Wednesday, December 1, 2021

ಟಾಯ್ಲೆಟ್‌ ಪೈಪ್‌ನಲ್ಲಿ ಕ್ಯಾಶ್‌ ತುಂಬಿಟ್ಟ ಎಂಜಿನಿಯರ್‌ಗೆ 14 ದಿನ ನ್ಯಾಯಾಂಗ ಬಂಧನ

ಕಲಬುರಗಿ: ಅಕ್ರಮ ಆಸ್ತಿ ಸಂಪಾದನೆ ಆರೋಪ ಎದುರಿಸುತ್ತಿರುವ ಜೇವರ್ಗಿ ಪಿಡಬ್ಲ್ಯೂಡಿ ಕಿರಿಯ ಇಂಜಿನಿಯರ್ ಶಾಂತಗೌಡ ಬಿರಾದಾರನನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.


ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬುಧವಾರ ಶಾಂತಗೌಡ ಬಿರಾದಾರ ಅವರ ಗುಬ್ಬಿ ಕಾಲೋನಿಯ ಮನೆ, ತೋಟದ ಮನೆ, ಜೇವರ್ಗಿಯಲ್ಲಿನ ಕಚೇರಿ ಮೇಲೆ ಏಕಕಾಲಕ್ಕೆ‌ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ರಾತ್ರಿ 8 ಗಂಟೆವರೆಗೂ ಶೋಧ ಕಾರ್ಯ ನಡೆಸಿದ್ದರು.

ಈ ವೇಳೆ, ಡ್ರೈನೇಜ್ ಪೈಪ್‌ನಲ್ಲೂ ಕೂಡ ಹಣದ ಕಂತೆ, ವಾಲ್ ಸೀಲಿಂಗ್​ನಲ್ಲಿ ಬಚ್ಚಿಟ್ಟಿದ್ದ ಹಣದ ಕಂತೆ ಸೇರಿ 54 ಲಕ್ಷ ರೂ. ನಗದು ಒಳಗೊಂಡಂತೆ ಅಪಾರ ಪ್ರಮಾಣದ ಆಸ್ತಿ ಪತ್ತೆಯಾಗಿತ್ತು‌.

ಹೆಚ್ಚಿನ ತನಿಖೆಗೆ ಸಹಕಾರ ನೀಡದ ಕಾರಣ ನಿನ್ನೆ ರಾತ್ರಿ ಶಾಂತಗೌಡ ಅವರನ್ನು ಬಂಧಿಸಿದ ಎಸಿಬಿ ಅಧಿಕಾರಿಗಳು ಸ್ಥಳೀಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು.

ಇದೀಗ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ನೀಡಿದ್ದಾರೆ. ಶಾಂತಗೌಡಗೆ ಸಂಬಂಧಿಸಿದ ಬ್ಯಾಂಕ್ ಲಾಕರ್ ಶೋಧ ಹಾಗೂ ಮತ್ತಷ್ಟು ಶೋಧಕಾರ್ಯಗಳು ಮುಂದುವರೆಯಲಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...