Saturday, November 27, 2021

ಇಟಲಿಯಲ್ಲಿ ನೆಲಕ್ಕುರುಳಿದ ಕೇಬಲ್‌ ಕಾರ್‌: 14 ಮಂದಿ ಪ್ರವಾಸಿಗರು ಸಾವು..!

ರೋಮ್ : ಪ್ರವಾಸಿಗರ ಕೇಬಲ್‌ ಕಾರೊಂದು ದಟ್ಟ ಅರಣ್ಯದ ಮಧ್ಯಭಾಗದಲ್ಲಿ ನೆಲಕ್ಕುರುಳಿದ ಪರಿಣಾಮವಾಗಿ 14 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಇಟಲಿಯ ಮ್ಯಾಜಿಯೊರ್ ಸರೋವರದ ಸಮೀಪ ನಡೆದಿದೆ.

ಇಲ್ಲಿಯ ಪರ್ವತದೊಂದಿಗೆ ಸಂಪರ್ಕಿಸುವ ಕೇಬಲ್ ಕಾರು ನೆಲಕ್ಕೆ ಬಿದ್ದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇದರಲ್ಲಿ ಇಸ್ರೇಲಿಗರು ಸೇರಿದಂತೆ ಹಲವಾರು ದೇಶಗಳ ಪ್ರವಾಸಿಗರು ಇದ್ದರು ಎನ್ನಲಾಗಿದ್ದು ಬದುಕಿ ಉಳಿದ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಸ್ಟ್ರೆಸಾ-ಮೊಟ್ಟರೋನ್ ಕೇಬಲ್ ಕಾರು ಸಮುದ್ರ ಮಟ್ಟದಿಂದ ಸುಮಾರು 1,400 ಮೀಟರ್ ಎತ್ತರದಲ್ಲಿದೆ.

ಮ್ಯಾಗಜೀಯೋರ್ ಸರೋವರದ ಪಟ್ಟಣದಿಂದ ಪ್ರವಾಸಿಗರು ಮತ್ತು ಸ್ಥಳೀಯರನ್ನು 20 ನಿಮಿಷಗಳಲ್ಲಿ ಮೊಟ್ಟರೋನ್ ಪರ್ವತದ ತುದಿಗೆ ಕರೆದೊಯ್ಯುವ ಸಾಮರ್ಥ್ಯವನ್ನು ಇದು ಹೊಂದಿದ್ದು ಅಪಘಾತಕ್ಕೆ ಕಾರಣಗಳು ತಿಳಿದು ಬಂದಿಲ್ಲವಾಗಿದ್ದು ಸ್ಥಳೀಯ ಆಡಳಿತ ಈ ಬಗ್ಗೆ ತನಿಖೆಗೆ ಆದೇಶಿಸಿದೆ.

Hot Topics

ಸಾಲದ ಹೊರೆ ತಾಳಲಾರದೆ ವೀಡಿಯೋ ಮೂಲಕ ಗುಡ್​ಬೈ ಹೇಳಿ ಶಿಕ್ಷಕ ದಂಪತಿ ಆತ್ಮಹತ್ಯೆ

ವಿಜಯವಾಡ: ಶಾಲೆ ನಡೆಸುತ್ತಿದ್ದ ಶಿಕ್ಷಕ ದಂಪತಿ ಸಾಲದ ಹೊರೆ ತಡೆಯಲಾರದೇ ವಿಷಸೇವಿಸಿ ಆತ್ಮಹತ್ಯೆ ಹಾದಿ ಹಿಡಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಕರ್ನೂಲ್​ ಜಿಲ್ಲೆಯಲ್ಲಿ ನಡೆದಿದೆ. ಸಾವಿಗೂ ಮುನ್ನ ಶಿಕ್ಷಕ ದಂಪತಿ ತಮ್ಮ...

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...