DAKSHINA KANNADA
ದಕ್ಷಿಣಕನ್ನಡ 9 ಸಾವಿರಕ್ಕೆ ಏರಿಕೆಯಾದ ಕೊರೊನಾ ಸೊಂಕಿತರ ಸಂಖ್ಯೆ
ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 144 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇಂದಿನ 144 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9022 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 209 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2091 ಸಕ್ರಿಯ ಕೊರೊನಾ ಪ್ರಕರಣಗಳಿದ್ದು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಕೂಡ ಜಿಲ್ಲೆಯಲ್ಲಿ 8 ಮಂದಿ ಕೊರೊನಾದಿಂದ ಸಾವನಪ್ಪಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 277 ಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು -88, ಬಂಟ್ವಾಳ – 18, ಸುಳ್ಯ -1, ಬೆಳ್ತಂಗಡಿ – 10, ಪುತ್ತೂರು – 8, ಹೊರ ಜಿಲ್ಲೆಯವರು – 19 ಪ್ರಕರಣಗಳಿವೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!