಲ್ಲಿ ಸಂಭವಿಸಿದೆ. ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದಲ್ಲಿ 12 ವರ್ಷದ ಬಾಲಕ‌ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.

ಕೀರ್ತನ್ (12) ಮೃತ ದುರ್ದೈವಿ ಬಾಲಕನಾಗಿದ್ದಾನೆ. ಕೂಡುಮಂಗಳೂರು ಗ್ರಾಮದ ಮಂಜಾಚಾರಿ ಪುತ್ರ ಕೀರ್ತನ್ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು. ಕೀರ್ತನ್​ ಶನಿವಾರ ತಡರಾತ್ರಿ ಅನಾರೋಗ್ಯದಿಂದ ಬಳಲಿದ್ದನು,

ಇಂದು (ಜ.08) ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.

ಯುವಕರಲ್ಲಿ ಹೃದಯಾಘಾತದ ಹೆಚ್ಚಳದ ಅಧ್ಯಯನವನ್ನು ಉಲ್ಲೇಖಿಸಿದ ಡಾ. ಮಂಜುನಾಥ್, ಧೂಮಪಾನಿಗಳಲ್ಲಿ 50 ಪ್ರತಿಶತ ಮತ್ತು ಹೃದಯ ಸಂಬಂಧಿ ಕಾಯಿಲೆಗಳ ಕುಟುಂಬದ ಇತಿಹಾಸ ಹೊಂದಿರುವ 16 ಪ್ರತಿಶತದಷ್ಟು ಜನರು ಹೃದಯಾಘಾತಕ್ಕೆ ಒಳಗಾಗುತ್ತಾರೆ.

ಯಾವುದೇ ಕೆಟ್ಟ ಅಭ್ಯಾಸಗಳು ಮತ್ತು ಕುಟುಂಬದಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಲ್ಲದೆ, ಸುಮಾರು 30 ಪ್ರತಿಶತದಷ್ಟು ಜನರು ಕೆಲಸದ ಒತ್ತಡದಿಂದಾಗಿ ಹೃದಯಾಘಾತಕ್ಕೆ ಒಳಗಾಗುತ್ತಾರೆ.

ಒತ್ತಡದಿಂದ ಹೃದಯಾಘಾತಗಳು ಜೀವನದಲ್ಲಿ ಹೆಚ್ಚಿನ ನಿರೀಕ್ಷೆಗಳು ಮತ್ತು ತ್ವರಿತ ಸಮಯದಲ್ಲಿ ಯಶಸ್ಸನ್ನು ಸಾಧಿಸುವ ಕಾರಣದಿಂದಾಗಿರಬಹುದು.

ಶೇ.70ರಷ್ಟು ಹೃದಯಾಘಾತಗಳು ಕೆಟ್ಟ ಜೀವನಶೈಲಿಯಿಂದ ಉಂಟಾದರೆ, ಶೇ.30ರಷ್ಟು ಒತ್ತಡದಿಂದ ಉಂಟಾಗಿದೆ ಎಂದು ವಿಶ್ಲೇಶಿಸಿದ್ದಾರೆ.

Click to comment

Leave a Reply

Your email address will not be published. Required fields are marked *

LATEST NEWS

Kundapura: ಲಂಚ ಪ್ರಕರಣ- ಸಬ್‌ ಇನ್‌ಸ್ಪೆಕ್ಟ್ರರ್ ಶಂಭುಲಿಂಗಯ್ಯ ಅಮಾನತು

Published

on

ಕುಂದಾಪುರ: ಕೋಟ ಠಾಣೆ ಉಪನಿರೀಕ್ಷಕರಾಗಿದ್ದು, ಪ್ರಸ್ತುತ ಒಒಡಿ ಮೇಲೆ ಕಾರ್ಕಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಂಭುಲಿಂಗಯ್ಯ ಅವರನ್ನು ಲಂಚ ಪ್ರಕರಣ ಆರೋಪಕ್ಕೆ ಸಂಬಂಧಿಸಿ ಅಮಾನತುಗೊಳಿಸಿರುವುದಾಗಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕುಮಾರ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಕಾಲೇಜಿನ ಆಡಳಿತ ಮಂಡಳಿಯೊಂದರ ಗಲಾಟೆಗೆ ಸಂಬಂಧಿಸಿದಂತೆ ದೂರುದಾರರಿಂದ ಲಂಚ ಪಡೆದಿರುವುದಾಗಿ ಸಾಮಾಜಿಕ ಕಾರ್ಯಕರ್ತರೋರ್ವರು ವೀಡಿಯೋ ಮೂಲಕ ದೂರಿದ್ದರು. ಈ ಕುರಿತು ತನಿಖೆ ನಡೆಸಿ ಅಮಾನತುಗೊಳಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಅಚ್ಚಾಡಿಯ ಖಾಸಗಿ ಕಾಲೇಜಿನಲ್ಲಿ ಆಡಳಿತ ಮಂಡಳಿಯೊಳಗೆ ಗಲಾಟೆಗೆ ಸಂಬಂಧಿಸಿದಂತೆ ಮಧು ಭಾಸ್ಕರ್ ಹಾಗೂ ಮಹಿಮಾ ಮಧು ಭಾಸ್ಕರ್ ಅವರು ಪರಸ್ಪರ ದೂರು ದಾಖಲಿಸಿಕೊಂಡಿದ್ದರು. ಈ ವಿಚಾರವಾಗಿ ಮಧು ಭಾಸ್ಕ‌ರ್ ವಿರುದ್ದ ದೂರು ದಾಖಲಿಸಲು ಹಾಗೂ ಮಹಿಮಾ ವಿರುದ್ದದ ದೂರಿಗೆ ಬಿ ರಿಪೋರ್ಟ್ ನೀಡುವುದಾಗಿ ಆಗ ಠಾಣಾಧಿಕಾರಿಯಾಗಿದ್ದ ಶಂಭು ಲಿಂಗಯ್ಯ ಲಂಚ ಪಡೆದಿದ್ದರು. ಅದರಲ್ಲೂ ಹತ್ತಿರದ ಸಂಬಂಧಿಯೋರ್ವರ ಖಾತೆಗೆ ಸ್ವಲ್ಪ ಮೊತ್ತದ ಹಣ ವರ್ಗಾಯಿಸಿಕೊಂಡಿದ್ದಾರೆ. ಈ ಬಗ್ಗೆ ದಾಖಲೆಗಳನ್ನು ನೀಡಲು ಸಿದ್ಧವಿದ್ದು ಠಾಣಾಧಿಕಾರಿಗಳನ್ನು ತತ್‌ಕ್ಷಣ ಅಮಾನತುಗೊಳಿಸಬೇಕು ಎಂದು ಮಾನವ ಹಕ್ಕುಗಳ ಸಮಿತಿಯ ರಾಜ್ಯ ಪ್ರಮುಖ ಎನ್ನಲಾದ ದಿನೇಶ್ ಗಾಣಿಗ ಕೋಟ ವೀಡಿಯೋ ಮೂಲಕ ಎಸ್ ಪಿ ಅವರನ್ನು ವಿನಂತಿಸಿದ್ದರು. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲೂ ವೈರಲ್ ಆಗಿತ್ತು. ಶಂಭುಲಿಂಗಯ್ಯ ಅವರನ್ನು ಈ ಹಿಂದೆ ಅಶಿಸ್ತಿನ ಕಾರಣಕ್ಕೆ ಒಒಡಿ ಮೇಲೆ ಕೋಟದಿಂದ ಕಾರ್ಕಳಕ್ಕೆ ನಿಯೋಜಿಸಲಾಗಿತ್ತು.

Continue Reading

BANTWAL

ವೈನ್ ಶಾಪ್ ಗೆ ಬಂದಿದ್ದ ಆಸಾಮಿ ಮೊಬೈಲ್ ಕದ್ದು ಎಸ್ಕೇಪ್..!!

Published

on

ಪುತ್ತೂರು: ವೈನ್ ಶಾಪ್ ಗೆ ಬಂದಿದ್ದ ವ್ಯಕ್ತಿಯೋರ್ವ ಮೊಬೈಲ್ ಎಗರಿಸಿ ಪರಾರಿಯಾದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ.

ವ್ಯಕ್ತಿಯೋರ್ವ ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ಗೆ ಬಂದಿದ್ದ. ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ಮೊಬೈಲ್ ಗೆ ಕನ್ನ ಹಾಕಿದ್ದಾನೆ. ಬಳಿಕ ಶಾಪ್ ನವರು ಬೇರೆ ಕಡೆ ತಿರುಗುವಾಗ ಈಚೆಯಿಂದ ಈ ಕದೀಮ ಮೊಬೈಲ್ ಅನ್ನು ಎಗರಿಸಿ ಬ್ಯಾಗ್ ಗೆ ಹಾಕಿಕೊಂಡು ಪರಾರಿಯಾಗಿದ್ದಾನೆ.


ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ಕಳವು ಆಗಿತ್ತು. ಕೂಡಲೇ ಅವರು ಸಿಸಿ ಕ್ಯಾಮರಾ ಚೆಕ್ ಮಾಡಿದ್ದಾರೆ. ಆಗ ಮೊಬೈಲ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಪತ್ತೆಯಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

bangalore

ಬಿಗ್ ಬಾಸ್ ಮನೆಯಲ್ಲಿ ನಮ್ರತಾ-ಸ್ನೇಹಿತ್ ಲವ್ವಿ-ಡವ್ವಿ

Published

on

Bigboss: ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್- ಸಂಗೀತಾ ಇಬ್ಬರ ಒಂದು ಜೋಡಿ ಆದರೆ ಇತ್ತ ಸ್ನೇಹಿತ್ ಮತ್ತು ನಮ್ರತಾ ಇವರಿಬ್ಬರ ಪ್ರೇಮ ಕತೆ ಶುರುವಾಗಿದೆ.

ಕ್ಯಾಪ್ಟೆನ್ಸಿ ವಿಚಾರದಲ್ಲಿ ನಮ್ರತಾ ಹಾಗೂ ಸ್ನೇಹಿತ್ ಮುನಿಸಿಕೊಂಡಿದ್ದು, ಇದೀಗ ಮತ್ತೇ ಅವರ ಫ್ರೆಂಡ್‌ಶಿಪ್‌ ಶುರುವಾಗಿದೆ. ‘ ನಾನು ನಿಮ್ಮ ಪ್ರೀತಿನ ಒಪ್ಪಿಕೊಂಡ್ರೆ ಏನು ಮಾಡ್ತೀರಾ ಎಂದು ಸ್ನೇಹಿತ್ ಗೆ ನಮ್ರತಾ ಹೇಳಿದ್ದಾರೆ. ಅವರ ಮಾತಿಗೆ ಸ್ನೇಹಿತ್ ನಾಚಿ ನೀರಾಗಿದ್ದಾರೆ. ಇದೀಗ ಇವರಿಬ್ಬರ ಲವ್ವಿ-ಡವ್ವಿಯಲ್ಲಿ ಹೊಸ ಟ್ವಿಸ್ಟ್‌ ಸಿಕ್ಕಿದೆ. ಸ್ನೇಹಿತ್ ಕ್ಯಾಪ್ಟನ್ ಆಗಿದ್ದಾಗ ಟಾಸ್ಕ್‌ನಿಂದ ನಮ್ರತಾ ಅವರನ್ನು ಹೊರಗೆ ಹಾಕಿದ್ದರು. ಬಳಿಕ ನಮ್ರತಾ ಅವರ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದರು.


ಕಳೆದ 60 ದಿನಗಳಿಂದ ನಡೆಯುತ್ತಿರೋ ಸೀನ್ ಅಂದರೆ ನಮ್ರತಾ ಹಿಂದೆ ಹೋಗೋದನ್ನ ಸ್ನೇಹಿತ್ ಬಿಟ್ಟಿಲ್ಲ. ನಮ್ರತಾಗೆ ಆಗಾಗ ಪ್ರೇಮ ನಿವೇದನೆ ಮಾಡುತ್ತಲೇ ಬಂದಿದ್ದಾರೆ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಇದೀಗ ಇದೆನ್ನೆಲ್ಲಾ ಗಮನಿಸಿ ನಮ್ರತಾ, ಸರಿ ನಾನು ನಿಮ್ಮ ಪ್ರೀತಿಯನ್ನ ಒಪ್ಪಿಕೊಂಡರೆ ಮುಂದೇನು? ಫ್ಯೂಚರ್ ಪ್ಲ್ಯಾನ್ ಏನು ಎಂದು ಕೇಳಿದ್ದಾರೆ. ಹೇಳಿ ಈಗ ನಾನು ಪ್ರೀತಿ ಮಾಡ್ತೀನಿ ಅಂದ್ರೆ ಏನು ಮಾಡ್ತೀರಿ ಎಂದು ನೇರವಾಗಿ ಪ್ರಶ್ನೆ ಎಸೆದರು.

ಆದರೆ, ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂಬುದೇ ಸ್ನೇಹಿತ್‌ಗೆ ತಿಳಿಯಲಿಲ್ಲ. ಅವರು ನಕ್ಕು ಸುಮ್ಮನಾದರು. ಹೇಳಿ ಈಗ ನಾನು ಪ್ರೀತಿಸುತ್ತೇನೆ ಎಂದರೆ ಏನು ಮಾಡ್ತೀರಾ. ಇಷ್ಟು ದಿನ ಸುಮ್ಮನೆ ಕಾಳು ಹಾಕಿದ್ರಾ ಎಂದು ಮರು ಪ್ರಶ್ನೆ ಹಾಕಿದರು. ಬಿಗ್ ಬಾಸ್‌ನಿಂದ ಹೊರಗೆ ಹೋದ ಬಳಿಕ ಮನೆಯವರ ಜೊತೆ ಮಾತನಾಡೋಣ.

ಒಂದು ವರ್ಷ ಮದುವೆ ಆಗೋದು ಬೇಡ. ನಿಮ್ಮಿಷ್ಟದ ಜಾಗಕ್ಕೆ ಹೊಗೋಣ. ಸ್ವಿಜರ್‌ಲೆಂಡ್‌ಗೆ ಮೊದಲು ಹೋಗೋಣ ಎಂದರು ಸ್ನೇಹಿತ್. ಅವರ ಮಾತನ್ನು ಕೇಳಿ ನಮ್ರತಾ ನಕ್ಕರು. ನಮ್ರತಾ ನಗುತ್ತಲೇ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ರಾ? ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಆದರೆ ನಮ್ರತಾ ನಗುವಿಗೆ ಸ್ನೇಹಿತ್ ಮಾತ್ರ ನಾಚಿ ನೀರಾಗಿದ್ದಾರೆ. ಅಂತೂ ಇಂತೂ ಕೋಪ ಮಾತನಾಡುತ್ತಿದ್ದಲ್ಲಾ ಅಂತ ಸಮಾಧಾನದಲ್ಲಿದ್ದಾರೆ ಸ್ನೇಹಿತ್.

Continue Reading

LATEST NEWS

Trending