Thursday, February 9, 2023

ಕುಂದಾಪುರದಲ್ಲಿ ಹೈಸ್ಕೂಲ್ ಬಾಲಕಿಗೆ ಹಾರ್ಟ್‌ ಅಟ್ಯಾಕ್-ಓದುತ್ತಿದ್ದಾಗಲೇ ಕುಸಿದು ಬಿದ್ದು ದುರಂತ ಅಂತ್ಯ..!

ಕುಂದಾಪುರ: ಪ್ರೌಢಶಾಲಾ ಬಾಲಕಿಯೋರ್ವಳು ಹೃದಯಾಘಾತದಿಂದ ಮೃತಪಟ್ಟ ಘಟನೆ ಕುಂದಾಪುರದಲ್ಲಿ ನಡೆದಿದೆ.

ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಹಾಗೂ ಪ್ರೌಢಶಾಲೆ ಶಿಕ್ಷಕಿ ಭಾರತಿ ದಂಪತಿಯ ಪುತ್ರಿ ಅನುಶ್ರೀ ಮೃತ ದುರ್ದೈವಿ.


ಈಕೆ ಎಂಟನೇ ತರಗತಿ ವಿದ್ಯಾರ್ಥಿನಿಯಾಗಿದ್ದು ನಿನ್ನೆ ಮನೆಯಲ್ಲಿ ಓದುತ್ತಿದ್ದಂತೆ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಳು.

ತಕ್ಷಣವೇ ಈಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲಾಗಲೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.

ಮಣಿಪಾಲ ಆಸ್ಪತ್ರೆಯಲ್ಲಿ ಈಕೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

LEAVE A REPLY

Please enter your comment!
Please enter your name here

Hot Topics

ಹಾಸನ: ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆ, ಕೊಲೆ ಶಂಕೆ ..!

ಹಾಸನ :  ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ಅಪಹರಣಕ್ಕೆ ಒಳಗಾಗಿದ್ದ ಯುವಕನ ಶವ ಪತ್ತೆಯಾದ ಘಟನೆ ಹಾಸನ ಜಿಲ್ಲೆಯ ಯೋಗೀಹಳ್ಳಿಯಲ್ಲಿ ನಡೆದಿದೆ.26 ವರ್ಷ ಪ್ರಾಯದ ಲಿಖಿತ್‌ಗೌಡ ಯಾನೆ ಬಂಗಾರಿ ಕೊಲೆಯಾದ ಯುವಕ. ಈತನನ್ನು ಕೊಲೆ...

ಚಾರ್ಮಾಡಿಯಲ್ಲಿ ಶಿಕಾರಿಗಳ ಗುಂಡೇಟಿಗೆ ಕಡವೆ ಬಲಿ..!

ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್‌ನ ಮಲಯಮಾರುತ ಬಳಿ ನಿನ್ನೆ ನಡೆದಿದೆ.ಬೆಳ್ತಂಗಡಿ : ದುಷ್ಕರ್ಮಿಗಳ ಗುಂಡೇಟಿಗೆ ಕಡವೆಯೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಕೊಟ್ಟಿಗೆಹಾರ...

ಭೂಕಂಪಕ್ಕೆ ನಲುಗಿದ ಟರ್ಕಿ-ಸಿರಿಯಾ: 15,000 ದಾಟಿದ ಮೃತರ ಸಂಖ್ಯೆ-ಏರುತ್ತಲೇ ಇದೆ ಸಾವಿನ ಲೆಕ್ಕ..!

ಟರ್ಕಿ: ಭೂಕಂಪದಿಂದ ನಲುಗಿರುವ ಟರ್ಕಿ ಹಾಗೂ ಸಿರಿಯಾದಲ್ಲಿ ಈ ವರೆಗೆ ಸಾವಿಗೀಡಾದವರ ಸಂಖ್ಯೆ 15,000ಕ್ಕೆ ಏರಿಕೆಯಾಗಿ. ಈ ಪೈಕಿ ಟರ್ಕಿಯಲ್ಲಿ ಒಂದರಲ್ಲಿಯೇ 12,391 ಮಂದಿ ಸಾವನ್ನಪ್ಪಿದ್ದರೆ, ಸಿರಿಯಾದಲ್ಲಿ 2,992 ಮಂದಿ ಸಾವನ್ನಪ್ಪಿದ್ದಾರೆ.ಈ ಅಂಕಿ...