Connect with us

DAKSHINA KANNADA

ಮಂಗಳೂರು: ಸಲೂನ್ ಮೇಲೆ ದಾಳಿ ಪ್ರಕರಣ; ಆರೋಪಿಗಳಿಗೆ ಫೆ.7ರವರೆಗೆ ನ್ಯಾಯಾಂಗ ಬಂಧನ

Published

on

ಮಂಗಳೂರು: ನಗರದ ಯುನಿಸೆಕ್ಸ್ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಗೆ ನ್ಯಾಯಾಲಯ ಫೆಬ್ರವರಿ 7ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.

ಯುನಿಸೆಕ್ಸ್ ಸೆಲೂನ್‌ನಲ್ಲಿ ಅನೈತಿಕ ದಂಧೆ ನಡೆಯುತ್ತಿದೆ ಎಂದು ಆರೋಪಿಸಿ ರಾಮಸೇನೆ ಕಾರ್ಯಕರ್ತರು ನಗರ ಗುರುವಾರ ಮಧ್ಯಾಹ್ನ ವೇಳೆ ದಾಳಿ ನಡೆಸಿದ್ದರು. ಸ್ಥಳೀಯ ಮುಖಂಡ ಪ್ರಸಾದ್ ಅತ್ತಾವರ ನೇತೃತ್ವದ ಕಾರ್ಯಕರ್ತರು ಬೆಜೈ ಬಳಿ ಕಾರ್ಯಾಚರಿಸುತ್ತಿದ್ದ ಯುನಿಸೆಕ್ಸ್ ಸಲೂನ್‌ಗೆ ನುಗ್ಗಿ ಸೆಲೂನ್‌ನಲ್ಲಿದ್ದ ಪೀಠೋಪಕರಣಗಳು ಮತ್ತು ಗಾಜುಗಳನ್ನು ಒಡೆದು ಹಾಕಿ ಹಾನಿಗೈದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

12 ಕ್ಕೂ ಹೆಚ್ಚು ಜನರ ಗುಂಪು ಸಲೂನ್‌ನಲ್ಲಿ ಎಲ್ಲವನ್ನೂ ನಾಶಪಡಿಸಿದೆ. ಮಹಿಳಾ ಸಿಬ್ಬಂದಿ ಹಾಗೂ ಇತರರಿಗೆ ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಗೃಹ ಸಚಿವ ಜಿ.ಪರಮೇಶ್ವರ ಅವರು, ಸಂಬಂಧಪಟ್ಟವರನ್ನು ಕೂಡಲೇ ಬಂಧಿಸುವಂತೆ ಪೊಲೀಸ್ ಇಲಾಖೆಗೆ ಸೂಚಿಸಿರುವುದಾಗಿ ಹೇಳಿದ್ದರು.

ಇನ್ನು ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ಕೂಡಲೇ ಕ್ಷಿಪ್ರ ಕಾರ್ಯಾಚರಣೆ ನಡೆಸಿದ್ದ ಪೊಲೀಸರು 14 ಮಂದಿಯನ್ನು ಬಂಧಿಸಿದ್ದರು.

DAKSHINA KANNADA

ತಡರಾತ್ರಿಯಲ್ಲಿ ಆಕಸ್ಮಿಕ ಅಗ್ನಿ ಅವಘಡ; ಜಪ್ಪಿನಮೊಗರು ಬಳಿ ಹೊತ್ತಿ ಉರಿದ ಅಂಗಡಿ

Published

on

ಮಂಗಳೂರು : ಭಾನುವಾರ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಜಪ್ಪಿನ ಮೊಗರು ಬಳಿಯ ಅಂಗಡಿಯೊಂದು ಹೊತ್ತಿ ಉರಿದ ಘಟನೆ ಸಂಭವಿಸಿದೆ.

ಜಪ್ಪಿನ ಮೊಗರು ಬಳಿಯ ಗ್ಲಾಸ್ ಸೆಂಟರ್ ಒಂದರಲ್ಲಿ ಕಾಣಿಸಿಕೊಂಡ ಬೆಂಕಿ ಕೆಲವೇ ಕ್ಷಣದಲ್ಲಿ ಇಡೀ ಅಂಗಡಿಯನ್ನು ಬಸ್ಮ ಮಾಡಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದು, ಅಗ್ನಿ ಶಾಮಕದಳಕ್ಕೂ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಕಡಲ್ಕೊರೆತ ತಡೆಗಾಗಿ ವಿಷ್ಣು ಸಹಸ್ರನಾಮ ಪಠಣ

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸ್ಥಳೀಯರ ನೆರವಿನೊಂದಿಗೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಅಗ್ನಿ ಅವಘಡಕ್ಕೆ ಶಾರ್ಟ್ ಸರ್ಕ್ಯುಟ್ ಕಾರಣ ಅಂತ ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಾಗಿದೆ.

ಅಗ್ನಿಯ ಕೆನ್ನಾಲಿಗೆ ಸುಟ್ಟು ಕರಕಲಾದ ಗ್ಲಾಸ್ ಸೆಂಟರ್‌ನಲ್ಲಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ.

Continue Reading

DAKSHINA KANNADA

ಮಂಗಳೂರು ಉದ್ಯಮಿಗೆ ಭೂ*ಗತ ಪಾ*ತಕಿಯಿಂದ ಬೆ*ದರಿಕೆ ಕರೆ!

Published

on

ಮಂಗಳೂರು : ಹಲವು ವರ್ಷಗಳ ಸದ್ದಡಗಿದ್ದ ಭೂಗತ ಲೋಕದ ಸದ್ದು ಮಂಗಳೂರಿನಲ್ಲಿ ಮತ್ತೆ ಕೇಳಿಸಿದೆ. ವಿದೇಶದಲ್ಲಿ ಕುಳಿತು ಮಂಗಳೂರಿನ ಉದ್ಯಮಿಗೆ ಹಫ್ತಾ ನೀಡುವಂತೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಈ ಹಿಂದೆ ಮಂಗಳೂರು ಕಾಸರಗೋಡು ಜಿಲ್ಲೆಯಲ್ಲಿ ಹಲವಾರು ಅಪರಾಧ ಪ್ರಕರಣಗಳ ಹಿಂದೆ ಇದ್ದ ಕಲಿ ಯೋಗೀಶ ಮತ್ತೆ ಫೀಲ್ಡ್‌ಗೆ ಇಳಿದಿದ್ದಾನೆ ಎಂಬ ಅನುಮಾನ ಮೂಡಿದೆ.

ರವಿ ಪೂಜಾರಿ, ಬನ್ನಂಜೆ ರಾಜ ಮೊದಲಾದ ಪಾ*ತಕಿಗಳ ಬಂಧನದ ಬಳಿಕ ಬಹುತೇಕ ಎಲ್ಲಾ ಭೂ*ಗತ ಪಾ*ತಕಿಗಳ ಸದ್ದು ಅಡಗಿ ಹೋಗಿತ್ತು. ಹೀಗಾಗಿ ಒಂದಷ್ಟು ಉದ್ಯಮಿಗಳು ನೆಮ್ಮದಿಯ ನಿಟ್ಟುಸಿರು ಬಿಟ್ಟು ತಮ್ಮ ವ್ಯವಹಾರ ನಡೆಸ್ತಾ ಇದ್ರು. ಆದ್ರೆ ಈಗ ಬಜಪೆಯ ಉದ್ಯಮಿ ರೊನಾಲ್ಡ್ ಎಂಬವರಿಗೆ ಕಲಿ ಯೋಗೀಶನ ಹೆಸರಿನಲ್ಲಿ  ಫೋನ್ ಮಾಡಿ ಬೆ*ದರಿಕೆ ಹಾಕಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

ಇದನ್ನೂ ಓದಿ : ಗೀಸರ್ ರಿಪೇರಿಗಂತ ಬಂದ ರಹಸ್ಯ ಕ್ಯಾಮರಾ ಇಟ್ಟ…ಮಹಿಳೆಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾತ ಸಿಕ್ಕಿ ಬಿದ್ದಿದ್ಹೇಗೆ?

ಜನವರಿ 17 ರಂದು ಈ ಕರೆ ಬಂದಿದ್ದು 3 ಕೋಟಿ ನೀಡಬೇಕು, ಇಲ್ಲವಾದಲ್ಲಿ ಮನೆಯವರೆಲ್ಲರನ್ನೂ ಕೊ*ಲ್ಲುವುದಾಗಿ ಬೆ*ದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದಾರೆ.

 

 

Continue Reading

DAKSHINA KANNADA

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ

Published

on

ಮಂಗಳೂರು : ಹಿರಿಯ ಪತ್ರಕರ್ತ  ಗುರುವಪ್ಪ ಬಾಳೆಪುಣಿ  (62)  ಅಲ್ಪಕಾಲದ ಅಸೌಖ್ಯದಿಂದ ಇಂದು(ಜ.26) ಬಾಳೆಪುಣಿಯ ಸ್ವಗೃಹದಲ್ಲಿ ನಿ*ಧನರಾಗಿದ್ದಾರೆ. ಅವರು ಪತ್ನಿ ಹಾಗೂ ಪುತ್ರನನ್ನು ಅ*ಗಲಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೆಪುಣಿ  26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ , ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ   ಕರ್ತವ್ಯ ನಿರ್ವಹಿಸಿದ್ದಾರೆ. ಸರಳ, ಸಜ್ಜನಿಕೆಯ ಬಾಳೆಪುಣಿ ಅವರು ಜನಾನುರಾಗಿಯಾಗಿದ್ದರು.

ಇದನ್ನೂ ಓದಿ: ಮಾಜಿ ಕ್ರಿಕೆಟಿಗ ಸೆಹ್ವಾಗ್-ಆರತಿ ದಾಂಪತ್ಯದಲ್ಲಿ ಬಿರುಕು ?

ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ  ಪರಿಚಯಿಸಿದ ಕೀರ್ತಿ  ಗುರುವಪ್ಪ ಬಾಳೆಪುಣಿ ಅವರದು. ಪತ್ರಿಕೋದ್ಯಮದ ಅವರ ಮೇರು ಸಾಧನೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಅವರ ಮುಡಿಗೇರಿದೆ.

Continue Reading

LATEST NEWS

Trending

Exit mobile version