Wednesday, December 1, 2021

26/11 ಮುಂಬೈ ದಾಳಿ: 13 ವರ್ಷ ಕಳೆದರೂ ಮಾಸದ ಕರಾಳ ನೆನಪು

ಮುಂಬೈ: ನವೆಂಬರ್ 26, 2008- ಭಾರತೀಯರು ಎಂದೂ ಮರೆಯಲಾರದ ಕರಾಳ ದಿನದ ಘಟನೆ ನಡೆದು ಇಂದಿಗೆ 13 ವರ್ಷಗಳಾಗಿವೆ.

ಅಂದು ಮುಂಬೈನ ಪ್ರತಿಷ್ಠಿತ ತಾಜ್‌ ಹೊಟೇಲ್‌ಗೆ ದಾಳಿ ನಡೆಸಿದ ಉಗ್ರರು 18 ಭದ್ರತಾ ಪಡೆಯ ಸಿಬ್ಬಂದಿಯೂ ಸೇರಿದಂತೆ ಒಟ್ಟು 166 ಜನರನ್ನು ಕೊಂದರು.


ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಒಬೆರಾಯ್ ಟ್ರೈಡೆಂಟ್, ತಾಜ್ ಮಹಲ್ ಹೋಟೆಲ್, ಲಿಯೋಪೋಲ್ಡ್ ಕೆಫೆ, ಕಾಮಾ ಆಸ್ಪತ್ರೆ ಮತ್ತು ನಾರಿಮನ್ ಹೌಸ್ ಯಹೂದಿ ಸಮುದಾಯ ಕೇಂದ್ರದಂತಹ ಕೆಲವು ಪ್ರಮುಖ ಸ್ಥಳಗಳಿಗೆ ಮುತ್ತಿಗೆ ಹಾಕಿ,

ಭಯೋತ್ಪಾದಕರು ದಾಳಿ ನಡೆಸಿದ್ದರು
ಆಪರೇಷನ್ ಬ್ಲ್ಯಾಕ್ ಟೊರ್ನಾಡೋ ಮೂಲಕ, ನವೆಂಬರ್ 29, 2008 ರಂದು ರಾಷ್ಟ್ರೀಯ ಭದ್ರತಾ ಸಿಬ್ಬಂದಿ (NSG) ದಾಳಿಕೋರರನ್ನು ಮಟ್ಟಹಾಕಿದರು.

ಆಗಿನ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಮುಖ್ಯಸ್ಥ ಹೇಮಂತ್ ಕರ್ಕರೆ, ಸೇನಾ ಮೇಜರ್ ಸಂದೀಪ್ ಉನ್ನಿಕೃಷ್ಣನ್, ಮುಂಬೈನ ಹೆಚ್ಚುವರಿ ಪೊಲೀಸ್ ಕಮಿಷನರ್ ಅಶೋಕ್ ಕಾಮ್ಟೆ, ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ವಿಜಯ್ ಸಲಸ್ಕರ್ ಮತ್ತು ಸಹಾಯಕ ಸಬ್-ಇನ್‌ಸ್ಪೆಕ್ಟರ್ (ಎಎಸ್‌ಐ) ತುಕಾರಾಂ ಓಂಬ್ಳೆ ಮೊದಲಾದವರು ಉಗ್ರರ ವಿರುದ್ಧದ ಕಾರ್ಯಾಚರಣೆಯಲ್ಲಿ ಪ್ರಾಣಾರ್ಪಣೆ ಮಾಡಿದರು. ಕಾರ್ಯಾಚರಣೆಯ ನಂತರ ಓರ್ವ ಉಗ್ರ ಸೆರೆಸಿಕ್ಕಿದ್ದ. ನಂತರ ಅವನನ್ನು ಗಲ್ಲಿಗೇರಿಸಲಾಯಿತು.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...